Maruti Suzuki ಈ ಕಾರಿಗೆ ಮನಸೋತ ಗ್ರಾಹಕರು.. 11 ಲಕ್ಷ ಬೆಲೆ, 26 ಕಿ.ಮೀ ಮೈಲೇಜ್.. 6 ಜನ ಹೋಗಬಹುದು!
ಭಾರತದ ಅತಿದೊಡ್ಡ ಕಾರು ತಯಾರಕ ಸಂಸ್ಥೆಯಾಗಿ ಮಾರುತಿ ಸುಜುಕಿ (Maruti Suzuki) ಹಳ್ಳಿಯಿಂದ ದಿಲ್ಲಿವರೆಗೆ ಮನೆ ಮಾತಾಗಿದೆ. ನೆಕ್ಸಾ ಹಾಗೂ ಅರೆನಾ ಡೀಲರ್‌ಶಿಪ್ ಮೂಲಕ ಆಲ್ಟೊ ಕೆ10, ಸೆಲೆರಿಯೊ, ವ್ಯಾಗನ್ಆರ್, ಇಗ್ನಿಸ್, ಸ್ವಿಫ್ಟ್, ಬಲೆನೊ, ಫ್ರಾಂಕ್ಸ್ ಮತ್ತು ಜಿಮ್ನಿ ಸೇರಿದಂತೆ ವಿವಿಧ ಕಾರುಗಳನ್ನು ಮಾರಾಟ ಮಾಡುತ್ತಿದೆ. ಗ್ರಾಹಕರು ಕೂಡ ಇಷ್ಟಪಟ್ಟು ತೆಗೆದುಕೊಳ್ಳುತ್ತಿದ್ದಾರೆ. ಈಚೆಗೆ ಮಾರುತಿ ಸುಜುಕಿ ಜೂನ್ ತಿಂಗಳ ಕಾರು ಮಾರಾಟದ ಅಂಕಿಅಂಶಗಳನ್ನು ಪ್ರಕಟಿಸಿತ್ತು. ಜನಪ್ರಿಯ ಎಕ್ಸ್ಎಲ್6 (XL6) ಎಂಪಿವಿ ಕೂಡ ಭಾರೀ ಸಂಖ್ಯೆಯಲ್ಲಿ ಮಾರಾಟವಾಗಿದೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.
ಮಾರುತಿ ಸುಜುಕಿ, ಜೂನ್ (2024)ನಲ್ಲಿ ಸರಿ ಸುಮಾರು 3,323 ಯುನಿಟ್ 'ಎಕ್ಸ್ಎಲ್6' ಎಂಪಿವಿಗಳನ್ನು ಮಾರಾಟ ಮಾಡಿದೆ. 2023ರ ಇದೇ ಅವಧಿಯಲ್ಲಿ ಮಾರಿದ 2,856 ಯುನಿಟ್‌ಗೆ ಹೋಲಿಸಿದರೆ ಶೇಕಡ 16.35% ಬೆಳವಣಿಗೆ ಕಂಡಿದೆ. ಈ ಮೂಲಕ ಮತ್ತೊಮ್ಮೆ ಮಾರುತಿ ಎಕ್ಸ್ಎಲ್6 ಕಾರು ದೇಶೀಯ ಗ್ರಾಹಕರ ಮನಸ್ಸನ್ನು ಗೆದ್ದಿದೆ.

ಎಕ್ಸ್ಎಲ್6 ಬೆಲೆ & ರೂಪಾಂತರಗಳು: ಈ ಕಾರು ಅತ್ಯಂತ ಕೈಗೆಟುಕುವ ಬೆಲೆಯಲ್ಲಿ ಗ್ರಾಹಕರಿಗೆ ಸಿಗುತ್ತದೆ. ರೂ.11.61 ಲಕ್ಷದಿಂದ ರೂ.14.77 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. ಜಿಟಾ, ಆಲ್ಫಾ ಸೇರಿದಂತೆ ವಿವಿಧ ರೂಪಾಂತರ (ವೇರಿಯೆಂಟ್)ಗಳ ಆಯ್ಕೆಗಳನ್ನು ಹೊಂದಿದೆ. ನೆಕ್ಸಾ ಬ್ಲೂ, ಒಪ್ಯುಲೆಂಟ್ ರೆಡ್, ಬ್ರೇವ್ ಖಾಕಿ, ಗ್ರ್ಯಾಂಡ್ಯೂರ್ ಗ್ರೇ ಮತ್ತು ಸ್ಪ್ಲೆಂಡಿಡ್ ಸಿಲ್ವರ್ ಒಳಗೊಂಡಂತೆ ಹಲವು ಬಣ್ಣಗಳೊಂದಿಗೂ ಸಿಗುತ್ತದೆ.
ಕಾರ್ಯಕ್ಷಮತೆ: ಮಾರುತಿ ಸುಜುಕಿ ಎಕ್ಸ್ಎಲ್6 ಎಂಪಿವಿ ಪೆಟ್ರೋಲ್ ಮತ್ತು ಸಿಎನ್‌ಜಿ ಪವರ್‌ಟ್ರೇನ್‌ನೊಂದಿಗೆ ಲಭ್ಯವಿದೆ. ಇದರ 1.5-ಲೀಟರ್ ಪೆಟ್ರೋಲ್ ಎಂಜಿನ್ 103 ಪಿಎಸ್ ಗರಿಷ್ಠ ಶಕ್ತಿ (ಪವರ್) ಮತ್ತು 137 ಎನ್ಎಂ ಪೀಕ್ ಟಾರ್ಕ್ ಹೊರಹಾಕುತ್ತದೆ. 5-ಸ್ಪೀಡ್ ಮ್ಯಾನುವಲ್ ಅಥವಾ 6-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ.

ಸಿಎನ್‌ಜಿ ಚಾಲಿತ ಕಾರು ಇದೇ ಎಂಜಿನ್‌ನ್ನು ಹೊಂದಿದೆ. ಆದಾಗ್ಯೂ 88 ಪಿಎಸ್ ಶಕ್ತಿ ಹಾಗೂ 121.5 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುತ್ತದೆ. ಕೇವಲ 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನ್ನು ಮಾತ್ರ ಖರೀದಿಗೆ ದೊರೆಯಲಿದ್ದು, 20.27 ರಿಂದ 26.32 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಈ ಕಾರಿನಲ್ಲಿ 6 ಮಂದಿ ಆರಾಮದಾಯಕವಾಗಿ ಕುಳಿತುಕೊಂಡು ದೂರದ ಊರುಗಳಿಗೆ ಪ್ರಯಾಣಿಯಬಹುದು.
ವೈಶಿಷ್ಟ್ಯಗಳು: ಮಾರುತಿ ಎಕ್ಸ್ಎಲ್6 ಎಂಪಿವಿ 7-ಇಂಚಿನ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್ ಪ್ಲೇ, ಪ್ಯಾಡಲ್ ಶಿಫ್ಟರ್ಸ್, ವೆಂಟಿಲೇಟೆಡ್ ಫ್ರಂಟ್ ಸೀಟ್ಸ್, 360-ಡಿಗ್ರಿ ಕ್ಯಾಮೆರಾ, ಕ್ರೂಸ್ ಕಂಟ್ರೋಲ್ ಹಾಗೂ ಆಟೋ ಎಸಿ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ. ಪ್ರವಾಸ ವೇಳೆಯಲ್ಲಿ ಹೆಚ್ಚಿನ ಲಗೇಜ್ ಸಾಗಿಸಲು 209 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಹೊಂದಿದೆ.

ಸುರಕ್ಷತಾ ವೈಶಿಷ್ಟ್ಯಗಳು: ಈ ಕಾರು ಪ್ರಯಾಣಿಕರಿಗೆ ಗರಿಷ್ಠ ರಕ್ಷಣೆ ಒದಗಿಸುತ್ತದೆ. 4 ಏರ್‌ಬ್ಯಾಗ್, ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಮತ್ತು ಇಎಸ್‌ಪಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ) ಅನ್ನು ಹೊಂದಿದೆ. ಎಕ್ಸ್ಎಲ್6 ಎಂಪಿವಿಗೆ ಕಿಯಾ ಕ್ಯಾರೆನ್ಸ್, ಮಹೀಂದ್ರಾ ಮರಾಜ್ಜೊ, ಟೊಯೊಟಾ ಇನ್ನೋವಾ ಕ್ರಿಸ್ಟಾ ಕಾರುಗಳು ಪ್ರಬಲ ಪ್ರತಿಸ್ಪರ್ಧಿಯಾಗಿವೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications