ಬುಕ್ಕಿಂಗ್‌ನಲ್ಲಿ ಸುನಾಮಿ: ಕಡಿಮೆ ಬೆಲೆಯ ಎಂಜಿ ಕಾರಿಗೆ ಮುಗಿಬಿದ್ದ ಜನ... ಬೆಚ್ಚಿಬಿದ್ದ ಟಾಟಾ!

ದೇಶೀಯ ಮಾರುಕಟ್ಟೆಯಲ್ಲಿ ಗ್ಲೋಸ್ಟರ್, ಹೆಕ್ಟರ್ ಪ್ಲಸ್, ಕಾಮೆಟ್ ಇವಿ ಸೇರಿದಂತೆ ವಿವಿಧ ಕಾರುಗಳನ್ನು ಮಾರಾಟ ಮಾಡುತ್ತಿದೆ. ಈ ನಡುವೆ ಜನಪ್ರಿಯ ವಾಹನ ತಯಾರಕ ಸಂಸ್ಥೆಯಾಗಿ ಗುರುತಿಸಿಕೊಂಡ ಎಂಜಿ ತನ್ನ ಎಲೆಕ್ಟ್ರಿಕ್ ಕಾರುಗಳ ಸರಣಿಯನ್ನು ವಿಸ್ತರಿಸಿದೆ. ಈ ನಡುವೆ ಎಂಜಿ ಕಂಪನಿಯು ವಿಂಡ್ಸರ್ ಇವಿ (Windsor EV) ಮಾದರಿಯನ್ನು ಬಿಡುಗಡೆಗೊಳಿಸಿ ಹೊಸ ಸಂಚಲನವನ್ನು ಸೃಷ್ಟಿಸಿತು. ಈ ಹೊಸ ಎಂಜಿ ಕಾರಿನ ಖರೀದಿಗಾಗಿ ಬುಕ್ಕಿಂಗ್ ಅನ್ನು ಅಕ್ಟೋಬರ್ 3ಕ್ಕೆ ಪ್ರಾರಂಭಿಸಿತು. ಈ ಕಾರು ಕೈಗೆಟುಕುವ ಬೆಲೆ ಹಾಗೂ ಆಕರ್ಷಕ ವೈಶಿಷ್ಟ್ಯದೊಂದಿಗೆ ಖರೀದಿಗೆ ದೊರೆಯಲಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು ಕೂಡ ಇಷ್ಟಪಟ್ಟು ಬುಕ್ ಮಾಡುತ್ತಿದ್ದಾರೆ.

ಬುಕ್ಕಿಂಗ್ ಪ್ರಾರಂಭವಾಗಿ ಮೊದಲ ದಿನವೇ 15,176 ಬುಕ್ಕಿಂಗ್ ಗಳನ್ನು ಪಡೆದು ಮೈಲುಗಲ್ಲು ಸಾಧಿಸಿದೆ. ಈ ಹೊಸ ಎಂಜಿ ವಿಂಡ್ಸರ್ ಇವಿ (MG Windsor EV) ಕಾರನ್ನು ಖರೀದಿಸಲು ಬಯಸುವ ಗ್ರಾಹಕರು ಎಂಜಿ ಡೀಲರ್‌ಶಿಪ್‌ಗೆ ಭೇಟಿ ನೀಡಿ ಅಥವಾ ವೆಬ್‌ಸೈಟ್‌ನಲ್ಲಿ ರೂ. 11,000 ಟೋಕ್ ಮೊತ್ತ ಪಾವತಿಸಿ ಬುಕ್ ಮಾಡಬಹುದು. ಈ ಮಾದರಿಯು ಅತ್ಯಂತ ಕೈಗೆಟುಕುವ ಬೆಲೆಯಲ್ಲಿ ಖರೀದಿಗೆ ದೊರೆಯುತ್ತದೆ.

MG Windsor EV

ಈ ಎಂಜಿ ವಿಂಡ್ಸರ್ ಎಲೆಕ್ಟ್ರಿಕ್ ಕಾರಿಗೆ ರೂ.9.99 ಲಕ್ಷ (ಎಕ್ಸ್ ಶೋರೂಂ) ಆರಂಭಿಕ ಬೆಲೆಯನ್ನು ಹೊಂದಿದೆ. ಇನ್ನು ವಿಶೇಷವಾಗಿ ಜೆಎಸ್‌ಡಬ್ಲ್ಯೂ (JSW) ಹಾಗೂ ಎಂಜಿ ಮೋಟಾರ್ (MG Motor) ಪಾಲುದಾರಿಕೆಯಲ್ಲಿ ಬಿಡುಗಡೆಯಾಗುತ್ತಿರುವ ಮೊದಲ ಕಾರು ಇದಾಗಿದೆ. ಈ ಹೊಸ ಎಂಜಿ ವಿಂಡ್ಸರ್ ಇವಿ ಕಾರಿನ ಬಗ್ಗೆ ಹೇಳುವುದಾರೆ, ಈ ಕಾರು ಟರ್ಕೋಯಿಸ್ ಗ್ರೀನ್, ಪರ್ಲ್ ವೈಟ್, ಕ್ಲೇ ಬೀಜ್ ಹಾಗೂ ಸ್ಟಾರ್‌ಬರ್ಸ್ಟ್ ಬ್ಲ್ಯಾಕ್ ಎಂಬ ಬಣ್ಣಗಳ ಆಯ್ಕೆಗಳಲ್ಲಿ ಲಭ್ಯವಿದೆ.

