Wagon R: ಮಾರುತಿ ಸುಜುಕಿ ವ್ಯಾಗನ್ಆರ್ ಕಾರಿಗೆ 61,000 ರಿಯಾಯಿತಿ, 5 ಲಕ್ಷ ಬೆಲೆ, 34 ಕಿ.ಮೀ ಮೈಲೇಜ್
ದೇಶಾದ್ಯಂತ ಮಾರುತಿ ಸುಜುಕಿ (Maruti Suzuki) ಕಂಪನಿಯ ಹಲವು ಡೀಲರ್‌ಶಿಪ್‌ಗಳು ಈ ಫೆಬ್ರವರಿಯಲ್ಲಿ ವಿವಿಧ ಕಾರುಗಳ ಮೇಲೆ ಭರ್ಜರಿ ರಿಯಾಯಿತಿಯನ್ನು ಘೋಷಿಸಿವೆ. ಇದು ನಗದು ರಿಯಾಯಿತಿ, ವಿನಿಮಯ ಬೋನಸ್ ಮತ್ತು ಕಾರ್ಪೊರೇಟ್ ಡಿಸ್ಕೌಂಟ್ ಅನ್ನು ಒಳಗೊಂಡಿದೆ. ಜನಪ್ರಿಯ 'ವ್ಯಾಗನ್ಆರ್' ಕಾರು ಸಹ ದೊಡ್ಡಮಟ್ಟದಲ್ಲಿ ರಿಯಾಯಿತಿಯನ್ನು ಪಡೆದಿದೆ.
ಮಾರುತಿ ಸುಜುಕಿ ವ್ಯಾಗನ್ಆರ್ (Maruti Suzuki Wagon R) ಹ್ಯಾಚ್‌ಬ್ಯಾಕ್ ಒಟ್ಟು ರೂ.61,000 ರಿಯಾಯಿತಿ ಪ್ರಯೋಜನವನ್ನು ಹೊಂದಿದೆ. ಅದರಲ್ಲಿ ರೂ.35,000 ನಗದು ರಿಯಾಯಿತಿ (Cash Discount), ರೂ.20,000 ವಿನಿಯಮ ಬೋನಸ್ (Exchange Bonus), ರೂ.6,000 ಕಾರ್ಪೊರೇಟ್ ಡಿಸ್ಕೌಂಟ್ (Corporate Discount) ಸೇರಿದ್ದು, ಫೆಬ್ರವರಿ 29, 2024 ರವರೆಗೆ ರಿಯಾಯಿತಿ ಸೌಲಭ್ಯಗಳು ಮಾನ್ಯವಾಗಿರಲಿದೆ.

ಈ ಡಿಸ್ಕೌಂಟ್ ಆಫರ್ ರಾಜ್ಯದಿಂದ ರಾಜ್ಯಕ್ಕೆ ಡೀಲರ್‌ಶಿಪ್ (Dealership), ರೂಪಾಂತರ (Variant), ಬಣ್ಣಗಳನ್ನು ಆಧರಿಸಿ ಬೇರೆಯಿರಲಿದ್ದು, ಹೆಚ್ಚಿನ ಮಾಹಿತಿಗೆ ನಿಮ್ಮ ಸಮೀಪದ ಶೋರೂಂಗೆ ಭೇಟಿ ನೀಡಿರಿ. ಸದ್ಯ, ಭಾರತದ ಮಾರುಕಟ್ಟೆಯಲ್ಲಿ ಖರೀದಿಗೆ ದೊರೆಯುವ ಮಾರುತಿ ಸುಜುಕಿ ವ್ಯಾಗನ್ಆರ್ ರೂ.5.54 ಲಕ್ಷದಿಂದ ರೂ.7.42 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ.
ವ್ಯಾಗನ್ಆರ್ ಹ್ಯಾಚ್‌ಬ್ಯಾಕ್ ಎಲ್ಎಕ್ಸ್ಐ, ವಿಎಕ್ಸ್ಐ, ಝಡ್ಎಕ್ಸ್ಐ ಸೇರಿದಂತೆ ವಿವಿಧ ರೂಪಾಂತರ ಹಾಗೂ ಗ್ಯಾಲಂಟ್ ರೆಡ್, ಪೂಲ್‌ಸೈಡ್ ಬ್ಲೂ, ಸುಪೀರಿಯರ್ ವೈಟ್, ಸಿಲ್ಕಿ ಸಿಲ್ವರ್, ಮ್ಯಾಗ್ಮಾ ಗ್ರೇ ಒಳಗೊಂಡಂತೆ 2 - ಡುಯಲ್ ಟೋನ್, 6 - ಮೊನೊಟೋನ್ ಬಣ್ಣಗಳೊಂದಿಗೂ ಲಭ್ಯವಿದೆ. ವಿನ್ಯಾಸದ ದೃಷ್ಟಿಯಿಂದಲೂ ಅತ್ಯುತ್ತಮವಾಗಿದ್ದು, 5 ಮಂದಿ ಆರಾಮದಾಯಕವಾಗಿ ಓಡಾಡಬಹುದು.

ಈ ಮಾರುತಿ ಸುಜುಕಿ ವ್ಯಾಗನ್ಆರ್ ಪೆಟ್ರೋಲ್ ಹಾಗೂ ಸಿಎನ್‌ಜಿ ಪವರ್‌ಟ್ರೇನ್ ಆಯ್ಕೆಯಲ್ಲಿ ಲಭ್ಯವಿದ್ದು, 5-ಸ್ವೀಡ್ ಮ್ಯಾನುವಲ್/ 5-ಸ್ವೀಡ್ ಆಟೋಮೆಟಿಕ್ ಗೇರ್ ಬಾಕ್ಸ್ ಅನ್ನು ಹೊಂದಿದೆ. ಪೆಟ್ರೋಲ್ ರೂಪಾಂತರಗಳು 23.56 - 25.19 ಕೆಎಂಪಿಎಲ್, ಸಿಎನ್‌ಜಿ ರೂಪಾಂತರಗಳು ಪ್ರತಿ ಕೆಜಿಗೆ 34.05 ಕಿ.ಮೀ ಮೈಲೇಜ್ ನೀಡುವ ಸಾಮರ್ಥ್ಯವನ್ನು ಪಡೆದಿವೆ.
ವ್ಯಾಗನ್ಆರ್ ಕಾರು 7 - ಇಂಚಿನ ಟಚ್‌ಸ್ಕ್ರೀನ್ ಡಿಸ್ಪ್ಲೇ, 4 - ಸ್ಪೀಕರ್ ಮ್ಯೂಸಿಕ್ ಸಿಸ್ಟಮ್, ಸ್ಟೀರಿಂಗ್ ಮೌಂಟೆಡ್ ಆಡಿಯೋ, ಫೋನ್ ಕಂಟ್ರೋಲ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಗಾಗಿ ಡುಯಲ್ ಫ್ರಂಟ್ ಏರ್‌ಬ್ಯಾಗ್, EBD (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ರೇರ್ ಪಾರ್ಕಿಂಗ್ ಸೇನಾರ್ಸ್, ಹಿಲ್ ಹೋಲ್ಡ್ ಅಸಿಸ್ಟ್ ಅನ್ನು ಒಳಗೊಂಡಿದೆ.
ಈ ಮಾರುತಿ ಸುಜುಕಿ ವ್ಯಾಗನ್ಆರ್ ಕಾರಿಗೆ ಟಾಟಾ ಟಿಯಾಗೊ, ಸಿಟ್ರಸ್ ಸಿ3 ದೊಡ್ಡ ಎದುರಾಳಿಯಾಗಿವೆ. ದೇಶೀಯ ಮಾರುಕಟ್ಟೆಯಲ್ಲಿ ವ್ಯಾಗನ್ಆರ್ ಮಾರಾಟವು ಉತ್ತಮವಾಗಿದೆ. ಇದೊಂದು ಪುಟ್ಟ ಕಾರಾಗಿದ್ದು, ಗರಿಷ್ಠ ಮೈಲೇಜ್‌ನೊಂದಿಗೆ ಅಗ್ಗದ ದರದಲ್ಲಿ ಸಿಗುವುದರಿಂದ ಹೆಚ್ಚಿನ ಮಂದಿ ಇಷ್ಟಪಟ್ಟು ಖರೀದಿಸುತ್ತಾರೆ. ಇತ್ತೀಚೆಗೆ ನಡೆದ ಭಾರತ್ ಮೊಬಿಲಿಟಿ ಎಕ್ಸ್‌ಪೋದಲ್ಲಿ ಫ್ಲೆಕ್ಸ್ ಫ್ಯುಯೆಲ್ ಚಾಲಿತ ವ್ಯಾಗನ್ಆರ್ ಕಾರನ್ನು ಪ್ರದರ್ಶಿಸಲಾಗಿತ್ತು. ಇದು ಪೆಟ್ರೋಲ್, ಎಥೆನಾಲ್ ನೆರವಿನಿಂದ ಸಂಚರಿಸಬಲ್ಲದು.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications