ಬಡವರ ಇನ್ನೋವಾ: ರೂ.8 ಲಕ್ಷಕ್ಕೆ ಮಾರುತಿಯ ಈ ಫ್ಯಾಮಿಲಿ ಕಾರು ಸಿಗುತ್ತದೆ.. 7 ಜನ ಹೋಗಬಹುದು

ಭಾರತದಲ್ಲಿ ಮಧ್ಯಮ ವರ್ಗದ ಜನರು ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುತ್ತಾರೆ. ಅವರೆಲ್ಲರಿಗೂ ತಮ್ಮ ಕುಟುಂಬಕ್ಕಾಗಿ ಹೊಸ ಕಾರು ಖರೀದಿಸಬೇಕೆಂಬ ಕನಸಿರುತ್ತದೆ. ಆದಾಗ್ಯೂ ದೊಡ್ಡ ಎಸ್‌ಯುವಿ ಹಾಗೂ ಎಂಪಿವಿಗಳನ್ನು ಕೊಳ್ಳುವಷ್ಟು ಹಣವಿರುವುದಿಲ್ಲ.. ನೀವು ಕೂಡ ಫ್ಯಾಮಿಲಿ ಕಾರನ್ನು ಖರೀದಿಸಲು ಹುಡುಕಾಟವನ್ನು ನಡೆಸುತ್ತಿದ್ದರೆ, ಮಾರುತಿ ಸುಜುಕಿ ಎರ್ಟಿಗಾ (Maruti Suzuki Ertiga) ಎಂಪಿವಿ ಉತ್ತಮ ಆಯ್ಕೆಯಾಗಲಿದೆ. ಈ ಕಾರು ಕೈಗೆಟುಕುವ ಬೆಲೆಯಲ್ಲಿ ದೊರೆಯಲಿದ್ದು, ಅದಕ್ಕೆ ತಕ್ಕಂತೆ ಅತ್ಯಾಧುನಿಕ ವೈಶಿಷ್ಟ್ಯಗಳನ್ನು ಹೊಂದಿದೆ. ಇಲ್ಲಿ ನೂತನ ಎರ್ಟಿಗಾ ಎಂಪಿವಿಯ ವಿಶೇಷತೆಗಳ ಕುರಿತಂತೆ ಸಂಪೂರ್ಣವಾಗಿ ವಿವರಿಸಿದ್ದೇವೆ.

ಬೆಲೆ ಹಾಗೂ ರೂಪಾಂತರಗಳು: ಸದ್ಯ ದೇಶೀಯ ಮಾರುಕಟ್ಟೆಯಲ್ಲಿ ಖರೀದಿಗೆ ಸಿಗುವ ಮಾರುತಿ ಸುಜುಕಿ ಎರ್ಟಿಗಾ ಎಂಪಿವಿ ರೂ.8.69 ಲಕ್ಷದಿಂದ ರೂ.13.03 ಲಕ್ಷ ಬೆಲೆಯನ್ನು (ಎಕ್ಸ್ ಶೋರೂಂ) ಹೊಂದಿದೆ. ವಿನ್ಯಾಸದ ದೃಷ್ಟಿಯೊಂದಲೂ ಹೆಚ್ಚು ಅತ್ಯಾಧುನಿಕವಾಗಿದೆ. ಎಲ್ಎಕ್ಸ್ಐ, ವಿಎಕ್ಸ್ಐ, ಝಡ್ಎಕ್ಸ್ಐ ಒಳಗೊಂಡಂತೆ ವಿವಿಧ ರೂಪಾಂತರ (ವೇರಿಯೆಂಟ್)ಗಳ ಆಯ್ಕೆಯಲ್ಲಿ ಸಹ ಲಭ್ಯವಿದೆ.

Middle Class People Easily Buy New Maruti Suzuki Ertiga Car Rs 8 Lakh Price 7 People Travel

ಎಂಜಿನ್, ಗೇರ್‌ಬಾಕ್ಸ್‌ ಮತ್ತು ಮೈಲೇಜ್: ಹೊಸ ಎರ್ಟಿಗಾ ಕಾರು ಪೆಟ್ರೋಲ್ ಹಾಗೂ ಸಿಎನ್‌ಜಿ ಪವರ್‌ಟ್ರೇನ್‌ನೊಂದಿಗೆ ದೊರೆಯುತ್ತದೆ. ಇದರ 1.5-ಲೀಟರ್ ಪೆಟ್ರೋಲ್ ಎಂಜಿನ್ 103 ಪಿಎಸ್ ಗರಿಷ್ಠ ಪವರ್ (ಶಕ್ತಿ) ಹಾಗೂ 137 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುತ್ತದೆ. ಸಿಎನ್‌ಜಿ ಮಾದರಿಯು ಇದೇ ಎಂಜಿನ್ ಆಯ್ಕೆಯನ್ನು ಒಳಗೊಂಡಿದೆ. ಆದರೆ, 88 ಪಿಎಸ್ ಪವರ್, 121.5 ಎನ್ಎಂ ಪೀಕ್ ಟಾರ್ಕ್ ಹೊರಹಾಕಲಷ್ಟೇ ಶಕ್ತವಾಗಿದೆ.

ಈ ಮಾರುತಿ ಸುಜುಕಿ ಎರ್ಟಿಗಾ ಎಂಪಿವಿ ರೂಪಾಂತರಗಳಿಗೆ ಅನುಗುಣವಾಗಿ 5-ಸ್ಪೀಡ್ ಮ್ಯಾನುವಲ್/ 6-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಹೊಂದಿದೆ. ಪೆಟ್ರೋಲ್ ರೂಪಾಂತರಗಳು 20.3 ರಿಂದ 20.51 ಕೆಎಂಪಿಎಲ್ ಹಾಗೂ ಸಿಎನ್‌ಜಿ ಆವೃತ್ತಿಗಳು 26.11 ಕೆಎಂ/ಕೆಜಿ ಮೈಲೇಜ್ ಕೊಡುತ್ತವೆ. ಇದರಲ್ಲಿ 7 ಮಂದಿ ಆರಾಮದಾಯಕವಾಗಿ ಪ್ರಯಾಣಿಸಬಹುದು. ಪ್ರವಾಸದ ವೇಳೆಯಲ್ಲಿ ಹೆಚ್ಚಿನ ಲಗೇಜ್ ಸಾಗಿಸಲು ಸಾಧ್ಯವಾಗುವಂತೆ 209 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್ ಅನ್ನು ಪಡೆದಿದೆ.

Middle Class People Easily Buy New Maruti Suzuki Ertiga Car Rs 8 Lakh Price 7 People Travel

ಬಣ್ಣ ಹಾಗೂ ವೈಶಿಷ್ಟ್ಯಗಳು: ನೂತನ ಎರ್ಟಿಗಾ ಕಾರು ಮೆಟಾಲಿಕ್ ಮ್ಯಾಗ್ಮಾ ಗ್ರೇ, ಪರ್ಲ್ ಮಿಡ್ನೈಟ್ ಬ್ಲಾಕ್, ಪರ್ಲ್ ಆರ್ಕ್ಟಿಕ್ ವೈಟ್ ಒಳಗೊಂಡಂತೆ 7-ಮೊನೊಟೋನ್ ಬಣ್ಣಗಳೊಂದಿಗೂ ಲಭ್ಯವಿದೆ. 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ವೈರ್‌ಲೆಸ್ ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ ಪ್ಲೇ, ಪ್ಯಾಡಲ್ ಶಿಫ್ಟರ್‌, ಕ್ರೂಸ್ ಕಂಟ್ರೋಲ್ ಮತ್ತು ಆಟೋ ಎಸಿ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ಸುರಕ್ಷತಾ ವೈಶಿಷ್ಟ್ಯಗಳು ಹಾಗೂ ಪ್ರತಿಸ್ಪರ್ಧಿ ಕಾರುಗಳು: ಮಾರುತಿ ಸುಜುಕಿ ಎರ್ಟಿಗಾ ಎಂಪಿವಿ ಸುರಕ್ಷತೆಗೂ ಹೆಸರುವಾಸಿಯಾಗಿದ್ದು, 4 ಏರ್‌ಬ್ಯಾಗ್‌, ESP (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), ರೇರ್ ಪಾರ್ಕಿಂಗ್ ಸೇನಾರ್ಸ್ ಮತ್ತು ಹಿಲ್-ಹೋಲ್ಡ್ ಅಸಿಸ್ಟ್ ಅನ್ನು ಹೊಂದಿದೆ. ಈ ಕಾರಿಗೆ ಕಿಯಾ ಕ್ಯಾರೆನ್ಸ್ ಮತ್ತು ಮಹೀಂದ್ರಾ ಮರಾಜೊ ಎಂಪಿವಿಗಳು ಪ್ರಬಲ ಪ್ರತಿಸ್ಪರ್ಧಿಯಾಗಿವೆ.

ನೂತನ ಕಿಯಾ ಕ್ಯಾರೆನ್ಸ್ ರೂ.10.52 ಲಕ್ಷದಿಂದ ರೂ.19.67 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. ಪೆಟ್ರೋಲ್ ಹಾಗೂ ಡೀಸೆಲ್ ಎಂಜಿನ್ ಆಯ್ಕೆಯಲ್ಲಿ ಸಿಗಲಿದ್ದು, 6 - 7 ಆಸನ ವ್ಯವಸ್ಥೆಯನ್ನು ಹೊಂದಿದೆ. ಮಹೀಂದ್ರಾ ಮರಾಜೊ ರೂ.14.59 ಲಕ್ಷದಿಂದ ರೂ.17 ಲಕ್ಷ ದರವನ್ನು ಪಡೆದಿದೆ. ಇದು ಡೀಸೆಲ್ ಎಂಜಿನ್‌ನೊಂದಿಗೆ ಲಭ್ಯವಿದ್ದು, 7 ರಿಂದ 8 ಆಸನವನ್ನು ಒಳಗೊಂಡಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋ ಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Thursday, June 13, 2024, 10:46 [IST]
English summary
Middle class people easily buy new maruti suzuki ertiga car rs 8 lakh price 7 people travel
Read more on maruti suzuki india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+