Maruti Suzuki Swift: ಹೊಸ ಮಾರುತಿ ಸ್ವಿಫ್ಟ್ ಖರೀದಿಸಬೇಕೇ.. ಆನ್-ರೋಡ್ ಬೆಲೆ ಎಷ್ಟು, EMI ಏನು?
ದೇಶದ ಸಾಮಾನ್ಯ ಜನರಿಗಾಗಿ ಮಾರುತಿ ಸುಜುಕಿಯು ಗುರುವಾರ 'ಸ್ವಿಫ್ಟ್' ಹ್ಯಾಚ್‌ಬ್ಯಾಕ್‌ನ್ನು ಬಿಡುಗಡೆಗೊಳಿಸಿದೆ. ಆಕರ್ಷಕ ವಿನ್ಯಾಸ ಹಾಗೂ ವೈಶಿಷ್ಟ್ಯವನ್ನು ಪಡೆದಿರುವ ಈ ಕಾರನ್ನು ಖರೀದಿಸಲು ನೀವು ಪ್ಲ್ಯಾನ್ ಮಾಡಿದ್ದೀರಾ.. ಇಲ್ಲಿ ನೂತನ ಸ್ವಿಫ್ಟ್ ಹ್ಯಾಚ್‌ಬ್ಯಾಕ್‌ನ ಆನ್-ರೋಡ್ ಬೆಲೆ ಹಾಗೂ ಇಎಂಐ ಆಯ್ಕೆಯ ಬಗ್ಗೆ ವಿವರಿಸಿದ್ದೇವೆ.
ಹೊಚ್ಚ ಹೊಸ ಮಾರುತಿ ಸುಜುಕಿ ಸ್ವಿಫ್ಟ್ (Maruti Suzuki Swift) ಕಾರನ್ನು ಪೆಟ್ರೋಲ್ ಎಂಜಿನ್ ಆಯ್ಕೆಯಲ್ಲಿ ಮಾತ್ರ ಪರಿಚಯಿಸಲಾಗಿದೆ. ಬೆಂಗಳೂರಿನಲ್ಲಿ ಬೇಸ್ ವೇರಿಯೆಂಟ್ (ಆರಂಭಿಕ ರೂಪಾಂತರ) 'ಎಲ್ಎಕ್ಸ್ಐ' ರೂ.7.86 ಲಕ್ಷ, 'ವಿಎಕ್ಸ್ಐ' ರೂ.8.82 ಲಕ್ಷ, 'ಝಡ್ಎಕ್ಸ್ಐ' ರೂ.10.02 ಲಕ್ಷ ಮತ್ತು ಟಾಪ್ ಎಂಡ್ ಮಾಡೆಲ್ (ಗರಿಷ್ಠ ಶ್ರೇಣಿ) ಆಗಿರುವ 'ಝಡ್ಎಕ್ಸ್ಐ ಪ್ಲಸ್' ಎಎಂಟಿ ಡಿಟಿ ರೂ.11.63 ಲಕ್ಷ ಆನ್-ರೋಡ್ ಬೆಲೆಯನ್ನು ಹೊಂದಿದೆ.

ನೀವು ಈ ಕಾರನ್ನು ರೂ.2 ಲಕ್ಷ ಡೌನ್ ಪೇಮೆಂಟ್ ಪಾವತಿಸಿ, ಖರೀದಿಸಿದರೆ ಶೇಕಡ 9.8% ಬಡ್ಡಿ ದರದಲ್ಲಿ 5 ವರ್ಷದ ಅವಧಿಗೆ ತಿಂಗಳಿಗೆ ರೂ.12,404 ಇಎಂಐ (EMI) ಕಟ್ಟಬೇಕು. ಈ ಕಾರು ಆಕರ್ಷಕವಾದ ವಿನ್ಯಾಸವನ್ನು ಹೊಂದಿದ್ದು, ಎಲ್ಇಡಿ ಪ್ರೊಜೆಕ್ಟರ್ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು ಮತ್ತು ಅಲಾಯ್ ವೀಲ್‌ಗಳನ್ನು ಹೊಂದಿದೆ. ಜೊತೆಗೆ ಸಿಜ್ಲಿಂಗ್ ರೆಡ್, ಪರ್ಲ್ ಆರ್ಕ್ಟಿಕ್ ವೈಟ್ ಸೇರಿದಂತೆ ವಿವಿಧ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ.
ನೂತನ ಸ್ವಿಫ್ಟ್' ಹ್ಯಾಚ್‌ಬ್ಯಾಕ್ 1.2-ಲೀಟರ್ 3-ಸಿಲಿಂಡರ್ ಝಡ್ ಸೀರಿಯಸ್ ಪೆಟ್ರೋಲ್ ಎಂಜಿನ್ ಹೊಂದಿದ್ದು, 80 ಪಿಎಸ್ ಗರಿಷ್ಠ ಪವರ್ (ಶಕ್ತಿ) ಮತ್ತು 112 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಪಡೆದಿದೆ. ರೂಪಾಂತರಗಳಿಗೆ ಅನುಗುಣವಾಗಿ 5-ಸ್ಪೀಡ್ ಮ್ಯಾನುವಲ್ ಅಥವಾ ಆಟೋಮೆಟಿಕ್ ಗೇರ್ ಬಾಕ್ಸ್‌ನೊಂದಿಗೆ ಲಭ್ಯವಿದ್ದು, 24.8 - 25.72 ಕೆಎಂಪಿಎಲ್ ಮೈಲೇಜ್ ಕೊಡುತ್ತದೆ.

ಈ ಕಾರಿನಲ್ಲಿ 5 ಮಂದಿ ಆರಾಮದಾಯಕವಾಗಿ ಕುಳಿತುಕೊಂಡು ಪ್ರಯಾಣಿಸಬಹುದು. 9-ಇಂಚಿನ ಇನ್ಫೋಟೈನ್‌ಮೆಂಟ್ ಸ್ಕ್ರೀನ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್ ಪ್ಲೇ, ಯುಎಸ್‌ಬಿ ಟೈಪ್-ಎ & ಟೈಪ್-ಸಿ ಪೋರ್ಟ್, ಸೆಮಿ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ವೈರ್‌ಲೆಸ್ ಚಾರ್ಜರ್, ಅರ್ಕಾಮಿಸ್ ಟ್ಯೂನ್ಡ್ ಸೌಂಡ್ ಸಿಸ್ಟಮ್, ಆಟೋ ಕ್ಲೇಮೇಟ್ ಕಂಟ್ರೋಲ್, ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ.
ಹೊಸ ಮಾರುತಿ ಸ್ವಿಫ್ಟ್ ಸುರಕ್ಷತೆಗೂ ಹೆಸರುವಾಸಿಯಾಗಿದೆ. ಎಲ್ಲ ಮಾದರಿಗಳು 6 ಏರ್‌ಬ್ಯಾಗ್, ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), EBD (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), 3-ಪಾಯಿಂಟ್ ಸೀಟ್‌ಬೆಲ್ಟ್‌ಗಳು, ಸೀಟ್ ಬೆಲ್ಟ್ ರಿಮೈಂಡರ್ ಒಳಗೊಂಡಂತೆ ಹಲವು ರಕ್ಷಣಾತ್ಮಕ ವೈಶಿಷ್ಟ್ಯಗಳನ್ನು ಹೊಂದಿದೆ. ಮೇ.1ರಿಂದಲೇ ಈ ಕಾರಿನ ಬುಕ್ಕಿಂಗ್ ಶುರುವಾಗಿದ್ದು, ಮುಂದಿನ ತಿಂಗಳಿನಿಂದ ವಿತರಣೆಗಳು ಆರಂಭವಾಗಲಿದೆ ಎಂದು ವರದಿಯಾಗಿದೆ.
ಮಾರುತಿ ಸುಜುಕಿ ಸ್ವಿಫ್ಟ್ (Maruti Suzuki Swift) ಹ್ಯಾಚ್‌ಬ್ಯಾಕ್‌ಗೆ ಹುಂಡೈ ಎಕ್ಸ್‌ಟರ್ ಹಾಗೂ ಟಾಟಾ ಪಂಚ್ ಕಾರುಗಳು ಪ್ರಬಲ ಪ್ರತಿಸ್ಪರ್ಧಿಯಾಗಿವೆ. ನಿಮ್ಮ ಗಮನಕ್ಕೆ.. ಈ ಕಾರಿನ ಆನ್-ರೋಡ್ ಬೆಲೆಗಳು ಮತ್ತು ಸಾಲದ ಆಯ್ಕೆಗಳು ರಾಜ್ಯದಿಂದ ರಾಜ್ಯಕ್ಕೆ ಬೇರೆಯಿರಲಿದ್ದು, ಹೆಚ್ಚಿನ ಮಾಹಿತಿಗೆ ಸಮೀಪದ ಶೋರೂಂಗೆ ಭೇಟಿ ನೀಡಿರಿ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications