Maruti Suzuki: ಡಾಕ್ಟರ್, ಎಂಜಿನಿಯರ್‌ಗಳಿಗೂ ಈ ಕಾರು ಇಷ್ಟ, ದೊಡ್ಡಸಂಖ್ಯೆಯಲ್ಲಿ ಖರೀದಿ.. 5 ಲಕ್ಷ, 34 Km ಮೈಲೇಜ್!

ವಿಶ್ವದಲ್ಲಿಯೇ ಭಾರತ ಅತಿದೊಡ್ಡ ಕಾರು ಮಾರುಕಟ್ಟೆಯನ್ನು ಹೊಂದಿದೆ. ಇತ್ತೀಚೆಗೆ ಜನಪ್ರಿಯ ವಾಹನ ತಯಾರಕ ಕಂಪನಿಗಳು ಆಗಸ್ಟ್ ತಿಂಗಳ (2024) ಕಾರು ಮಾರಾಟದ ಅಂಕಿಅಂಶಗಳನ್ನು ಪ್ರಕಟಿಸಿವೆ. ದೇಶೀಯ ಮಾರುಕಟ್ಟೆಯಲ್ಲಿ ಮಾರಾಟಗೊಂಡ ಪ್ರಮುಖ 10 ಕಾರುಗಳ ಪಟ್ಟಿಯಲ್ಲಿ ಮಾರುತಿ ಸುಜುಕಿ ವ್ಯಾಗನ್ಆರ್ (Maruti Suzuki WagonR) ಹ್ಯಾಚ್‌ಬ್ಯಾಕ್ ಕೂಡ ಇದ್ದು, ನಾಲ್ಕನೇ ಸ್ಥಾನದಲ್ಲಿದೆ. ಮೊದಲ ಸ್ಥಾನದಲ್ಲಿ ಮಾರುತಿ ಸುಜುಕಿ ಬ್ರೆಝಾ, ಎರಡನೇ ಸ್ಥಾನದಲ್ಲಿ ಮಾರುತಿ ಸುಜುಕಿ ಎರ್ಟಿಗಾ ಹಾಗೂ ಮೂರನೇ ಸ್ಥಾನದಲ್ಲಿ ಹ್ಯುಂಡೈ ಕ್ರೆಟಾ ಎಸ್‌ಯುವಿ ಇದೆ.

ಕಳೆದ ತಿಂಗಳು (ಆಗಸ್ಟ್ 2024) ಮಾರುತಿ ಸುಜುಕಿ ವ್ಯಾಗನ್ಆರ್ ಹ್ಯಾಚ್‌ಬ್ಯಾಕ್‌ನ 16,450 ಯುನಿಟ್‌ಗಳನ್ನು ಮಾರಾಟ ಮಾಡಲಾಗಿದೆ. 2023ರ ಇದೇ ಅವಧಿಯಲ್ಲಿ ಮಾರಾಟಗೊಳಿಸಿದ 15,578 ಯುನಿಟ್‌ಗೆ ಹೋಲಿಸಿದರೆ ವರ್ಷದಿಂದ ವರ್ಷಕ್ಕೆ (YoY) ಶೇಕಡ 6% ಬೆಳವಣಿಗೆಯಾಗಿದೆ. ಈ ಕಾರನ್ನು ಜನಸಾಮಾನ್ಯರು ಮಾತ್ರವಲ್ಲದೆ, ಡಾಕ್ಟರ್ ಹಾಗೂ ಎಂಜಿನಿಯರ್‌ಗಳು ಕೂಡ ಮೆಚ್ಚಿಕೊಂಡಿದ್ದಾರೆ.

Maruti Suzuki Wagon R Car August Sales 2024 Report Rs 5 Lakh 34 Km Mileage

ಸದ್ಯ ಹೊಚ್ಚ ಹೊಸ ಮಾರುತಿ ಸುಜುಕಿ ವ್ಯಾಗನ್ಆರ್ (Maruti Suzuki WagonR) ಹ್ಯಾಚ್‌ಬ್ಯಾಕ್‌ ಅತ್ಯಂತ ಕೈಗೆಟುಕುವ ಬೆಲೆಯಲ್ಲಿ ಸಿಗುತ್ತದೆ. ರೂ.5.54 ಲಕ್ಷದಿಂದ ರೂ.7.32 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. ಎಲ್ಎಕ್ಸ್ಐ, ವಿಎಕ್ಸ್ಐ, ಝಡ್ಎಕ್ಸ್ಐ ಸೇರಿದಂತೆ ಹಲವು ರೂಪಾಂತರಗಳನ್ನು (ವೇರಿಯೆಂಟ್) ಪಡೆದಿದೆ. ಗ್ಯಾಲಂಟ್ ರೆಡ್, ಪೂಲ್‌ಸೈಡ್ ಬ್ಲೂ, ಸುಪೀರಿಯರ್ ವೈಟ್, ಸಿಲ್ಕಿ ಸಿಲ್ವರ್, ಮ್ಯಾಗ್ಮಾ ಗ್ರೇ ಒಳಗೊಂಡಂತೆ 2-ಡುಯಲ್ ಟೋನ್, 6-ಮೊನೊಟೋನ್ ಬಣ್ಣಗಳೊಂದಿಗೂ ದೊರೆಯುತ್ತದೆ.

ಈ ಮಾರುತಿ ಸುಜುಕಿ ವ್ಯಾಗನ್ಆರ್ ಪೆಟ್ರೋಲ್ ಮತ್ತು ಸಿಎನ್‌ಜಿ ಪವರ್‌ಟ್ರೇನ್ ಆಯ್ಕೆಯನ್ನು ಹೊಂದಿದೆ. ಇದರ 1-ಲೀಟರ್ ಪೆಟ್ರೋಲ್ ಎಂಜಿನ್ 67 ಪಿಎಸ್ ಗರಿಷ್ಠ ಶಕ್ತಿ (ಪವರ್) ಹಾಗೂ 89 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 1.2-ಲೀಟರ್ ಪೆಟ್ರೋಲ್ ಎಂಜಿನ್ 90 ಪಿಎಸ್ ಶಕ್ತಿ ಮತ್ತು 113 ಎನ್ಎಂ ಪೀಕ್ ಟಾರ್ಕ್ ಹೊರಹಾಕುವ ಸಾಮರ್ಥ್ಯ ಹೊಂದಿದೆ.

Maruti Suzuki Wagon R Car August Sales 2024 Report Rs 5 Lakh 34 Km Mileage

ಮತ್ತೊಂದು ಸಿಎನ್‌ಜಿ ಚಾಲಿತ ರೂಪಾಂತರ 1-ಲೀಟರ್ ಎಂಜಿನ್ ಒಳಗೊಂಡಿದ್ದು, 57 ಪಿಎಸ್ ಗರಿಷ್ಠ ಶಕ್ತಿ (ಪವರ್) ಹಾಗೂ 89 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 5-ಸ್ಪೀಡ್ ಮ್ಯಾನುವಲ್/ 5-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 23.56 ರಿಂದ 34.05 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ.

ನೂತನ ಮಾರುತಿ ಸುಜುಕಿ ವ್ಯಾಗನ್ಆರ್ ಹ್ಯಾಚ್‌ಬ್ಯಾಕ್‌ 5 ಆಸನ ಆಯ್ಕೆ ವ್ಯವಸ್ಥೆಯನ್ನು ಹೊಂದಿದೆ. ವಾರಾಂತ್ಯ ಹಾಗೂ ರಜಾದಿನಗಳಲ್ಲಿ ಪ್ರವಾಸಕ್ಕೆ ಹೋಗುವಾಗ ಹೆಚ್ಚಿನ ಲಗೇಜ್ ಸಾಗಿಸಲು ಸಾಧ್ಯವಾಗುವಂತೆ 341 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಒಳಗೊಂಡಿದೆ. 7-ಇಂಚಿನ ಟಚ್‌ಸ್ಕ್ರೀನ್ ಡಿಸ್ಪ್ಲೇ, 4-ಸ್ಪೀಕರ್ ಮ್ಯೂಸಿಕ್ ಸಿಸ್ಟಮ್, ಸ್ಟೀರಿಂಗ್ ಮೌಂಟೆಡ್ ಆಡಿಯೋ, ಫೋನ್ ಕಂಟ್ರೋಲ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ.

Maruti Suzuki Wagon R Car August Sales 2024 Report Rs 5 Lakh 34 Km Mileage

ಮಾರುತಿ ಸುಜುಕಿ ವ್ಯಾಗನ್ಆರ್ ಹ್ಯಾಚ್‌ಬ್ಯಾಕ್‌ ಪ್ರಯಾಣಿಕರಿಗೆ ಗರಿಷ್ಠ ರಕ್ಷಣೆ ಒದಗಿಸುತ್ತದೆ. ಸುರಕ್ಷತೆಯ ದೃಷ್ಟಿಯಿಂದ ಡುಯಲ್ ಫ್ರಂಟ್ ಏರ್‌ಬ್ಯಾಗ್‌, ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ರೇರ್ ಪಾರ್ಕಿಂಗ್ ಸೇನಾರ್ಸ್ ಹಾಗೂ ಹಿಲ್ ಹೋಲ್ಡ್ ಅಸಿಸ್ಟ್ ಅನ್ನು ಒಳಗೊಂಡಿದೆ. ಈ ಕಾರಿಗೆ ಟಾಟಾ ಟಿಯಾಗೊ ಮತ್ತು ಸಿಟ್ರನ್ ಸಿ3 ಹ್ಯಾಚ್‌ಬ್ಯಾಕ್‌ಗಳು ಪ್ರಬಲ ಪ್ರತಿಸ್ಪರ್ಧಿಯಾಗಿವೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Friday, September 6, 2024, 20:17 [IST]
English summary
Maruti suzuki wagonr car august sales 2024 report rs 5 lakh 34 km mileage
Read more on maruti suzuki india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+