ಎಂಜಿ ವಿಂಡ್ಸರ್ ಇವಿ 38 ಕೆಡಬ್ಲ್ಯೂಹೆಚ್ (kWh) ಸಾಮರ್ಥ್ಯದ ಬ್ಯಾಟರಿ ಪ್ಯಾಕ್ ಆಯ್ಕೆಯನ್ನು ಹೊಂದಿದೆ. ಇದರಲ್ಲಿರುವ ಸಿಂಗಲ್ ಎಲೆಕ್ಟ್ರಿಕ್ ಮೋಟಾರ್ 134 ಬಿಹೆಚ್‍ಪಿ ಪವರ್ ಹಾಗೂ 200 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುತ್ತದೆ. ಸಂಪೂರ್ಣ ಚಾರ್ಜ್‌ನಲ್ಲಿ 331 ಕಿಲೋಮೀಟರ್ ರೇಂಜ್ ನೀಡುತ್ತದೆ. ವಿಂಡ್ಸರ್ ಇವಿ ಕಾರು 4,295 ಎಂಎಂ ಉದ್ದ, 1,850 ಎಂಎಂ ಅಗಲ ಮತ್ತು 1,652 ಎಂಎಂ ಎತ್ತರವಿದೆ. 2,700 ಎಂಎಂ ವೀಲ್‌ಬೇಸ್‌ನ್ನು ಹೊಂದಿದೆ.

MG Windsor EV

ಈ ವಿಂಡ್ಸರ್ ಇವಿ ಹೊರಭಾಗದಲ್ಲಿ ಅತ್ಯಾಕರ್ಷಕವಾದ ವಿನ್ಯಾಸವನ್ನು ಹೊಂದಿದೆ. ಎಂಜಿ ವಿಂಡ್ಸರ್ ಇವಿ ಕಾರು ಸ್ಪ್ಲಿಟ್ ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಪ್ರೊಜೆಕ್ಟರ್ ಹೆಡ್‌ಲೈಟ್‌ಗಳು, ಮುಂಭಾಗ (ಫ್ರಂಟ್) ಹಾಗೂ ಹಿಂಭಾಗ (ರೇರ್) ಎಲ್ಇಡಿ ಲೈಟ್ ಬಾರ್‌ಗಳು, ಎಲ್-ಆಕಾರಕ್ಕೆ ಹೋಲಿಕೆಯಾಗುವ ಎಲ್ಇಡಿ ಟೈಲ್‌ಲೈಟ್‌ಗಳು, ಫ್ಲಶ್ ಫಿಟ್ಟಿಂಗ್ ಡೋರ್ ಹ್ಯಾಂಡಲ್‌ಗಳು, 18-ಇಂಚಿನ ಅಲಾಯ್ ವೀಲ್‌ಗಳು ಮತ್ತು 215/55 ಆರ್18 ಟೈಯರ್‌ಗಳನ್ನು ಹೊಂದಿದೆ.

ಹೊಸ ಎಂಜಿ ವಿಂಡ್ಸರ್ ಇವಿ ಕಾರಿನಲ್ಲಿ 15.6-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಫುಲ್-ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಆಂಬಿಯೆಂಟ್ ಲೈಟಿಂಗ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ಆಂಬಿಯೆಂಟ್ ಲೈಟಿಂಗ್, ವೈರ್‌ಲೆಸ್ ಫೋನ್ ಚಾರ್ಜಿಂಗ್ ಪೋರ್ಟ್, ಕೀಲೆಸ್ ಎಂಟ್ರಿ ಮತ್ತು ಪುಶ್-ಬಟನ್ ಸ್ಟಾರ್ಟ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಈ ಕಾರಿನಲ್ಲಿ ಇಕೋ, ಇಕೋ ಪ್ಲಸ್, ನಾರ್ಮಲ್ ಹಾಗೂ ಸ್ಪೋರ್ಟ್ ಎಂಬ ಡ್ರೈವಿಂಗ್ ಮೋಡ್‌ಗಳನ್ನು ಪಡೆದಿವೆ.

MG Windsor EV

ಈ ಹೊಸ ವಿಂಡ್ಸರ್ ಎಲೆಕ್ಟ್ರಿಕ್ ಕಾರು ಪ್ರಯಾಣಿಕರಿಗೆ ಗರಿಷ್ಠ ರಕ್ಷಣೆ ಒದಗಿಸುತ್ತದೆ. ಸುರಕ್ಷತೆಯ ಸಲುವಾಗಿ 6-ಏರ್‌ಬ್ಯಾಗ್‌ಗಳು, ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್) ಹಾಗೂ 360-ಡಿಗ್ರಿ ಕ್ಯಾಮೆರಾವನ್ನು ಹೊಂದಿದೆ. ಆದರೆ ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್) ಫೀಚರ್ ಹೊಂದಿಲ್ಲ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

More from DriveSpark

Article Published On: Saturday, October 5, 2024, 11:00 [IST]
English summary
Mg windsor ev records over 15000 bookings in a single day details
Read more on mg motor india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+