33 Km ಮೈಲೇಜ್, 5 ಲಕ್ಷ.. ಮಾರುತಿ ವ್ಯಾಗನ್ಆರ್ ಕಾರು ಖರೀದಿಸಬೇಕೇ.. ಆನ್-ರೋಡ್ ದರವೆಷ್ಟು, EMI ಏನು?
ಮಾರುತಿ ಸುಜುಕಿ ಇಂಡಿಯಾ (Maruti Suzuki India) ಪ್ರಮುಖ ಕಾರು ತಯಾರಕ ಕಂಪನಿಯಾಗಿದೆ. ದೇಶೀಯ ಮಾರುಕಟ್ಟೆಯಲ್ಲಿ ಕಂಪನಿ ಮಾರಾಟಗೊಳಿಸುವ ವ್ಯಾಗನ್ಆರ್ (WagonR) ಜನಪ್ರಿಯ ಹ್ಯಾಚ್‌ಬ್ಯಾಕ್ ಆಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು ಕೂಡ ಇಷ್ಟಪಟ್ಟು ಖರೀದಿ ಮಾಡುತ್ತಿದ್ದಾರೆ. ನೀವು ದೀಪಾವಳಿ ಹಬ್ಬಕ್ಕೆ ಹೊಸ ಕಾರನ್ನು ಮನೆಗೆ ತರಬೇಕು ಅಂದುಕೊಂಡಿದ್ದೀರಾ.. ಹಾಗಾದರೆ ವ್ಯಾಗನ್ಆರ್ ಉತ್ತಮ ಆಯ್ಕೆಯಾಗಲಿದೆ. ನಾವಿಲ್ಲಿ ಈ ಕಾರಿನ ಆನ್-ರೋಡ್ ಬೆಲೆ ಹಾಗೂ ಇಎಂಐ ಆಯ್ಕೆಯ ಕುರಿತಂತೆ ಸಂಕ್ಷಿಪ್ತವಾಗಿ ತಿಳಿಸಿಕೊಟ್ಟಿದ್ದೇವೆ.
ಬೆಂಗಳೂರಿನಲ್ಲಿ ನೂತನ ಮಾರುತಿ ಸುಜುಕಿ ವ್ಯಾಗನ್ಆರ್ (Maruti Suzuki WagonR) ಹ್ಯಾಚ್‌ಬ್ಯಾಕ್ ವಿವಿಧ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿ ಸಿಗುತ್ತದೆ. ಎಲ್ಎಕ್ಸ್ಐ (ಪೆಟ್ರೋಲ್) ರೂ.6.65 ಲಕ್ಷ ಆನ್-ರೋಡ್ ದರವನ್ನು ಒಳಗೊಂಡಿದೆ. 2 ಲಕ್ಷ ಡೌನ್ ಪೇಮೆಂಟ್ ಪಾವತಿಸಿ ಈ ಕಾರನ್ನು ಖರೀದಿಸಿದರೆ, ರೂ.4,65 ಲಕ್ಷ ಸಾಲವಿರುತ್ತದೆ. ಅದಕ್ಕೆ 8% ಬಡ್ಡಿ ದರದಲ್ಲಿ 5 ವರ್ಷಕ್ಕೆ ತಿಂಗಳಿಗೆ ರೂ.9,441 ಇಎಂಐ ಕಟ್ಟಬೇಕು.

ಮಾರುತಿ ಸುಜುಕಿ ವ್ಯಾಗನ್ಆರ್ ಕಾರಿನ ವಿಎಕ್ಸ್ಐ (ಪೆಟ್ರೋಲ್) ರೂಪಾಂತರ, ರೂ.7.18 ಲಕ್ಷ ಆನ್-ರೋಡ್ ಬೆಲೆಯನ್ನು ಹೊಂದಿದೆ. ಇದನ್ನು ರೂ.2 ಲಕ್ಷ ಡೌನ್ ಪೇಮೆಂಟ್ ಕಟ್ಟಿ ಮನೆಗೆ ತಂದರೆ, ರೂ.5.18 ಲಕ್ಷ ಸಾಲ ಬಾಕಿ ಉಳಿಯುತ್ತದೆ. ಶೇಕಡ 8% ಬಡ್ಡಿ ಹಾಕಿ 5 ವರ್ಷದ ಅವಧಿಗೆ ಮಾಸಿಕ ರೂ.10,512 ಇಎಂಐ ಪಾವತಿ ಮಾಡಬೇಕು.
ಈ ವ್ಯಾಗನ್ಆರ್ ಹ್ಯಾಚ್‌ಬ್ಯಾಕ್‌ನ ಝಡ್ಎಕ್ಸ್ಐ (ಪೆಟ್ರೋಲ್) ರೂಪಾಂತರ, ರೂ.7.56 ಲಕ್ಷ ಆನ್-ರೋಡ್ ದರವನ್ನು ಪಡೆದಿದೆ. ರೂ.2 ಲಕ್ಷ ಡೌನ್ ಪೇಮೆಂಟ್ ಪಾವತಿಸಿ ನೂತನ 'ವ್ಯಾಗನ್ಆರ್'ನ್ನು ತೆಗೆದುಕೊಂಡರೆ, ರೂ.5.56 ಲಕ್ಷ ಸಾಲವಿರುತ್ತದೆ. 8% ಬಡ್ಡಿ ದರದಲ್ಲಿ 5 ವರ್ಷಕ್ಕೆ ತಿಂಗಳಿಗೆ ರೂ.11,294 ಇಎಂಐ ಕಟ್ಟಬೇಕು.

ಎಲ್ಎಕ್ಸ್ಐ (ಸಿಎನ್‌ಜಿ) ರೂಪಾಂತರ, 7.71 ಲಕ್ಷ ಆನ್-ರೋಡ್ ಬೆಲೆಯನ್ನು ಒಳಗೊಂಡಿದೆ. ರೂ.2 ಲಕ್ಷ ಡೌನ್ ಪೇಮೆಂಟ್ ಕಟ್ಟಿ ಈ ಕಾರನ್ನು ಖರೀದಿ ಮಾಡಿದರೆ, ರೂ. 5.71 ಲಕ್ಷ ಸಾಲ ಬಾಕಿಯಿರುತ್ತದೆ. ಶೇಕಡ 8% ಬಡ್ಡಿಯನ್ನು ಹಾಕಿ 5 ವರ್ಷದ ಅವಧಿಗೆ ಮಾಸಿಕ ರೂ.11,592 ಇಎಂಐ ಪಾವತಿಸಬೇಕು.
ನೂತನ ಮಾರುತಿ ಸುಜುಕಿ ವ್ಯಾಗನ್ಆರ್ ವಿಎಕ್ಸ್ಐ (ಸಿಎನ್‌ಜಿ) ರೂಪಾಂತರ, ರೂ.8.24 ಲಕ್ಷ ಆನ್-ರೋಡ್ ದರವನ್ನು ಹೊಂದಿದೆ. ರೂ.2 ಲಕ್ಷ ಡೌನ್ ಪೇಮೆಂಟ್ ಪಾವತಿಸಿ ಈ ಕಾರನ್ನು ಮನೆಗೆ ತಂದರೆ ರೂ.6.24 ಲಕ್ಷ ಸಾಲ ಉಳಿಯುತ್ತದೆ. 8% ಬಡ್ಡಿ ದರದಲ್ಲಿ 5 ವರ್ಷಕ್ಕೆ ತಿಂಗಳಿಗೆ 12,664 ಇಐಎಂ ಕಟ್ಟಬೇಕು.

ಈ ಮಾರುತಿ ಸುಜುಕಿ ವ್ಯಾಗನ್ಆರ್ ಕಾರು, 1-ಲೀಟರ್ ಪೆಟ್ರೋಲ್ ಹಾಗೂ ಸಿಎನ್‌ಜಿ ಆಯ್ಕೆಯನ್ನು ಒಳಗೊಂಡಿದೆ. 5-ಸ್ಪೀಡ್ ಮ್ಯಾನುವಲ್ ಅಥವಾ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಹೊಂದಿದೆ. 23.56 ರಿಂದ 34.05 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಇದರಲ್ಲಿ 5 ಮಂದಿ ಓಡಾಟ ನಡೆಸಬಹುದು. ಜೊತೆಗೆ 341 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಒಳಗೊಂಡಿದೆ.
ಹೊಸ ವ್ಯಾಗನ್ಆರ್ ಹ್ಯಾಚ್‌ಬ್ಯಾಕ್ ಟಚ್‌ಸ್ಕ್ರೀನ್ ಡಿಸ್‌ಪ್ಲೇ (7-ಇಂಚು), 4-ಸ್ಪೀಕರ್ ಮ್ಯೂಸಿಕ್ ಸಿಸ್ಟಮ್, ಸ್ಟೀರಿಂಗ್ ಮೌಂಟೆಡ್ ಆಡಿಯೋ ಮತ್ತು ಫೋನ್ ಕಂಟ್ರೋಲ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ. ಪ್ರಯಾಣಿಕರ ರಕ್ಷಣೆಗಾಗಿ ಡುಯಲ್ ಫ್ರಂಟ್ ಏರ್‌ಬ್ಯಾಗ್, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್) ಮತ್ತು ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್) ಅನ್ನು ಪಡೆದಿದೆ.
ನಿಮ್ಮ ಗಮನಕ್ಕೆ.. ಈ ಆನ್-ರೋಡ್ ಬೆಲೆಗಳು ಹಾಗೂ ಸಾಲದ ಆಯ್ಕೆಗಳು ರಾಜ್ಯದಿಂದ ರಾಜ್ಯಕ್ಕೆ ಬೇರೆಯಿರಲಿದ್ದು, ಹೆಚ್ಚಿನ ಮಾಹಿತಿಗೆ ಸಮೀಪದ ಶೋರೂಂಗೆ ಭೇಟಿ ನೀಡಿರಿ.


Click it and Unblock the Notifications