ಮಾರುಕಟ್ಟೆಯಲ್ಲಿ ಬಿರುಗಾಳಿ ಎಬ್ಬಿಸಲು ಬರುತ್ತಿದೆ ಚೀನಾ ಮೂಲದ ಕಂಪನಿಯ ಹೊಸ ಎಲೆಕ್ಟ್ರಿಕ್ ಕಾರು

ಚೀನಾ ಮೂಲದ ಜನಪ್ರಿಯ ಬಿವೈಡಿ (BYD) ಭಾರತದ ಎಲೆಕ್ಟ್ರಿಕ್ ಕಾರು ಮಾರುಕಟ್ಟೆಯಲ್ಲಿ ನಿಧಾನವಾಗಿ ಜನಪ್ರಿಯತೆ ಗಳಿಸುತ್ತಿದೆ. ಗ್ರಾಹಕರ ಸ್ಪಂದನೆಗೆ ತಕ್ಕಂತೆ ಈ ವರ್ಷ ದೇಶದ ಪ್ರಮುಖ ನಗರಗಳಲ್ಲಿ ಹೊಸ ಶೋರೂಂಗಳನ್ನು ತೆರೆಯುತ್ತಿದೆ. ಇದೀಗ ಬಿವೈಡಿ ಕಂಪನಿಯು ಭಾರತೀಯ ಮಾರುಕಟ್ಟೆಯಲ್ಲಿ ಮತ್ತೊಂದು ಬಹುನಿರೀಕ್ಷಿತ ಹೊಸ ಎಲೆಕ್ಟ್ರಿಕ್ ಕಾರನ್ನು ಬಿಡುಗಡೆಗೊಳಿಸಲು ರೆಡೆಯಾಗಿದ್ದಾರೆ.

ಹೊಸ ಬಿವೈಡಿ ಸೀಲ್ (BYD Seal) ಎಲೆಕ್ಟ್ರಿಕ್ ಕಾರು 2024ರ ಮಾರ್ಚ್ 5 ರಂದು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿದೆ. ಬಿವೈಡಿ ಕಂಪನಿಯು ತನ್ನ e6 ಮತ್ತು Atto 3 ಎಸ್‍ಯುವಿಯ ಬಳಿಕ ಬಿವೈಡಿ ಕಂಪನಿಯು ಮೂರನೇ ಮಾದರಿಯನ್ನು ಬಿಡುಗಡೆಗೊಳಿಸುತ್ತಿದೆ.ಹೊಸ ಬಿವೈಡಿ ಸೀಲ್ ಎಲೆಕ್ಟ್ರಿಕ್ ಕಾರು ಬುಕಿಂಗ್ ಅನ್ನು ಪ್ರಾರಂಭಿಸಿದೆ. ಈ ಎಲೆಕ್ಟ್ರಿಕ್ ಕಾರನ್ನು ಬುಕ್ ಮಾಡುವ ಗ್ರಾಹಕರು 2024ರ UEFA EURO ಕಪ್ ಪಂದ್ಯಕ್ಕೆ ಉಚಿತ ಟಿಕೆಟ್ ಗೆಲ್ಲಬಹುದು.

BYD Seal

ಹೊಸ ಬಿವೈಡಿ ಸೀಲ್ ಎಲೆಕ್ಟ್ರಿಕ್ ಕಾರು ಸ್ಟ್ಯಾಂಡರ್ಡ್, ಎಕ್ಸೆಂಡೆಡ್ ರೇಂಜ್ ಮತ್ತು ಪರ್ಫಾಮೆನ್ಸ್ ಎಂಬ ಮೂರು ರೂಪಾಂತರಗಳಲ್ಲಿ ಲಭ್ಯವಿದೆ. ಈ ಎಲೆಕ್ಟ್ರಿಕ್ ಕಾರು ಕಾಸ್ಮೊಸ್ ಬ್ಲಾಕ್, ಅರೋರಾ ವೈಟ್, ಅಟ್ಲಾಂಟಿಸ್ ಗ್ರೇ ಮತ್ತು ಆರ್ಕ್ಟಿಕ್ ಬ್ಲೂ ಎಂಬ ನಾಲ್ಕು ಬಣ್ಣಗಳ ಆಯ್ಕೆಗಳಲ್ಲಿ ಲಭ್ಯವಿರುತ್ತದೆ. ಈ ಹೊಸ ಬಿವೈಡಿ ಸೀಲ್ ಎಲೆಕ್ಟ್ರಿಕ್ ಕಾರು 82.5kWh ಬ್ಯಾಟರಿ ಪ್ಯಾಕ್‌ನೊಂದಿಗೆ ಲಭ್ಯವಿರುತ್ತದೆ.

ಇದರೊಂದಿಗೆ, ಸಿಂಗಲ್ ಚಾರ್ಜ್‌ನಲ್ಲಿ 570km (WLTP ಸೈಕಲ್) ರೇಂಜ್ ಅನ್ನು ನೀಡುತ್ತದೆ. ಇದರ ಪವರ್ ಔಟ್‌ಪುಟ್‌ಗೆ ಬರುವುದಾದರೆ, ಹಿಂಭಾಗದ ಆಕ್ಸಲ್-ಮೌಂಟೆಡ್ ಮೋಟಾರ್ ಅನ್ನು 230bhp ಮತ್ತು 360Nm ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಬಿವೈಡಿ ಸೀಲ್ ಎಲೆಕ್ಟ್ರಿಕ್ ಕಾರು ಆರು ಸೆಕೆಂಡುಗಳಿಗಿಂತ ಕಡಿಮೆ ಅವಧಿಯಲ್ಲಿ ಶೂನ್ಯದಿಂದ 100 ಕಿ.ಮೀ ವೇಗವನ್ನು ಪಡೆದುಕೊಳ್ಳುತ್ತದೆ.

BYD Seal

ಈ ಬಿವೈಡಿ ಸೀಲ್ ಎಲೆಕ್ಟ್ರಿಕ್ ಸೆಡಾನ್ ಭಾರತೀಯ ಮಾರುಕಟ್ಟೆಯಲ್ಲಿ ಕಿಯಾ EV6 ಮತ್ತು ಹ್ಯುಂಡೈ Ioniq 5 ಮಾದರಿಗಳಿಗೆ ಪೈಪೋಟಿ ನೀಡುತ್ತದೆ. ಬಿವೈಡಿ ಸೀಲ್‌ನ ಪವರ್‌ಟ್ರೇನ್ ಸೆಟಪ್ ಬ್ರ್ಯಾಂಡ್‌ನ ಹೊಸ ಬ್ಲೇಡ್ ಬ್ಯಾಟರಿ ತಂತ್ರಜ್ಞಾನವನ್ನು ಸಂಯೋಜಿಸುತ್ತದೆ. ಟೆಸ್ಲಾಗೆ ಜಾಗತಿಕವಾಗಿ ಪ್ರತಿಸ್ಪರ್ಧಿಯಾಗಿರುವ ಬಿವೈಡಿ 'ಸೀಲ್' ಕಾರನ್ನು ಅತ್ಯಾಧುನಿಕವಾಗಿ ವಿನ್ಯಾಸಗೊಳಿಸಿದೆ.

ಇನ್ನು ಕೆಲವೇ ದಿನಗಳಲ್ಲಿ ಈ ಸೆಡಾನ್ ಬೆಲೆಯನ್ನು ಘೋಷಿಸುವ ನೀರಿಕ್ಷೆಯಿದೆ. ರೂ .60 ಲಕ್ಷ ಆರಂಭಿಕ ಬೆಲೆಯಲ್ಲಿ ಖರೀದಿಗೆ ದೊರೆಯಬಹುದು ಎಂದು ಅಂದಾಜಿಸಲಾಗಿದೆ. ಸದ್ಯ ಯುರೋಪ್ ಮಾರುಕಟ್ಟೆಯಲ್ಲಿ ಲಭ್ಯವಿರುವ ಬಿವೈಡಿ ಸೀಲ್ (BYD Seal) ಎಲೆಕ್ಟ್ರಿಕ್ ಸೆಡಾನ್, 'ಇ-ಪ್ಲಾಟ್‌ಫಾರ್ಮ್ 3.0 ಆರ್ಕಿಟೆಕ್ಚರ್' ಅನ್ನು ಆಧರಿಸಿದೆ. ಈ ಕಾರಿನಲ್ಲಿ 15.6-ಇಂಚಿನ ಇನ್ಫೋಟೈನ್‌ಮೆಂಟ್ ಡಿಸ್ಪ್ಲೇ, 10.25-ಇಂಚಿನ ಡಿಜಿಟಲ್ ಡ್ರೈವರ್ ಡಿಸ್ಪ್ಲೇ, 10.25-ಇಂಚಿನ ಡಿಜಿಟಲ್ ಡ್ರೈವರ್ ಡಿಸ್ಪ್ಲೇ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಒಳಗೊಂಡಿದೆ.

AWD (ಆಲ್ ವೀಲ್ ಡ್ರೈವ್) ತಂತ್ರಜ್ಞಾನವನ್ನು ಹೊಂದಿರುವ ಈ ಕಾರು, ಕಳೆದ ವರ್ಷದ ಅಕ್ಟೋಬರ್ ತಿಂಗಳಲ್ಲಿ ನಡೆಸಿದ ಯುರೋ ಎನ್‌ಸಿಎಪಿ (Euro NCAP) ಕ್ರ್ಯಾಶ್ ಟೆಸ್ಟ್ ನಲ್ಲಿ 5 ಸ್ಟಾರ್ ಸೇಫ್ಟಿ ರೇಟಿಂಗ್ ಪಡೆದಿದೆ. ವಯಸ್ಕ ಹಾಗೂ ಮಕ್ಕಳ ರಕ್ಷಣೆ ವಿಭಾಗದಲ್ಲಿ ಶೇಕಡ 89%ಗೆ 86% ಅಂಕಗಳನ್ನು ತನ್ನದಾಗಿಸಿಕೊಂಡಿದೆ. ಸುರಕ್ಷತೆಗಾಗಿ ಮಲ್ಟಿ ಏರ್‌ಬ್ಯಾಗ್‌, ADAS (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಅನ್ನು ಹೊಂದಿದೆ.

ಭಾರತದಲ್ಲಿ ಬಿವೈಡಿ ಕಂಪನಿಯು ಆಟ್ಟೊ 3 ಮತ್ತು ಇ6 ಕಾರುಗಳನ್ನು ಮಾರಾಟಗೊಳಿಸುತ್ತಿದೆ. ಬಿವೈಡಿ ಆಟ್ಟೊ 3 ಎಲೆಕ್ಟ್ರಿಕ್ ಕಾರಿನ ಬಗ್ಗೆ ಹೇಳುವುದಾದರೆ, ಇದು ರೂ.33.99 ಲಕ್ಷದಿಂದ ರೂ.34.49 ಲಕ್ಷ ಎಕ್ಸ್ ಶೋರೂಂ ದರದಲ್ಲಿ ಸಿಗುತ್ತದೆ. ಇನ್ನು 60.48 ಕೆಡಬ್ಲ್ಯೂಹೆಚ್ (kWh) ಬ್ಯಾಟರಿ ಪ್ಯಾಕ್ ಆಯ್ಕೆಯಲ್ಲಿ ಹೊಂದಿದ್ದು, ಪೂರ್ತಿ ಚಾರ್ಜ್ ನಲ್ಲಿ 521 ಕಿ.ಮೀ ರೇಂಜ್ (ಮೈಲೇಜ್) ನೀಡುತ್ತದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

More from DriveSpark

Article Published On: Thursday, February 29, 2024, 16:34 [IST]
English summary
New byd seal ev to come with 3 variants battery pack options details
Read more on ಬಿವೈಡಿ byd
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+