ಅಗ್ಗದ ಎಂಜಿ ಎಲೆಕ್ಟ್ರಿಕ್ ಕಾರು ಖರೀದಿಸಬೇಕೇ.. ಆನ್-ರೋಡ್ ಬೆಲೆ ಎಷ್ಟು, EMI ಏನು?

ಎಂಜಿ ಮೋಟಾರ್ (MG Motor) ಜನಪ್ರಿಯ ಎಲೆಕ್ಟ್ರಿಕ್ ಕಾರು ತಯಾರಕ ಕಂಪನಿಯಾಗಿ ಹೊರಹೊಮ್ಮುತ್ತಿದೆ. ದೇಶೀಯ ಮಾರುಕಟ್ಟೆಯಲ್ಲಿ ಕಂಪನಿ ಮಾರಾಟಗೊಳಿಸುವ 'ಕಾಮೆಟ್ ಇವಿ' ಪ್ರೀಮಿಯಂ ಎಲೆಕ್ಟ್ರಿಕ್ ಹ್ಯಾಚ್‌ಬ್ಯಾಕ್ ಆಗಿದ್ದು, ಆಕರ್ಷಕ ವಿನ್ಯಾಸ & ವೈಶಿಷ್ಟ್ಯಗಳನ್ನು ಪಡೆದಿದೆ. ಈ ಹಿನ್ನೆಲೆ ಉತ್ತಮ ಸಂಖ್ಯೆಯಲ್ಲಿಯೂ ಮಾರಾಟವಾಗುತ್ತಿದೆ. ನೀವು ಹೊಚ್ಚ ಹೊಸ ಕಾರನ್ನು ಖರೀದಿಸಲು ಆಲೋಚಿಸಿದ್ದೀರಾ.. ಹಾಗಾದರೆ, 'ಎಂಜಿ ಕಾಮೆಟ್ ಇವಿ' ಅತ್ಯುತ್ತಮ ಆಯ್ಕೆಯಾಗಲಿದೆ. ನಾವಿಲ್ಲಿ ಈ ನೂತನ ಕಾರಿನ ಆನ್-ರೋಡ್ ಬೆಲೆ (On-Road Price), ಹಾಗೂ ಇಎಂಐ (EMI) ಆಯ್ಕೆಯ ಬಗ್ಗೆ ಸಂಕ್ಷಿಪ್ತವಾಗಿ ವಿವರಿಸಿದ್ದೇವೆ.

ದೇಶೀಯ ಗ್ರಾಹಕರ ಖರೀದಿಗೆ ಎಂಜಿ ಕಾಮೆಟ್ ಇವಿ (MG Comet EV) ವಿವಿಧ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿ ಲಭ್ಯವಾಗಲಿದೆ. 'ಎಕ್ಸೈಟ್' ರೂಪಾಂತರ, ರೂ.8.60 ಲಕ್ಷದವರೆಗೆ ಆನ್-ರೋಡ್ ಬೆಲೆಯನ್ನು ಹೊಂದಿದೆ. ಈ ಕಾರನ್ನು ರೂ.3 ಲಕ್ಷ ಡೌನ್-ಪೇಮೆಂಟ್ ಪಾವತಿಸಿ ಮಾಡಿ, ಮನೆಗೆ ತಂದರೆ ರೂ.5.60 ಲಕ್ಷದವರೆಗೆ ಸಾಲವಿರುತ್ತದೆ. ಅದಕ್ಕೆ ಶೇಕಡ 8% ಬಡ್ಡಿ ದರದಲ್ಲಿ 5 ವರ್ಷದ ಅವಧಿಗೆ ಮಾಸಿಕ ರೂ.11,500 ವರೆಗೆ ಇಎಂಐ ಕಟ್ಟಬೇಕು.

Mg Comet Ev On Road Price And Emi Details

ಎಂಜಿ ಕಾಮೆಟ್ ಇವಿಯ 'ಎಕ್ಸಿಕ್ಯೂಟಿವ್' ರೂಪಾಂತರ, ರೂ.10 ಲಕ್ಷದವರೆಗೆ ಆನ್-ರೋಡ್ ದರವನ್ನು ಒಳಗೊಂಡಿದೆ. ಇದನ್ನು ರೂ.3 ಲಕ್ಷ ಡೌನ್-ಪೇಮೆಂಟ್ ಕಟ್ಟಿ ತೆಗೆದುಕೊಂಡರೆ, ರೂ.7 ಲಕ್ಷದವರೆಗೆ ಸಾಲ ಬಾಕಿ ಉಳಿಯುತ್ತದೆ. ಶೇಕಡ 8% ಬಡ್ಡಿ ಹಾಕಿ 5 ವರ್ಷಕ್ಕೆ ತಿಂಗಳಿಗೆ ರೂ.14500 ವರೆಗೆ ಇಎಂಐ ಪಾವತಿಸಬೇಕು.

ನೂತನ ಕಾಮೆಟ್ ಇವಿಯ 'ಎಕ್ಸ್‌ಕ್ಲೂಸಿವ್' ರೂಪಾಂತರ, ರೂ.7.50 ಲಕ್ಷದವರೆಗೆ ಆನ್-ರೋಡ್ ಬೆಲೆಯನ್ನು ಪಡೆದಿದೆ. ಈ ಕಾರನ್ನು ರೂ.3 ಲಕ್ಷ ಡೌನ್-ಪೇಮೆಂಟ್ ಕಟ್ಟಿ ಖರೀದಿಸಿದರೆ, ರೂ.4.50 ಲಕ್ಷದವರೆಗೆ ಸಾಲವಿರುತ್ತದೆ. ಶೇಕಡ 8% ಬಡ್ಡಿ ದರದಲ್ಲಿ 5 ವರ್ಷದ ಅವಧಿಗೆ ಮಾಸಿಕ ರೂ.9,000 ವರೆಗೆ ಇಎಂಐ ಕಟ್ಟಬೇಕು.

Mg Comet Ev On Road Price And Emi Details

ಹೊಚ್ಚ ಹೊಸ ಎಂಜಿ ಕಾಮೆಟ್ ಇವಿಯು ಹೊರಭಾಗದಲ್ಲಿ ಯುವಕರನ್ನು ಸೆಳೆಯುವಂತಹ ಆಕರ್ಷಕ ವಿನ್ಯಾಸವನ್ನು ಒಳಗೊಂಡಿದೆ. ಅರೋರಾ ಸಿಲ್ವರ್ & ಕ್ಯಾಂಡಿ ವೈಟ್ ಸೇರಿದಂತೆ ವಿವಿಧ ಬಣ್ಣಗಳೊಂದಿಗೆ ಸಿಗುತ್ತದೆ. 2-ಡೋರ್ ಆಯ್ಕೆಯಲ್ಲಿ ಒಳಗೊಂಡಿದೆ. ಇದರಲ್ಲಿ 4 ಮಂದಿ ಆರಾಮದಾಯವಾಗಿ ಕುಳಿತುಕೊಂಡು ಪ್ರಯಾಣ ಮಾಡಬಹುದು. ಅದರಲ್ಲೂ ನಗರಕ್ಕೆ ಸಂಚಾರಕ್ಕೆ ಹೆಚ್ಚು ಸೂಕ್ತವಾಗಿದೆ.

ಈ ಕಾರು 17.3 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಸಾಮರ್ಥ್ಯದ ಬ್ಯಾಟರಿ ಪ್ಯಾಕ್ ಆಯ್ಕೆಯನ್ನು ಪಡೆದಿದೆ. ಇದರಲ್ಲಿ ಬಳಕೆ ಮಾಡಿರುವ ಎಲೆಕ್ಟ್ರಿಕ್ ಮೋಟಾರ್, 42 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 110 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ. ಭರ್ತಿ ಚಾರ್ಜ್‌ನಲ್ಲಿ 230 ಕಿಲೋಮೀಟರ್‌ವರೆಗೆ ರೇಂಜ್ (ಮೈಲೇಜ್) ಕೊಡುತ್ತದೆ.

Mg Comet Ev On Road Price And Emi Details

ನೂತನ ಎಂಜಿ ಕಾಮೆಟ್ ಎಲೆಕ್ಟ್ರಿಕ್ ಕಾರಿನ ಬ್ಯಾಟರಿ ಪ್ಯಾಕ್, 3.3 ಕೆಡಬ್ಲ್ಯೂ ಚಾರ್ಜರ್ ಉಪಯೋಗಿಸಿದಾಗ 0 - 100% ಚಾರ್ಜ್ ಆಗುವುದಕ್ಕೆ 7 ಗಂಟೆ ತೆಗೆದುಕೊಳ್ಳುತ್ತದೆ. ಡುಯಲ್ 10.25-ಇಂಚಿನ ಸ್ಕ್ರೀನ್ (ಇನ್ಫೋಟೈನ್‌ಮೆಂಟ್ ಸಿಸ್ಟಮ್‌ & ಇನ್ಸ್ಟ್ರುಮೆಂಟ್ ಕ್ಲಸ್ಟರ್), ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ ಹಾಗೂ ಕೀಲೆಸ್ ಎಂಟ್ರಿ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ಹೊಸ ಎಂಜಿ ಕಾಮೆಟ್ ಇವಿ ಪ್ರಯಾಣಿಕರಿಗೆ ಗರಿಷ್ಠ ರಕ್ಷಣೆ ಒದಗಿಸುತ್ತದೆ. ಸುರಕ್ಷತೆಯ ದೃಷ್ಟಿಯಿಂದ ಡುಯಲ್ ಫ್ರಂಟ್ ಏರ್‌ಬ್ಯಾಗ್‌ಗಳು, ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ರೇರ್ ಪಾರ್ಕಿಂಗ್ ಸೆನ್ಸರ್ಸ್, ರೇರ್ ಡಿಸ್ಕ್ ಬ್ರೇಕ್‌ಗಳು, ಹೋಲ್ಡ್ ಅಸಿಸ್ಟ್‌ ಮತ್ತು ರಿವರ್ಸ್ ಪಾರ್ಕಿಂಗ್ ಕ್ಯಾಮೆರಾವನ್ನು ಹೊಂದಿದೆ.

ನಿಮ್ಮ ಗಮನಕ್ಕೆ.. ನಾವಿಲ್ಲಿ ಈ ಎಲೆಕ್ಟ್ರಿಕ್ ಕಾರಿನ ಕೆಲವು ರೂಪಾಂತರಗಳ ಆನ್-ರೋಡ್ ಬೆಲೆ ಹಾಗೂ ಸಾಲದ ಆಯ್ಕೆಯ ಬಗ್ಗೆ ಮಾತ್ರ ವಿವರಿಸಿದ್ದೇವೆ. ಹೆಚ್ಚಿನ ಮಾಹಿತಿಗೆ ಸಮೀಪದ ಶೋರೂಂಗೆ ಭೇಟಿ ನೀಡಿರಿ.

More from DriveSpark

Article Published On: Tuesday, December 31, 2024, 16:46 [IST]
English summary
Mg comet ev on road price and emi details
Read more on mg motor india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+