Tata: ಕಾಯುವಿಕೆ ಮುಗಿಯಿತು.. ಸೋಮವಾರ ಹೊಸ ಟಾಟಾ ಕಾರು ಬಿಡುಗಡೆ, ಅತಿಕಡಿಮೆ ಬೆಲೆಗೆ ಬರುತ್ತಾ?

ದೇಶದ ವಿಶ್ವಾಸಾರ್ಹ ವಾಹನ ತಯಾರಕ ಕಂಪನಿಯಾಗಿ (Tata Motors) ಗುರುತಿಸಿಕೊಂಡಿದೆ. ಇತ್ತೀಚೆಗೆ ಹೊಚ್ಚ ಹೊಸ ಕರ್ವ್ ಇವಿಯನ್ನು (Curvv EV) ಬಿಡುಗಡೆಗೊಳಿಸಿತ್ತು. ಇದೊಂದು ಎಲೆಕ್ಟ್ರಿಕ್ ಕೂಪೆ ಎಸ್‌ಯುವಿಯಾಗಿದೆ. ರೂ.17.49 ಲಕ್ಷ ಆರಂಭಿಕ ದರವನ್ನು ಪಡೆದಿದೆ. ಸೋಮವಾರ (ಸೆಪ್ಟೆಂಬರ್ 2) ಇಂಧನ ಚಾಲಿತ (ಪೆಟ್ರೋಲ್/ಡೀಸೆಲ್) ಆಯ್ಕೆಯಲ್ಲಿಯೂ 'ಕರ್ವ್' ಕಾರನ್ನು ಪರಿಚಯಿಸಲಿದೆ. ಈಗಾಗಲೇ ನೂತನ ಎಸ್‌ಯುವಿ ಶೋರೂಂಗಳನ್ನು ತಲುಪಲು ಶುರುವಾಗಿದ್ದು, ಈ ಕಾರಿನ ಕುರಿತಂತೆ ಬಹುತೇಕ ಎಲ್ಲ ವಿವರಗಳು ಬಹಿರಂಗಗೊಂಡಿವೆ. ಬನ್ನಿ.. ಹೊಸ ಕರ್ವ್ ಎಸ್‌ಯುವಿ ವಿಶೇಷತೆ ಬಗ್ಗೆ ಸಂಪೂರ್ಣವಾದ ಮಾಹಿತಿ ತಿಳಿಯೋಣ.

ವಿನ್ಯಾಸ (Design): ಹೊಸ ಟಾಟಾ ಕರ್ವ್ (Tata Curvv) ಕೂಪೆ ಎಸ್‌ಯುವಿ ಹೊರಭಾಗದಲ್ಲಿ ಅತ್ಯಾಧುನಿಕ ವಿನ್ಯಾಸವನ್ನು ಹೊಂದಿದೆ. ಸ್ಪ್ಲಿಟ್ ಹೆಡ್‌ಲ್ಯಾಂಪ್‌ಗಳು, ಎಲ್‌ಇಡಿ ಡಿಆರ್‌ಎಲ್‌ಗಳು, ಎಲ್‌ಇಡಿ ಲೈಟ್ ಬಾರ್‌ಗಳು, ಡುಯಲ್ ಟೋನ್ ಅಲಾಯ್ ವೀಲ್‌ಗಳು ಮತ್ತು ಎಲ್‌ಇಡಿ ಟೈಲ್‌ಲೈಟ್‌ಗಳನ್ನು ಪಡೆದಿದೆ. ರೂಫ್‌ಲೈನ್‌ ಇಳಿಜಾರಾಗಿದ್ದು, ಒಳಭಾಗದ ಕ್ಯಾಬಿನ್ ಕೂಡ ಹೆಚ್ಚು ಉತ್ತಮವಾಗಿದೆ.

New 2024 Tata Curvv Coupe Suv Launch On Monday Expected Price Details

ರೂಪಾಂತರಗಳು & ಆಸನ ಆಯ್ಕೆ (Variants & Seat Option): ನೂತನ ಟಾಟಾ ಕರ್ವ್ ಎಸ್‌ಯುವಿ ಸ್ಮಾರ್ಟ್, ಪ್ಯೂರ್ ಪ್ಲಸ್, ಕ್ರಿಯೇಟಿವ್, ಕ್ರಿಯೇಟಿವ್ ಪ್ಲಸ್ ಎಸ್, ಅಕಾಂಪ್ಲಿಶ್ಡ್ ಎಸ್ ಹಾಗೂ ಅಕಾಂಪ್ಲಿಶ್ಡ್ ಪ್ಲಸ್ ಎ ಎಂಬ 6 ರೂಪಾಂತರಗಳನ್ನು (ವೇರಿಯೆಂಟ್) ಹೊಂದಿದೆ. 5 ಆಕರ್ಷಕ ಬಣ್ಣಗಳೊಂದಿಗೂ ದೊರೆಯುತ್ತದೆ. ಈ ಕಾರಿನಲ್ಲಿ 5 ಮಂದಿ ಓಡಾಟವನ್ನು ನಡೆಸಬಹುದು.

ಕಾರ್ಯಕ್ಷಮತೆ (Performance): ಈ ಕಾರು 3 ಪವರ್‌ಟ್ರೇನ್‌ನ್ನು ಹೊಂದಿದೆ. 1.2-ಲೀಟರ್ 3-ಸಿಲಿಂಡರ್ ಟರ್ಬೊ ಪೆಟ್ರೋಲ್, 1.5-ಲೀಟರ್ ಡೀಸೆಲ್ ಹಾಗೂ 1.2-ಲೀಟರ್ ಡೈರೆಕ್ಟ್ ಇಂಜೆಕ್ಷನ್ ಟರ್ಬೊ ಪೆಟ್ರೋಲ್ ಎಂಜಿನ್‌ನ್ನು ಒಳಗೊಂಡಿದೆ. 6-ಸ್ಪೀಡ್ ಮ್ಯಾನುವಲ್/ 7-ಸ್ಪೀಡ್ ಡಿಸಿಟಿ (ಡುಯಲ್ ಕ್ಲಚ್ ಟ್ರಾಸ್ಮಿಷನ್) ಗೇರ್‌ಬಾಕ್ಸ್‌ ಆಯ್ಕೆಯನ್ನು ಪಡೆದಿದೆ.

ವೈಶಿಷ್ಟ್ಯಗಳು (Features): ಹೊಸ ಟಾಟಾ ಕರ್ವ್ ಕೂಪೆ ಎಸ್‌ಯುವಿ ವಿವಿಧ ಅತ್ಯಾಧುನಿಕ ವೈಶಿಷ್ಟ್ಯಗಳನ್ನು ಹೊಂದಿದೆ. 12.3-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಫುಲ್ ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಪನೊರೊಮಿಕ್ ಸನ್‌ರೂಫ್, 4-ಸ್ಪೋಕ್ ಮಲ್ಟಿ-ಫಂಕ್ಷನ್ ಸ್ಟೀರಿಂಗ್ ವೀಲ್, 9-ಸ್ಪೀಕರ್ ಜೆಬಿಎಲ್ ಸೌಂಡ್ ಸಿಸ್ಟಮ್, ರಿಕ್ಲೈನಿಂಗ್ ರೇರ್ ಸೀಟ್‌ಗಳು ಹಾಗೂ ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳನ್ನು ಒಳಗೊಂಡಿದೆ.

ಸುರಕ್ಷತಾ ವೈಶಿಷ್ಟ್ಯಗಳು (Safety Features): ಈ ಕಾರು ಪ್ರಯಾಣಿಕರಿಗೆ ಗರಿಷ್ಠ ರಕ್ಷಣೆ ಒದಗಿಸುತ್ತದೆ. ಸುರಕ್ಷತೆಯ ದೃಷ್ಟಿಯಿಂದ 6-ಏರ್‌ಬ್ಯಾಗ್‌ಗಳು, ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್), ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಎಲೆಕ್ಟ್ರಾನಿಕ್ ಪಾರ್ಕಿಂಗ್ ಬ್ರೇಕ್ ಹಾಗೂ 360 ಡಿಗ್ರಿ ಕ್ಯಾಮೆರಾವನ್ನು ಪಡೆದಿದೆ.

ಬೆಲೆ (Price): ನೂತನ ಟಾಟಾ ಕರ್ವ್ ಸರಿ ಸುಮಾರು ರೂ.10 ಲಕ್ಷ (ಎಕ್ಸ್ ಶೋರೂಂ) ಬೆಲೆಯನ್ನು ಹೊಂದಿರಲಿದೆ ಎಂದು ಅಂದಾಜಿಸಲಾಗಿದೆ. ಈ ಕಾರಿಗೆ ಸಿಟ್ರನ್ ಬಸಾಲ್ಟ್ ಕೂಪೆ ಎಸ್‌ಯುವಿ ನೇರ ಪ್ರತಿಸ್ಪರ್ಧಿಯಾಗಿದೆ. ಇನ್ನುಳಿದಂತೆ ಹ್ಯುಂಡೈ ಕ್ರೆಟಾ, ಕಿಯಾ ಸೆಲ್ಟೋಸ್, ಹೋಂಡಾ ಎಲಿವೇಟ್, ಮಾರುತಿ ಸುಜುಕಿ ಗ್ರ್ಯಾಂಡ್ ವಿಟಾರಾಗಳು ಸಹ ಪ್ರಬಲವಾದ ಎದುರಾಳಿಯಾಗಿವೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Saturday, August 31, 2024, 9:30 [IST]
English summary
New 2024 tata curvv coupe suv launch on monday expected price details
Read more on tata motors india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+