ನೀವು ಕಷ್ಟಪಟ್ಟ ಹಣ ಖರ್ಚು ಮಾಡಿದರೂ ಬೇಸರಿಸಿಕೊಳ್ಳುವುದಿಲ್ಲ.. ಆ ರೀತಿಯಿವೆ 10 ಲಕ್ಷದೊಳಗಿನ ಈ ಕಾರುಗಳು
ಮಧ್ಯಮ ವರ್ಗದ ಜನರಿಗೆ ಜೀವನದಲ್ಲಿ ಹೊಸ ಕಾರು ಖರೀದಿಸಬೇಕೆಂಬ ಬಹುದೊಡ್ಡ ಆಸೆಯಿರುತ್ತದೆ. ಕಷ್ಟಪಟ್ಟ ಹಣದಲ್ಲಿ ಯಾವ ಕಾರನ್ನು ಕೊಂಡುಕೊಂಡರೇ ಒಳ್ಳೆಯದು ಎನ್ನುವುದರ ಬಗ್ಗೆ ಅರಿವಿರುವುದಿಲ್ಲ. ಇಲ್ಲಿ ರೂ.10 ಲಕ್ಷದೊಳಗೆ ದೊರೆಯುವ ಟಾಟಾ ಹಾಗೂ ಮಾರುತಿ ಸುಜುಕಿಯ ಜನಪ್ರಿಯ ಕಾರುಗಳ ಬಗ್ಗೆ ತಿಳಿಸಿಕೊಟ್ಟಿದ್ದೇವೆ.
ಮೊದಲಿಗೆ ಟಾಟಾ ಮೋಟಾರ್ಸ್ ಮಾರಾಟಗೊಳಿಸುವ ನೆಕ್ಸಾನ್ (Nexon) ಕಾಂಪ್ಯಾಕ್ಟ್ ಎಸ್‌ಯುವಿ ಬಗ್ಗೆ ಮಾತನಾಡೋಣ. ಇದು ರೂ.8.15 ಲಕ್ಷದಿಂದ ರೂ.15.80 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ದೊರೆಯುತ್ತದೆ. ಪೆಟ್ರೋಲ್ ಹಾಗೂ ಡೀಸೆಲ್ ಎಂಜಿನ್ ಆಯ್ಕೆಯನ್ನು ಹೊಂದಿದ್ದು, 17.01 ರಿಂದ 24.08 ಕೆಎಂಪಿಎಲ್ ಮೈಲೇಜ್ ಕೊಡುತ್ತದೆ. ಈ ಕಾರಿನಲ್ಲಿ 5 ಮಂದಿ ಆರಾಮದಾಯಕವಾಗಿ ಪ್ರಯಾಣಿಸಬಹುದು.

ಈ ಟಾಟಾ ನೆಕ್ಸಾನ್ ಕಾರು, 10.25-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 10.25-ಇಂಚಿನ ಫುಲ್ ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಆಟೋ ಎಸಿ, ವೈರ್‌ಲೆಸ್ ಫೋನ್ ಚಾರ್ಜಿಂಗ್, 9-ಸ್ಪೀಕರ್ ಜೆಬಿಎಲ್ ಸೌಂಡ್ ಸಿಸ್ಟಮ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಗಾಗಿ 6 ಏರ್‌ಬ್ಯಾಗ್, ESP (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), TPMS (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಪಡೆದಿದೆ.
ಟಾಟಾ ಪಂಚ್ (Tata Punch) ಪುಟ್ಟ ಎಸ್‌ಯುವಿಯಾಗಿದ್ದು, ರೂ.6.13 ಲಕ್ಷದಿಂದ ರೂ.10.20 ಲಕ್ಷ ಎಕ್ಸ್ ಶೋರೂಂ ಬೆಲೆಗೆ ಖರೀದಿಗೆ ಲಭ್ಯವಿದೆ. ಪೆಟ್ರೋಲ್ ಮತ್ತು ಸಿಎನ್‌ಜಿ ಎಂಜಿನ್ ಆಯ್ಕೆಯನ್ನು ಹೊಂದಿದ್ದು, 18.8 ರಿಂದ ರಿಂದ 26.99 ಕೆಎಂಪಿಎಲ್ ವರೆಗೆ ಮೈಲೇಜ್ ಕೊಡುತ್ತದೆ. ಈ ಕಾರಿನಲ್ಲಿ 5 ಮಂದಿ ಕುಳಿತುಕೊಂಡು ಓಡಾಟ ನಡೆಸಬಹುದು.

ಈ ಟಾಟಾ ಪಂಚ್ ಕಾರು 7-ಇಂಚಿನ ಟಚ್‌ಸ್ಕ್ರೀನ್ ಡಿಸ್ಪ್ಲೇ, 7-ಇಂಚಿನ ಸೆಮಿ-ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಆಟೋಮೆಟಿಕ್ ಎಸಿ, ಕ್ರೂಸ್ ಕಂಟ್ರೋಲ್ ಒಳಗೊಂಡಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಗಾಗಿ ಡುಯಲ್ ಫ್ರಂಟ್ ಏರ್‌ಬ್ಯಾಗ್, ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), EBD (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ರೇರ್ ಪಾರ್ಕಿಂಗ್ ಸೇನಾರ್ಸ್, ರೇರ್ ವ್ಯೂ ಕ್ಯಾಮೆರಾ, TPMS (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಅನ್ನು ಹೊಂದಿದೆ.
ಮಾರುತಿ ಸುಜುಕಿ ಫ್ರಾಂಕ್ಸ್ (Maruti Suzuki Fronx) ಎಸ್‌ಯುವಿ, ರೂ.7.51 ಲಕ್ಷದಿಂದ ರೂ.13.04 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಪಡೆದಿದೆ. ಸಿಗ್ಮಾ, ಡೆಲ್ಟಾ, ಡೆಲ್ಟಾ ಪ್ಲಸ್, ಜಿಟಾ ಸೇರಿದಂತೆ ಹಲವು ರೂಪಾಂತರಗಳ ಆಯ್ಕೆಯಲ್ಲಿ ಸಿಗಲಿದ್ದು, ಪೆಟ್ರೋಲ್ ಹಾಗೂ ಸಿಎನ್‌ಜಿ ಎಂಜಿನ್ ಅನ್ನು ಪಡೆದಿದೆ. 20.1 ರಿಂದ 28.51 ಕೆಎಂಪಿಎಲ್ ಮೈಲೇಜ್ ಕೊಡುತ್ತದೆ.

ಈ ಫ್ರಾಂಕ್ಸ್ ಕಾರಿನಲ್ಲೂ 5 ಮಂದಿ ಆರಾಮದಾಯಕವಾಗಿ ಪ್ರಯಾಣಿಸಬಹುದು. 9-ಇಂಚಿನ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್ ಪ್ಲೇ, ಕ್ರೂಸ್ ಕಂಟ್ರೋಲ್, ಆಟೋ ಕ್ಲೇಮೇಟ್ ಕಂಟ್ರೋಲ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ. ಈ ಕಾರು ಸುರಕ್ಷತೆಯ ಸಲುವಾಗಿ 6 ಏರ್‌ಬ್ಯಾಗ್, ESP (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), ಹಿಲ್ ಹೋಲ್ಡ್ ಅಸಿಸ್ಟ್, 360-ಡಿಗ್ರಿ ಕ್ಯಾಮೆರಾವನ್ನು ಪಡೆದಿದೆ.
ಮಾರುತಿ ಸುಜುಕಿ ಬ್ರೆಝಾ (Maruti Suzuki Brezza), ರೂ.8.34 ಲಕ್ಷದಿಂದ ರೂ.14.14 ಲಕ್ಷ ಎಕ್ಸ್ ಶೋರೂಂ ದರದಲ್ಲಿ ದೊರೆಯುತ್ತದೆ. 1.5-ಲೀಟರ್ ಪೆಟ್ರೋಲ್ ಮತ್ತು ಸಿಎನ್‌ಜಿ ಎಂಜಿನ್ ಆಯ್ಕೆಯನ್ನು ಹೊಂದಿದ್ದು, ರೂಪಾಂತರಗಳಿಗೆ ಅನುಗುಣವಾಗಿ 5-ಸ್ವೀಡ್ ಮ್ಯಾನುವಲ್ ಅಥವಾ 6-ಸ್ವೀಡ್ ಆಟೋಮೆಟಿಕ್ ಗೇರ್ ಬಾಕ್ಸ್ ಅನ್ನು ಪಡೆದಿದೆ. 17.38 ರಿಂದ 25.51 ಕೆಎಂಪಿಎಲ್ ಮೈಲೇಜ್ ಕೊಡುತ್ತದೆ.

ವಿನ್ಯಾಸದ ದೃಷ್ಟಿಯಿಂದಲೂ ಈ ಕಾರು ಅತ್ಯಾಧುನಿಕವಾಗಿದ್ದು, ಸಿಜ್ಲಿಂಗ್ ರೆಡ್, ಬ್ರೇವ್ ಖಾಖಿ, ಪರ್ಲ್ ಮಿಡ್ನೈಟ್ ಬ್ಲಾಕ್, ಮ್ಯಾಗ್ಮಾ ಗ್ರೇ ಬಣ್ಣಗಳೊಂದಿಗೆ ಸಿಗುತ್ತದೆ. 5 ಮಂದಿ ಪ್ರಯಾಣಿಸಬಹುದಾಗಿದ್ದು, 9-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್ ಪ್ಲೇ, 4-ಸ್ಪೀಕರ್ ಸೌಂಡ್ ಸಿಸ್ಟಮ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಗಾಗಿ 6 ಏರ್‌ಬ್ಯಾಗ್ ಒಳಗೊಂಡಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications