ಬಿಡುಗಡೆಯಾಗಲಿದೆ ಹೊಸ ಎಲೆಕ್ಟ್ರಿಕ್ ಕಾರು... ಟೆಸ್ಟಿಂಗ್ ವೇಳೆ ಕ್ಯಾಮರಾ ಕಣ್ಣಿಗೆ ಬಿತ್ತು!

ಜನಪ್ರಿಯ ಕಾರು ತಯಾರಕ ಕಂಪನಿಯಾದ ಎಂಜಿ ಮೋಟಾರ್ (MG Motor) ಇಂಧನ ಚಾಲಿತ ವಾಹನಗಳ ಜೊತೆಗೆ ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆಯಲ್ಲೂ ಗುರುತಿಸಿಕೊಂಡಿದೆ. ಕಂಪನಿಯ ಕಾರುಗಳು ಆಕರ್ಷಕ ವಿನ್ಯಾಸ ಮತ್ತು ಪ್ರೀಮಿಯಂ ವೈಶಿಷ್ಟ್ಯಗಳನ್ನು ಹೊಂದುವ ಮೂಲಕ ಪ್ರತ್ಯೇಕ ಗ್ರಾಹಕ ವರ್ಗವನ್ನು ಪಡೆದುಕೊಂಡಿವೆ. ಪ್ರಸ್ತುತ ಎಂಜಿ ಮೋಟಾರ್ ಭಾರತದಲ್ಲಿ ತನ್ನ ಕಾರುಗಳಿಗೆ ಬೇಡಿಕೆ ಹೆಚ್ಚಿಸಿಕೊಳ್ಳಲು ಕೈಗೆಟುಕುವ ಬೆಲೆಯಲ್ಲಿ ಹೊಸ ಕಾರನ್ನು ಪರಿಚಯಿಸಲು ಸಿದ್ಧತೆಗಳನ್ನು ನಡೆಸುತ್ತಿದೆ. ಕೆಲವೇ ತಿಂಗಳಲ್ಲಿ ಈ ಹೊಸ ಎಲೆಕ್ಟ್ರಿಕ್ ಕಾರನ್ನು ಬಿಡುಗಡೆಗೊಳಿಸಲಿದ್ದು, ಈ ಕಾರಿನ ರಸ್ತೆ ಪರೀಕ್ಷೆಗಳು ಜೋರಾಗಿ ನಡೆಯುತ್ತಿವೆ.

ಪ್ರಸ್ತುತ ದೇಶೀಯ ಮಾರುಕಟ್ಟೆಯಲ್ಲಿ ಎಂಜಿ ಕಂಪನಿಯು ಝಡ್ಎಸ್ ಇವಿ ಮತ್ತು ಕಾಮೆಟ್ ಇವಿಗಳನ್ನು ಮಾರಾಟ ಮಾಡುತ್ತಿದೆ. ಸೆಪ್ಟೆಂಬರ್ ಎರಡನೇ ವಾರದಲ್ಲಿ ಎಂಜಿ ಕಂಪನಿಯು ತನ್ನ ಹೊಸ ಕ್ಲೌಡ್ ಇವಿ (Cloud EV)ಯನ್ನು ಪರಿಚಯಿಸಲಿದೆ. ಈಗಾಗಲೇ ಅನೇಕ ಬಾರಿ ಪ್ರಾಯೋಗಿಕ ಸಂಚಾರವನ್ನು ನಡೆಸುವಾಗ ಈ ಕಾರು ಕಂಡುಬಂದಿದೆ.

new-2024-mg-cloud-ev-spotted-while-testing-on-delhi-jaipur-highway

ಇದೀಗ ಮತ್ತೊಮ್ಮೆ ಕ್ಯಾಮರಾ ಕಣ್ಣಿಗೆ ಬಿದ್ದಿದ್ದು, ಹೊಸ ಕ್ಲೌಡ್ ಇವಿ ದೆಹಲಿ - ಜೈಪುರ ಹೆದ್ದಾರಿಯಲ್ಲಿ ಟೆಸ್ಟಿಂಗ್ ಮಾಡುವಾಗ ಕಾಣಿಸಿಕೊಂಡಿದೆ. ಈ ಎಂಜಿ ಕ್ಲೌಡ್ ಪ್ರೀಮಿಯಂ ಎಲೆಕ್ಟ್ರಿಕ್ ಕಾರಾಗಿದ್ದು, ರೂ.25 ಲಕ್ಷದಿಂದ ರೂ.28 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಬಿಡುಗಡೆಯಾಗಬಹುದು ಎಂದು ಅಂದಾಜಿಸಲಾಗಿದೆ. ಈ ಹೊಸ ಎಲೆಕ್ಟ್ರಿಕ್ ಕಾರಿಗೆ ಬಿವೈಡಿ ಇ6 (BYD e6) ಪ್ರಬಲ ಎದುರಾಳಿಯಾಗಲಿದೆ.

ಟೆಸ್ಟಿಂಗ್ ವೇಳೆ ಕಾಣಿಸಿಕೊಂಡ ಎಂಜಿ ಕ್ಲೌಡ್ ಇವಿ ಕಾರನ್ನು ನೋಡಿದ್ರೆ, ಅತ್ಯಾಧುನಿಕ ವಿನ್ಯಾಸ, ಎಲ್ಇಡಿ ಲೈಟ್‌ಗಳು, ಫ್ಲಶ್ ಡೋರ್ ಹ್ಯಾಂಡಲ್‌ಗಳನ್ನು ಪಡೆದಿರುವುದನ್ನು ತಿಳಿಯಬಹುದು. ಒಟ್ಟಾರೆ ಕಾರು ಮಿಡ್‌ಸೈಜ್ ಪ್ರೀಮಿಯಂ ಎಸ್‌ಯುವಿಯಂತೆ ಕಾಣುತ್ತದೆ. ಇದರ ಸಂಪೂರ್ಣವಾದ ವಿನ್ಯಾಸ ಕುರಿತಂತೆ ಕಂಪನಿ ಅನಾವರಣಗೊಳಿಸಿದ ಬಳಿಕ ಅಧಿಕೃತ ವಿವರಗಳು ಹೊರಬರಲಿವೆ.

new-2024-mg-cloud-ev-spotted-while-testing-on-delhi-jaipur-highway

ವೈಶೀಷ್ಟ್ಯಗಳ ನಿರೀಕ್ಷೆ: ಹೊಸ ಎಂಜಿ ಕ್ಲೌಡ್ ಇವಿ ADAS (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ಸನ್‌ರೂಫ್, ಕ್ಲೇಮೇಟ್ ಕಂಟ್ರೋಲ್, ಕನೆಕ್ಟ್ದ್ ಕಾರ್ ಟೆಕ್, ಡುಯಲ್ ಡಿಜಿಟಲ್ ಸ್ಕ್ರೀನ್, 360 ಡಿಗ್ರಿ ಕ್ಯಾಮೆರಾ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿರುವ ನಿರೀಕ್ಷೆಯಿದೆ. ಜೊತೆಗೆ 50.6 ಕೆಡಬ್ಲ್ಯೂಹೆಚ್ (kWh) ಸಾಮರ್ಥ್ಯದ ಬ್ಯಾಟರಿ ಪ್ಯಾಕ್, 460 ಕಿ.ಮೀ ರೇಂಜ್ ನೀಡುವ ನಿರೀಕ್ಷೆಯಿದೆ.

ಪ್ರಸ್ತುತ ಮಾರಟದಲ್ಲಿವೆ ಎರಡು ಇವಿಗಳು: ಎಂಜಿ ಮೋಟಾರ್ ಕಾಮೆಟ್ ಇವಿಯನ್ನು ಭಾರತದಲ್ಲಿ ಮಾರಾಟ ಮಾಡುತ್ತಿದೆ. ಇದು ಪ್ರಸ್ತುತ ಭಾರತದ ಅಗ್ಗದ ಎಲೆಕ್ಟ್ರಿಕ್ ಕಾರಾಗಿದ್ದು, ರೂ.6.99 ಲಕ್ಷದಿಂದ ರೂ.9.53 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಖರೀದಿಗೆ ಲಭ್ಯವಿದೆ. ಈ ಕಾರು ಪೂರ್ಣ ಚಾರ್ಜ್‌ನಲ್ಲಿ 230 ಕಿ.ಮೀ ರೇಂಜ್ ನೀಡುತ್ತದೆ. ರೇರ್ ವೀಲ್ ಡ್ರೈವ್ ಎಲೆಕ್ಟ್ರಿಕ್ ಮೋಟಾರ್ ಹೊಂದಿದ್ದು, 42 ಪಿಎಸ್ ಪವರ್ ಮತ್ತು 110 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುತ್ತದೆ.

new-2024-mg-cloud-ev-spotted-while-testing-on-delhi-jaipur-highway

ಈ ಕಾಮೆಟ್ ಇವಿಯು ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ ಪ್ಲೇ, ಕನೆಕ್ಟ್ದ್ ಕಾರ್ ಟೆಕ್, ಇನ್ಫೋಟೈನ್‌ಮೆಂಟ್ ಸಿಸ್ಟಮ್ & ಇನ್‌ಸ್ಟ್ರುಮೆಂಟ್ ಕ್ಲಸ್ಟರ್‌ಗಾಗಿ 10.25-ಇಂಚಿನ ಡುಯಲ್ ಸ್ಕ್ರೀನ್, ಕೀಲೆಸ್ ಎಂಟ್ರಿ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಯ ದೃಷ್ಟಿಯಿಂದ ಡುಯಲ್ ಫ್ರಂಟ್ ಏರ್‌ಬ್ಯಾಗ್‌, ರಿವರ್ಸ್ ಪಾರ್ಕಿಂಗ್ ಕ್ಯಾಮೆರಾ, ರೇರ್ ಪಾರ್ಕಿಂಗ್ ಸೆನ್ಸರ್ಸ್ ಅನ್ನು ಹೊಂದಿದೆ.

ಎಂಜಿ ಝಡ್ಎಸ್ ಇವಿ ಕಂಪನಿಯ ಮತ್ತೊಂದು ಎಲೆಕ್ಟ್ರಿಕ್ ಕಾರಾಗಿದ್ದು, ರೂ.18.98 ಲಕ್ಷದಿಂದ ರೂ.25.44 ಲಕ್ಷ ಬೆಲೆಯನ್ನು (ಎಕ್ಸ್ ಶೋರೂಂ) ಹೊಂದಿದೆ. ಈ ಕಾರು ಪೂರ್ಣ ಚಾರ್ಜ್‌ನಲ್ಲಿ 461 ಕಿ.ಮೀ ರೇಂಜ್ ಕೊಡುತ್ತದೆ. 7-ಇಂಚಿನ ಡಿಜಿಟಲ್ ಡ್ರೈವರ್ ಡಿಸ್ಪ್ಲೇ, 10.1-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ.

More from DriveSpark

Article Published On: Friday, July 5, 2024, 8:30 [IST]
English summary
New 2024 mg cloud ev spotted while testing on delhi jaipur highway
Read more on mg motor india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+