ವಿಮಾನದಂತೆ ಸೌಕರ್ಯ. ಕಡಿಮೆ ಬೆಲೆ: ಭಾರತದಲ್ಲಿ ಹೊಸ ದಾಖಲೆ ಬರೆದ ಎಂಜಿ ಕಾರು!
ದೇಶಿಯ ಮಾರುಕಟ್ಟೆಯಲ್ಲಿ ಗ್ಲೋಸ್ಟರ್, ಹೆಕ್ಟರ್ ಪ್ಲಸ್, ಕಾಮೆಟ್ ಇವಿ ಸೇರಿದಂತೆ ವಿವಿಧ ಕಾರುಗಳನ್ನು ಮಾರಾಟ ಮಾಡುತ್ತಿದೆ. ಈ ನಡುವೆ ಜನಪ್ರಿಯ ವಾಹನ ತಯಾರಕ ಸಂಸ್ಥೆಯಾಗಿ ಗುರುತಿಸಿಕೊಂಡ ಎಂಜಿ ತನ್ನ ಎಲೆಕ್ಟ್ರಿಕ್ ಕಾರುಗಳ ಸರಣಿಯನ್ನು ವಿಸ್ತರಿಸಿದೆ. ಇದರ ಭಾಗವಾಗಿ ಎಂಜಿ ಕಂಪನಿಯು ವಿಂಡ್ಸರ್ ಇವಿ ಮಾದರಿಯನ್ನು ಬಿಡುಗಡೆಗೊಳಿಸಿ ಹೊಸ ಸಂಚಲನವನ್ನು ಸೃಷ್ಟಿಸಿದೆ. ಈ ಹೊಸ ಎಲೆಕ್ಟ್ರಿಕ್ ಕಾರಿನ ಮಾರಾಟದ ವರದಿಯನ್ನು ಬಹಿರಂಗಪಡಿಸಿದ್ದಾರೆ. 2024ರ ನವೆಂಬರ್ ತಿಂಗಳಿನಲ್ಲಿ ಎಂಜಿ ವಿಂಡ್ಸರ್ ಇವಿಯ 3,144 ಯುನಿಟ್ ಮಾರಾಟದೊಂದಿಗೆ ದೇಶದಲ್ಲಿ ಅತಿ ಹೆಚ್ಚು ಮಾರಾಟವಾದ ಎಲೆಕ್ಟ್ರಿಕ್ ಕಾರ್ ಆಗಿದೆ.
ಕಳೆದ ತಿಂಗಳ ಮಾರಾಟದಲ್ಲಿ ಎಂಜಿ ವಿಂಡ್ಸರ್ ಇವಿ (MG Windsor EV) ಮಾದರಿಯು ಟಾಟಾ ನೆಕ್ಸಾನ್ ಇವಿಯನ್ನು ಹಿಂದಿಕ್ಕಿ ನಂ.1 ಎಲೆಕ್ಟ್ರಿಕ್ ಕಾರ್ ಪಟ್ಟಕ್ಕೇರಿದ. ಇಲ್ಲಿಯವರೆಗೆ ಟಾಟಾ ಭಾರತದಲ್ಲಿ ಹೆಚ್ಚು ಮಾರಾಟವಾದ ಎಲೆಕ್ಟ್ರಿಕ್ ಕಾರ್ ಆಗಿತ್ತ್ತು. ಮೊದಲ ಬಾರಿಗೆ ಈ ನೆಕ್ಸಾನ್ ಇವಿಯನ್ನು ಹಿಂದಿಕ್ಕಿ ಹೊಸ ದಾಖಲೆಯನ್ನು ಬರೆದಿದೆ. ಎಂಜಿ ಕಾರುಗಳ ಮಾರಾಟದಲ್ಲಿ ವಿಂಡ್ಸರ್ ಇವಿ ಮೊದಲ ಸ್ಥಾನದಲ್ಲಿದೆ. ಇನ್ನು ಎರಡನೇ ಸ್ಥಾನದಲ್ಲಿ 1,106 ಯುನಿಟ್‌ಗಳು ಮಾರಾಟವಾಗಿವೆ.

24 ಗಂಟೆಗಳ ಒಳಗೆ ವಿಂಡ್ಸರ್ 15,176 ಬುಕಿಂಗ್‌ಗಳನ್ನು ಗಳಿಸಿದ ಭಾರತದ ಮೊದಲ ಪ್ರಯಾಣಿಕ ಎಲೆಕ್ಟ್ರಿಕ್ ವಾಹನ ಎಂಬ ದಾಖಲೆಯನ್ನು ಬರೆದಿದೆ. ವಿಶೇಷವಾಗಿ ಜೆಎಸ್‌ಡಬ್ಲ್ಯೂ (JSW) ಹಾಗೂ ಎಂಜಿ ಮೋಟಾರ್ ಪಾಲುದಾರಿಕೆಯಲ್ಲಿ ಬಿಡುಗಡೆಯಾಗುತ್ತಿರುವ ಮೊದಲ ಕಾರು ಇದಾಗಿದೆ. ಈ ಎಂಜಿ ವಿಂಡ್ಸರ್ ಇವಿ ಕಾರಿನ ಬಗ್ಗೆ ಹೇಳುವುದಾರೆ, ಇದು ಟರ್ಕೋಯಿಸ್ ಗ್ರೀನ್, ಪರ್ಲ್ ವೈಟ್, ಕ್ಲೇ ಬೀಜ್ ಹಾಗೂ ಸ್ಟಾರ್‌ಬರ್ಸ್ಟ್ ಬ್ಲ್ಯಾಕ್ ಎಂಬ ಬಣ್ಣಗಳ ಆಯ್ಕೆಗಳಲ್ಲಿ ಮಾರಾಟವಾಗುತ್ತಿದೆ.
ವಿಂಡ್ಸರ್ ಇವಿ ಹೊರಭಾಗದಲ್ಲಿ ಅತ್ಯಾಕರ್ಷಕವಾದ ವಿನ್ಯಾಸವನ್ನು ಹೊಂದಿದೆ. ಈ ಎಂಜಿ ವಿಂಡ್ಸರ್ ಇವಿ ಕಾರು ಸ್ಪ್ಲಿಟ್ ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಪ್ರೊಜೆಕ್ಟರ್ ಹೆಡ್‌ಲೈಟ್‌ಗಳು, ಮುಂಭಾಗ (ಫ್ರಂಟ್) ಹಾಗೂ ಹಿಂಭಾಗ (ರೇರ್) ಎಲ್ಇಡಿ ಲೈಟ್ ಬಾರ್‌ಗಳನ್ನು ಹೊಂದಿವೆ. ಇದರೊಂದಿಗೆ ಎಲ್-ಆಕಾರಕ್ಕೆ ಹೋಲಿಕೆಯಾಗುವ ಎಲ್ಇಡಿ ಟೈಲ್‌ಲೈಟ್‌ಗಳು, ಫ್ಲಶ್ ಫಿಟ್ಟಿಂಗ್ ಡೋರ್ ಹ್ಯಾಂಡಲ್‌ಗಳು, 18-ಇಂಚಿನ ಅಲಾಯ್ ವೀಲ್‌ಗಳು ಮತ್ತು 215/55 ಆರ್18 ಟೈಯರ್‌ಗಳನ್ನು ಹೊಂದಿದೆ.

ಇನ್ನು ಈ ವಿಂಡ್ಸರ್ ಇವಿ ಕಾರಿನಲ್ಲಿ 15.6-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಫುಲ್-ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಆಂಬಿಯೆಂಟ್ ಲೈಟಿಂಗ್ ಮತ್ತು ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್ ಅನ್ನು ಹೊಂದಿದೆ. ಇದರೊಂದಿಗೆ ಆಂಬಿಯೆಂಟ್ ಲೈಟಿಂಗ್, ವೈರ್‌ಲೆಸ್ ಫೋನ್ ಚಾರ್ಜಿಂಗ್ ಪೋರ್ಟ್, ಕೀಲೆಸ್ ಎಂಟ್ರಿ ಮತ್ತು ಪುಶ್-ಬಟನ್ ಸ್ಟಾರ್ಟ್ ಸೇರಿದಂತೆ ವಿವಿಧ ಫೀಚರ್ಸ್ ಗಳನ್ನು ಹೊಂದಿದೆ.
ಈ ಕಾರಿನಲ್ಲಿ ಇಕೋ, ಇಕೋ ಪ್ಲಸ್, ನಾರ್ಮಲ್ ಹಾಗೂ ಸ್ಪೋರ್ಟ್ ಎಂಬ ಡ್ರೈವಿಂಗ್ ಮೋಡ್‌ಗಳನ್ನು ಪಡೆದಿವೆ. ಹೊಸ ವಿಂಡ್ಸರ್ ಎಲೆಕ್ಟ್ರಿಕ್ ಕಾರು ಪ್ರಯಾಣಿಕರಿಗೆ ಗರಿಷ್ಠ ರಕ್ಷಣೆ ಒದಗಿಸುತ್ತದೆ. ಸುರಕ್ಷತೆಯ ಸಲುವಾಗಿ 6-ಏರ್‌ಬ್ಯಾಗ್‌ಗಳು, ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್) ಹಾಗೂ 360-ಡಿಗ್ರಿ ಕ್ಯಾಮೆರಾವನ್ನು ಹೊಂದಿದೆ. ಆದರೆ ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್) ಫೀಚರ್ಸ್ ಹೊಂದಿಲ್ಲ.
ಎಂಜಿ ಮೋಟಾರ್ ಕಂಪನಿಯು ಇದೀಗ ವಿಂಡ್ಸರ್ ಇವಿ ಕಾರಿನ ವಿತರಣೆಯನ್ನು ಪ್ರಾರಂಭಿಸಿದ್ದಾರೆ. ಇತ್ತೀಚೆಗೆ ಒಂದೇ ಬಾರೀ ಎಂಜಿ 101 ಕಾರುಗಳನ್ನು ಡೆಲಿವರಿ ನೀಡಿದೆ. ಈ ಹೊಸ ಕ್ರಾಸ್ಒವರ್ ಯುಟಿಲಿಟಿ ವಾಹನವನ್ನು, ಬೆಂಗಳೂರಿನ ಎಂಜಿ ಜುಬಿಲಂಟ್ ಮೂಲಕ ವಿತರಿಸಿದೆ. ಬುಕ್ಕಿಂಗ್ ಪ್ರಾರಂಭವಾಗಿ ಮೊದಲ ದಿನವೇ 15,176 ಬುಕ್ಕಿಂಗ್ ಗಳನ್ನು ಪಡೆದು ಮೈಲುಗಲ್ಲು ಸಾಧಿಸಿತು, ಎಂಜಿ ವಿಂಡ್ಸರ್ ರೂ 9.99 ಲಕ್ಷದ ಆರಂಭಿಕ ಬೆಲೆಯೊಂದಿಗೆ ಬಾಸ್ (Baas) ಬ್ಯಾಟರಿ ಬಾಡಿಗೆ ಯೋಜನೆಯೊಂದಿಗೆ ಪರಿಚಯಿಸಲಾಗಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications








