5-ಸೀಟರ್.. 11 ಲಕ್ಷ ಆರಂಭಿಕ ಬೆಲೆ.. ಜನಪ್ರಿಯ ಮಿಡ್-ಸೈಜ್ ಎಸ್‌ಯುವಿಗಳಿವು.. ಸಾಮಾನ್ಯರಿಂದ ಸೆಲೆಬ್ರಿಟಿಗಳಿಗೂ ಇಷ್ಟ!
ಭಾರತದಲ್ಲಿ ಕೆಲವು ವರ್ಷಗಳಿಂದ ಮಧ್ಯಮ-ಗಾತ್ರದ ಎಸ್‌ಯುವಿಗಳು (Mid-Size Suvs) ಭಾರಿ ಜನಪ್ರಿಯತೆ ಗಳಿಸುತ್ತಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು ಕೂಡ ಇಷ್ಟಪಟ್ಟು ಖರೀದಿಸುತ್ತಿದ್ದಾರೆ. ಈ ವಿಭಾಗದಲ್ಲಿ ಹೋಂಡಾ ಎಲಿವೇಟ್, ಕಿಯಾ ಸೆಲ್ಟೋಸ್, ಹ್ಯುಂಡೈ ಕ್ರೆಟಾ ಹಾಗೂ ಮಾರುತಿ ಸುಜುಕಿ ಗ್ರ್ಯಾಂಡ್ ವಿಟಾರಾಗಳಿಗೆ ದೊಡ್ಡಮಟ್ಟದಲ್ಲಿ ಬೇಡಿಕೆಯಿದೆ. ನೀವು ಹೊಚ್ಚ ಹೊಸ ಕಾರನ್ನು ಖರೀದಿಸಬೇಕು ಅಂದುಕೊಂಡರೆ.. ಇವುಗಳು ಉತ್ತಮ ಆಯ್ಕೆಯಾಗಲಿವೆ. ನಾವಿಲ್ಲಿ ಈ ನೂತನ ಎಸ್‌ಯುವಿಗಳ ಬೆಲೆ (Price) ಮೈಲೇಜ್ (Mileage) ಹಾಗೂ ವಿಶೇಷತೆ (Specification) ಕುರಿತಂತೆ ಸಂಪೂರ್ಣವಾಗಿ ತಿಳಿಸಿಕೊಟ್ಟಿದ್ದೇವೆ.
ಮೊದಲಿಗೆ ಹೋಂಡಾ ಎಲಿವೇಟ್ (Honda Elevate) ಎಸ್‌ಯುವಿ ಬಗ್ಗೆ ಮಾತನಾಡೋಣ. ಇದು ರೂ.11.91 ಲಕ್ಷದಿಂದ ರೂ.16.63 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಖರೀದಿಗೆ ದೊರೆಯುತ್ತದೆ. 1.5-ಲೀಟರ್ ಪೆಟ್ರೋಲ್ ಎಂಜಿನ್ ಹಾಗೂ ರೂಪಾಂತರಗಳಿಗೆ ಅನುಗುಣವಾಗಿ 6-ಸ್ಪೀಡ್ ಮ್ಯಾನುವಲ್/ ಸಿವಿಟಿ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಪಡೆದಿದೆ. 15.31 ರಿಂದ 16.92 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಇದರಲ್ಲಿ 5 ಮಂದಿ ಸಂಚರಿಸಬಹುದು.

ಈ ಎಲಿವೇಟ್ ಕಾರು 10.25-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 7-ಇಂಚಿನ ಡಿಜಿಟಲ್ ಡ್ರೈವರ್ ಡಿಸ್ಪ್ಲೇ, ಆಂಡ್ರಾಯ್ಡ್ ಆಟೋ, ಆಪಲ್ ಕಾರ್ ಪ್ಲೇ, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಯ ದೃಷ್ಟಿಯಿಂದ 6 ಏರ್‌ಬ್ಯಾಗ್ ಮತ್ತು ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಅನ್ನು ಪಡೆದಿದೆ.
ಹ್ಯುಂಡೈ ಕ್ರೆಟಾ (Hyundai Creta) ಕೂಡ ಜನಪ್ರಿಯ ಮಿಡ್-ಸೈಜ್ ಎಸ್‌ಯುವಿಯಾಗಿದ್ದು, ರೂ.11 ಲಕ್ಷದಿಂದ ರೂ. 20.15 ಲಕ್ಷ (ಎಕ್ಸ್ ಶೋರೂಂ) ದರವನ್ನು ಹೊಂದಿದೆ. 1.5-ಲೀಟರ್ ನ್ಯಾಚುರಲ್ ಆಸ್ಪಿರೇಟೆಡ್ ಪೆಟ್ರೋಲ್, 1.5-ಲೀಟರ್ ಟರ್ಬೊ ಪೆಟ್ರೋಲ್ ಮತ್ತು 1.5-ಲೀಟರ್ ಡೀಸೆಲ್ ಎಂಜಿನ್ ಆಯ್ಕೆಯನ್ನು ಪಡೆದಿದೆ. 6-ಸ್ಪೀಡ್ ಮ್ಯಾನುವಲ್, 6-ಸ್ಪೀಡ್ ಆಟೋಮೆಟಿಕ್ ಹಾಗೂ 7-ಸ್ಪೀಡ್ ಡಿಸಿಟಿ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 17.4 - 21.8 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ.

ನೂತನ ಹ್ಯುಂಡೈ ಕ್ರೆಟಾ ಕಾರಿನಲ್ಲಿ 5 ಜನರು ಓಡಾಟ ನಡೆಸಬಹುದು. 10.25-ಇಂಚಿನ ಡುಯಲ್ ಡಿಸ್ಪ್ಲೇಗಳು, ಡುಯಲ್ ಝೋನ್ ಎಸಿ, 8-ಸ್ಪೀಕರ್ ಬೋಸ್ ಸೌಂಡ್ ಸಿಸ್ಟಮ್, ಸನ್‌ರೂಫ್, ವೈರ್‌ಲೆಸ್ ಫೋನ್ ಚಾರ್ಜಿಂಗ್ ಒಳಗೊಂಡಂತೆ ಹತ್ತಾರು ವೈಶಿಷ್ಟ್ಯಗಳನ್ನು ಪಡೆದಿದೆ. ಪ್ರಯಾಣಿಕರಿಗೆ ಗರಿಷ್ಠ ರಕ್ಷಣೆ ಒದಗಿಸಲು 6 ಏರ್‌ಬ್ಯಾಗ್ ಮತ್ತು ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್) ಸೇರಿದಂತೆ ವಿವಿಧ ಸುರಕ್ಷತಾ ವೈಶಿಷ್ಟ್ಯಗಳನ್ನು ಹೊಂದಿದೆ.
ಹೊಚ್ಚ ಹೊಸ ಕಿಯಾ ಸೆಲ್ಟೋಸ್ (Kia Seltos) ಎಸ್‌ಯುವಿ, ರೂ.10.90 ಲಕ್ಷದಿಂದ ರೂ.20.37 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಪಡೆದಿದೆ. ಪೆಟ್ರೋಲ್ ಮತ್ತು ಡಿಸೇಲ್ ಎಂಜಿನ್‌ನ್ನು ಹೊಂದಿದ್ದು, 6-ಸ್ಪೀಡ್ ಮ್ಯಾನುವಲ್/ ಆಟೋಮೆಟಿಕ್, 7-ಸ್ಪೀಡ್ ಡಿಸಿಟಿ (ಡುಯಲ್ ಕ್ಲಚ್ ಟ್ರಾಸ್ಮಿಷನ್) ಗೇರ್‌ಬಾಕ್ಸ್‌ನ್ನು ಹೊಂದಿದೆ. 17 ರಿಂದ 20.7 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ.

ಈ ಕಿಯಾ ಸೆಲ್ಟೋಸ್ ಕಾರಿನಲ್ಲಿಯೂ 5 ಮಂದಿ ಆರಾಮದಾಯಕ ಕುಳಿತುಕೊಂಡು ಪ್ರಯಾಣಿಸಬಹುದು. 20.7 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಜೊತೆಗೆ ಯುವ ಗ್ರಾಹಕರನ್ನು ಸೆಳೆಯಲು ಇನ್ಫೋಟೈನ್‌ಮೆಂಟ್ ಸಿಸ್ಟಮ್ & ಇನ್ಸ್ಟ್ರುಮೆಂಟ್ ಕ್ಲಸ್ಟರ್‌ಗಾಗಿ ಡುಯಲ್ 10.25-ಇಂಚಿನ ಡಿಸ್ಪ್ಲೇಗಳು, ಡುಯಲ್ ಜೋನ್ ಕ್ಲೇಮೇಟ್ ಕಂಟ್ರೋಲ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಯ ಸಲುವಾಗಿ 6 ಏರ್‌ಬ್ಯಾಗ್‌ಗಳನ್ನು ಒಳಗೊಂಡಿದೆ.
ಮಾರುತಿ ಸುಜುಕಿ ಗ್ರ್ಯಾಂಡ್ ವಿಟಾರಾ (Maruti Suzuki Grand Vitara) ಎಸ್‌ಯುವಿ, ರೂ.10.80 ಲಕ್ಷದಿಂದ ರೂ.20.09 ಲಕ್ಷ ಎಕ್ಸ್ ಶೋರೂಂ ದರದಲ್ಲಿ ಖರೀದಿಗೆ ದೊರೆಯುತ್ತದೆ. ಹೈಬ್ರಿಡ್ (ಎಲೆಕ್ಟ್ರಿಕ್ + ಪೆಟ್ರೋಲ್) ಹಾಗೂ ಸಿಎನ್‌ಜಿ ಎಂಜಿನ್ ಆಯ್ಕೆಯಲ್ಲಿ ಲಭ್ಯವಿದ್ದು, 19.38 ರಿಂದ 26.6 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ಇದರಲ್ಲಿ ಸಹ 5 ಜನರು ಸಂಚರಿಸಬಹುದು.
ಈ ಗ್ರ್ಯಾಂಡ್ ವಿಟಾರಾ 9-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 7-ಇಂಚಿನ ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ವೈರ್‌ಲೆಸ್ ಫೋನ್ ಚಾರ್ಜರ್, ಪನೋರಮಿಕ್ ಸನ್‌ರೂಫ್, ಆಂಬಿಯೆಂಟ್ ಲೈಟಿಂಗ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಪ್ರಯಾಣಿಕರ ರಕ್ಷಣೆಗಾಗಿ 6 ಏರ್‌ಬ್ಯಾಗ್, ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಪಡೆದಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications