Tata: ಟಾಟಾದಿಂದ ಆಘಾತ.. ಈ ಜನಪ್ರಿಯ ಕಾರಿನ ಬೆಲೆ ಏರಿಕೆ

ದೇಶದ ವಿಶ್ವಾಸಾರ್ಹ ಕಾರು ತಯಾರಕ ಕಂಪನಿಯಾಗಿ ಟಾಟಾ ಮೋಟಾರ್ಸ್ (Tata Motors) ಗುರುತಿಸಿಕೊಂಡಿದೆ. ಈಗ ವಿವಿಧ ಮಾದರಿಗಳ ಎಕ್ಸ್ ಶೋರೂಂ ಬೆಲೆಯನ್ನು ಪರಿಷ್ಕರಿಸುತ್ತಿದ್ದು, ಜನಪ್ರಿಯ ಪ್ರೀಮಿಯಂ ಹ್ಯಾಚ್‌ಬ್ಯಾಕ್ ಆಲ್ಟ್ರೋಜ್ (Altroz) ದರವನ್ನು ರೂ.16,000 ವರೆಗೆ ಹೆಚ್ಚಿಸಿದೆ ಎಂಬ ವಿವರ ಲಭ್ಯವಾಗಿದೆ.

ಟಾಟಾ ಆಲ್ಟ್ರೋಜ್ (Tata Altroz), ಎಕ್ಸ್ಇ, ಎಕ್ಸ್ಎಂ, ಎಕ್ಸ್ಎಂ ಪ್ಲಸ್, ಎಕ್ಸ್‌ಟಿ, ಎಕ್ಸ್‌ಝಡ್, ಎಕ್ಸ್‌ಝಡ್ ಪ್ಲಸ್ ಮತ್ತು ಎಕ್ಸ್‌ಝಡ್ ಪ್ಲಸ್ (ಒ) ರೂಪಾಂತರದ ಆಯ್ಕೆಯಲ್ಲಿ ಲಭ್ಯವಿದೆ. ಆದರೆ, ರೂಪಾಂತರಗಳನ್ನು ಆಧರಿಸಿ ದರ ಹೆಚ್ಚಳ ಬೇರೆ - ಬೇರೆಯಿದೆ. ಟರ್ಬೊ ಮಾದರಿಗಳ ಬೆಲೆ ರೂ.10,000 ಮತ್ತು ಡೀಸೆಲ್ ಪವರ್‌ಟ್ರೇನ್‌ ಮಾದರಿಗಳ ದರ ರೂ.15,000 ಅಧಿಕಗೊಂಡಿದೆ.

Middle Cass People Favorite Tata Altroz Car Price Hike

ಈ ಕಾರು, ರೂ.6.60 ಲಕ್ಷದಿಂದ ರೂ.10.74 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದ್ದು, ಆಕರ್ಷಕ ಬಣ್ಣಗಳ ಆಯ್ಕೆಯಲ್ಲಿ ಸಿಗುತ್ತದೆ. ವಿನ್ಯಾಸದ ದೃಷ್ಟಿಯಿಂದ ಆಲ್ಟ್ರೋಜ್ ಹ್ಯಾಚ್‌ಬ್ಯಾಕ್ ಅತ್ಯುತ್ತಮವಾಗಿದ್ದು, 5 ಮಂದಿ ಆರಾಮದಾಯಕವಾಗಿ ಪ್ರಯಾಣಿಸಬಹುದು. ಪೆಟ್ರೋಲ್, ಡೀಸೆಲ್ ರೂಪಾಂತರಗಳು 345 ಲೀಟರ್, ಸಿಎನ್‌ಜಿ ರೂಪಾಂತರಗಳು 210 ಸಾಮರ್ಥ್ಯದ ಬೂಟ್ ಸ್ಪೇಸ್ ಅನ್ನು ಹೊಂದಿವೆ.

ಈ ಟಾಟಾ ಆಲ್ಟ್ರೋಜ್ ಪೆಟ್ರೋಲ್, ಡೀಸೆಲ್ ಮತ್ತು ಸಿಎನ್‌ಜಿ ಎಂಜಿನ್ ಆಯ್ಕೆಯಲ್ಲಿ ದೊರೆಯುತ್ತದೆ. ಇದರ 1.2-ಲೀಟರ್ ನ್ಯಾಚುರಲ್ ಆಸ್ಪಿರೇಟೆಡ್ ಪೆಟ್ರೋಲ್ ಎಂಜಿನ್ 86 ಪಿಎಸ್ ಪವರ್, 113 ಏನ್ಎಂ ಪೀಕ್ ಟಾರ್ಕ್, 1.2-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ 110 ಪಿಎಸ್ ಪವರ್, 140 ಏನ್ಎಂ ಪೀಕ್ ಟಾರ್ಕ್, 1.5-ಲೀಟರ್ ಡೀಸೆಲ್ ಎಂಜಿನ್ 90 ಪಿಎಸ್ ಪವರ್ ಮತ್ತು 200 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುತ್ತದೆ.

Middle Cass People Favorite Tata Altroz Car Price Hike

ಸಿಎನ್‌ಜಿ ಪವರ್ ಟ್ರೈನ್ ಪಡೆದಿರುವ ಕಾರು, 1.2-ಲೀಟರ್ ನ್ಯಾಚುರಲ್ ಆಸ್ಪಿರೇಟೆಡ್ ಎಂಜಿನ್ ಹೊಂದಿದ್ದು, 73.5 PS ಗರಿಷ್ಠ ಪವರ್ ಮತ್ತು 103 Nm ಪೀಕ್ ಟಾರ್ಕ್ ಹೊರಹಾಕುವ ಸಾಮರ್ಥ್ಯವನ್ನು ಒಳಗೊಂಡಿದೆ. ಈ ಕಾರು ರೂಪಾಂತರಗಳಿಗೆ ಅನುಗುಣವಾಗಿ 5-ಸ್ವೀಡ್ ಮ್ಯಾನುವಲ್/ 6-ಸ್ವೀಡ್ ಡುಯಲ್ - ಕ್ಲಚ್ ಟ್ರಾನ್ಸ್ಮಿಷನ್ (ಡಿಸಿಟಿ) ಗೇರ್ ಬಾಕ್ಸ್ ಆಯ್ಕೆಯಲ್ಲಿ ಲಭ್ಯವಿದೆ.

ಟಾಟಾ ಆಲ್ಟ್ರೋಜ್ ಪೆಟ್ರೋಲ್ ರೂಪಾಂತರಗಳು 18.50 ಕೆಎಂಪಿಎಲ್ - 19.33 ಕೆಎಂಪಿಎಲ್, ಡೀಸೆಲ್ ರೂಪಾಂತರ 23.64 ಕೆಎಂಪಿಎಲ್ ಮತ್ತು ಸಿಎನ್‌ಜಿ ರೂಪಾಂತರ 26.20 ಕೆಜಿ/ಕೆಜಿ ಮೈಲೇಜ್ ಕೊಡುತ್ತದೆ. ವೈಶಿಷ್ಟ್ಯದ ವಿಚಾರವಾಗಿ ಹೇಳುವುದಾದರೆ ಈ ಕಾರು, 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಸೆಮಿ-ಡಿಜಿಟಲ್ ಇನ್‌ಸ್ಟ್ರುಮೆಂಟ್ ಕ್ಲಸ್ಟರ್, ಆಂಬಿಯೆಂಟ್ ಲೈಟಿಂಗ್, ಕ್ರೂಸ್ ಕಂಟ್ರೋಲ್ ಮತ್ತು ಸಿಂಗಲ್ ಪೇನ್ ಸನ್‌ರೂಫ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ.

ಈ ಟಾಟಾ ಆಲ್ಟ್ರೋಜ್ ಹ್ಯಾಚ್‌ಬ್ಯಾಕ್ ಆಗಿದ್ದರೂ ಸುರಕ್ಷತೆಯ ದೃಷ್ಟಿಯಿಂದ ಅತ್ಯಾಧುನಿಕವಾಗಿದ್ದು, ಗ್ಲೋಬಲ್ ಎನ್‌ಸಿಎಪಿಯಿಂದ 5-ಸ್ಟಾರ್ ರೇಟಿಂಗ್ ಪಡೆದಿದೆ. ಡುಯಲ್ ಫ್ರಂಟ್ ಏರ್‌ಬ್ಯಾಗ್‌, ISOFIX ಚೈಲ್ಡ್-ಸೀಟ್ ಆಂಕರ್‌, ಆಟೋ ಪಾರ್ಕ್ ಲಾಕ್, ರೇರ್ ಪಾರ್ಕಿಂಗ್ ಸೆನ್ಸರ್ಸ್ ಒಳಗೊಂಡಂತೆ ವಿವಿಧ ಸುರಕ್ಷತಾ ವೈಶಿಷ್ಟ್ಯಗಳನ್ನು ಹೊಂದಿದೆ. ಈ ಕಾರಿಗೆ ಹ್ಯುಂಡೈ ಐ20, ಮಾರುತಿ ಸುಜುಕಿ ಬಲೆನೊ ಮತ್ತು ಟೊಯೋಟಾ ಗ್ಲಾನ್ಜಾ ದೊಡ್ಡ ಎದುರಾಳಿಯಾಗಿವೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Sunday, February 4, 2024, 11:00 [IST]
English summary
Middle class people favorite tata altroz car price hike
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+