ಗುರು 5 ಲಕ್ಷ ರೂಪಾಯಿ ಇದ್ರೆ ಸಾಕು.. ಮನೆಗೆ ತರಬಹುದು ಹೊಸ ಕಾರು.. ಮೈಲೇಜ್, ಫೀಚರ್‌ನಲ್ಲಿ ರಾಜಿಯಿಲ್ಲ!
ಭಾರತದಲ್ಲಿ ಕೆಲವು ವರ್ಷಗಳ ಹಿಂದೆ ಅತ್ಯಂತ ಕಡಿಮೆ ಬೆಲೆಗೆ ಕಾರುಗಳು ಖರೀದಿಗೆ ದೊರೆಯುತ್ತಿದ್ದವು. ಈಗ ಕಾಲ ಬದಲಾಗಿದ್ದು, ಅವು ದುಬಾರಿಯಾಗಿವೆ. ಬಹುತೇಕ ವಾಹನ ತಯಾರಕ ಕಂಪನಿಗಳು ಅಗ್ಗದ ದರದ ಕಾರುಗಳ ಉತ್ಪಾದನೆ ನಿಲ್ಲಿಸಿದ್ದು, ಪ್ರೀಮಿಯಂ ಹ್ಯಾಚ್‌ಬ್ಯಾಕ್, ಸೆಡಾನ್ ಹಾಗೂ ಎಸ್‌ಯುವಿಗಳ ಮೇಲೆ ಹೆಚ್ಚಿನ ಗಮನವನ್ನು ಕೇಂದ್ರೀಕರಿಸಿವೆ. ಆದಾಗ್ಯೂ 5 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಮಾರುತಿ ಸುಜುಕಿ ಆಲ್ಟೊ ಕೆ10, ಎಸ್-ಪ್ರೆಸ್ಸೊ ಮತ್ತು ರೆನಾಲ್ಟ್ ಕ್ವಿಡ್ ಹ್ಯಾಚ್‌ಬ್ಯಾಕ್‌ಗಳನ್ನು ಮನೆಗೆ ತರಬಹುದು. ಇಲ್ಲಿ ನೂತನ ಕಾರುಗಳ ದರ, ಮೈಲೇಜ್ ಹಾಗೂ ವೈಶಿಷ್ಟ್ಯಗಳ ಬಗ್ಗೆ ಸಂಪೂರ್ಣವಾಗಿ ವಿವರಿಸಿದ್ದೇವೆ.
ಮೊದಲಿಗೆ ಮಾರುತಿ ಸುಜುಕಿ ಆಲ್ಟೊ ಕೆ10 (Maruti Suzuki Alto K10) ಕಾರಿನ ಕುರಿತಂತೆ ಮಾತನಾಡೋಣ. ಇದು ರೂ.3.99 ಲಕ್ಷದಿಂದ ರೂ.5.96 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಸಿಗುತ್ತದೆ. 1-ಲೀಟರ್ ಪೆಟ್ರೋಲ್ ಹಾಗೂ ಸಿಎನ್‌ಜಿ ಎಂಜಿನ್‌ನ್ನು ಹೊಂದಿದ್ದು, 5-ಸ್ಪೀಡ್ ಮ್ಯಾನುವಲ್/ 5-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಪಡೆದಿದೆ. 24.39 ರಿಂದ 33.85 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ.

ಈ ಆಲ್ಟೊ ಕೆ10 ಹ್ಯಾಚ್‌ಬ್ಯಾಕ್ ಮೆಟಾಲಿಕ್ ಸಿಜ್ಲಿಂಗ್ ರೆಡ್, ಮೆಟಾಲಿಕ್ ಸಿಲ್ಕಿ ಸಿಲ್ವರ್, ಮೆಟಾಲಿಕ್ ಗ್ರಾನೈಟ್ ಗ್ರೇ ಸೇರಿದಂತೆ ಹಲವು ಬಣ್ಣಗಳೊಂದಿಗೆ ಸಿಗುತ್ತದೆ. ಇದರಲ್ಲಿ 4 ರಿಂದ 5 ಜನರು ಸುಲಭವಾಗಿ ಓಡಾಟ ನಡೆಸಬಹುದು. 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಸೆಮಿ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಗಾಗಿ ಡುಯಲ್ ಫ್ರಂಟ್ ಏರ್‌ಬ್ಯಾಗ್‌ಗಳನ್ನು ಒಳಗೊಂಡಿದೆ.
ಮಾರುತಿ ಸುಜುಕಿ ಎಸ್-ಪ್ರೆಸ್ಸೊ (Maruti S-Presso) ಹ್ಯಾಚ್‌ಬ್ಯಾಕ್ ಸಹ ಕಡಿಮೆ ಬೆಲೆಯಲ್ಲಿ ಖರೀದಿಗೆ ಲಭ್ಯವಿದೆ. ರೂ.4.26 ಲಕ್ಷದಿಂದ ರೂ.6.12 ಲಕ್ಷ (ಎಕ್ಸ್ ಶೋರೂಂ) ದರವನ್ನು ಪಡೆದಿದೆ. ಪೆಟ್ರೋಲ್ ಮತ್ತು ಸಿಎನ್‌ಜಿ ಎಂಜಿನ್‌ನ್ನು ಒಳಗೊಂಡಿದ್ದು, 24.12 ರಿಂದ 32.73 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಈ ಕಾರಿನಲ್ಲಿ 5 ಮಂದಿ ಆರಾಮದಾಯಕವಾಗಿ ಪ್ರಯಾಣಿಸಬಹುದು.

ನೂತನ ಎಸ್-ಪ್ರೆಸ್ಸೊ ಸಾಲಿಡ್ ಸಿಜ್ಲೆ ಆರೆಂಜ್, ಸಾಲಿಡ್ ಫೈರ್ ರೆಡ್, ಮೆಟಾಲಿಕ್ ಗ್ರಾನೈಟ್ ಗ್ರೇ ಒಳಗೊಂಡಂತೆ ವಿವಿಧ ಬಣ್ಣಗಳೊಂದಿಗೆ ದೊರೆಯುತ್ತದೆ. 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಅರೆ-ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಯ ದೃಷ್ಟಿಯಿಂದ ಡುಯಲ್ ಫ್ರಂಟ್ ಏರ್‌ಬ್ಯಾಗ್‌ಗಳು, ESP (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ) ಅನ್ನು ಪಡೆದಿದೆ.
ರೆನಾಲ್ಟ್ ಕ್ವಿಡ್ (Renault KWID) ಹ್ಯಾಚ್‌ಬ್ಯಾಕ್ ಬಗ್ಗೆ ಹೇಳುವುದಾದರೆ ರೂ.4.70 ಲಕ್ಷದಿಂದ ರೂ.6.45 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಪಡೆದಿದೆ. 1-ಲೀಟರ್ ಪೆಟ್ರೋಲ್ ಎಂಜಿನ್ ಒಳಗೊಂಡಿದ್ದು, 5-ಸ್ಪೀಡ್ ಮ್ಯಾನುವಲ್/ ಆಟೋಮೆಟಿಕ್ ಗೇರ್‌ಬಾಕ್ಸ್ ಆಯ್ಕೆಯನ್ನು ಹೊಂದಿದೆ. . 21.46 - 22.3 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ಇದರಲ್ಲಿಯೂ 5 ಜನರು ಓಡಾಡಬಹುದು.

ಈ ಕ್ವಿಡ್ ಕಾರು ಐಸ್ ಕೂಲ್ ವೈಟ್, ಔಟ್‌ಬ್ಯಾಕ್ ಬ್ರೊನ್, ಮೂನ್‌ಲೈಟ್ ಸಿಲ್ವರ್ ಸೇರಿದಂತೆ ವಿವಿಧ ಬಣ್ಣಗಳೊಂದಿಗೆ ಲಭ್ಯವಿದೆ. 8-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್ ಪ್ಲೇ, ಕೀ ಲೆಸ್ ಎಂಟ್ರಿ ಒಳಗೊಂಡಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಗಾಗಿ ಡುಯಲ್ ಫ್ರಂಟ್ ಏರ್‌ಬ್ಯಾಗ್‌ಗಳನ್ನು ತನ್ನದಾಗಿಸಿಕೊಂಡಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications