ಲಕ್ಷುರಿ ಫೀಚರ್ಸ್‌ನ ಈ ಕಾರಿಗೆ ಬೆಲೆ ಇಷ್ಟೇನಾ? ನಿಮ್ಮೂರಿಗೆ ಹೋಗಲು ಬೆಸ್ಟ್‌ ಎಲೆಕ್ಟ್ರಿಕ್ ಕಾರು

ಜನಪ್ರಿಯ ವಾಹನ ತಯಾರಕ ಸಂಸ್ಥೆಯಾಗಿ ಗುರುತಿಸಿಕೊಂಡ ಎಂಜಿ ತನ್ನ ಎಲೆಕ್ಟ್ರಿಕ್ ಕಾರುಗಳ ಸರಣಿಯನ್ನು ವಿಸ್ತರಿಸುತ್ತಿದೆ. ದೇಶೀಯ ಮಾರುಕಟ್ಟೆಯಲ್ಲಿ ಗ್ಲೋಸ್ಟರ್, ಹೆಕ್ಟರ್ ಪ್ಲಸ್, ಕಾಮೆಟ್ ಇವಿ ಸೇರಿದಂತೆ ವಿವಿಧ ಕಾರುಗಳನ್ನು ಮಾರಾಟ ಮಾಡುತ್ತಿದೆ. ಇವುಗಳು ಕೈಗೆಟುಕುವ ಬೆಲೆ ಹಾಗೂ ಆಕರ್ಷಕ ವೈಶಿಷ್ಟ್ಯದೊಂದಿಗೆ ಖರೀದಿಗೆ ದೊರೆಯಲಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು ಕೂಡ ಇಷ್ಟಪಟ್ಟು ಖರೀದಿಸುತ್ತಿದ್ದಾರೆ. ಇತ್ತೀಚೆಗೆ ಎಂಜಿ ಮೋಟಾರ್ ಕಂಪನಿಯು ಹೊಚ್ಚ ಹೊಸ ವಿಂಡ್ಸರ್ ಇವಿಯನ್ನು (Windsor EV) ಬಿಡುಗಡೆ ಮಾಡಿತ್ತು. ವಿಂಡ್ಸರ್ ಎಲೆಕ್ಟ್ರಿಕ್ ಕಾರಿನ ಟೆಸ್ಟ್ ಡ್ರೈವ್ ಸೆಪ್ಟೆಂಬರ್ 25 ರಿಂದ ಪ್ರಾರಂಭವಾಗಲಿದೆ.

ಹೊಸ ಎಂಜಿ ವಿಂಡ್ಸರ್ ಇವಿ (MG Windsor EV) ಮಾದರಿಗೆ ಚಂದಾದಾರಿಕೆ ಯೋಜನೆಯು ಬ್ಯಾಟರಿ ಬಳಕೆಗಾಗಿ ಪ್ರತಿ ಕಿಮೀಗೆ ಹೆಚ್ಚುವರಿ ರೂ 3.5 ರೊಂದಿಗೆ ರೂ 9.99 ಲಕ್ಷದಿಂದ ಪ್ರಾರಂಭವಾಗುತ್ತದೆ. ಈ ಹೊಸ ಎಂಜಿ ವಿಂಡ್ಸರ್ ಇವಿ ಮಾದರಿಯು ಎಕ್ಸೈಟ್, ಎಕ್ಸ್‌ಕ್ಲೂಸಿವ್ ಮತ್ತು ಎಸೆನ್ಸ್ ಎಂಬ ಮೂರು ವಿಭಿನ್ನ ರೂಪಾಂತರಗಳಲ್ಲಿ ಲಭ್ಯವಿದೆ.

MG Windsor EV

ಈ ಹೊಸ ಮಾದರಿಯ ಮೂಲ ರೂಪಾಂತ ಎಕ್ಸೈಟ್ ಬೆಲೆಯು ರೂ.13.50 ಲಕ್ಷವಾಗಿದೆ. ಇನ್ನು ಮಿಡ್ ಸ್ಪೆಕ್ ಎಕ್ಸ್‌ಕ್ಲೂಸಿವ್ ರೂಪಾಂತರದ ಬೆಲೆಯು ರೂ.14.50 ಲಕ್ಷವಾದರೆ, ಟಾಪ್-ಸ್ಪೆಕ್ ಎಸೆನ್ಸ್ ರೂಪಾಂತರದ ಬೆಲೆಯು ರೂ.15.50 ಲಕ್ಷವಾಗಿದೆ. ಈ ಎಲ್ಲಾ ಬೆಲೆಗಳು ಎಕ್ಸ್ ಶೋರೂಂ ಪ್ರಕಾರವಾಗಿದೆ. ಇನ್ನು ಈ ಎಂಜಿ ವಿಂಡ್ಸರ್ ಎಲೆಕ್ಟ್ರಿಕ್ ಕಾರಿನ ಬುಕಿಂಗ್ ಅಕ್ಟೋಬರ್ 3 ರಿಂದ ಪ್ರಾರಂಭವಾಗಲಿದೆ.

ಇನ್ನು ಬೆನ್ನಲ್ಲೇ, ಬುಕ್ ಮಾಡಿದ ಗ್ರಾಹಕರಿಗೆ ಎಂಜಿ ವಿಂಡ್ಸರ್ ಎಲೆಕ್ಟ್ರಿಕ್ ಕಾರಿನ ವಿತರಣೆಯು ಅಕ್ಟೋಬರ್ 12 ರಿಂದ ಪ್ರಾರಂಭವಾಗಲಿದೆ ಎಂದು ಘೋಷಿಸಲಾಗಿದೆ. ಹೊಸ ಎಂಜಿ ವಿಂಡ್ಸರ್ ಇವಿ (MG Windsor EV) ರೂ.9.99 ಲಕ್ಷ (ಎಕ್ಸ್ ಶೋರೂಂ) ಆರಂಭಿಕ ಬೆಲೆಯನ್ನು ಹೊಂದಿದೆ. ವಿಶೇಷವಾಗಿ ಜೆಎಸ್‌ಡಬ್ಲ್ಯೂ (JSW) ಹಾಗೂ ಎಂಜಿ ಮೋಟಾರ್ (MG Motor) ಪಾಲುದಾರಿಕೆಯಲ್ಲಿ ಬಿಡುಗಡೆಯಾಗುತ್ತಿರುವ ಮೊದಲ ಕಾರು ಇದಾಗಿದೆ.

MG Windsor EV

ಹೊಚ್ಚ ಹೊಸ ಎಂಜಿ ವಿಂಡ್ಸರ್ ಇವಿ ಟರ್ಕೋಯಿಸ್ ಗ್ರೀನ್, ಪರ್ಲ್ ವೈಟ್, ಕ್ಲೇ ಬೀಜ್ ಹಾಗೂ ಸ್ಟಾರ್‌ಬರ್ಸ್ಟ್ ಬ್ಲ್ಯಾಕ್ ಎಂಬ 4 ಬಣ್ಣಗಳ ಆಯ್ಕೆಯಲ್ಲಿಯೂ ಖರೀದಿಗೆ ಲಭ್ಯವಿದೆ. ಈ ಕಾರು, 4,295 ಎಂಎಂ ಉದ್ದ, 1,850 ಎಂಎಂ ಅಗಲ ಮತ್ತು 1,652 ಎಂಎಂ ಎತ್ತರವಿದೆ. 2,700 ಎಂಎಂ ವೀಲ್‌ಬೇಸ್‌ನ್ನು ಹೊಂದಿದೆ. ಇದರಲ್ಲಿ 5 ಮಂದಿ ಆರಾಮದಾಯಕವಾಗಿ ಕುಳಿತುಕೊಂಡು ಪ್ರಯಾಣಿಸಬಹುದು.

ಎಂಜಿ ವಿಂಡ್ಸರ್ ಇವಿ 38 ಕೆಡಬ್ಲ್ಯೂಹೆಚ್ (kWh) ಸಾಮರ್ಥ್ಯದ ಬ್ಯಾಟರಿ ಪ್ಯಾಕ್ ಆಯ್ಕೆಯನ್ನು ಹೊಂದಿದೆ. ಇದರಲ್ಲಿರುವ ಸಿಂಗಲ್ ಎಲೆಕ್ಟ್ರಿಕ್ ಮೋಟಾರ್ 134 ಬಿಹೆಚ್‍ಪಿ ಗರಿಷ್ಠ ಶಕ್ತಿ (ಪವರ್) ಹಾಗೂ 200 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುತ್ತದೆ. ಈ ಹೊಸ ಎಂಜಿ ವಿಂಡ್ಸರ್ ಇವಿ ಹೊರಭಾಗದಲ್ಲಿ ಅತ್ಯಾಕರ್ಷಕವಾದ ವಿನ್ಯಾಸ (ಡಿಸೈನ್) ಹೊಂದಿದೆ.

MG Windsor EV

ಈ ಕಾರು ಸ್ಪ್ಲಿಟ್ ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಪ್ರೊಜೆಕ್ಟರ್ ಹೆಡ್‌ಲೈಟ್‌ಗಳು, ಮುಂಭಾಗ (ಫ್ರಂಟ್) ಹಾಗೂ ಹಿಂಭಾಗ (ರೇರ್) ಎಲ್ಇಡಿ ಲೈಟ್ ಬಾರ್‌ಗಳು, ಎಲ್-ಆಕಾರಕ್ಕೆ ಹೋಲಿಕೆಯಾಗುವ ಎಲ್ಇಡಿ ಟೈಲ್‌ಲೈಟ್‌ಗಳು, ಫ್ಲಶ್ ಫಿಟ್ಟಿಂಗ್ ಡೋರ್ ಹ್ಯಾಂಡಲ್‌ಗಳು, 18-ಇಂಚಿನ ಅಲಾಯ್ ವೀಲ್‌ಗಳು ಮತ್ತು 215/55 ಆರ್18 ಟೈಯರ್‌ಗಳನ್ನು ಒಳಗೊಂಡಿದೆ.

ಎಂಜಿ ವಿಂಡ್ಸರ್ ಇವಿ ಕಾರಿನಲ್ಲಿ 15.6-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಫುಲ್-ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಆಂಬಿಯೆಂಟ್ ಲೈಟಿಂಗ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ಆಂಬಿಯೆಂಟ್ ಲೈಟಿಂಗ್, ವೈರ್‌ಲೆಸ್ ಫೋನ್ ಚಾರ್ಜಿಂಗ್ ಪೋರ್ಟ್, ಕೀಲೆಸ್ ಎಂಟ್ರಿ ಮತ್ತು ಪುಶ್-ಬಟನ್ ಸ್ಟಾರ್ಟ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಈ ಕಾರಿನಲ್ಲಿ ಇಕೋ, ಇಕೋ ಪ್ಲಸ್, ನಾರ್ಮಲ್ ಹಾಗೂ ಸ್ಪೋರ್ಟ್ ಎಂಬ ಡ್ರೈವಿಂಗ್ ಮೋಡ್‌ಗಳನ್ನು ಪಡೆದಿದೆ.

More from DriveSpark

Article Published On: Monday, September 23, 2024, 8:30 [IST]
English summary
Mg windsor ev variant wise prices revealed details
Read more on mg motor india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+