TATA: ಮಧ್ಯಮ ವರ್ಗದ ಜನರೇ ದುಡ್ಡು ಕೂಡಿಡಿ.. ಟಾಟಾದಿಂದ ಬರಲಿವೆ ಹೊಸ ಕಾರುಗಳು, ಬೈಕ್‌ನಂತೆ ಮೈಲೇಜ್‌!

ಭಾರತದ ವಿಶ್ವಾಸಾರ್ಹ ವಾಹನ ತಯಾರಕ ಸಂಸ್ಥೆಯಾಗಿ ಟಾಟಾ ಮೋಟಾರ್ಸ್ (Tata Motors) ಗುರುತಿಸಿಕೊಂಡಿದೆ. 2024ರ ಹಣಕಾಸು ವರ್ಷದಲ್ಲಿ ಕಂಪನಿಯು ಶೇಕಡ 13.63% ಮಾರುಕಟ್ಟೆ ಪಾಲನ್ನು ಹೊಂದಿದ್ದು, ಪ್ರಮುಖ 10 ಕಾರು ತಯಾರಕ ಸಂಸ್ಥೆಗಳ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ. ಮೊದಲ ಸ್ಥಾನಕ್ಕೆ ಬರಲು ಸಾಕಷ್ಟು ಪ್ರಯತ್ನಿಸುತ್ತಿದೆ. ಅದರ ಭಾಗವಾಗಿ ನವೀನ ವಿನ್ಯಾಸ ಹಾಗೂ ಆಕರ್ಷಕ ವೈಶಿಷ್ಟ್ಯವನ್ನು ಹೊಂದಿರುವ ಕಾರುಗಳನ್ನು ದೇಶೀಯ ಮಾರುಕಟ್ಟೆಯಲ್ಲಿ ಪರಿಚಯಿಸಲು ತಯಾರಿ ನಡೆಸುತ್ತಿದೆ. ಇಲ್ಲಿ 2025ರಲ್ಲಿ ಬಿಡುಗಡೆಯಾಗಲಿರುವ ಟಾಟಾದ ಮೂರು ಪ್ರಮುಖ ಕಾರುಗಳ ಬಗ್ಗೆ ಸಂಪೂರ್ಣವಾಗಿ ತಿಳಿಸಿಕೊಟ್ಟಿದ್ದೇವೆ.

ಟಾಟಾ ಕರ್ವ್: ಈ ಕಾರು 2025ರ ಮೊದಲರ್ಧದಲ್ಲಿ ಮಾರುಕಟ್ಟೆಗೆ ಬರುವ ನಿರೀಕ್ಷೆಯಿದೆ. ಈಗಾಗಲೇ ಹಲವು ಬಾರಿ ಪ್ರಾಯೋಗಿಕ ಸಂಚಾರವನ್ನು ನಡೆಸುವಾಗ ಕಂಡುಬಂದಿದೆ. ಇದೊಂದು ಕೂಪ್ ಎಸ್‌ಯುವಿಯಾಗಿದ್ದು, ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಲೆವೆಲ್ 2 ADAS (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್), ಮಲ್ಟಿಪಲ್ ಏರ್‌ಬ್ಯಾಗ್‌, ಸನ್‌ರೂಫ್ ಹಾಗೂ 360-ಡಿಗ್ರಿ ಕ್ಯಾಮೆರಾದಂತಹ ಹತ್ತಾರು ವೈಶಿಷ್ಟ್ಯಗಳನ್ನು ಒಳಗೊಂಡಿರುವ ಸಾಧ್ಯತೆಯಿದೆ.

New 3 Tata Cars Come In 2025 Confirmed Curvv Harrier EV Nexon CNG

ಹೊಚ್ಚ ಹೊಸ ಟಾಟಾ ಕರ್ವ್ (Tata Curvv) ಎಸ್‌ಯುವಿಯು ಇಂಧನ (ಫ್ಯುಯೆಲ್) ಹಾಗೂ ಎಲೆಕ್ಟ್ರಿಕ್ ಪವರ್‌ಟ್ರೇನ್ ಆಯ್ಕೆಯಲ್ಲಿ ಖರೀದಿಗೆ ಲಭ್ಯವಾಗಬಹುದು. 1.2-ಲೀಟರ್ ಪೆಟ್ರೋಲ್ ಮತ್ತು 1.5-ಲೀಟರ್ ಡೀಸೆಲ್ ಎಂಜಿನ್ ಒಳಗೊಂಡಿರಬಹುದು ಎಂದು ಹೇಳಲಾಗಿದೆ. ಎಲೆಕ್ಟ್ರಿಕ್ ರೂಪದಲ್ಲಿ ಬರಲಿರುವ ಕಾರು ದೊಡ್ಡದಾದ ಬ್ಯಾಟರಿ ಪ್ಯಾಕ್ ಪಡೆದಿರಲಿದ್ದು, ಸಂಪೂರ್ಣ ಚಾರ್ಜ್‌ನಲ್ಲಿ 500 ಕಿಲೋಮೀಟರ್ ಕ್ರಮಿಸಬಹುದು ಎನ್ನಲಾಗಿದೆ. ರೂ.11 ಲಕ್ಷ ಆರಂಭಿಕ ದರದಲ್ಲಿ (ಎಕ್ಸ್ ಶೋರೂಂ) ಖರೀದಿಗೆ ಸಿಗಬಹುದು ಎಂದು ಅಂದಾಜಿಸಲಾಗಿದೆ.

ಟಾಟಾ ಹ್ಯಾರಿಯರ್ ಇವಿ: ಈ ಕಾರು ಸಹ ಮುಂದಿನ ವರ್ಷವೇ ದೇಶೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗುವ ಸಾಧ್ಯತೆಯಿದೆ. ಇದರ ವಿನ್ಯಾಸ ಹಲವು ಪ್ರತಿಶತದಷ್ಟು ಇಂಧನ ಚಾಲಿತ ಹ್ಯಾರಿಯರ್ ಎಸ್‌ಯುವಿಗೆ ಹೋಲಿಕೆಯಾಗಲಿದೆ. ಆದಾಗ್ಯೂ ನವೀನವಾದ ಅಲಾಯ್ ವೀಲ್‌ಗಳು ಹಾಗೂ ಬಂಪರ್‌ಗಳನ್ನು ಪಡೆದಿರಬಹುದು ಎಂದು ಹೇಳಲಾಗಿದೆ. 12.3-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡುಯಲ್-ಝೋನ್ ಕ್ಲೇಮೇಟ್ ಕಂಟ್ರೋಲ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿರುವ ನಿರೀಕ್ಷೆಯಿದೆ.

New 3 Tata Cars Come In 2025 Confirmed Curvv Harrier EV Nexon CNG

ನೂತನ ಟಾಟಾ ಹ್ಯಾರಿಯರ್ ಇವಿ (Tata Harrier EV) ಬೃಹತ್ ಗಾತ್ರದ ಬ್ಯಾಟರಿಯನ್ನು ಹೊಂದಿರಲಿದ್ದು, ಪೂರ್ತಿ ಚಾರ್ಜ್‌ನಲ್ಲಿ 500 ಕಿಲೋಮೀಟರ್‌ ರೇಂಜ್ (ಮೈಲೇಜ್) ನೀಡಬಹುದು. ಜೊತೆಗೆ AWD (ಆಲ್ ವೀಲ್ ಡ್ರೈವ್) ತಂತ್ರಜ್ಞಾನವನ್ನು ಒಳಗೊಂಡಿರಬಹುದು ಎನ್ನಲಾಗಿದೆ. ಸುಮಾರು ರೂ.25 ಲಕ್ಷದಿಂದ ರೂ.35 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಖರೀದಿಗೆ ದೊರೆಯಬಹುದು ಎಂದು ಅಂದಾಜಿಸಲಾಗಿದೆ.

ಟಾಟಾ ನೆಕ್ಸಾನ್ ಸಿಎನ್‌ಜಿ: 2025ರಲ್ಲಿ ಸಿಎನ್‌ಜಿ ಚಾಲಿತ ನೆಕ್ಸಾನ್ ಎಸ್‌ಯುವಿಯು ಬಿಡುಗಡೆಯಾಗುವ ನಿರೀಕ್ಷೆಯಿದೆ. ಈ ಕಾರನ್ನು 2024ರ ಭಾರತ್ ಮೊಬಿಲಿಟಿ ಗ್ಲೋಬಲ್ ಎಕ್ಸ್‌ಪೋದಲ್ಲಿ ಮೊದಲ ಬಾರಿಗೆ ಪ್ರದರ್ಶಿಸಲಾಗಿತ್ತು. ನೂತನ ಎಸ್‌ಯುವಿಯು 1.2-ಲೀಟರ್ ಸಾಮರ್ಥ್ಯದ ಎಂಜಿನ್ ಪಡೆದಿರಲಿದ್ದು, 26.99 ಕೆಎಂ/ಕೆಜಿವರೆಗೆ ಮೈಲೇಜ್ ನೀಡಬಹುದು ಎಂದು ಹೇಳಲಾಗಿದೆ.

New 3 Tata Cars Come In 2025 Confirmed Curvv Harrier EV Nexon CNG

ಹೊಸ ಟಾಟಾ ನೆಕ್ಸಾನ್ ಸಿಎನ್‌ಜಿ (Tata Nexon CNG) ಎಸ್‌ಯುವಿಯು ರೂ.1 ರಿಂದ ರೂ.2 ಲಕ್ಷ ಹೆಚ್ಚುವರಿ ದರವನ್ನು ಹೊಂದಿರಬಹುದು ಎಂದು ಅಂದಾಜಿಸಲಾಗಿದೆ. ಸದ್ಯ ಖರೀದಿಗೆ ದೊರೆಯುವ ಇಂಧನ ಚಾಲಿತ ನೆಕ್ಸಾನ್ ಕಾರು ರೂ.8 ರಿಂದ ರೂ.15.80 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. 10.25-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Saturday, June 29, 2024, 13:19 [IST]
English summary
New 3 tata cars come in 2025 confirmed curvv harrier ev nexon cng
Read more on tata motors india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+