Wagon R: ಮಾರುತಿ ಸುಜುಕಿ ವ್ಯಾಗನ್ಆರ್ ಫ್ಲೆಕ್ಸ್ ಫ್ಯುಯೆಲ್ ಕಾರು ಪ್ರದರ್ಶನ.. ಪೆಟ್ರೋಲ್‌ಗೆ ಹೆಚ್ಚು ಹಣ ಬೇಕಿಲ್ಲ!
ದೇಶದ ಅತಿದೊಡ್ಡ ಕಾರು ತಯಾರಕ ಕಂಪನಿಯಾಗಿ ಮಾರುತಿ ಸುಜುಕಿ (Maruti Suzuki) ಗುರುತಿಸಿಕೊಂಡಿದೆ. ಕಂಪನಿಯ ಕಾರುಗಳು ಆಕರ್ಷಕ ವೈಶಿಷ್ಟ್ಯ ಮತ್ತು ಕೈಗೆಟುಕುವ ಬೆಲೆಯಲ್ಲಿ ಖರೀದಿಗೆ ದೊರೆಯುವುದರಿಂದ ಹೆಚ್ಚಿನ ಮಂದಿ ಕೊಂಡುಕೊಳ್ಳುತ್ತಾರೆ. ಪ್ರಮುಖವಾಗಿ ವ್ಯಾಗನ್ಆರ್ (Wagon R) ಕಾರು ದೊಡ್ಡ ಸಂಖ್ಯೆಯಲ್ಲಿ ಮಧ್ಯಮ ವರ್ಗದ ಜನರನ್ನು ಸೆಳೆದಿದೆ.
ದೆಹಲಿಯಲ್ಲಿ ನಡೆಯುತ್ತಿಯುವ ಭಾರತ್ ಮೊಬಿಲಿಟಿ ಎಕ್ಸ್‌ಪೋ (Bharat Mobility Expo 2024)ದಲ್ಲಿ ಫ್ಲೆಕ್ಸ್ ಫ್ಯುಯೆಲ್ (Flex Fuel) ಚಾಲಿತ ಮಾರುತಿ ಸುಜುಕಿ ವ್ಯಾಗನ್ಆರ್ (Maruti Suzuki Wagon R) ಕಾರನ್ನು ಪ್ರದರ್ಶಿಸಲಾಗಿದೆ. ಇದಕ್ಕೂ ಮೊದಲೇ ಈ ಹ್ಯಾಚ್‌ಬ್ಯಾಕ್‌ನ್ನು 2023 ಆಟೋ ಎಕ್ಸ್‌ಪೋದಲ್ಲಿ ತೋರಿಸಲಾಗಿತ್ತು. ವ್ಯಾಗನ್ಆರ್ ಫ್ಲೆಕ್ಸ್ ಫ್ಯುಯೆಲ್ ಮಾದರಿ ಮುಂದಿನ ವರ್ಷ ಭಾರತದ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿದೆ.

ಬಹತೇಕರಿಗೆ 'ಫ್ಲೆಕ್ಸ್ ಫ್ಯುಯೆಲ್' ಬಗ್ಗೆ ಹಲವು ಗೊಂದಲವಿರುತ್ತದೆ. ಅದಕ್ಕೆ ಉತ್ತರ ನೀಡುವ ಪ್ರಯತ್ನವನ್ನು ಮಾಡಿದ್ದೇವೆ. ಫ್ಲೆಕ್ಸ್ ಫ್ಯುಯೆಲ್ ವಾಹನಗಳು ಪೆಟ್ರೋಲ್ ಹಾಗೂ ಎಥೆನಾಲ್ ಇಂಧನದ ಮಿಶ್ರಣದೊಂದಿಗೆ ಚಲಿಸುತ್ತವೆ. ಸದ್ಯ, ಪೆಟ್ರೋಲ್ ಜೊತೆಯಲ್ಲಿ ಶೇಕಡ 20% ಎಥೆನಾಲ್ ಬಳಸುವಂತೆ ಎಂಜಿನ್ ಗಳನ್ನು ಅಭಿವೃದ್ಧಿಪಡಿಸಲಾಗುತ್ತಿದೆ. ಎಥೆನಾಲ್ ಅನ್ನು ಭತ್ತದ ಹುಲ್ಲು ಸೇರಿದಂತೆ ಇತರೆ ಕೃಷಿ ತ್ಯಾಜ್ಯದಿಂದ ತಯಾರಿಸಲಾಗುತ್ತದೆ.
ಪೆಟ್ರೋಲ್ ನೊಂದಿಗೆ ಎಥೆನಾಲ್ ಬೆರೆಸುವುದರಿಂದ ಇಂಗಾಲದ ಹೊರಸೂಸುವಿಕೆಯ ಪ್ರಮಾಣ ಕಡಿಮೆಯಾಗುತ್ತದೆ. ಜೊತೆಗೆ ಎಥೆನಾಲ್ ಅತ್ಯಂತ ಕಡಿಮೆ ಬೆಲೆಗೆ ಖರೀದಿಗೆ ದೊರೆಯುವುದರಿಂದ ಪೆಟ್ರೋಲ್ ಗಾಗಿ ಹೆಚ್ಚು ಹಣ ಖರ್ಚು ಮಾಡುವ ಅಗತ್ಯವಿಲ್ಲ. ಈಗ ನೇರವಾಗಿ ಮಾರುತಿ ಸುಜುಕಿ ವ್ಯಾಗನ್ಆರ್ ಫ್ಲೆಕ್ಸ್ ಫ್ಯುಯೆಲ್ ಕಾರಿನ ಬಗ್ಗೆ ಮಾತನಾಡೋಣ. ಇದು, ಈಗಿರುವ ಮಾದರಿಯಂತೆ ವಿನ್ಯಾಸ ಮತ್ತು ವೈಶಿಷ್ಟ್ಯವನ್ನು ಪಡೆದಿರುವ ನೀರಿಕ್ಷೆಯಿದೆ.
ಮಾರುತಿ ಸುಜುಕಿ ವ್ಯಾಗನ್ಆರ್ ಫ್ಲೆಕ್ಸ್ ಫ್ಯುಯೆಲ್ ಕಾರು, 1.2 - ಲೀಟರ್ ನ್ಯಾಚುರಲ್ ಆಸ್ಪಿರೇಟೆಡ್ 4 - ಸಿಲಿಂಡರ್ ಎಂಜಿನ್ ಹೊಂದಿರಬಹುದು. 5 - ಸ್ವೀಡ್ ಮ್ಯಾನುವಲ್ ಗೇರ್ ಬಾಕ್ಸ್ ಆಯ್ಕೆಯಲ್ಲಿ ಸಿಗಬಹುದು. ಆದರೆ, ಬೆಲೆ ಕೊಂಚ ಹೆಚ್ಚಿರಲಿದೆ ಎಂದು ಅಂದಾಜಿಸಲಾಗಿದ್ದು, ರೂ.8.50 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಖರೀದಿಗೆ ದೊರೆಯಬಹುದು ಎನ್ನಲಾಗಿದೆ.
ದೇಶೀಯ ಮಾರುಕಟ್ಟೆಯಲ್ಲಿ ಖರೀದಿಗೆ ಸಿಗುವ ಮಾರುತಿ ಸುಜುಕಿ ವ್ಯಾಗನ್ಆರ್ (Maruti Suzuki Wagon R), ರೂ. 5.54 ಲಕ್ಷದಿಂದ ರೂ.7.38 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. ಎಲ್ಎಕ್ಸ್ಐ, ವಿಎಕ್ಸ್ಐ, ಝಡ್ಎಕ್ಸ್ಐ ಒಳಗೊಂಡಂತೆ 4 ರೂಪಾಂತರ, ಗ್ಯಾಲಂಟ್ ರೆಡ್, ಪೂಲ್ಸೈಡ್ ಬ್ಲೂ, ಸುಪೀರಿಯರ್ ವೈಟ್ ಸೇರಿದಂತೆ 2 ಡುಯಲ್ ಟೋನ್, 6 ಮೊನೊಟೋನ್ ಬಣ್ಣಗಳೊಂದಿಗೆ ದೊರೆಯುತ್ತದೆ.
ಈ ಕಾರಿನಲ್ಲಿ 4 ಮಂದಿ ಆರಾಮದಾಯವಾಗಿ ಪ್ರಯಾಣಿಸಬಹುದು. ಪೆಟ್ರೋಲ್ ಮತ್ತು ಸಿಎನ್‌ಜಿ ಎಂಜಿನ್ ಆಯ್ಕೆಯಲ್ಲಿ ದೊರೆಯುವ ವ್ಯಾಗನ್ಆರ್, 5-ಸ್ವೀಡ್ ಮ್ಯಾನುವಲ್/ 5-ಸ್ವೀಡ್ ಆಟೋಮೆಟಿಕ್ ಗೇರ್ ಬಾಕ್ಸ್ ನೊಂದಿಗೆ ಲಭ್ಯವಿದೆ. ಪೆಟ್ರೋಲ್ ರೂಪಾಂತರಗಳು ಪ್ರತಿ ಲೀ.ಗೆ 23.56 ರಿಂದ 24.43 ಕಿ.ಮೀ, ಸಿಎನ್‌ಜಿ ರೂಪಾಂತರಗಳು ಒಂದು ಕೆಜಿಗೆ 34 ಕಿ.ಮೀ ಇಂಧನ ದಕ್ಷತೆಯನ್ನು ಹೊಂದಿವೆ.
ಮಾರುತಿ ಸುಜುಕಿ ವ್ಯಾಗನ್ಆರ್ 7-ಇಂಚಿನ ಟಚ್‌ಸ್ಕ್ರೀನ್ ಡಿಸ್ಪ್ಲೇ, 4-ಸ್ಪೀಕರ್ ಮ್ಯೂಸಿಕ್ ಸಿಸ್ಟಮ್, ಸ್ಟೀರಿಂಗ್-ಮೌಂಟೆಡ್ ಆಡಿಯೋ, ಫೋನ್ ಕಂಟ್ರೋಲ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಯ ದೃಷ್ಟಿಯಿಂದ ಡುಯಲ್ ಫ್ರಂಟ್ ಏರ್‌ಬ್ಯಾಗ್, EBD (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ABS (ಆಂಟಿಲಾಕ್ ಬ್ರೇಕ್ ಸಿಸ್ಟಮ್), ರೇರ್ ಪಾರ್ಕಿಂಗ್ ಸೇನಾರ್ಸ್ ಮತ್ತು ಹಿಲ್-ಹೋಲ್ಡ್ ಅಸಿಸ್ಟ್ ಅನ್ನು ಒಳಗೊಂಡಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications