MG Windsor EV: ಕಡಿಮೆ ಬೆಲೆಯ ಎಂಜಿ ವಿಂಡ್ಸರ್ ಇವಿ ವಿಡಿಯೋ ರಿವ್ಯೂ.. ಭರ್ಜರಿ ಗುರು.. ನೀವೇ ನೋಡಿ!
ಎಂಜಿ ಮೋಟಾರ್ (MG Motor) ಜನಪ್ರಿಯ ವಾಹನ ತಯಾರಕ ಕಂಪನಿಯಾಗಿ ಗುರುತಿಸಿಕೊಂಡಿದೆ. ಸೆಪ್ಟೆಂಬರ್ 11ರಂದು ಜೆಎಸ್‌ಡಬ್ಲ್ಯೂ (ಜಿಂದಾಲ್) ಕಂಪನಿ ಸಹಯೋಗದಲ್ಲಿ ಹೊಚ್ಚ ಹೊಸ ವಿಂಡ್ಸರ್ ಇವಿಯನ್ನು (Windsor EV) ಅದ್ದೂರಿಯಾಗಿ ಬಿಡುಗಡೆ ಮಾಡಿತ್ತು. ಇದೊಂದು ಎಲೆಕ್ಟ್ರಿಕ್ ಕಾರಾಗಿದೆ. ಇತ್ತೀಚೆಗೆ ನಮ್ಮ ಡ್ರೈವ್‌ಸ್ಪಾರ್ಕ್ ತಂಡದ ಪ್ರತಿನಿಧಿಗೆ ಈ ಕಾರಿನ ಟೆಸ್ಟ್ ಡ್ರೈವ್ (ಪ್ರಾಯೋಗಿಕ ಚಾಲನೆ) ಮಾಡಲು ಅವಕಾಶ ದೊರೆಯಿತು. ಬನ್ನಿ.. ಹೇಗಿದೆ ಎಂಬುದರ ವಿಡಿಯೋ ರಿವ್ಯೂ ನಿಮಗಾಗಿ..
ಈ ಹೊಚ್ಚ ಹೊಸ ಎಂಜಿ ವಿಂಡ್ಸರ್ ಇವಿ (MG Windsor EV) ಅತ್ಯಂತ ಕೈಗೆಟುಕುವ ಬೆಲೆಯಲ್ಲಿ ಖರೀದಿಗೆ ದೊರೆಯುತ್ತದೆ. ರೂ.9.99 ಲಕ್ಷ (ಎಕ್ಸ್ ಶೋರೂಂ) ಪರಿಚಯಾತ್ಮಕ ದರವನ್ನು ಹೊಂದಿದೆ. ಇದು 38 ಕೆಡಬ್ಲ್ಯೂಹೆಚ್ ಸಾಮರ್ಥ್ಯದ ಬ್ಯಾಟರಿ ಪ್ಯಾಕ್ ಆಯ್ಕೆಯನ್ನು ಪಡೆದಿದೆ. ಭರ್ತಿ ಚಾರ್ಜ್‌ನಲ್ಲಿ 331 ಕಿಲೋಮೀಟರ್ ರೇಂಜ್ (ಮೈಲೇಜ್) ಕೊಡುತ್ತದೆ.
ನೂತನ ಎಂಜಿ ವಿಂಡ್ಸರ್ ಇವಿ ಹೊರಭಾಗದಲ್ಲಿ ಅತ್ಯಾಕರ್ಷಕವಾದ ವಿನ್ಯಾಸ (ಡಿಸೈನ್) ಹೊಂದಿದೆ. ಸ್ಪ್ಲಿಟ್ ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಪ್ರೊಜೆಕ್ಟರ್ ಹೆಡ್‌ಲೈಟ್‌ಗಳು,ಎಲ್ಇಡಿ ಟೈಲ್‌ಲೈಟ್‌ಗಳು, ಫ್ಲಶ್ ಫಿಟ್ಟಿಂಗ್ ಡೋರ್ ಹ್ಯಾಂಡಲ್‌ಗಳು, 18-ಇಂಚಿನ ಅಲಾಯ್ ವೀಲ್‌ಗಳು ಹಾಗೂ 215/55 ಆರ್18 ಟೈಯರ್‌ಗಳನ್ನು ಒಳಗೊಂಡಿದೆ. ಇದರಲ್ಲಿ 5 ಮಂದಿ ಆರಾಮದಾಯಕವಾಗಿ ಪ್ರಯಾಣಿಬಹುದು.
ಈ ಕಾರು ಹತ್ತಾರು ಅತ್ಯಾಧುನಿಕ ವೈಶಿಷ್ಟ್ಯಗಳನ್ನು ಹೊಂದಿದೆ. 15.6-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಫುಲ್-ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಆಂಬಿಯೆಂಟ್ ಲೈಟಿಂಗ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ಆಂಬಿಯೆಂಟ್ ಲೈಟಿಂಗ್, ವೈರ್‌ಲೆಸ್ ಫೋನ್ ಚಾರ್ಜಿಂಗ್ ಪೋರ್ಟ್, ಪುಶ್-ಬಟನ್ ಸ್ಟಾರ್ಟ್ ಹಾಗೂ ಕೀಲೆಸ್ ಎಂಟ್ರಿಯಂತಹ ಹಲವು ವೈಶಿಷ್ಟ್ಯಗಳನ್ನು ಪಡೆದಿದೆ.

ಎಂಜಿ ವಿಂಡ್ಸರ್ ಇವಿ ಪ್ರಯಾಣಿಕರಿಗೆ ಗರಿಷ್ಠ ರಕ್ಷಣೆ ಒದಗಿಸಲಿದೆ. ಸುರಕ್ಷತೆಯ ದೃಷ್ಟಿಯಿಂದ ಹಿಲ್ ಸ್ಟಾರ್ಟ್ ಅಸಿಸ್ಟ್, ಹಿಲ್ ಡಿಸೆಂಟ್ ಕಂಟ್ರೋಲ್, ಎಲ್ಇಡಿ ಕಾರ್ನರ್ & ರೇರ್ ಫಾಗ್ ಲೈಟ್‌ಗಳು, 6-ಏರ್‌ಬ್ಯಾಗ್‌ಗಳು, ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಆಲ್ ವೀಲ್ ಡಿಸ್ಕ್ ಬ್ರೇಕ್‌ಗಳು ಹಾಗೂ 360-ಡಿಗ್ರಿ ಕ್ಯಾಮೆರಾವನ್ನು ಹೊಂದಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications








