MG: ಎಂಜಿಯ ಹೊಚ್ಚ ಹೊಸ ಎಲೆಕ್ಟ್ರಿಕ್ ಕಾರು ಸೆಪ್ಟೆಂಬರ್‌ನಲ್ಲಿ ಬಿಡುಗಡೆ.. ಬೆಲೆ ಎಷ್ಟು, ವಿಶೇಷತೆಗಳೇನು?

ಎಂಜಿ ಮೋಟಾರ್ (MG Motor) ಜನಪ್ರಿಯ ವಾಹನ ತಯಾರಕ ಸಂಸ್ಥೆಯಾಗಿ ಗುರುತಿಸಿಕೊಂಡಿದೆ. ಕಂಪನಿಯು ಮಾರಾಟಗೊಳಿಸುವ ಕಾರುಗಳು ಆಕರ್ಷಕ ವಿನ್ಯಾಸ ಮತ್ತು ವೈಶಿಷ್ಟ್ಯವನ್ನು ಹೊಂದಿರುವುದರಿಂದ ಗ್ರಾಹಕರು ಕೂಡ ಮುಗಿಬಿದ್ದು ಖರೀದಿಸುತ್ತಿದ್ದಾರೆ. ಸದ್ಯ ಎಂಜಿ ಮೋಟಾರ್ ಮತ್ತಷ್ಟು ಸಂಖ್ಯೆಯಲ್ಲಿ ಖರೀದಿದಾರರನ್ನು ಆಕರ್ಷಿಸಲು ಹೊಚ್ಚ ಹೊಸ ಎಲೆಕ್ಟ್ರಿಕ್ ಕಾರನ್ನು ದೇಶೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲು ಸಿದ್ಧತೆಯನ್ನು ನಡೆಸುತ್ತಿದೆ. ಮುಂಬರುವ ಕೆಲವೇ ತಿಂಗಳಲ್ಲಿ ನೂತನ ಕಾರು ಮಾರಾಟಕ್ಕೆ ಬರಲಿದೆ. ಆ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ.

ಭಾರತದ ಮಾರುಕಟ್ಟೆಗೆ ಸೆಪ್ಟೆಂಬರ್ ಎರಡನೇ ವಾರದಲ್ಲಿ ಎಂಜಿ ಕಂಪನಿಯು ಹೊಸ ಕ್ಲೌಡ್ ಇವಿ (Cloud EV)ಯನ್ನು ಪರಿಚಯಿಸಲಿದೆ. ಈಗಾಗಲೇ ಅನೇಕ ಬಾರಿ ಪ್ರಾಯೋಗಿಕ ಸಂಚಾರವನ್ನು ನಡೆಸುವಾಗ ಈ ಕಾರು ಕಂಡುಬಂದಿದೆ. ಅತ್ಯಾಧುನಿಕ ವಿನ್ಯಾಸ (ಡಿಸೈನ್)ವನ್ನು ಹೊಂದಿದ್ದು, ಎಲ್ಇಡಿ ಲೈಟ್ ಪ್ಯಾಕೇಜ್, ಫ್ಲಶ್ ಡೋರ್ ಹ್ಯಾಂಡಲ್‌ಗಳನ್ನು ಪಡೆದಿದೆ. ಇದರ ಸಂಪೂರ್ಣವಾದ ವಿನ್ಯಾಸ ಕುರಿತಂತೆ ಬಿಡುಗಡೆಗೊಂಡ ಮೇಲೆ ಅಧಿಕೃತ ವಿವರಗಳು ಸಿಗಲಿವೆ.

MG Cloud Ev Launch September In India Expected Price And Specializations

ನೂತನ ಎಂಜಿ ಕ್ಲೌಡ್ ಇವಿ (MG Cloud EV) ಡುಯಲ್ ಡಿಜಿಟಲ್ ಸ್ಕ್ರೀನ್, 360 ಡಿಗ್ರಿ ಕ್ಯಾಮೆರಾ, ಕ್ಲೇಮೇಟ್ ಕಂಟ್ರೋಲ್, ಕನೆಕ್ಟ್ದ್ ಕಾರ್ ಟೆಕ್, ADAS (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ಸನ್‌ರೂಫ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿರುವ ನಿರೀಕ್ಷೆಯಿದೆ. ಜೊತೆಗೆ 50.6 ಕೆಡಬ್ಲ್ಯೂಹೆಚ್ (kWh) ಸಾಮರ್ಥ್ಯದ ಬ್ಯಾಟರಿ ಪ್ಯಾಕ್ ಆಯ್ಕೆಯನ್ನು ಹೊಂದಿರಲಿದ್ದು, ಭರ್ತಿ ಚಾರ್ಜ್‌ನಲ್ಲಿ 460 ಕಿ.ಮೀ ರೇಂಜ್ (ಮೈಲೇಜ್) ನೀಡಲಿದೆ ಎಂದು ಅಂದಾಜಿಸಲಾಗಿದೆ.

ಈ ಎಂಜಿ ಕ್ಲೌಡ್ ಪ್ರೀಮಿಯಂ ಎಲೆಕ್ಟ್ರಿಕ್ ಕಾರು ಆಗಿದ್ದು, ರೂ.25 ಲಕ್ಷದಿಂದ ರೂ.28 ಲಕ್ಷ ಎಕ್ಸ್ ಶೋರೂಂ ದರದಲ್ಲಿ ಸಿಗಲಿದೆ ಎಂದು ಹೇಳಲಾಗಿದೆ. ಬಿವೈಡಿ ಇ6 (BYD e6) ಪ್ರಬಲ ಎದುರಾಳಿಯಾಗಲಿದೆ. ಪ್ರಸ್ತುತ ದೇಶೀಯ ಮಾರುಕಟ್ಟೆಯಲ್ಲಿ ಎಂಜಿ ಕಂಪನಿಯು ಝಡ್ಎಸ್ ಇವಿ ಮತ್ತು ಕಾಮೆಟ್ ಇವಿಗಳನ್ನು ಮಾರಾಟ ಮಾಡುತ್ತಿದೆ.

MG Cloud Ev Launch September In India Expected Price And Specializations

ಎಂಜಿ ಝಡ್ಎಸ್ ಇವಿ (MG ZS EV) ರೂ.18.98 ಲಕ್ಷದಿಂದ ರೂ.25.44 ಲಕ್ಷ ಬೆಲೆಯನ್ನು (ಎಕ್ಸ್ ಶೋರೂಂ) ಹೊಂದಿದೆ. 50.3 ಕೆಡಬ್ಲ್ಯೂಹೆಚ್ ಬ್ಯಾಟರಿಯನ್ನು ಪಡೆದಿದ್ದು, ಸಂಪೂರ್ಣ ಚಾರ್ಜ್‌ನಲ್ಲಿ 461 ಕಿ.ಮೀ ರೇಂಜ್ ಕೊಡುತ್ತದೆ. 10.1-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 7-ಇಂಚಿನ ಡಿಜಿಟಲ್ ಡ್ರೈವರ್ ಡಿಸ್ಪ್ಲೇ, ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಗಾಗಿ 6 ಏರ್‌ಬ್ಯಾಗ್‌, 360 ಡಿಗ್ರಿ ಕ್ಯಾಮೆರಾವನ್ನು ಹೊಂದಿದೆ.

ಎಂಜಿ ಕಾಮೆಟ್ ಇವಿ (MG Comet EV) ರೂ.6.99 ಲಕ್ಷದಿಂದ ರೂ.9.53 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಖರೀದಿಗೆ ದೊರೆಯುತ್ತದೆ. ಈ ಕಾರಿನಲ್ಲಿ 17.3 ಕೆಡಬ್ಲ್ಯೂಹೆಚ್ ಬ್ಯಾಟರಿಯನ್ನು ಹೊಂದಿದ್ದು, ಪೂರ್ತಿ ಚಾರ್ಜ್‌ನಲ್ಲಿ 230 ಕಿ.ಮೀ ರೇಂಜ್ ನೀಡುತ್ತದೆ. ರೇರ್ ವೀಲ್ ಡ್ರೈವ್ ಎಲೆಕ್ಟ್ರಿಕ್ ಮೋಟಾರ್ ಹೊಂದಿದ್ದು, 42 ಪಿಎಸ್ ಪವರ್ (ಶಕ್ತಿ) ಮತ್ತು 110 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುತ್ತದೆ.

MG Cloud Ev Launch September In India Expected Price And Specializations

ಈ ಕಾಮೆಟ್ ಇವಿಯು ಇನ್ಫೋಟೈನ್‌ಮೆಂಟ್ ಸಿಸ್ಟಮ್ & ಇನ್‌ಸ್ಟ್ರುಮೆಂಟ್ ಕ್ಲಸ್ಟರ್‌ಗಾಗಿ 10.25-ಇಂಚಿನ ಡುಯಲ್ ಸ್ಕ್ರೀನ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ ಪ್ಲೇ, ಕನೆಕ್ಟ್ದ್ ಕಾರ್ ಟೆಕ್, ಕೀಲೆಸ್ ಎಂಟ್ರಿ ಒಳಗೊಂಡಂತೆ ಹತ್ತಾರು ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಯ ದೃಷ್ಟಿಯಿಂದ ಡುಯಲ್ ಫ್ರಂಟ್ ಏರ್‌ಬ್ಯಾಗ್‌, ರಿವರ್ಸ್ ಪಾರ್ಕಿಂಗ್ ಕ್ಯಾಮೆರಾ, ರೇರ್ ಪಾರ್ಕಿಂಗ್ ಸೆನ್ಸರ್ಸ್ ಅನ್ನು ಹೊಂದಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋ ಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

More from DriveSpark

Article Published On: Monday, June 17, 2024, 9:58 [IST]
English summary
Mg cloud ev launch september in india expected price and specializationsmg
Read more on mg motor india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+