MG: ಹೊಸ ಎಂಜಿ ಎಲೆಕ್ಟ್ರಿಕ್ ಕಾರಿಗಾಗಿ ಶೋರೂಂಗಳಲ್ಲಿ ಬುಕ್ಕಿಂಗ್ ಶುರು.. 5-ಸೀಟರ್, ಬೆಲೆ ಎಷ್ಟು.. ವಿಶೇಷತೆಗಳೇನು?

ಎಂಜಿ ಮೋಟಾರ್ (MG Motor) ಜನಪ್ರಿಯ ವಾಹನ ತಯಾರಕ ಕಂಪನಿ ಗುರುತಿಸಿಕೊಂಡಿದೆ. ದೇಶೀಯ ಮಾರುಕಟ್ಟೆಯಲ್ಲಿ ಹಲವು ಕಾರುಗಳನ್ನು ಮಾರಾಟ ಮಾಡುತ್ತಿದೆ. ಇವುಗಳು ಆಕರ್ಷಕ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಹೊಂದಿರುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು ಕೂಡ ಇಷ್ಟಪಟ್ಟು ತೆಗೆದುಕೊಳ್ಳುತ್ತಿದ್ದಾರೆ. ಸದ್ಯ, ಕಂಪನಿಯು ಹೊಚ್ಚ ಹೊಸ ವಿಂಡ್ಸರ್ ಇವಿ (Windsor EV) ಬಿಡುಗಡೆಗೆ ಸೆಪ್ಟೆಂಬರ್ 11ರಂದು ದಿನಾಂಕ ನಿಗದಿಪಡಿಸಿದೆ. ಇದೊಂದು ಎಲೆಕ್ಟ್ರಿಕ್ ಕಾರು ಆಗಿರುವುದರಿಂದ ಖರೀದಿದಾರರಿಗೂ ನಿರೀಕ್ಷೆಗಳು ದುಪ್ಪಟ್ಟಾಗಿವೆ.

ನೂತನ ಎಂಜಿ ವಿಂಡ್ಸರ್ ಇವಿ (MG Windsor EV) ಮಾರಾಟಕ್ಕೆ ಬರಲು ಹಲವು ದಿನಗಳು ಬಾಕಿಯಿದೆ. ಆದರೂ ದೇಶಾದ್ಯಂತ ಆಯ್ದ ಡೀಲರ್‌ಶಿಪ್‌ಗಳು ಈ ಹೊಸ ಎಲೆಕ್ಟ್ರಿಕ್ ಕಾರಿಗಾಗಿ ಗ್ರಾಹಕರಿಂದ ಆರ್ಡರ್ ಪಡೆಯುವುದನ್ನು ಶುರು ಮಾಡಿವೆ ಎಂದು ತಿಳಿದುಬಂದಿದೆ. ಕಂಪನಿಯು ಅಧಿಕೃತ ಇನ್ನೂ ಬುಕ್ಕಿಂಗ್‌ನ್ನು ಆರಂಭಿಸಿಲ್ಲ. ನೂತನ ವಿಂಡ್ಸರ್ ಇವಿ ಸ್ಪರ್ಧಾತ್ಮಕ ಬೆಲೆಯಲ್ಲಿ ಖರೀದಿಗೆ ಲಭ್ಯವಾಗಲಿದ್ದು, ರೂ.20 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿರಬಹುದು ಎಂದು ಅಂದಾಜಿಸಲಾಗಿದೆ.

MG Windsor EV Unofficial Bookings Began Details

ಈಗಾಗಲೇ, ಎಂಜಿ ಕಂಪನಿಯು ಹೊಸ ವಿಂಡ್ಸರ್ ಎಲೆಕ್ಟ್ರಿಕ್ ಕಾರಿನ ವಿವಿಧ ಟೀಸರ್‌ಗಳನ್ನು ಸಾಮಾಜಿಕ ಜಾಲತಾಣ ಖಾತೆಗಳಲ್ಲಿ ಹಂಚಿಕೊಂಡಿದೆ. ಅದರಲ್ಲಿ ವಿನ್ಯಾಸ (Design) ಮತ್ತು ವೈಶಿಷ್ಟ್ಯಗಳ (Features) ಕುರಿತಂತೆ ಒಂದಷ್ಟು ವಿವರಗಳು ಬಹಿರಂಗಗೊಂಡಿವೆ. ನೂತನ ಕಾರು ಹೊರಭಾಗದಲ್ಲಿ ಆಕರ್ಷಕ ವಿನ್ಯಾಸವನ್ನು ಪಡೆದಿರಲಿದ್ದು, ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಮುಂಭಾಗದ (ಫ್ರಂಟ್) ಫೆಂಡರ್‌ನಲ್ಲಿ ಮೌಂಟೆಡ್ ಚಾರ್ಜಿಂಗ್ ಪೋರ್ಟ್, ಅಲಾಯ್ ವೀಲ್‌ಗಳು ಹಾಗೂ ಫ್ಲಶ್-ಫಿಟ್ಟಿಂಗ್ ಡೋರ್ ಹ್ಯಾಂಡಲ್‌ಗಳನ್ನು ಹೊಂದಿರಲಿದೆ ಎನ್ನಲಾಗಿದೆ.

ಹೊಚ್ಚ ಹೊಸ ಎಂಜಿ ವಿಂಡ್ಸರ್ ಇವಿ ಬೃಹತ್ ಗಾತ್ರದ 15.6-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸ್ಕ್ರೀನ್ ಹಾಗೂ ಪನೊರೊಮಿಕ್ ಸನ್‌ರೂಫ್‌ ಪಡೆದುಕೊಂಡಿದೆ ಎಂಬುದು ಟೀಸರ್ ಫೋಟೋಗಳಿಂದ ಖಚಿತವಾಗಿದೆ. ಇದರೊಟ್ಟಿಗೆ ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ಆಂಬಿಯೆಂಟ್ ಲೈಟಿಂಗ್, ಡಿಜಿಟಲ್ ಇನ್ಸ್ಟ್ರುಮೆಂಟ್ ಪ್ಯಾನೆಲ್ ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಹೊಂದಿರಲಿದೆ ಎಂದು ವರದಿಯಾಗಿದೆ.

MG Windsor EV Unofficial Bookings Began Details

ಎಂಜಿ ವಿಂಡ್ಸರ್ ಇವಿ 50.6 ಕೆಡಬ್ಲ್ಯೂಹೆಚ್ (kWh) ಸಾಮರ್ಥ್ಯದ ಬ್ಯಾಟರಿ ಪ್ಯಾಕ್ ಒಳಗೊಂಡಿರುವ ಸಾಧ್ಯತೆಯಿದ್ದು, ಸಂಪೂರ್ಣ ಚಾರ್ಜ್‌ನಲ್ಲಿ 460 ಕಿಲೋಮೀಟರ್ ರೇಂಜ್ (ಮೈಲೇಜ್) ನೀಡಬಹುದು ಎಂದು ಹೇಳಲಾಗಿದೆ. ಇದರಲ್ಲಿರುವ ಎಲೆಕ್ಟ್ರಿಕ್ ಮೋಟಾರ್ 136 ಪಿಎಸ್ ಗರಿಷ್ಠ ಶಕ್ತಿ (ಪವರ್) ಹಾಗೂ 200 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸಬಹುದು ಎನ್ನಲಾಗಿದೆ. ಇದು 5-ಆಸನಗಳನ್ನು ಸಹ ಪಡೆದುಕೊಂಡಿರಲಿದೆ.

ವಿಂಡ್ಸರ್ ಎಲೆಕ್ಟ್ರಿಕ್ ಕಾರು ಪ್ರಯಾಣಿಕರಿಗೆ ಗರಿಷ್ಠ ರಕ್ಷಣೆ ಒದಗಿಸುತ್ತದೆ. ಸುರಕ್ಷತೆಯ ದೃಷ್ಟಿಯಿಂದ 6-ಏರ್‌ಬ್ಯಾಗ್‌, ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಮತ್ತು ಎಲೆಕ್ಟ್ರಾನಿಕ್ ಪಾರ್ಕಿಂಗ್ ಬ್ರೇಕ್‌ನ್ನು ಹೊಂದಿರಲಿದೆ ಎಂದು ಹೇಳಲಾಗಿದೆ. ಈ ಕಾರಿಗೆ ಟಾಟಾ ನೆಕ್ಸಾನ್ ಇವಿ ಮತ್ತು ಮಹೀಂದ್ರಾ ಎಕ್ಸ್‌ಯುವಿ400ಗಳು ಪ್ರಬಲವಾಗಿ ಸ್ಪರ್ಧೆಯೊಡ್ಡಲಿವೆ.

ಪ್ರಸ್ತುತ ಎಂಜಿ ಮಾರಾಟಗೊಳಿಸಿವ ಕಾಮೆಟ್ ಇವಿ ಅತ್ಯಂತ ಕೈಗೆಟುಕುವ ಬೆಲೆಗೆ ಖರೀದಿಗೆ ದೊರೆಯುತ್ತದೆ. ಇದೊಂದು ಎಲೆಕ್ಟ್ರಿಕ್ ಕಾರಾಗಿದ್ದು, ರೂ.6.99 ಲಕ್ಷದಿಂದ ರೂ.9.53 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. 17.3 ಕೆಡಬ್ಲ್ಯೂಹೆಚ್ ಸಾಮರ್ಥ್ಯದ ಬ್ಯಾಟರಿ ಪ್ಯಾಕ್ ಆಯ್ಕೆಯನ್ನು ಪಡೆದಿದ್ದು, ಪೂರ್ತಿ ಚಾರ್ಜ್‌ನಲ್ಲಿ 230 ಕಿಲೋಮೀಟರ್ ಓಡುತ್ತದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

More from DriveSpark

Article Published On: Thursday, August 29, 2024, 12:42 [IST]
English summary
Mg windsor ev unofficial bookings began details
Read more on mg motor india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+