ದೇಶದ ನಂಬರ್ 1 ಎಲೆಕ್ಟ್ರಿಕ್ ಕಾರಿದು.. ಸಿಂಗಲ್ ಡೇನಲ್ಲಿ 100 ಯುನಿಟ್ ವಿತರಣೆ, ನೆಕ್ಸಾನ್ ಇವಿ, ಎಕ್ಸ್‌ಯುವಿ400 ಪಕ್ಕಕ್ಕೆ!
ಬ್ರಿಟನ್ ಮೂಲದ ಎಂಜಿ ಮೋಟಾರ್ (MG Motor) ವಿಶ್ವಾಸಾರ್ಹ ಕಾರು ತಯಾರಕ ಕಂಪನಿಯಾಗಿದೆ. ದೇಶದ ಪ್ರಖ್ಯಾತ ಉದ್ಯಮ ಸಂಸ್ಥೆ ಜೆಎಸ್‌ಡಬ್ಲ್ಯೂ (JSW) ಜೊತೆಗೂಡಿ ಸೆಪ್ಟೆಂಬರ್‌ನಲ್ಲಿ ವಿಂಡ್ಸರ್ ಇವಿಯನ್ನು ಅದ್ದೂರಿಯಾಗಿ ಬಿಡುಗಡೆಗೊಳಿಸಿತ್ತು. ಇದು ಕೈಗೆಟುಕುವ ಬೆಲೆ ಹಾಗೂ ಆಕರ್ಷಕ ವೈಶಿಷ್ಟ್ಯಗಳನ್ನು ಪಡೆದುಕೊಂಡಿರುವುದರಿಂದ ಉತ್ತಮ ಸಂಖ್ಯೆಯಲ್ಲಿ ಮಾರಾಟವಾಗುತ್ತಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು ಕೂಡ ಇಷ್ಟಪಟ್ಟು ಖರೀದಿ ಮಾಡುತ್ತಿದ್ದಾರೆ. ಸದ್ಯ ದೇಶಾದ್ಯಂತ ಈ ಕಾರನ್ನು ಯಶಸ್ವಿಯಾಗಿ ವಿತರಣೆ ಮಾಡಲಾಗುತ್ತಿದೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.
ಇತ್ತೀಚೆಗೆ ಹೈದರಾಬಾದ್‌ನಲ್ಲಿ ಎಂಜಿ ಮೋಟಾರ್ ಒಂದೇ ದಿನ 100 ಯುನಿಟ್ ವಿಂಡ್ಸರ್ ಇವಿಗಳನ್ನು ವಿತರಣೆ ಮಾಡಿದೆ. ಕಳೆದ ಅಕ್ಟೋಬರ್‌ನಲ್ಲಿ ಬರೋಬ್ಬರಿ 3,116 ಯುನಿಟ್ ವಿಂಡ್ಸರ್ ಕಾರುಗಳನ್ನು ಮಾರಾಟಗೊಳಿಸಲಾಗಿತ್ತು ಈ ಮೂಲಕ ಎಲೆಕ್ಟ್ರಿಕ್ ವಾಹನ ಮಾರುಕಟ್ಟೆ ಶೇಕಡ 30% ಪಾಲನ್ನು ಹೊಂದಿದೆ. ಜೊತೆಗೆ ಟಾಟಾ ನೆಕ್ಸಾನ್ ಇವಿ ಮತ್ತು ಮಹೀಂದ್ರಾ ಎಕ್ಸ್‌ಯುವಿ400ಗಳನ್ನು ಹಿಂದಿಕ್ಕಿ ದೇಶದ ನಂಬರ್ 1 ಎಲೆಕ್ಟ್ರಿಕ್ ಕಾರಾಗಿ ಹೊರಹೊಮ್ಮಿದೆ.

ಈ ವಿಂಡ್ಸರ್ ಇವಿಗೆ ಗ್ರಾಹಕರಿಂದಲೂ ಭಾರಿ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಬುಕ್ಕಿಂಗ್ ಆರಂಭವಾದ 24 ಗಂಟೆಯಲ್ಲಿ ಸರಿ ಸುಮಾರು 15,176 ಕಾರುಗಳಿಗೆ ಖರೀದಿದಾರರು ಆರ್ಡರ್ ಮಾಡಿದ್ದರು. ನೂತನ ಎಂಜಿ ವಿಂಡ್ಸರ್ ಇವಿ (MG Windsor EV), ರೂ.13.50 ಲಕ್ಷದಿಂದ ರೂ.15.50 ಲಕ್ಷ ಎಕ್ಸ್ ಶೋರೂಂ ಬೆಲೆಯಯನ್ನು ಹೊಂದಿದೆ.
ಹೊಸ ಕಾರು ಹೊರಭಾಗದಲ್ಲಿ ಆಕರ್ಷಕ ವಿನ್ಯಾಸವನ್ನು ಪಡೆದಿದೆ. ಸ್ಪ್ಲಿಟ್ ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಪ್ರೊಜೆಕ್ಟರ್ ಹೆಡ್‌ಲೈಟ್‌ಗಳು, 'ಎಲ್' ರೀತಿಯಲ್ಲಿರುವ ಎಲ್ಇಡಿ ಟೈಲ್‌ಲೈಟ್‌ಗಳು, ಫ್ಲಶ್-ಫಿಟ್ಟಿಂಗ್ ಡೋರ್ ಹ್ಯಾಂಡಲ್‌ಗಳು, 18-ಇಂಚಿನ ಅಲಾಯ್ ವೀಲ್‌ಗಳನ್ನು ಹೊಂದಿದೆ. ಪರ್ಲ್ ವೈಟ್, ಕ್ಲೇ ಬೀಜ್ & ಸ್ಟಾರ್‌ಬರ್ಸ್ಟ್ ಬ್ಲ್ಯಾಕ್ ಸೇರಿದಂತೆ ವಿವಿಧ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ.

ಎಂಜಿ ವಿಂಡ್ಸರ್ ಇವಿ 38 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿಯನ್ನು ಒಳಗೊಂಡಿದ್ದು, ಪೂರ್ತಿ ಚಾರ್ಜ್‌ನಲ್ಲಿ 331 ಕಿಲೋಮೀಟರ್‌ವರೆಗೆ ರೇಂಜ್ (ಮೈಲೇಜ್) ನೀಡುತ್ತದೆ. ಈ ಕಾರಿನಲ್ಲಿ 5-ಮಂದಿ ಆರಾಮದಾಯಕವಾಗಿ ಪ್ರಯಾಣಿಸಬಹುದು. ಪ್ರವಾಸಕ್ಕೆ ಹೋಗುವಾಗ ಸ್ವಲ್ಪ ಹೆಚ್ಚಿನ ಲಗೇಜ್ ಸಾಗಿಲು 604 ಲೀಟರ್‌ನ ಬೂಟ್ ಸ್ಪೇಸ್‌ನ್ನು ಒಳಗೊಂಡಿದೆ.
ನೂತನ ಎಲೆಕ್ಟ್ರಿಕ್ ಕಾರು ಇಕೋ, ಇಕೋ ಪ್ಲಸ್, ನಾರ್ಮಲ್ & ಸ್ಪೋರ್ಟ್ ಎಂಬ ಡ್ರೈವಿಂಗ್ ಮೋಡ್‌ಗಳನ್ನು ಪಡೆದಿದೆ. ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್-ಇನ್ಸ್ಟ್ರುಮೆಂಟ್ ಕ್ಲಸ್ಟರ್ ಮತ್ತು ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್ ಸೇರಿದಂತೆ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಯ ದೃಷ್ಟಿಯಿಂದ 6-ಏರ್‌ಬ್ಯಾಗ್‌ಗಳು, ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಹಾಗೂ 360-ಡಿಗ್ರಿ ಕ್ಯಾಮೆರಾವನ್ನು ಪಡೆದಿದೆ.

ಒಟ್ಟಾರೆಯಾಗಿ 'ಎಂಜಿ ವಿಂಡ್ಸರ್ ಇವಿ' ಸಾಕಷ್ಟು ಉತ್ತಮವಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಮಾರಾಟವಾಗುತ್ತಿದೆ. ಇದು ಆಕರ್ಷಕ ಹಾಗೂ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಹೊಂದಿರುವುದರಿಂದ ಬಹುತೇಕರ ಆಯ್ಕೆಯ ಕುಟುಂಬದ ಕಾರಾಗಿ ಹೊರಹೊಮ್ಮುತ್ತಿದೆ. ಮುಂಬರುವ ದಿನಗಳಲ್ಲಿ ಈ ವಿಂಡ್ಸರ್ ಇವಿಗೆ ಮತ್ತಷ್ಟು ಭಾರಿ ಬೇಡಿಕೆ ಬಂದರೂ ಅಚ್ಚರಿಯಿಲ್ಲ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications








