Swift: ಮಧ್ಯಮ ವರ್ಗದವರ ನೆಚ್ಚಿನ 'ಮಾರುತಿ ಸುಜುಕಿ ಸ್ವಿಫ್ಟ್'ಗೆ ದೊಡ್ಡ ಡಿಸ್ಕೌಂಟ್.. 30 Km ಮೈಲೇಜ್, 5 ಲಕ್ಷ ಬೆಲೆ

ಮಾರುತಿ ಸುಜುಕಿ ಸ್ವಿಫ್ಟ್ (Maruti Suzuki Swift) ಮಧ್ಯಮ ವರ್ಗದವರ ನೆಚ್ಚಿನ ಕಾರಾಗಿದ್ದು, ಈ ಜನವರಿ (2024) ದೊಡ್ಡ ರಿಯಾಯಿತಿ ಪ್ರಯೋಜನವನ್ನು ಪಡೆದುಕೊಂಡಿದೆ. ಈ ಡಿಸ್ಕೌಂಟ್ ಆಫರ್ ನಗದು ರಿಯಾಯಿತಿ, ವಿನಿಮಯ ಬೋನಸ್ ಹಾಗೂ ಕಾರ್ಪೊರೇಟ್ ರಿಯಾಯಿತಿಯನ್ನು ಒಳಗೊಂಡಿದೆ. ಆ ಕುರಿತು ಹೆಚ್ಚಿನ ವಿವರವನ್ನು ತಿಳಿಯೋಣ.

2024ರ ಮಾರುತಿ ಸುಜುಕಿ ಸ್ವಿಫ್ಟ್ (Maruti Suzuki Swift) ಮಾದರಿಗಳು ಒಟ್ಟು ರೂ.44,000 ರಿಯಾಯಿತಿ ಸೌಲಭ್ಯವನ್ನು ಹೊಂದಿವೆ. ಅದರಲ್ಲಿ ರೂ.20,000 ನಗದು ರಿಯಾಯಿತಿ (Cash discounts), ರೂ.20,000 ವಿನಿಮಯ ಬೋನಸ್ (Exchange bonus) ಮತ್ತು ರೂ.4,000 ಕಾರ್ಪೊರೇಟ್ ಬೋನಸ್ (Corporate bonus) ಸೇರಿದೆ.

Swift: ಮಧ್ಯಮ ವರ್ಗದವರ ನೆಚ್ಚಿನ ಮಾರುತಿ ಸುಜುಕಿ ಸ್ವಿಫ್ಟ್ಗೆ ದೊಡ್ಡ ಡಿಸ್ಕೌಂಟ್.. 30 Km ಮೈಲೇಜ್, 5 ಲಕ್ಷ ಬೆಲೆ

2023ರ ಮಾರುತಿ ಸುಜುಕಿ ಸ್ವಿಫ್ಟ್ ಮಾದರಿಗಳು ಕೊಂಚ ಹೆಚ್ಚಿನ ಡಿಸ್ಕೌಂಟ್ ಆಫರ್ ಪಡೆದಿದೆ. ಈ ಕಾರು, ರೂ.25,000 ನಗದು ರಿಯಾಯಿತಿ, ರೂ.20,000 ವಿನಿಮಯ ಬೋನಸ್ ಮತ್ತು ರೂ.4,000 ಕಾರ್ಪೊರೇಟ್ ಬೋನಸ್ ಸೇರಿದಂತೆ ಒಟ್ಟು ರೂ. 49,000 ರಿಯಾಯಿತಿ ಪ್ರಯೋಜನವನ್ನು ಹೊಂದಿದೆ. ಮಾರುತಿ ಸುಜುಕಿ ಸ್ವಿಫ್ಟ್ ರೂ.5.99 ಲಕ್ಷದಿಂದ ರೂ.9.03 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಖರೀದಿಗೆ ಸಿಗುತ್ತದೆ.

ನೂತನ ಮಾರುತಿ ಸುಜುಕಿ ಸ್ವಿಫ್ಟ್, ಎಲ್ಎಕ್ಸ್ಐ, ವಿಎಕ್ಸ್ಐ ಒಳಗೊಂಡಂತೆ 4 ರೂಪಾಂತರಗಳನ್ನು ಹೊಂದಿದ್ದು, ಮೆಟಾಲಿಕ್ ಮ್ಯಾಗ್ಮಾ ಗ್ರೇ, ಪರ್ಲ್ ಮಿಡ್ನೈಟ್ ಬ್ಲೂ, ಪರ್ಲ್ ಆರ್ಕ್ಟಿಕ್ ವೈಟ್, ಮೆಟಾಲಿಕ್ ಸಿಲ್ಕಿ ಸಿಲ್ವರ್, ಸಾಲಿಡ್ ಫೈರ್ ರೆಡ್ ಸೇರಿದಂತೆ 3 - ಡುಯಲ್ ಟೋನ್, 6 - ಮೊನೊಟೋನ್ ಬಣ್ಣಗಳ ಆಯ್ಕೆಯಲ್ಲಿ ದೊರೆಯುತ್ತದೆ. ಜೊತೆಗೆ 5 ಆಸನ ಆಯ್ಕೆ ವ್ಯವಸ್ಥೆಯನ್ನು ಹೊಂದಿದೆ.

ಈ ಕಾರು, 1.2 - ಪೆಟ್ರೋಲ್ ಮತ್ತು ಸಿಎನ್‌ಜಿ ಎಂಜಿನ್ ಆಯ್ಕೆಯನ್ನು ಒಳಗೊಂಡಿದ್ದು, ರೂಪಾಂತರಗಳಿಗೆ ಅನುಗುಣವಾಗಿ 5 - ಸ್ವೀಡ್ ಮ್ಯಾನುವಲ್, 5 - ಸ್ವೀಡ್ ಆಟೋಮೆಟಿಕ್ ಗೇರ್ ಬಾಕ್ಸ್ ನೊಂದಿಗೆ ದೊರೆಯುತ್ತದೆ. ಪೆಟ್ರೋಲ್ ರೂಪಾಂತರಗಳು 22.38 kmpl - 22.56 kmpl, ಸಿಎನ್‌ಜಿ ರೂಪಾಂತರಗಳು 30.90 km/kg ಮೈಲೇಜ್ ನೀಡುತ್ತವೆ.

ಮಾರುತಿ ಸುಜುಕಿ ಸ್ವಿಫ್ಟ್ ವಿನ್ಯಾಸ ದೃಷ್ಟಿಯಿಂದ ಕೂಡ ಅತ್ಯುತ್ತಮವಾಗಿದ್ದು, 7 - ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಹೈಟ್ - ಅಡ್ಜಸ್ಟ್ಏಬಲ್ ಡ್ರೈವರ್ ಸೀಟ್, ಕ್ರೂಸ್ ಕಂಟ್ರೋಲ್ ಮತ್ತು ಆಟೋ ಎಸಿ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಪಡೆದಿದೆ. ಇದರೊಂದಿಗೆ 268 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್ ಅನ್ನು ಒಳಗೊಂಡಿದೆ.

ಸುರಕ್ಷತೆಯಲ್ಲಿಯೂ ಮಾರುತಿ ಸುಜುಕಿ ಸ್ವಿಫ್ಟ್ ಅತ್ಯಾಧುನಿಕವಾಗಿದ್ದು, ಡುಯಲ್ ಫ್ರಂಟ್ ಏರ್‌ಬ್ಯಾಗ್ಸ್, EBD (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಹಿಲ್-ಹೋಲ್ಡ್ ಕಂಟ್ರೋಲ್‌, ESC (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಫ್ರಂಟ್ & ರೇರ್ ಪಾರ್ಕಿಂಗ್ ಸೇನಾರ್ಸ್ ಅನ್ನು ಹೊಂದಿದೆ. ನಿಮ್ಮ ಗಮನಕ್ಕೆ.. ಈ ರಿಯಾಯಿತಿ ಪ್ರಯೋಜನಗಳು ರಾಜ್ಯದಿಂದ ರಾಜ್ಯಕ್ಕೆ ಬೇರೆಯಿರಲಿದ್ದು, ಹೆಚ್ಚಿನ ವಿವರಗಳಿಗೆ ಹತ್ತಿರದ ಶೋರೂಂ ಸಂಪರ್ಕಿಸಿರಿ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Monday, January 8, 2024, 18:06 [IST]
English summary
Middle class people favorite maruti suzuki swift get upto 49000 discount in january
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+