ಟಾಟಾದ ತಾಕತ್ತು: ಕರ್ವ್ ಬಿಡುಗಡೆಯಾಗಿ 10 ದಿನವಷ್ಟೇ.. ವಿತರಣೆಗೆ 8 ವಾರಗಳು ಬೇಕು.. ಬೆಲೆ ಎಷ್ಟು ಉಂಟು?

ದೇಶದ ವಿಶ್ವಾಸಾರ್ಹ ವಾಹನ ತಯಾರಕ ಕಂಪನಿಯಾಗಿ ಟಾಟಾ ಮೋಟಾರ್ಸ್ (Tata Motors) ಗುರುತಿಸಿಕೊಂಡಿದೆ. ಸೆಪ್ಟೆಂಬರ್ 2ರಂದು ಇಂಧನ ಚಾಲಿತ (ಪೆಟ್ರೋಲ್/ಡೀಸೆಲ್) ಹೊಚ್ಚ ಹೊಸ ಕರ್ವ್ (Curvv) ಕಾರನ್ನು ಅದ್ದೂರಿಯಾಗಿ ಬಿಡುಗಡೆಗೊಳಿಸಿತ್ತು. ಇದೊಂದು ಕೂಪೆ ಎಸ್‌ಯುವಿಯಾಗಿದ್ದು, ಇಂದಿನಿಂದ (ಗುರುವಾರ) ದೇಶಾದ್ಯಂತ ಈ ಕಾರಿನ ವಿತರಣೆಗಳು ಕೂಡ ಶುರುವಾಗಿದೆ. ಈ ಬೆನ್ನಲೇ ಈ ಕಾರಿನ ಕಾಯುವಿಕೆ ಅವಧಿ (Waiting Period) ಕುರಿತಂತೆಯೂ ವಿವರಗಳು ಬಹಿರಂಗಗೊಂಡಿದ್ದು, ಮಾರಾಟಕ್ಕೆ ಬಂದ 10 ದಿನದಲ್ಲಿ ಭಾರಿ ಬೇಡಿಕೆ ಹೊಂದಿರುವ ಕಾರಾಗಿ ಹೊರಹೊಮ್ಮಿದೆ.

ನೂತನ ಟಾಟಾ ಕರ್ವ್ ಕೂಪೆ ಎಸ್‌ಯುವಿ (Tata Curvv Coupe Suv) ಕಾಯುವಿಕೆ ಅವಧಿ ರೂಪಾಂತರಗಳನ್ನು ಅವಲಂಭಿಸಿ 4 ರಿಂದ 8 ವಾರಗಳು ಇದೆ. ಮುಂಬರುವ ದಿನಗಳಲ್ಲಿ ಮತ್ತಷ್ಟು ಬೇಡಿಕೆ ಹೆಚ್ಚಾಗುವ ನಿರೀಕ್ಷೆಯಿದೆ. ಹೊಸ ಕರ್ವ್ ಕಾರು ರೂ.9.99 ರಿಂದ 17.69 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಖರೀದಿಗೆ ದೊರೆಯುತ್ತದೆ. ಈ ದರಗಳು ಅಕ್ಟೋಬರ್ 31 ರವರೆಗೆ ಮಾತ್ರ ಅನ್ವಯಿಸಲಿವೆ.

New 2024 Tata Curvv Car Waiting Period Revealed Delivery Began

ಈ ಟಾಟಾ ಕರ್ವ್ ಕಾರು ಸ್ಮಾರ್ಟ್, ಪ್ಯೂರ್ ಪ್ಲಸ್, ಕ್ರಿಯೇಟಿವ್, ಕ್ರಿಯೇಟಿವ್ ಪ್ಲಸ್ ಎಸ್ ಹಾಗೂ ಅಕಾಂಪ್ಲಿಶ್ಡ್ ಎಸ್ ಸೇರಿದಂತೆ ವಿವಿಧ ರೂಪಾಂತರಗಳ (ವೇರಿಯೆಂಟ್) ಆಯ್ಕೆಯನ್ನು ಹೊಂದಿದೆ. ಆಕರ್ಷಕವಾದ ವಿನ್ಯಾಸವನ್ನು ಒಳಗೊಂಡಿದ್ದು, ಹೊರಭಾಗದಲ್ಲಿ ಸ್ಪ್ಲಿಟ್ ಹೆಡ್‌ಲ್ಯಾಂಪ್‌ಗಳು, ಎಲ್‌ಇಡಿ ಡಿಆರ್‌ಎಲ್‌ಗಳು, ಎಲ್‌ಇಡಿ ಲೈಟ್ ಬಾರ್‌ಗಳು ಮತ್ತು ಅಲಾಯ್ ವೀಲ್‌ಗಳನ್ನು ಹೊಂದಿದೆ.

ಹೊಚ್ಚ ಹೊಸ ಟಾಟಾ ಕರ್ವ್ ಎಸ್‌ಯುವಿ 1.2 ಲೀಟರ್ ಟರ್ಬೊ ಪೆಟ್ರೋಲ್, 1.2-ಲೀಟರ್ ಜಿಡಿಐ ಟರ್ಬೊ ಪೆಟ್ರೋಲ್ ಹಾಗೂ 1.5 ಲೀಟರ್ ಡೀಸೆಲ್ ಎಂಜಿನ್‌ನ್ನು ಪಡೆದಿದೆ. 6-ಸ್ಪೀಡ್ ಮ್ಯಾನುವಲ್/ 7-ಸ್ಪೀಡ್ ಡಿಸಿಟಿ (ಡುಯಲ್ ಕ್ಲಚ್ ಟ್ರಾಸ್ಮಿಷನ್) ಗೇರ್‌ಬಾಕ್ಸ್‌ ಆಯ್ಕೆಯನ್ನು ಹೊಂದಿದೆ. ಈ ಕಾರಿನಲ್ಲಿ 5 ಮಂದಿ ಆರಾಮದಾಯಕವಾಗಿ ಪ್ರಯಾಣಿಸಬಹುದು. ಪ್ರವಾಸದ ವೇಳೆಯಲ್ಲಿ ಹೆಚ್ಚಿನ ಲಗೇಜ್ ಸಾಗಿಸಲು ಸಾಧ್ಯವಾಗುವಂತೆ 500 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಒಳಗೊಂಡಿದೆ.

New 2024 Tata Curvv Car Waiting Period Revealed Delivery Began

ಈ ಟಾಟಾ ಕರ್ವ್ ಕಾರು 12.3-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 4-ಸ್ಪೋಕ್ ಮಲ್ಟಿ ಫಂಕ್ಷನ್ ಸ್ಟೀರಿಂಗ್ ವೀಲ್, 9-ಸ್ಪೀಕರ್ ಜೆಬಿಎಲ್ ಸೌಂಡ್ ಸಿಸ್ಟಮ್, ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಪನೊರೊಮಿಕ್ ಸನ್‌ರೂಫ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಯ ದೃಷ್ಟಿಯಿಂದ 6-ಏರ್‌ಬ್ಯಾಗ್‌ಗಳು, ಲೆವೆಲ್-2 ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಹಾಗೂ 360-ಡಿಗ್ರಿ ಕ್ಯಾಮೆರಾವನ್ನು ಪಡೆದಿದೆ.

ಟಾಟಾ ಕರ್ವ್ ಇವಿ (Tata Curvv EV) ಕೂಡ ಖರೀದಿಗೆ ಲಭ್ಯವಿದ್ದು, ಕಳೆದ ತಿಂಗಳು (ಆಗಸ್ಟ್) ಬಿಡುಗಡೆಯಾಗಿತ್ತು. ಇದು ಎಲೆಕ್ಟ್ರಿಕ್ ಕೂಪೆ ಎಸ್‌ಯುವಿಯಾಗಿದ್ದು, ಕಾಯುವಿಕೆ ಅವಧಿ 2 ತಿಂಗಳಿನಿಂದ 1 ತಿಂಗಳಿಗೆ ಇಳಿಕೆಯಾಗಿದೆ. ಈ ಹಿನ್ನೆಲೆ ಕರ್ವ್ ಇವಿಯನ್ನು ಆದಷ್ಟು ಬೇಗ ನಿಮ್ಮ ಮನೆಗೆ ತರಬಹುದು.

New 2024 Tata Curvv Car Waiting Period Revealed Delivery Began

ನೂತನ ಟಾಟಾ ಕರ್ವ್ ಇವಿ ರೂ.17.49 ಲಕ್ಷದಿಂದ ರೂ.21.99 ಲಕ್ಷ (ಎಕ್ಸ್ ಶೋರೂಂ) ಬೆಲೆಯನ್ನು ಪಡೆದಿದೆ. 45 ಕೆಡಬ್ಲ್ಯೂಹೆಚ್ ಹಾಗೂ 55 ಕೆಡಬ್ಲ್ಯೂಹೆಚ್ ಬ್ಯಾಟರಿಯನ್ನು ಪಡೆದಿದ್ದು, ಭರ್ತಿ ಚಾರ್ಜ್‌ನಲ್ಲಿ 430 ರಿಂದ 502 ಕಿಲೋಮೀಟರ್‌ವರೆಗೆ ರೇಂಜ್ (ಮೈಲೇಜ್) ಕೊಡುತ್ತದೆ. 12.3-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Thursday, September 12, 2024, 20:29 [IST]
English summary
New 2024 tata curvv car waiting period revealed delivery began
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+