ಎಂಜಿ ಜೊತೆ ಸೇರಿ ಜಿಂದಾಲ್‌ ರಣತಂತ್ರ: ಹೊಸ ಇವಿ ಕಾರಿನ ಬುಕ್ಕಿಂಗ್ ನಾಳೆಯಿಂದ ಶುರು... ಬೆಲೆ ಇಷ್ಟೇನಾ?

ಜನಪ್ರಿಯ ವಾಹನ ತಯಾರಕ ಸಂಸ್ಥೆಯಾಗಿ ಗುರುತಿಸಿಕೊಂಡ ಎಂಜಿ ತನ್ನ ಎಲೆಕ್ಟ್ರಿಕ್ ಕಾರುಗಳ ಸರಣಿಯನ್ನು ವಿಸ್ತರಿಸುತ್ತಿದೆ. ದೇಶೀಯ ಮಾರುಕಟ್ಟೆಯಲ್ಲಿ ಗ್ಲೋಸ್ಟರ್, ಹೆಕ್ಟರ್ ಪ್ಲಸ್, ಕಾಮೆಟ್ ಇವಿ ಸೇರಿದಂತೆ ವಿವಿಧ ಕಾರುಗಳನ್ನು ಮಾರಾಟ ಮಾಡುತ್ತಿದೆ. ಇವುಗಳು ಕೈಗೆಟುಕುವ ಬೆಲೆ ಹಾಗೂ ಆಕರ್ಷಕ ವೈಶಿಷ್ಟ್ಯದೊಂದಿಗೆ ಖರೀದಿಗೆ ದೊರೆಯಲಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು ಕೂಡ ಇಷ್ಟಪಟ್ಟು ಖರೀದಿಸುತ್ತಿದ್ದಾರೆ. ಈ ನಡುವೆ ಎಂಜಿ ಮೋಟಾರ್ ಕಂಪನಿಯು ಹೊಚ್ಚ ಹೊಸ ವಿಂಡ್ಸರ್ ಇವಿ (Windsor EV) ಮಾದರಿಯನ್ನು ಬಿಡುಗಡೆಗೊಳಿಸಿತ್ತು. ಈ ಹೊಸ ಕಾರು ಸಂಚಲನವನ್ನು ಸೃಷ್ಟಿಸಿದ್ದು, ಇದೀಗ ಕಂಪನಿಯು ಬುಕ್ಕಿಂಗ್ ಬಗ್ಗೆ ಮಾಹಿತಿಯನ್ನು ಬಹಿರಂಗಪಡಿಸಿದೆ.

ಹೊಸ ಎಂಜಿ ವಿಂಡ್ಸರ್ ಇವಿ (MG Windsor EV) ಅತ್ಯಂತ ಕೈಗೆಟುಕುವ ಬೆಲೆಯಲ್ಲಿ ಖರೀದಿಗೆ ದೊರೆಯುತ್ತದೆ. ಈ ಎಲೆಕ್ಟ್ರಿಕ್ ಕಾರಿಗೆ ರೂ.9.99 ಲಕ್ಷ (ಎಕ್ಸ್ ಶೋರೂಂ) ಆರಂಭಿಕ ಬೆಲೆಯನ್ನು ಹೊಂದಿದೆ. ವಿಶೇಷವಾಗಿ ಜೆಎಸ್‌ಡಬ್ಲ್ಯೂ (JSW) ಹಾಗೂ ಎಂಜಿ ಮೋಟಾರ್ (MG Motor) ಪಾಲುದಾರಿಕೆಯಲ್ಲಿ ಬಿಡುಗಡೆಯಾಗುತ್ತಿರುವ ಮೊದಲ ಕಾರು ಇದಾಗಿದೆ. ಈ ಹೊಸ ಎಂಜಿ ವಿಂಡ್ಸರ್ ಇವಿ ಕಾರಿನ ಖರೀದಿಗೆ ಬುಕ್ಕಿಂಗ್ ನಾಳೆ ಬೆಳಿಗ್ಗೆ 7:30 ರಿಂದ ಪ್ರಾರಂಭವಾಗುತ್ತದೆ.

MG Windsor Ev

ಈ ಕಾರನ್ನು ಖರೀದಿಸಲು ಬಯಸುವ ಗ್ರಾಹಕರು ಎಂಜಿ ಮೋಟಾರ್ ಇಂಡಿಯಾ ವೆಬ್‌ಸೈಟ್‌ನಲ್ಲಿ ಆನ್‌ಲೈನ್‌ನಲ್ಲಿ ಬುಕ್ ಮಾಡಬಹುದು ಅಥವಾ ಅವರ ಹತ್ತಿರದ ಡೀಲರ್‌ಶಿಪ್‌ಗೆ ಭೇಟಿ ನೀಡಬಹುದು. ಈ ವಿಂಡ್ಸರ್ ಇವಿ ವಿತರಣೆಯು ಅಕ್ಟೋಬರ್ 12 ರಂದು ಪ್ರಾರಂಭವಾಗುತ್ತದೆ. ಈ ಹೊಸ ಎಂಜಿ ವಿಂಡ್ಸರ್ ಇವಿ ಕಾರಿನ ಬಗ್ಗೆ ಹೇಳುವುದಾರೆ, ಈ ಕಾರು ಟರ್ಕೋಯಿಸ್ ಗ್ರೀನ್, ಪರ್ಲ್ ವೈಟ್, ಕ್ಲೇ ಬೀಜ್ ಹಾಗೂ ಸ್ಟಾರ್‌ಬರ್ಸ್ಟ್ ಬ್ಲ್ಯಾಕ್ ಎಂಬ ಬಣ್ಣಗಳ ಆಯ್ಕೆಗಳಲ್ಲಿ ಲಭ್ಯವಿದೆ.

ಹೊಸ ಎಂಜಿ ವಿಂಡ್ಸರ್ ಇವಿ ಕಾರು, 4,295 ಎಂಎಂ ಉದ್ದ, 1,850 ಎಂಎಂ ಅಗಲ ಮತ್ತು 1,652 ಎಂಎಂ ಎತ್ತರವಿದೆ. 2,700 ಎಂಎಂ ವೀಲ್‌ಬೇಸ್‌ನ್ನು ಹೊಂದಿದೆ. ಇದರಲ್ಲಿ 5 ಮಂದಿ ಆರಾಮದಾಯಕವಾಗಿ ಕುಳಿತುಕೊಂಡು ಪ್ರಯಾಣಿಸಬಹುದು. ಇನ್ನು ಈ ವಿಂಡ್ಸರ್ ಇವಿ ಹೊರಭಾಗದಲ್ಲಿ ಅತ್ಯಾಕರ್ಷಕವಾದ ವಿನ್ಯಾಸವನ್ನು ಹೊಂದಿದೆ.

ಎಂಜಿ ವಿಂಡ್ಸರ್ ಇವಿ ಕಾರು ಸ್ಪ್ಲಿಟ್ ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಪ್ರೊಜೆಕ್ಟರ್ ಹೆಡ್‌ಲೈಟ್‌ಗಳು, ಮುಂಭಾಗ (ಫ್ರಂಟ್) ಹಾಗೂ ಹಿಂಭಾಗ (ರೇರ್) ಎಲ್ಇಡಿ ಲೈಟ್ ಬಾರ್‌ಗಳು, ಎಲ್-ಆಕಾರಕ್ಕೆ ಹೋಲಿಕೆಯಾಗುವ ಎಲ್ಇಡಿ ಟೈಲ್‌ಲೈಟ್‌ಗಳು, ಫ್ಲಶ್ ಫಿಟ್ಟಿಂಗ್ ಡೋರ್ ಹ್ಯಾಂಡಲ್‌ಗಳು, 18-ಇಂಚಿನ ಅಲಾಯ್ ವೀಲ್‌ಗಳು ಮತ್ತು 215/55 ಆರ್18 ಟೈಯರ್‌ಗಳನ್ನು ಒಳಗೊಂಡಿದೆ.

ಈ ಎಂಜಿ ವಿಂಡ್ಸರ್ ಇವಿ ಕಾರಿನಲ್ಲಿ 15.6-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಫುಲ್-ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಆಂಬಿಯೆಂಟ್ ಲೈಟಿಂಗ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ಆಂಬಿಯೆಂಟ್ ಲೈಟಿಂಗ್, ವೈರ್‌ಲೆಸ್ ಫೋನ್ ಚಾರ್ಜಿಂಗ್ ಪೋರ್ಟ್, ಕೀಲೆಸ್ ಎಂಟ್ರಿ ಮತ್ತು ಪುಶ್-ಬಟನ್ ಸ್ಟಾರ್ಟ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಈ ಕಾರಿನಲ್ಲಿ ಇಕೋ, ಇಕೋ ಪ್ಲಸ್, ನಾರ್ಮಲ್ ಹಾಗೂ ಸ್ಪೋರ್ಟ್ ಎಂಬ ಡ್ರೈವಿಂಗ್ ಮೋಡ್‌ಗಳನ್ನು ಪಡೆದಿದೆ.

ಎಂಜಿ ವಿಂಡ್ಸರ್ ಎಲೆಕ್ಟ್ರಿಕ್ ಕಾರು ಪ್ರಯಾಣಿಕರಿಗೆ ಗರಿಷ್ಠ ರಕ್ಷಣೆ ಒದಗಿಸುತ್ತದೆ. ಸುರಕ್ಷತೆಯ ಸಲುವಾಗಿ 6-ಏರ್‌ಬ್ಯಾಗ್‌ಗಳು, ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್) ಹಾಗೂ 360-ಡಿಗ್ರಿ ಕ್ಯಾಮೆರಾವನ್ನು ಹೊಂದಿದೆ. ಆದರೆ ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್) ಫೀಚರ್ ಹೊಂದಿಲ್ಲ.

ಎಂಜಿ ವಿಂಡ್ಸರ್ ಇವಿ 38 ಕೆಡಬ್ಲ್ಯೂಹೆಚ್ (kWh) ಸಾಮರ್ಥ್ಯದ ಬ್ಯಾಟರಿ ಪ್ಯಾಕ್ ಆಯ್ಕೆಯನ್ನು ಹೊಂದಿದೆ. ಇದರಲ್ಲಿರುವ ಸಿಂಗಲ್ ಎಲೆಕ್ಟ್ರಿಕ್ ಮೋಟಾರ್ 134 ಬಿಹೆಚ್‍ಪಿ ಗರಿಷ್ಠ ಶಕ್ತಿ (ಪವರ್) ಹಾಗೂ 200 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಪಡೆದಿದೆ. ಸಂಪೂರ್ಣ ಚಾರ್ಜ್‌ನಲ್ಲಿ 331 ಕಿಲೋಮೀಟರ್ ರೇಂಜ್ ನೀಡುತ್ತದೆ.

More from DriveSpark

Article Published On: Wednesday, October 2, 2024, 14:19 [IST]
English summary
Mg windsor ev bookings open tomorrow delivery details
Read more on mg motor india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+