9.99 ಲಕ್ಷ.. 331 Km ರೇಂಜ್.. 5-ಸೀಟರ್: ಶೋರೂಂ ತಲುಪಿದ ಹೊಸ ಎಂಜಿ ಎಲೆಕ್ಟ್ರಿಕ್ ಕಾರು.. ವೈಶಿಷ್ಟ್ಯಗಳೇನು?
ಎಂಜಿ ಮೋಟಾರ್ (MG Motor) ಜನಪ್ರಿಯ ವಾಹನ ತಯಾರಕ ಸಂಸ್ಥೆಯಾಗಿ ಗುರುತಿಸಿಕೊಂಡಿದೆ. ಇತ್ತೀಚೆಗೆ, ದೇಶೀಯ ಮಾರುಕಟ್ಟೆಯಲ್ಲಿ ಪ್ರಸಿದ್ಧ ವ್ಯಾಪಾರೋದ್ಯಮ ಸಂಸ್ಥೆ ಜೆಎಸ್‌ಡಬ್ಲ್ಯೂ (JSW) ಸಹಭಾಗಿತ್ವದಲ್ಲಿ ವಿಂಡ್ಸರ್ ಇವಿಯನ್ನು (Windsor EV) ಮಾರಾಟಕ್ಕೆ ತಂದಿತ್ತು. ಕೈಗೆಟುಕುವ ಬೆಲೆ ಹಾಗೂ ಹತ್ತಾರು ಆಕರ್ಷಕ ವೈಶಿಷ್ಟ್ಯಗಳನ್ನು ಪಡೆದುಕೊಂಡಿರುವ ಈ ಎಲೆಕ್ಟ್ರಿಕ್ ಕಾರನ್ನು ಕಂಪನಿಯು ದೇಶಾದ್ಯಂತ ಹಲವು ಶೋರೂಂಗಳಿಗೆ ತಲುಪಿಸುವುದನ್ನು ಶುರು ಮಾಡಿದೆ ಎಂದು ವರದಿಯಾಗಿದೆ. ಕೆಲವೇ ದಿನಗಳಲ್ಲಿ ಟೆಸ್ಟ್ ಡ್ರೈವ್ (ಪರೀಕ್ಷಾರ್ಥ ಚಾಲನೆ) ಕೂಡ ಆರಂಭವಾಗುವ ನಿರೀಕ್ಷೆಯಿದೆ.
ನೂತನ ಎಂಜಿ ವಿಂಡ್ಸರ್ ಇವಿ (MG Windsor EV) ಸ್ಪರ್ಧಾತ್ಮಕ ದರದಲ್ಲಿ ಗ್ರಾಹಕರಿಗೆ ಲಭ್ಯವಿದ್ದು, ರೂ.9.99 ಲಕ್ಷ (ಎಕ್ಸ್ ಶೋರೂಂ) ಆರಂಭಿಕ ದರವನ್ನು ಪಡೆದಿದೆ. ಈ ಕಾರಿನ ಬುಕ್ಕಿಂಗ್ ಅಕ್ಟೋಬರ್ 3 ರಂದು ಪ್ರಾರಂಭವಾಗಲಿದ್ದು, ದಸರಾ ವೇಳೆಗೆ ಅಂದರೆ ಅಕ್ಟೋಬರ್ 12ರಿಂದ ವಿತರಣೆಗಳು (ಡೆಲಿವರಿ) ಶುರುವಾಗಲಿದೆ.

ನೂತನ ಎಂಜಿ ವಿಂಡ್ಸರ್ ಇವಿ ಹೊರಭಾಗದಲ್ಲಿ ಆಕರ್ಷಕವಾದ ವಿನ್ಯಾಸ (ಡಿಸೈನ್) ಹೊಂದಿದೆ. ಸ್ಪ್ಲಿಟ್ ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಪ್ರೊಜೆಕ್ಟರ್ ಹೆಡ್‌ಲೈಟ್‌ಗಳು, ಎಲ್ಇಡಿ ಲೈಟ್ ಬಾರ್‌ಗಳು, 'ಎಲ್' ಆಕಾರಕ್ಕೆ ಹೋಲುವ ಎಲ್ಇಡಿ ಟೈಲ್‌ಲೈಟ್‌ಗಳು, ಫ್ಲಶ್ ಫಿಟ್ಟಿಂಗ್ ಡೋರ್ ಹ್ಯಾಂಡಲ್‌ಗಳು ಮತ್ತು 18-ಇಂಚಿನ ಅಲಾಯ್ ವೀಲ್‌ಗಳನ್ನು ಪಡೆದಿದೆ. ಜೊತೆಗೆ 2,700 ಎಂಎಂ ವೀಲ್‌ಬೇಸ್‌ನ್ನು ಒಳಗೊಂಡಿದೆ.
ಈ ಎಲೆಕ್ಟ್ರಿಕ್ ಕಾರಿನಲ್ಲಿ 5 ಮಂದಿ ಸುಲಭವಾಗಿ ಓಡಾಟ ನಡೆಸಬಹುದು. ವಾರಾಂತ್ಯ ಹಾಗೂ ರಜಾದಿನಗಳಲ್ಲಿ ಹೆಚ್ಚಿನ ಲಗೇಜ್ ತೆಗೆದುಕೊಂಡು ಹೋಗಲು 604 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಹೊಂದಿದೆ. ಚಾಲಕರಿಗೆ ನೆರವಾಗುವ ಸಲುವಾಗಿ ಇಕೋ, ಇಕೋ ಪ್ಲಸ್, ನಾರ್ಮಲ್ ಮತ್ತು ಸ್ಪೋರ್ಟ್ ಎಂಬ ಡ್ರೈವಿಂಗ್ ಮೋಡ್‌ಗಳನ್ನು ಪಡೆದಿದೆ.
ಎಂಜಿ ವಿಂಡ್ಸರ್ ಇವಿ 38 ಕೆಡಬ್ಲ್ಯೂಹೆಚ್ (ಕಿಲೋ ವ್ಯಾಟ್) ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಭರ್ತಿ ಚಾರ್ಜ್‌ನಲ್ಲಿ 331 ಕಿಲೋಮೀಟರ್ ಕ್ರಮಿಸುತ್ತದೆ. ಇದರ ಸಿಂಗಲ್-ಎಲೆಕ್ಟ್ರಿಕ್ ಮೋಟಾರ್ 134 ಬಿಹೆಚ್‍ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 200 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ.
ಈ ಕಾರು 15.6-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಫುಲ್ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ಆಂಬಿಯೆಂಟ್ ಲೈಟಿಂಗ್, ವೈರ್‌ಲೆಸ್ ಫೋನ್ ಚಾರ್ಜಿಂಗ್ ಪೋರ್ಟ್, ಕೀಲೆಸ್ ಎಂಟ್ರಿ ಹಾಗೂ ಪುಶ್ ಬಟನ್ ಸ್ಟಾರ್ಟ್ ಒಳಗೊಂಡಂತೆ ಯುವ ಗ್ರಾಹಕರನ್ನು ಆಕರ್ಷಿಸುವ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ.
ಎಂಜಿ ವಿಂಡ್ಸರ್ ಇವಿ ಪ್ರಯಾಣಿಕರ ಸುರಕ್ಷತೆಗಾಗಿ 6-ಏರ್‌ಬ್ಯಾಗ್‌ಗಳು, ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್) ಮತ್ತು 360 ಡಿಗ್ರಿ ಕ್ಯಾಮೆರಾವನ್ನು ಒಳಗೊಂಡಿದೆ. ಈ ಎಲೆಕ್ಟ್ರಿಕ್ ಕಾರಿಗೆ ಟಾಟಾ ನೆಕ್ಸಾನ್ ಇವಿ (Tata Nexon EV) ಹಾಗೂ ಮಹೀಂದ್ರಾ ಎಕ್ಸ್‌ಯುವಿ400 ಇವಿ (Mahindra XUV400 EV) ಮಾದರಿಗಳು (ಮಾಡೆಲ್) ಪ್ರಬಲವಾದ ಪ್ರತಿಸ್ಪರ್ಧಿಯಾಗಿವೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications








