ಎಂಜಿ ವಿಂಡ್ಸರ್ ಇವಿ Vs ಟಾಟಾ ನೆಕ್ಸಾನ್ ಇವಿ: ಯಾವುದು ಬೆಸ್ಟ್?

ಜನಪ್ರಿಯ ವಾಹನ ತಯಾರಕ ಸಂಸ್ಥೆಯಾಗಿ ಗುರುತಿಸಿಕೊಂಡ ಎಂಜಿ ತನ್ನ ಎಲೆಕ್ಟ್ರಿಕ್ ಕಾರುಗಳ ಸರಣಿಯನ್ನು ವಿಸ್ತರಿಸುತ್ತಿದೆ. ಎಂಜಿ ಕಂಪನಿಯು ತನ್ನ್ ವಿಂಡ್ಸರ್ ಇವಿ ಮಾದರಿಯನ್ನು ಭಾರತದಲ್ಲಿ ಸಾಕಷ್ಟು ಪ್ರಚಾರದ ನಂತರ ಬಿಡುಗಡೆಗೊಳಿಸಿದೆ. ಇದು ವುಲಿಂಗ್ ಕ್ಲೌಡ್ ಇವಿಯ ರಿಬ್ಯಾಡ್ಜ್ ಮಾಡಿದ ಮಾದರಿಯಾಗಿದೆ ಇದು ಎಂಜಿ ಕಂಪನಿಯ ಮೂರನೇ ಎಲೆಕ್ಟ್ರಿಕ್ ಕಾರು ಮಾದರಿಯಾಗಿದೆ. ಭಾರತೀಯ ಮಾರುಕಟ್ಟೆಯ ಎಲೆಕ್ಟ್ರಿಕ್ ವಿಭಾಗದಲ್ಲಿ ಸ್ವದೇಶಿ ಟಾಟಾ ಮೋಟಾರ್ಸ್ ಕಂಪನಿಯು ಸಿಂಹದ ಪಾಲನ್ನು ಹೊಂದಿದ್ದರೂ, SAIC-ಮಾಲೀಕತ್ವದ ಬ್ರಿಟಿಷ್ ಕಾರ್ ಬ್ರಾಂಡ್ ಎಂಜಿ ಮೋಟಾರ್ ಕೂಡ ತನ್ನ ಆಯಾ ಎಲೆಕ್ಟ್ರಿಕ್ ಕಾರುಗಳೊಂದಿಗೆ ಹೆಚ್ಚಿನ ಗಮನವನ್ನು ಸೆಳೆಯುತ್ತಿದೆ.

ಟಾಟಾ ಮೋಟಾರ್ಸ್ ಪ್ರಸ್ತುತ ಭಾರತೀಯ ಎಲೆಕ್ಟ್ರಿಕ್ ಪ್ರಯಾಣಿಕ ವಾಹನ ಮಾರುಕಟ್ಟೆಯಲ್ಲಿ ಶೇಕಡಾ 85 ರಷ್ಟು ಮಾರುಕಟ್ಟೆ ಪಾಲನ್ನು ಹೊಂದಿದೆ. ಟಾಟಾ ನೆಕ್ಸಾನ್ ಇವಿ ಈ ಜಾಗದಲ್ಲಿ ಬ್ರಾಂಡ್‌ನ ಹೆಚ್ಚಿನ ಕೊಡುಗಯನ್ನು ನೀಡುತ್ತಿದೆ. ಸದ್ಯ ಟಾಟಾ ನೆಕ್ಸಾನ್ ಇವಿ ಭಾರತದಲ್ಲಿ ಹೆಚ್ಚು ಮಾರಾಟವಾಗುವ ಎಲೆಕ್ಟ್ರಿಕ್ ಕಾರು.ಇದಕ್ಕೆ ಪೈಪೋಟಿಯಾಗಿ ಹೊಸ ಎಂಜಿ ವಿಂಡ್ಸರ್ ಇವಿ ಬಂದಿದೆ. ಟಾಟಾ ನೆಕ್ಸಾನ್ ಇವಿ ಮತ್ತು ಎಂಜಿ ವಿಂಡ್ಸರ್ ಇವಿ ಮಾದರಿಗಳ ಬಗ್ಗೆ ಮಾಹಿತಿಗಳು ಇಲ್ಲಿದೆ.

MG Windsor EV Vs Tata Nexon EV

ಬೆಲೆಗಳು: ಎಂಜಿ ವಿಂಡ್ಸರ್ ಇವಿ (MG Windsor EV) ಮೂರು ಟ್ರಿಮ್ ಆಯ್ಕೆಗಳಲ್ಲಿ ಲಭ್ಯವಿದೆ. ಈ ಎಸ್‌ಯುವಿ ರೂ.9.99 ಲಕ್ಷದ ಪರಿಚಯಾತ್ಮಕ ಬೆಲೆಯಲ್ಲಿ ಲಭ್ಯವಿರುತ್ತದೆ. ಈ ಟಾಟಾ ನೆಕ್ಸಾನ್ ಇವಿ ಮಾದರಿಯ ಬೆಲೆಯು ಎಕ್ಸ್ ಶೋರೂಂ ಪ್ರಕಾರ ರೂ.12.49 ಲಕ್ಷ ಮತ್ತು 16.29 ಲಕ್ಷವಾಗಿದೆ. ಬೆಲೆಗಳನ್ನು ನೋಡಿದಾಗ ಎಂಜಿ ವಿಂಡ್ಸರ್ ಇವಿ ಮಾದರಿಯು ಅಗ್ಗವಾಗಿದೆ.

ಪವರ್ ಟ್ರೇನ್: ಈ ಎಂಜಿ ವಿಂಡ್ಸರ್ ಇವಿ 38 ಕೆಡಬ್ಲ್ಯೂಹೆಚ್ (kWh) ಸಾಮರ್ಥ್ಯದ ಬ್ಯಾಟರಿ ಪ್ಯಾಕ್ ಆಯ್ಕೆಯನ್ನು ಹೊಂದಿದೆ. ಇದರಲ್ಲಿರುವ ಸಿಂಗಲ್ ಎಲೆಕ್ಟ್ರಿಕ್ ಮೋಟಾರ್ 134 ಬಿಹೆಚ್‍ಪಿ ಗರಿಷ್ಠ ಶಕ್ತಿ (ಪವರ್) ಹಾಗೂ 200 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಪಡೆದಿದೆ. ಸಂಪೂರ್ಣ ಚಾರ್ಜ್‌ನಲ್ಲಿ 331 ಕಿಲೋಮೀಟರ್ ರೇಂಜ್ (ಮೈಲೇಜ್) ನೀಡುತ್ತದೆ.

MG Windsor EV Vs Tata Nexon EV

ಇನ್ನು ಟಾಟಾ ನೆಕ್ಸಾನ್ ಇವಿಯು ಎರಡು ಬ್ಯಾಟರಿ ಪ್ಯಾಕ್ ಆಯ್ಕೆಯಲ್ಲಿ ಗ್ರಾಹಕರಿಗೆ ಲಭ್ಯವಿದೆ. 30 ಕೆಡಬ್ಲ್ಯೂಹೆಚ್ ಬ್ಯಾಟರಿ ಹೊಂದಿರುವ ಕಾರಿನಲ್ಲಿ ಬಳಕೆ ಮಾಡಿರುವ ಎಲೆಕ್ಟ್ರಿಕ್ ಮೋಟಾರ್, 129 ಪಿಎಸ್ ಗರಿಷ್ಠ ಪವರ್ (ಶಕ್ತಿ) ಹಾಗೂ 215 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸಿದರೆ, 40.5 ಕೆಡಬ್ಲ್ಯೂಹೆಚ್ ಬ್ಯಾಟರಿ ಪ್ಯಾಕ್ ಪಡೆದಿರುವ ಕಾರಿನಲ್ಲಿ ಉಪಯೋಗಿಸಲಾಗಿರುವ ಎಲೆಕ್ಟ್ರಿಕ್ ಮೋಟಾರ್, 144 ಪಿಎಸ್ ಪವರ್ ಮತ್ತು 215 ಪೀಕ್ ಟಾರ್ಕ್ ಉತ್ಪಾದಿಸುತ್ತದೆ.

ಫೀಚರ್ಸ್: ಎಂಜಿ ವಿಂಡ್ಸರ್ ಇವಿ 15.6-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಫುಲ್-ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಆಂಬಿಯೆಂಟ್ ಲೈಟಿಂಗ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ಆಂಬಿಯೆಂಟ್ ಲೈಟಿಂಗ್, ವೈರ್‌ಲೆಸ್ ಫೋನ್ ಚಾರ್ಜಿಂಗ್ ಪೋರ್ಟ್, ಕೀಲೆಸ್ ಎಂಟ್ರಿ ಮತ್ತು ಪುಶ್-ಬಟನ್ ಸ್ಟಾರ್ಟ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ಟಾಟಾ ನೆಕ್ಸಾನ್ ಇವಿ (Tata Nexon EV) 12.3-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 10.25-ಇಂಚಿನ ಫುಲ್ ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ ಪ್ಲೇ 9-ಸ್ಪೀಕರ್ ಜೆಬಿಎಲ್ ಸೌಂಡ್ ಸಿಸ್ಟಮ್, ಆಟೋ ಎಸಿ, ಕ್ರೂಸ್ ಕಂಟ್ರೋಲ್, ವೆಂಟಿಲೇಟೆಡ್ ಫ್ರಂಟ್ ಸೀಟ್ಸ್, ವೈರ್‌ಲೆಸ್ ಫೋನ್ ಚಾರ್ಜಿಂಗ್, ಸನ್‌ರೂಫ್ ಸೇರಿದಂತೆ ಹತ್ತಾರು ಅತ್ಯಾಧುನಿಕ ವೈಶಿಷ್ಟ್ಯಗಳನ್ನು ಹೊಂದಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Friday, September 13, 2024, 11:47 [IST]
English summary
Mg windsor ev vs tata nexon ev differences
Read more on auto news india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+