ಸಾಮಾನ್ಯರು ಮನೆಗೆ ತರಬಹುದಾದ ಡೀಸೆಲ್ ಕಾರುಗಳಿವು.. ಕಡಿಮೆ ಬೆಲೆ, ಸಖತ್ ಮೈಲೇಜ್!
ದೇಶಾದ್ಯಂತ ಕಟ್ಟುನಿಟ್ಟಿನ ಎಮಿಷನ್ ಮಾನದಂಡಗಳಿಂದಾಗಿ ಡೀಸೆಲ್ (Diesel) ಚಾಲಿತ ಕಾರುಗಳು ಮಾರುಕಟ್ಟೆಯಿಂದ ನಿಧಾನವಾಗಿ ಕಣ್ಮರೆಯಾಗುತ್ತಿವೆ. ಆದರೆ ಕಿಯಾ, ಮಹೀಂದ್ರಾ ಸೇರಿದಂತೆ ಕೆಲವು ಪ್ರಮುಖ ಕಂಪನಿಗಳು ಇನ್ನೂ ಡೀಸೆಲ್ ಎಸ್‌ಯುವಿಗಳನ್ನು ಮಾರಾಟಗೊಳಿಸುತ್ತಿವೆ. ಈ ಕಾರುಗಳ ಅತ್ಯುತ್ತಮ ಕಾರ್ಯಕ್ಷಮತೆಗೆ ಹಲವರು ಮನಸೋತ್ತಿದ್ದು, ಈಗಲೂ ಮುಗಿಬಿದ್ದು ಖರೀದಿಸುತ್ತಿದ್ದಾರೆ.
ಮೊದಲಿಗೆ ಕಿಯಾ ಸೊನೆಟ್ (Kia Sonet) ಎಸ್‌ಯುವಿ ಬಗ್ಗೆ ಮಾತನಾಡೋಣ. ಇದರ ಡೀಸೆಲ್ ಚಾಲಿತ ಎಕ್ಸ್‌ಟಿಇ ರೂಪಾಂತರ (ವೇರಿಯೆಂಟ್) ರೂ.9.8 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. 1.5-ಲೀಟರ್ 4-ಸಿಲಿಂಡರ್ ಟರ್ಬೊ ಡೀಸೆಲ್ ಎಂಜಿನ್ ಪಡೆದಿದ್ದು, 115 ಹೆಚ್‌ಪಿ ಗರಿಷ್ಠ ಪವರ್ (ಶಕ್ತಿ) ಹಾಗೂ 250 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 6-ಸ್ಪೀಡ್ ಮ್ಯಾನುವಲ್/ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಹೊಂದಿದ್ದು, 18 ರಿಂದ 22 ಕೆಎಂಪಿಎಲ್ ಮೈಲೇಜ್ ನೀಡುತ್ತದೆ.

ಡೀಸೆಲ್ ಆಯ್ಕೆಯಲ್ಲಿ ಲಭ್ಯವಿರುವ ಮಹೀಂದ್ರಾ ಬೊಲೆರೋ ಹಾಗೂ ಬೊಲೆರೋ ನಿಯೋ (Mahindra Bolero & Bolero Neo) ಮಾದರಿಗಳು ರೂ.9.90 ಲಕ್ಷದವರೆಗೆ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿವೆ. 1.5-ಲೀಟರ್, 3-ಸಿಲಿಂಡರ್ ಟರ್ಬೊ ಡೀಸೆಲ್ ಎಂಜಿನ್ ನೊಂದಿಗೆ ಸಿಗಲಿದ್ದು, 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನ್ನು ಒಳಗೊಂಡಿವೆ. ಜೊತೆಗೆ 16 ಕೆಎಂಪಿಎಲ್ ವರೆಗೆ ಮೈಲೇಜ್ ನೀಡಬಲ್ಲವು.
ಮಹೀಂದ್ರಾ ಎಕ್ಸ್‌ಯುವಿ 3ಎಕ್ಸ್ಒ (Mahindra XUV 3XO) ಎಸ್‌ಯುವಿಯ ಡೀಸೆಲ್ ಚಾಲಿತ ಎಂಎಕ್ಸ್2 ರೂಪಾಂತರ ರೂ.9.99 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. ಇದರ 1.5-ಲೀಟರ್ 4-ಸಿಲಿಂಡರ್ ಟರ್ಬೊ ಡೀಸೆಲ್ ಎಂಜಿನ್ 117 ಪಿಎಸ್ ಪವರ್ ಹಾಗೂ 300 ಎನ್ಎಂ ಪೀಕ್ ಟಾರ್ಕ್ ಹೊರಹಾಕಲಿದ್ದು, 6-ಸ್ಪೀಡ್ ಮ್ಯಾನುವಲ್ ಹಾಗೂ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಪಡೆದಿದೆ. 20.6 ರಿಂದ 21.2 ಕೆಎಂಪಿಎಲ್ ಮೈಲೇಜ್ ಕೊಡುತ್ತದೆ.

ಇತ್ತೀಚೆಗಷ್ಟೇ ದೇಶೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಂಡಿದ್ದ ಈ ಮಹೀಂದ್ರಾ ಎಕ್ಸ್‌ಯುವಿ 3ಎಕ್ಸ್ಒ ಕಾರು, 10.25-ಇಂಚಿನ ಡಿಸ್ಪ್ಲೇಗಳು, ಕ್ರೂಸ್ ಕಂಟ್ರೋಲ್, ಡುಯಲ್ ಜೋನ್ ಎಸಿ, ವೈರ್‌ಲೆಸ್ ಫೋನ್ ಚಾರ್ಜರ್, ಅಲೆಕ್ಸಾ ಕನೆಕ್ಟಿವಿಟಿ, ಸನ್‌ರೂಫ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಗಾಗಿ 6 ಏರ್‌ಬ್ಯಾಗ್, ADAS (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಅನ್ನು ಒಳಗೊಂಡಿದೆ.
ಡೀಸೆಲ್ ಚಾಲಿತ ಹ್ಯುಂಡೈ ವೆನ್ಯೂ (Hyundai Venue) ಎಸ್‍ಯುವಿಯು ರೂ.10.71 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಗ್ರಾಹಕರಿಗೆ ದೊರೆಯುತ್ತದೆ. ಕಿಯಾ ಸೊನೆಟ್ ಪ್ಲಾಟ್‌ಫಾರ್ಮ್‌ನ್ನು ಹೊಂದಿರುವುದರಿಂದ ಅದೇ ತರಹದ ಎಂಜಿನ್‌ನ್ನು ಪಡೆದಿದೆ. ವೆನ್ಯೂ ಕಾರಿನ 1.5-ಲೀಟರ್, 4-ಸಿಲಿಂಡರ್, ಟರ್ಬೊ ಡೀಸೆಲ್ ಎಂಜಿನ್ 115 ಹೆಚ್‌ಪಿ ಗರಿಷ್ಠ ಪವರ್ (ಶಕ್ತಿ) ಮತ್ತು 250 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 23.4 ಕೆಎಂಪಿಎಲ್ ವರೆಗೆ ಮೈಲೇಜ್ ನೀಡುತ್ತದೆ.

ಮಹೀಂದ್ರಾ ಥಾರ್ ಆರ್‌ಡಬ್ಲ್ಯೂಡಿ (ಡೀಸೆಲ್) ಮಾದರಿಯು ರೂ.12 ಲಕ್ಷ ಆಸುಪಾಸಿನಲ್ಲಿ ಖರೀದಿಗೆ ಲಭ್ಯವಿದೆ. 1.5-ಲೀಟರ್, 4-ಸಿಲಿಂಡರ್, ಟರ್ಬೊಚಾರ್ಜ್ಡ್ ಡೀಸೆಲ್ ಎಂಜಿನ್ ಆಯ್ಕೆಯನ್ನು ಪಡೆದಿದ್ದು, 117 ಹೆಚ್‌ಪಿ ಗರಿಷ್ಠ ಪವರ್ (ಶಕ್ತಿ) ಮತ್ತು 300 ಎನ್ಎಂ ಪೀಕ್ ಟಾರ್ಕ್ ಹೊರಹಾಕುತ್ತದೆ. ಜೊತೆಗೆ 6-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದ್ದು, 15 ಕೆಎಂಪಿಎಲ್ ವರೆಗೆ ಮೈಲೇಜ್ ಕೊಡುತ್ತದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications








