ಚೀನಾದ ಮೂಲದ ಕಂಪನಿಯ ಮತ್ತೊಂದು ಬ್ರಹ್ಮಾಸ್ತ್ರ ಬಿಡುಗಡೆಗೆ ಸಜ್ಜು: 700 ಕಿ.ಮೀ ಓಡುತ್ತದೆ!
ಚೀನಾದ ಮೂಲಕ ಬಿವೈಡಿ (BYD) ಭಾರತದ ಎಲೆಕ್ಟ್ರಿಕ್ ಕಾರು ಮಾರುಕಟ್ಟೆಯಲ್ಲಿ ನಿಧಾನವಾಗಿ ಜನಪ್ರಿಯತೆ ಗಳಿಸುತ್ತಿದೆ. ಗ್ರಾಹಕರ ಸ್ಪಂದನೆಗೆ ತಕ್ಕಂತೆ ಈ ವರ್ಷ ದೇಶದ ಪ್ರಮುಖ ನಗರಗಳಲ್ಲಿ ಹೊಸ ಶೋರೂಂಗಳನ್ನು ತೆರೆಯುತ್ತಿದೆ. ಇದೀಗ ಬಿವೈಡಿ ಕಂಪನಿಯು ಭಾರತೀಯ ಮಾರುಕಟ್ಟೆಯಲ್ಲಿ ಮತ್ತೊಂದು ಹೊಸ ಎಲೆಕ್ಟ್ರಿಕ್ ಕಾರನ್ನು ಬಿಡುಗಡೆಗೊಳಿಸಲು ಸಜ್ಜಾಗುತ್ತಿದೆ.
ಹೊಸ ಬಿವೈಡಿ ಸೀಲ್ (BYD Seal( ಎಲೆಕ್ಟ್ರಿಕ್ ಕಾರು 2024ರ ಮಾರ್ಚ್ 5 ರಂದು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿದೆ. ಬಿವೈಡಿ ಕಂಪನಿಯು ತನ್ನ e6 ಮತ್ತು Atto 3 ಎಸ್‍ಯುವಿಯ ಬಳಿಕ ಬಿವೈಡಿ ಕಂಪನಿಯು ಮೂರನೇ ಮಾದರಿಯನ್ನು ಬಿಡುಗಡೆಗೊಳಿಸುತ್ತಿದೆ.ಹೊಸ ಬಿವೈಡಿ ಸೀಲ್ ಎಲೆಕ್ಟ್ರಿಕ್ ಕಾರು ಬುಕಿಂಗ್ ಈಗಾಗಲೇ ಡೀಲರ್‌ಶಿಪ್ ಮಟ್ಟದಲ್ಲಿ ಪ್ರಾರಂಭವಾಗಿದೆ.

ಈ ಬಿವೈಡಿ ಸೀಲ್ ಎಲೆಕ್ಟ್ರಿಕ್ ಸೆಡಾನ್ ಭಾರತೀಯ ಮಾರುಕಟ್ಟೆಯಲ್ಲಿ ಕಿಯಾ EV6 ಮತ್ತು ಹ್ಯುಂಡೈ Ioniq 5 ಮಾದರಿಗಳಿಗೆ ಪೈಪೋಟಿ ನೀಡುತ್ತದೆ. ಬಿವೈಡಿ ಸೀಲ್‌ನ ಪವರ್‌ಟ್ರೇನ್ ಸೆಟಪ್ ಬ್ರ್ಯಾಂಡ್‌ನ ಹೊಸ ಬ್ಲೇಡ್ ಬ್ಯಾಟರಿ ತಂತ್ರಜ್ಞಾನವನ್ನು ಸಂಯೋಜಿಸುತ್ತದೆ. ಇದು 61.4kWh ಮತ್ತು 82.5kWh ಎಂಬ ಎರಡು ಬ್ಯಾಟರಿ ಪ್ಯಾಕ್‌ಗಳೊಂದಿಗೆ ಲಭ್ಯವಿದೆ. ಟೆಸ್ಲಾಗೆ ಜಾಗತಿಕವಾಗಿ ಪ್ರತಿಸ್ಪರ್ಧಿಯಾಗಿರುವ ಬಿವೈಡಿ 'ಸೀಲ್' ಕಾರನ್ನು ಅತ್ಯಾಧುನಿಕವಾಗಿ ವಿನ್ಯಾಸಗೊಳಿಸಿದೆ.
ಕೆಲವೇ ದಿನಗಳಲ್ಲಿ ಈ ಸೆಡಾನ್ ಬೆಲೆಯನ್ನು ಘೋಷಿಸುವ ನೀರಿಕ್ಷೆಯಿದೆ. ರೂ .60 ಲಕ್ಷ ಆರಂಭಿಕ ಬೆಲೆಯಲ್ಲಿ ಖರೀದಿಗೆ ದೊರೆಯಬಹುದು ಎಂದು ಅಂದಾಜಿಸಲಾಗಿದೆ. ಸದ್ಯ ಯುರೋಪ್ ಮಾರುಕಟ್ಟೆಯಲ್ಲಿ ಲಭ್ಯವಿರುವ ಬಿವೈಡಿ ಸೀಲ್ (BYD Seal) ಎಲೆಕ್ಟ್ರಿಕ್ ಸೆಡಾನ್, 'ಇ-ಪ್ಲಾಟ್‌ಫಾರ್ಮ್ 3.0 ಆರ್ಕಿಟೆಕ್ಚರ್' ಅನ್ನು ಆಧರಿಸಿದೆ. ದೊಡ್ಡದಾದ 82.5 ಕೆಡಬ್ಲ್ಯೂಹೆಚ್ (kWh) ಬ್ಯಾಟರಿ ಪ್ಯಾಕ್ ಆಯ್ಕೆಯನ್ನು ಹೊಂದಿದೆ.

ಜೊತೆಗೆ ಡುಯಲ್ ಎಲೆಕ್ಟ್ರಿಕ್ ಮೋಟಾರ್ ಅನ್ನು ಬಳಕೆ ಮಾಡಲಾಗಿದ್ದು, ಭರ್ತಿ ಚಾರ್ಜ್ ನಲ್ಲಿ 700 ಕಿ.ಮೀ ರೇಂಜ್ (ಮೈಲೇಜ್) ನೀಡುತ್ತದೆ. ಈ ಕಾರು, ಚಿಕ್ಕದಾದ 61.4 ಕೆಡಬ್ಲ್ಯೂಹೆಚ್ (kWh) ಬ್ಯಾಟರಿ ಪ್ಯಾಕ್ ನೊಂದಿಗೂ ದೊರೆಯುತ್ತದೆ. ಸಂಪೂರ್ಣ ಚಾರ್ಜ್ ನಲ್ಲಿ 550 ಕಿ.ಮೀ ಕ್ರಮಿಸಲಿದೆ. ಹಾಗೆಯೇ ಕೇವಲ 3.8 ಸೆಕೆಂಡುಗಳಲ್ಲಿ 0-100 ಕೆಎಂಪಿಎಚ್ ವೇಗವನ್ನು ಪಡೆಯಲಿದೆ.
ಇದರೊಂದಿಗೆ 15.6-ಇಂಚಿನ ಇನ್ಫೋಟೈನ್‌ಮೆಂಟ್ ಡಿಸ್ಪ್ಲೇ, 10.25-ಇಂಚಿನ ಡಿಜಿಟಲ್ ಡ್ರೈವರ್ ಡಿಸ್ಪ್ಲೇ, 10.25-ಇಂಚಿನ ಡಿಜಿಟಲ್ ಡ್ರೈವರ್ ಡಿಸ್ಪ್ಲೇ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಒಳಗೊಂಡಿದೆ. AWD (ಆಲ್ ವೀಲ್ ಡ್ರೈವ್) ತಂತ್ರಜ್ಞಾನವನ್ನು ಹೊಂದಿರುವ ಈ ಕಾರು, ಕಳೆದ ವರ್ಷದ ಅಕ್ಟೋಬರ್ ತಿಂಗಳಲ್ಲಿ ನಡೆಸಿದ ಯುರೋ ಎನ್‌ಸಿಎಪಿ (Euro NCAP) ಕ್ರ್ಯಾಶ್ ಟೆಸ್ಟ್ ನಲ್ಲಿ 5 ಸ್ಟಾರ್ ಸೇಫ್ಟಿ ರೇಟಿಂಗ್ ಪಡೆದಿದೆ.
ವಯಸ್ಕ ಹಾಗೂ ಮಕ್ಕಳ ರಕ್ಷಣೆ ವಿಭಾಗದಲ್ಲಿ ಶೇಕಡ 89%ಗೆ 86% ಅಂಕಗಳನ್ನು ತನ್ನದಾಗಿಸಿಕೊಂಡಿದೆ. ಸುರಕ್ಷತೆಗಾಗಿ ಮಲ್ಟಿ ಏರ್‌ಬ್ಯಾಗ್, ADAS (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಅನ್ನು ಹೊಂದಿದೆ. ದೇಶೀಯ ಮಾರುಕಟ್ಟೆಯಲ್ಲಿ ಬಿವೈಡಿ ಕಂಪನಿಯು ಆಟ್ಟೊ 3 ಮತ್ತು ಇ6 ಕಾರುಗಳನ್ನು ಮಾರಾಟಗೊಳಿಸುತ್ತಿದೆ. ಬಿವೈಡಿ ಆಟ್ಟೊ 3 ಎಲೆಕ್ಟ್ರಿಕ್ ಕಾರಿನ ಬಗ್ಗೆ ಹೇಳುವುದಾದರೆ, ಇದು ರೂ.33.99 ಲಕ್ಷದಿಂದ ರೂ.34.49 ಲಕ್ಷ ಎಕ್ಸ್ ಶೋರೂಂ ದರದಲ್ಲಿ ಸಿಗುತ್ತದೆ.
ಇನ್ನು 60.48 ಕೆಡಬ್ಲ್ಯೂಹೆಚ್ (kWh) ಬ್ಯಾಟರಿ ಪ್ಯಾಕ್ ಆಯ್ಕೆಯಲ್ಲಿ ಹೊಂದಿದ್ದು, ಪೂರ್ತಿ ಚಾರ್ಜ್ ನಲ್ಲಿ 521 ಕಿ.ಮೀ ರೇಂಜ್ (ಮೈಲೇಜ್) ನೀಡುತ್ತದೆ. 7.3 ಸೆಕೆಂಡುಗಳಲ್ಲಿ 0-100 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ. ಬಿವೈಡಿ ಇ6 ಎಲೆಕ್ಟ್ರಿಕ್ ಕಾರು, ರೂ.29.15 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಖರೀದಿಗೆ ದೊರೆಯುತ್ತದೆ. 71.7 ಕೆಡಬ್ಲ್ಯೂಹೆಚ್ (kWh) ಬ್ಯಾಟರಿ ಪ್ಯಾಕ್ ಆಯ್ಕೆಯನ್ನು ಒಳಗೊಂಡಿದ್ದು, ಸಂಪೂರ್ಣ ಚಾರ್ಜ್ ನಲ್ಲಿ 520 ಕಿ.ಮೀ ಕ್ರಮಿಸುತ್ತದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತ ಆಟೋಮೊಬೈಲ್ ಸುದ್ದಿಗಳನ್ನು ಒದಗಿಸುತ್ತದೆ, ಎಲ್ಲಾ ಸಾಮಾಜಿಕ ಮಾಧ್ಯಮಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಹಂಚಿಕೊಳ್ಳುತ್ತದೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್ ಮತ್ತು ಯೂಟ್ಯೂಬ್ ಪೇಜ್‌ಗಳೊಂದಿಗೆ ಸಂಪರ್ಕದಲ್ಲಿರಿ. ನಿಮಗೆ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ. ಜೊತೆಗೆ ನಿಮ್ಮ ಸ್ನೇಹಿತರಿಗೂ ತಪ್ಪದೆ ಶೇರ್ ಮಾಡಿ.


Click it and Unblock the Notifications








