Maruti Suzuki: ಈ ಕಾರನ್ನು ಮೆಚ್ಚಿದ ಗ್ರಾಹಕರು.. 11 ಲಕ್ಷ ಬೆಲೆ.. 6-ಸೀಟರ್, 26 ಕಿ.ಮೀ ಮೈಲೇಜ್!
ದೇಶದ ಅತಿದೊಡ್ಡ ವಾಹನ ತಯಾರಕ ಕಂಪನಿಯಾಗಿ ಮಾರುತಿ ಸುಜುಕಿ (Maruti Suzuki) ಗುರುತಿಸಿಕೊಂಡಿದೆ. ವಿವಿಧ ಎದುರಾಳಿ ಕಂಪನಿಯ ಕಾರುಗಳಿಗೆ ಪ್ರಬಲವಾದ ಪ್ರತಿಸ್ಪರ್ಧಿಯೊಡ್ಡಲು ಆಲ್ಟೊ ಕೆ10, ಸೆಲೆರಿಯೊ, ವ್ಯಾಗನ್ಆರ್, ಇಗ್ನಿಸ್, ಸ್ವಿಫ್ಟ್, ಬಲೆನೊ, ಫ್ರಾಂಕ್ಸ್ ಹಾಗೂ ಜಿಮ್ನಿಯಂತಹ ಹಲವು ಕಾರುಗಳನ್ನು ಮಾರಾಟ ಮಾಡುತ್ತಿದೆ. ಗ್ರಾಹಕರು ಕೂಡ ಇಷ್ಟಪಟ್ಟು ಖರೀದಿಸುತ್ತಿದ್ದಾರೆ. ಇತ್ತೀಚೆಗೆ, 2024ರ ಏಪ್ರಿಲ್‌ನಿಂದ ಆಗಸ್ಟ್ ತಿಂಗಳವರೆಗೆ ಅತಿಹೆಚ್ಚಿನ ಸಂಖ್ಯೆಯಲ್ಲಿ ಮಾರಾಟವಾದ ಜನಪ್ರಿಯ ಕಾರುಗಳ ಮಾರಾಟದ ಅಂಕಿಅಂಶಗಳ ವಿವರ ಲಭ್ಯವಾಗಿದೆ. ಪ್ರಖ್ಯಾತ ಎಕ್ಸ್ಎಲ್6 (XL6) ಎಂಪಿವಿಗಳು ಉತ್ತಮವಾಗಿ ಮಾರಾಟವಾಗಿದೆ.
2024ರ ಏಪ್ರಿಲ್‌ನಿಂದ ಆಗಸ್ಟ್ ತಿಂಗಳ ಅವಧಿಯಲ್ಲಿ ಬರೋಬ್ಬರಿ 15,736 ಯುನಿಟ್ 'ಮಾರುತಿ ಸುಜುಕಿ ಎಕ್ಸ್ಎಲ್6' ಎಂಪಿವಿಗಳನ್ನು ಮಾರಾಟ ಮಾಡಲಾಗಿದೆ. 2023ರ ಇದೇ ಅವಧಿಯಲ್ಲಿ ಮಾರಾಟ ಮಾಡಿದ 17,594 ಯುನಿಟ್‌ಗೆ ಹೋಲಿಕೆ ಮಾಡಿದರೆ ಶೇಕಡ -11% ಕುಸಿತವಾಗಿದೆ. ಆದಾಗ್ಯೂ ಎಕ್ಸ್ಎಲ್6 ಉತ್ತಮ ಕಾರಗಿದರೂ ಮಾರಾಟ ಪ್ರಮಾಣ ಇಳಿಕೆಯಾಗಿರುವ ಬಗ್ಗೆ ನಿಖರವಾದ ಕಾರಣಗಳು ಬಹಿರಂಗಗೊಂಡಿಲ್ಲ. ಮುಂಬರುವ ತಿಂಗಳುಗಳಲ್ಲಿ ಚೇತರಿಸಿಕೊಳ್ಳುವ ನಿರೀಕ್ಷೆಯಿದೆ.

ಸದ್ಯ ದೇಶೀಯ ಮಾರುಕಟ್ಟೆಯಲ್ಲಿ ಮಾರುತಿ ಸುಜುಕಿ ಎಕ್ಸ್ಎಲ್6 (Maruti Suzuki XL6) ಸ್ಪರ್ಧಾತ್ಮಕ ಬೆಲೆಯಲ್ಲಿ ಖರೀದಿಗೆ ಲಭ್ಯವಿದೆ. ರೂ.11.61 ಲಕ್ಷದಿಂದ ರೂ.14.77 ಲಕ್ಷ (ಎಕ್ಸ್ ಶೋರೂಂ) ದರವನ್ನು ಹೊಂದಿದೆ. ಜಿಟಾ ಮತ್ತು ಆಲ್ಫಾ ಸೇರಿದಂತೆ ಹಲವು ರೂಪಾಂತರಗಳ (ವೇರಿಯೆಂಟ್) ಆಯ್ಕೆಗಳನ್ನು ಪಡೆದಿದೆ. ನೆಕ್ಸಾ ಬ್ಲೂ, ಒಪ್ಯುಲೆಂಟ್ ರೆಡ್, ಗ್ರ್ಯಾಂಡ್ಯೂರ್ ಗ್ರೇ ಹಾಗೂ ಸ್ಪ್ಲೆಂಡಿಡ್ ಸಿಲ್ವರ್ ಒಳಗೊಂಡಂತೆ ಹಲವು ಬಣ್ಣಗಳೊಂದಿಗೂ ದೊರೆಯುತ್ತದೆ.
ಈ ಮಾರುತಿ ಸುಜುಕಿ ಎಕ್ಸ್ಎಲ್6 ಕಾರು ಪೆಟ್ರೋಲ್ ಮತ್ತು ಸಿಎನ್‌ಜಿ ಪವರ್‌ಟ್ರೇನ್‌ನ್ನು ಒಳಗೊಂಡಿದೆ. ಇದರ 1.5-ಲೀಟರ್ ಪೆಟ್ರೋಲ್ ಎಂಜಿನ್ 103 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 137 ಎನ್ಎಂ (ನ್ಯೂಟನ್ ಮೀಟರ್) ಟಾರ್ಕ್ ಉತ್ಪಾದಿಸುತ್ತದೆ. ಜೊತೆಗೆ 5-ಸ್ಪೀಡ್ ಮ್ಯಾನುವಲ್/ 6-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಹೊಂದಿದೆ.

ಸಿಎನ್‌ಜಿ ಚಾಲಿತ ರೂಪಾಂತರವು ಇದೇ ಎಂಜಿನ್‌ನ್ನು ಹೊಂದಿದೆ. 88 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 121.5 ಎನ್ಎಂ ಟಾರ್ಕ್ ಮಾತ್ರ ಹೊರಹಾಕುತ್ತದೆ. ಕೇವಲ 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನೊಂದಿಗೆ ಖರೀದಿಗೆ ಲಭ್ಯವಿದೆ. 20.27 ರಿಂದ 26.32 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ.
ಹೊಸ ಮಾರುತಿ ಸುಜುಕಿ ಎಕ್ಸ್ಎಲ್6 ಎಂಪಿವಿಯಲ್ಲಿ 6 ಮಂದಿ ಸುಲಭವಾಗಿ ಓಡಾಟ ನಡೆಸಬಹುದು. ಹೆಚ್ಚಿನ ಲಗೇಜ್ ಸಾಗಿಸಲು 209 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಪಡೆದಿದೆ. 7-ಇಂಚಿನ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್ ಪ್ಲೇ, ಪ್ಯಾಡಲ್ ಶಿಫ್ಟರ್ಸ್, ಕ್ರೂಸ್ ಕಂಟ್ರೋಲ್ ಹಾಗೂ ಆಟೋ ಎಸಿ ಒಳಗೊಂಡಂತೆ ಹತ್ತಾರು ವೈಶಿಷ್ಟ್ಯಗಳನ್ನು ಪಡೆದಿದೆ.

ಈ ಕಾರು ಪ್ರಯಾಣಿಕರಿಗೆ ಗರಿಷ್ಠ ರಕ್ಷಣೆ ಒದಗಿಸುತ್ತದೆ. ಸುರಕ್ಷತೆ ದೃಷ್ಟಿಯಿಂದ 4 ಏರ್‌ಬ್ಯಾಗ್, ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಮತ್ತು ಇಎಸ್‌ಪಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ) ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಹೊಂದಿದೆ. ಎಕ್ಸ್ಎಲ್6 ಎಂಪಿವಿಗೆ ಕಿಯಾ ಕ್ಯಾರೆನ್ಸ್, ಮಹೀಂದ್ರಾ ಮರಾಜ್ಜೊ, ಟೊಯೊಟಾ ಇನ್ನೋವಾ ಕ್ರಿಸ್ಟಾ ಕಾರುಗಳು ದೊಡ್ಡ ಎದುರಾಳಿಯಾಗಿವೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications