ಜಪಾನ್-ಕೊರಿಯಾ ಕಾರುಗಳ ಅಬ್ಬರಕ್ಕೆ ಬ್ರೇಕ್ ಹಾಕಲು ಬಂದಿದೆ ಟಾಟಾದ ಹೊಸ 'ವಜ್ರಾಯುಧ'.. 10 ಲಕ್ಷ.. 5 ಸೀಟರ್!
ವಿಶ್ವದಲ್ಲಿಯೇ ಭಾರತ ಅತಿದೊಡ್ಡ ಕಾರು ಮಾರುಕಟ್ಟೆಯನ್ನು ಹೊಂದಿದ್ದು, ಮಧ್ಯಮ ಗಾತ್ರದ (ಮಿಡ್ ಸೈಜ್) ಎಸ್‌ಯುವಿ ವಿಭಾಗದಲ್ಲಿ ದಕ್ಷಿಣ ಕೊರಿಯಾ (South korea) ಹಾಗೂ ಜಪಾನ್ (Japan) ಮಾಲೀಕತ್ವದ ಕಂಪನಿ ಕಾರುಗಳು ಪ್ರಾಬಲ್ಯ ಹೊಂದಿವೆ. ಆದಾಗ್ಯೂ ದೇಶೀಯ ವಾಹನ ತಯಾರಕ ಟಾಟಾ ಮೋಟಾರ್ಸ್ (Tata Motors) ಸೆಪ್ಟೆಂಬರ್ 2ರಂದು ಇಂಧನ ಚಾಲಿತ ಕರ್ವ್ ಕೂಪೆ ಎಸ್‌ಯುವಿ (Curvv Coupe Suv) ಬಿಡುಗಡೆಯೊಂದಿಗೆ ಈ ವಿಭಾಗವನ್ನು ಪ್ರವೇಶಿಸಿದ್ದು, ಹೊಸ ಭರವಸೆ ಮೂಡಿಸಿದೆ. ಮುಂಬರುವ ದಿನಗಳಲ್ಲಿ 'ಕರ್ವ್' ಹೆಚ್ಚಿನ ಸಂಖ್ಯೆಯಲ್ಲಿ ಮಾರಾಟವಾಗುವ ನಿರೀಕ್ಷೆಯಿದೆ.
ಭಾರತದ ಮಾರುಕಟ್ಟೆಯಲ್ಲಿ ಮಧ್ಯಮ ಗಾತ್ರದ ಎಸ್‌ಯುವಿ ವಿಭಾಗದಲ್ಲಿ ಕಳೆದ ವರ್ಷ (2023) ಸರಿ ಸುಮಾರು 513,000 ಯುನಿಟ್ ಕಾರುಗಳನ್ನು ಮಾರಾಟ ಮಾಡಲಾಗಿತ್ತು. ದಕ್ಷಿಣ ಕೊರಿಯಾ ಒಡೆತನವಿರುವ ಹ್ಯುಂಡೈ ಕ್ರೆಟಾದ 1,57,311 ಮತ್ತು ಕಿಯಾ ಸೆಲ್ಟೋಸ್‌ನ 1,04,891 ಯುನಿಟ್‌ಗಳನ್ನು ಗ್ರಾಹಕರು ಖರೀದಿಸಿದ್ದರು. ಅದೇ ರೀತಿಯಲ್ಲಿ ಜಪಾನ್ ಮಾಲೀಕತ್ವದ ಮಾರುತಿ ಸುಜುಕಿ ಗ್ರ್ಯಾಂಡ್ ವಿಟಾರಾದ 113,387 ಯುನಿಟ್‌ಗಳು ಕೂಡ ಮಾರಾಟವಾಗಿದ್ದವು.

ಸದ್ಯ, ಈ ವಿದೇಶಿ ಕಂಪನಿ ಕಾರುಗಳಿಗೆ ಪ್ರಬಲವಾಗಿ ಪೈಪೋಟಿ ನೀಡಲು ಮಾರಾಟಕ್ಕೆ ಬಂದಿರುವ ಸ್ವದೇಶಿ ನಿರ್ಮಿತ ಟಾಟಾ ಕರ್ವ್ ಕೂಪೆ ಎಸ್‌ಯುವಿ (Tata Curvv Coupe Suv) ವಿಶೇಷತೆ ಬಗ್ಗೆ ಮಾತನಾಡೋಣ. ಇದು ಅತ್ಯಂತ ಕೈಗೆಟುಕುವ ಬೆಲೆಯಲ್ಲಿ ಖರೀದಿಗೆ ಲಭ್ಯವಿದ್ದು, ರೂ.9.99 ಲಕ್ಷದಿಂದ 17.69 ಲಕ್ಷ ಎಕ್ಸ್ ಶೋರೂಂ ದರವನ್ನು ಪಡೆದಿದೆ. ಸ್ಮಾರ್ಟ್, ಪ್ಯೂರ್ ಪ್ಲಸ್, ಕ್ರಿಯೇಟಿವ್ ಮತ್ತು ಕ್ರಿಯೇಟಿವ್ ಪ್ಲಸ್ ಒಳಗೊಂಡಂತೆ 6 ರೂಪಾಂತರಗಳನ್ನು (ವೇರಿಯೆಂಟ್) ಹೊಂದಿದೆ.
ನೂತನ ಟಾಟಾ ಕರ್ವ್ ಕಾರು 3-ಪವರ್‌ಟ್ರೇನ್‌ನೊಂದಿಗೆ ಲಭ್ಯವಿದೆ. 1.2 ಲೀಟರ್ ಟರ್ಬೊ ಪೆಟ್ರೋಲ್, 1.2 ಲೀಟರ್ ಜಿಡಿಐ ಟರ್ಬೊ ಪೆಟ್ರೋಲ್ ಮತ್ತು 1.5 ಲೀಟರ್ ಡೀಸೆಲ್ ಎಂಜಿನ್ ಆಯ್ಕೆಯನ್ನು ಪಡೆದಿದೆ. 6-ಸ್ಪೀಡ್ ಮ್ಯಾನುವಲ್ ಅಥವಾ 7-ಸ್ಪೀಡ್ ಡಿಸಿಟಿ (ಡುಯಲ್ ಕ್ಲಚ್ ಟ್ರಾಸ್ಮಿಷನ್) ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ.

ಈ ಕಾರು ಹೊರಭಾಗದಲ್ಲಿ ಅತ್ಯಾಧುನಿಕ ವಿನ್ಯಾಸವನ್ನು ಹೊಂದಿದೆ. ಸ್ಪ್ಲಿಟ್ ಹೆಡ್‌ಲ್ಯಾಂಪ್‌ಗಳು, ಎಲ್‌ಇಡಿ ಡಿಆರ್‌ಎಲ್‌ಗಳು, ಎಲ್‌ಇಡಿ ಲೈಟ್ ಬಾರ್‌ಗಳು, ಡುಯಲ್-ಟೋನ್ ಅಲಾಯ್ ವೀಲ್‌ಗಳು ಮತ್ತು ಎಲ್‌ಇಡಿ ಟೈಲ್‌ಲೈಟ್‌ಗಳನ್ನು ಒಳಗೊಂಡಿದೆ. ಜೊತೆಗೆ ಆಕರ್ಷಕ ಬಣ್ಣಗಳ ಆಯ್ಕೆಯಲ್ಲಿಯೂ ಲಭ್ಯವಿದೆ. ಇದರಲ್ಲಿ 5-ಜನರು ಓಡಾಟ ನಡೆಸಬಹುದು. ಹೆಚ್ಚಿನ ಲಗೇಜ್ ಸಾಗಿಸಲು ಸಾಧ್ಯವಾಗುವಂತೆ 500 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಪಡೆದಿದೆ.
ಹೊಸ ಟಾಟಾ ಕರ್ವ್ 12.3-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 4-ಸ್ಪೋಕ್ ಮಲ್ಟಿ ಫಂಕ್ಷನ್ ಸ್ಟೀರಿಂಗ್ ವೀಲ್, 9-ಸ್ಪೀಕರ್ ಜೆಬಿಎಲ್ ಸೌಂಡ್ ಸಿಸ್ಟಮ್, ಪನೊರೊಮಿಕ್ ಸನ್‌ರೂಫ್, ಫುಲ್-ಡಿಜಿಟಲ್ ಡ್ರೈವರ್ ಡಿಸ್ಪ್ಲೇ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಯ ದೃಷ್ಟಿಯಿಂದ 6 ಏರ್‌ಬ್ಯಾಗ್‌ಗಳು, ಲೆವೆಲ್-2 ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್) ಅನ್ನು ಒಳಗೊಂಡಿದೆ.

ಈಗಾಗಲೇ ಟಾಟಾ ಕರ್ವ್ ಕೂಪೆ ಎಸ್‌ಯುವಿ (Tata Curvv Coupe Suv) ಬುಕ್ಕಿಂಗ್ ಶುರುವಾಗಿದೆ. ಆಸಕ್ತ ಗ್ರಾಹಕರು ಸಮೀಪದ ಡೀಲರ್‌ಶಿಪ್ ಅಥವಾ ಕಂಪನಿಯ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಕಾಯ್ದಿರಿಸಬಹುದು. ಸೆಪ್ಟೆಂಬರ್ 12ರಿಂದ (ಗುರುವಾರ) ವಿತರಣೆಗಳು ಪ್ರಾರಂಭವಾಗಲಿದೆ. ಮುಂಬರುವ ಹಬ್ಬದ ಋತುವಿನಲ್ಲಿ ಈ ಕಾರು ದೊಡ್ಡ ಸಂಖ್ಯೆಯಲ್ಲಿ ಮಾರಾಟವಾಗುವ ನಿರೀಕ್ಷೆಯಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications