ಕಡಿಮೆ ಬೆಲೆಗೆ ಅತ್ಯುತ್ತಮ ಕಾರು: ಬೈಕಿನಂತೆ ಮೈಲೇಜ್ ನೀಡುವ ಸಾಮಾನ್ಯ ಜನರ ಅಂಬಾರಿ
ಮಾರುತಿ ಸುಜುಕಿ ವ್ಯಾಗನ್ಆರ್ (Maruti Suzuki WagonR) ಭಾರತೀಯ ಮಾರುಕಟ್ಟೆಯಲ್ಲಿ ಅತಿ ಹೆಚ್ಚು ಮಾರಾಟವಾಗುವ ಕಾರುಗಳಲ್ಲಿ ಒಂದಾಗಿದೆ. ಈ ಮಾರುತಿ ಸುಜುಕಿ ವ್ಯಾಗನ್‍ಆರ್ ಸುಮಾರು ಎರಡು ದಶಕಗಳಿಂದ ಮಾರಾಟದಲ್ಲಿದೆ. ಈ ಮಾರುತಿ ವ್ಯಾಗನ್‍ಆರ್ ಹ್ಯಾಚ್‌ಬ್ಯಾಕ್ ಅನ್ನು ಮೊದಲ ಬಾರಿಗೆ ದೇಶದಲ್ಲಿ ಪ್ರಾರಂಭಿಸಿದಾಗಿನಿಂದಲೂ ಕೂಡ ಇದು ಉತ್ತಮ ಬೇಡಿಕೆಯಿಂದ ಮಾರಾಟ ಆಗುತ್ತಿದೆ. ಪ್ರಸಕ್ತ ವರ್ಷದ 2024ರ ಮೊದಲಾರ್ಧದಲ್ಲಿ ಭಾರತೀಯ ಮಾರುಕಟ್ಟೆಯಲ್ಲಿ ಟಾಪ್-10 ಹೆಚ್ಚು ಮಾರಾಟವಾದ ಕಾರುಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಈ ಪಟ್ಟಿಯಲ್ಲಿ ಟಾಟಾ ಪಂಚ್ ಮೊದಲ ಸ್ಥಾನ ಪಡೆದರೆ, ಮಾರುತಿ ಸುಜುಕಿ ವ್ಯಾಗನ್ ಆರ್ 2ನೇ ಸ್ಥಾನ ಪಡೆದುಕೊಂಡಿದೆ.
ಮಾರುತಿ ಸುಜುಕಿ ವ್ಯಾಗನ್ ಭಾರತೀಯ ಗ್ರಾಹಕರಲ್ಲಿ ಹೆಚ್ಚು ಜನಪ್ರಿಯವಾಗಿರುವ ಹ್ಯಾಚ್‌ಬ್ಯಾಕ್ ಕಾರು. ಈ ಮಾರುತಿ ಸುಜುಕಿ ವ್ಯಾಗನ್ ಆರ್ 1999 ರಿಂದ ಮಾರಾಟದಲ್ಲಿದೆ. ಸುಮಾರು 25 ವರ್ಷಗಳ ನಂತರವೂ ಭರ್ಜರಿಯಾಗಿ ಮಾರಾಟವಾಗುತ್ತಿದೆ. ಪ್ರಸಕ್ತ ವರ್ಷ 2024ರ ಮೊದಲಾರ್ಧದಲ್ಲಿ ಮಾರುತಿ ಸುಜುಕಿ 99,668 ವ್ಯಾಗನ್ ಆರ್ ಕಾರುಗಳನ್ನು ಮಾರಾಟ ಮಾಡಿದೆ. ಇನ್ನು 2023ರ ಮೊದಲಾರ್ಧದಲ್ಲಿ 1,09,278 ಕಾರುಗಳು ಮಾರಾಟವಾಗಿತ್ತು.

ಇದು 9 ಪ್ರತಿಶತದಷ್ಟು ಕುಸಿತವಾಗಿದ್ದರೂ ಸಹ, ಮಾರುತಿ ಸುಜುಕಿ ವ್ಯಾಗನ್ ಆರ್ 2 ನೇ ಸ್ಥಾನವನ್ನು ಪಡೆದುಕೊಂಡಿದೆ. ಈ ಮಾರುತಿ ಸುಜುಕಿ ವ್ಯಾಗನ್ ಆರ್ ಪ್ರಸ್ತುತ ಕೇವಲ 5.55 ಲಕ್ಷದ ಆರಂಭಿಕ ಬೆಲೆಯಲ್ಲಿ ಲಭ್ಯವಿದೆ. ಅದೇ ಸಮಯದಲ್ಲಿ, ಇದರ ಟಾಪ್ ವೆರಿಯೆಂಟ್ ಮಾದರಿಯ ಬೆಲೆಯು ರೂ. 7.21 ಲಕ್ಷ ಆಗಿದೆ. ಪ್ರಸುತ, ಮಾರುತಿ ಸುಜುಕಿ ವ್ಯಾಗನ್‍ಆರ್ ಮೂರನೇ ತಲೆಮಾರಿನ ರೂಪದಲ್ಲಿ ಮಾರಾಟ ಮಾಡಲಾಗುತ್ತಿದೆ.
ಈ ಪ್ರಸ್ತುತ, ಮಾರುತಿ ವ್ಯಾಗನ್ಆರ್ ಕಾರಿನಲ್ಲಿ 1.0 ಲೀಟರ್ ಮತ್ತು 1.2 ಲೀಟರ್ ಕೆ-ಸೀರಿಸ್ ಪೆಟ್ರೋಲ್ ಎಂಜಿನ್ ಆಯ್ಕೆಗಳೊಂದಿಗೆ ಬರುತ್ತದೆ. ಎರಡೂ ಮೋಟಾರ್‌ಗಳು ಡ್ಯುಯಲ್‌ಜೆಟ್, ಡ್ಯುಯಲ್ ವಿವಿಟಿ, ಐಎಸ್‌ಎಸ್ (ಐಡಲ್ ಸ್ಟಾರ್ಟ್ ಸ್ಟಾಪ್) ತಂತ್ರಜ್ಞಾನ ಮತ್ತು ಕೂಲ್ಡ್ ಇಜಿಆರ್ (ಎಕ್ಸಾಸ್ಟ್ ಗ್ಯಾಸ್ ರಿಸರ್ಕ್ಯುಲೇಷನ್) ಅನ್ನು ಹೊಂದಿವೆ.

ಎಲ್ಲಾ ತಂತ್ರಜ್ಞಾನಗಳು ಅದರ ಮೈಲೇಜ್ ಅನ್ನು ಹೆಚ್ಚಿಸುತ್ತದೆ ಮತ್ತು ಇಂಗಾಲದ ಹೊರಸೂಸುವಿಕೆಯನ್ನು ಕಡಿಮೆ ಮಾಡುತ್ತದೆ. ಮಾರುತಿ ಸುಜುಕಿ ವ್ಯಾಗನ್‍ಆರ್ ಕಾರಿನಲ್ಲಿ 1.0 ಲೀಟರ್ ಲೀಟರ್, ಇನ್‌ಲೈನ್ ಮೂರು-ಸಿಲಿಂಡರ್ ಎಂಜಿನ್ ಅನ್ನು ಹೊಂದಿದೆ. 1.0 ಲೀಟರ್ ಲೀಟರ್ ಎಂಜಿನ್ 66bhp ಮತ್ತು 89Nm ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ.
ಈ ಕಾರಿನಲ್ಲಿ ದೊಡ್ಡ 1.2ಲೀಟರ್ ಇನ್‌ಲೈನ್ ನಾಲ್ಕು-ಸಿಲಿಂಡರ್ ಎಂಜಿನ್88bhp ಮತ್ತು 113Nm ಪೀಕ್ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಮಾರುತಿ ಸುಜುಕಿ ವ್ಯಾಗನ್‍ಆರ್ ಕಾರು ಆಂಡ್ರಾಯ್ಡ್ ಆಟೋ ಮತ್ತು Apple CarPlay ಕನೆಕ್ಟಿವಿಯೊಂದಿಗೆ ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಟ್ಯಾಕೋಮೀಟರ್, ವಿಂಗ್ ಮಿರರ್‌ಗಳಲ್ಲಿ ಟರ್ನ್ ಇಂಡಿಕೇಟರ್‌ಗಳು, ಫ್ರಂಟ್ ಫಾಗ್ ಲ್ಯಾಂಪ್‌ಗಳು ಮತ್ತು 4 ಸ್ಪೀಕರ್‌ಗಳನ್ನು ಹೊಂದಿವೆ.

ಈ ಮಾರುತಿ ವ್ಯಾಗನ್‍ಆರ್ ಸ್ವಲ್ಪ ಕಡಿಮೆ ವೆಚ್ಚದಾಯಕವಾಗಿದೆ ಮತ್ತು ಮಾರುತಿ ಸುಜುಕಿ ವ್ಯಾಗನ್ ಆರ್ ಅತ್ಯುತ್ತಮ ಮೈಲೇಜ್ ಅನ್ನು ಸಹ ನೀಡುತ್ತದೆ. ಮಾರುತಿ ಸುಜುಕಿ ವ್ಯಾಗನ್ ಆರ್‌ನ ಪೆಟ್ರೋಲ್-ಮ್ಯಾನ್ಯುವಲ್ ರೂಪಾಂತರಗಳು 24.35 ಕಿ.ಮೀ ಮೈಲೇಜ್ ನೀಡುತ್ತದೆ ಎಂದು ವರದಿಯಾಗಿದೆ. ಅದೇ ಸಮಯದಲ್ಲಿ, ಈ ಕಾರಿನ ಪೆಟ್ರೋಲ್-ಎಜಿಎಸ್ ರೂಪಾಂತರಗಳು ಪ್ರತಿ ಲೀಟರ್‌ಗೆ 25.19 ಕಿಮೀ ಮೈಲೇಜ್ ನೀಡಲಿದೆ ಎಂದು ಮಾರುತಿ ಸುಜುಕಿ ಹೇಳಿಕೊಂಡಿದೆ.
ಇವೆಲ್ಲವುಗಳ ಮೇಲೆ, ಮಾರುತಿ ಸುಜುಕಿ ವ್ಯಾಗನ್ ಆರ್‌ನ ಸಿಎನ್‌ಜಿ ರೂಪಾಂತರಗಳು ಪ್ರತಿ ಕೆಜಿಗೆ 33.47 ಕಿಮೀ ಮೈಲೇಜ್ ನೀಡುತ್ತವೆ ಎಂದು ವರದಿಯಾಗಿದೆ. ಇದರಿಂದಾಗಿ ಅನೇಕ ಜನರು ಮಾರುತಿ ಸುಜುಕಿ ವ್ಯಾಗನ್ ಆರ್ ಕಾರನ್ನು ಖರೀದಿಸಲು ಇಷ್ಟಪಡುತ್ತಾರೆ. ಆದರೆ, ಯಾರೂ ನಿರೀಕ್ಷಿಸದ ರೀತಿಯಲ್ಲಿ ಇದರ ಮಾರಾಟ ಕೊಂಚ ಕುಸಿತ ಕಂಡಿದೆ. ಆದರೆ ಮುಂದಿನ ದಿನಗಳಲ್ಲಿ ಮಾರಾಟದಲ್ಲಿ ಏರಿಕೆಯನ್ನು ಕಾಣಬಹುದು.


Click it and Unblock the Notifications