ನಿಮ್ಮ ಹತ್ರ 5 ಲಕ್ಷ ಇದ್ಯಾ.. ಚಿಂತೆಬೇಡ.. ಅತ್ಯುತ್ತಮ ಕಾರುಗಳು ಲಭ್ಯ, 5-ಸೀಟರ್.. 34 ಕಿ.ಮೀ ಮೈಲೇಜ್!

ಭಾರತದಲ್ಲಿ ಮಧ್ಯಮ ವರ್ಗದ ಜನರು ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುತ್ತಿದ್ದು, ತಮ್ಮ ಕುಟುಂಬಕ್ಕಾಗಿ ಹೊಸ ಕಾರು ತೆಗೆದುಕೊಳ್ಳಬೇಕೆಂಬ ಬಹುದೊಡ್ಡ ಆಸೆಯನ್ನು ಹೊಂದಿರುತ್ತಾರೆ. ಆದಾಗ್ಯೂ ಹದಗೆಟ್ಟ ಮನೆಯ ಆರ್ಥಿಕ ಪರಿಸ್ಥಿತಿಯಿಂದ ನೂತನ ಕಾರು ಖರೀದಿಸಲು ಸಾಧ್ಯವಾಗುವುದಿಲ್ಲ. ನೀವು ರೂ.5 ಲಕ್ಷಕ್ಕಿಂತ ಕಡಿಮೆ (ಎಕ್ಸ್ ಶೋರೂಂ) ಬೆಲೆಯಲ್ಲಿ ಲಭ್ಯವಿರುವ ಹೊಚ್ಚ ಹೊಸ ಕಾರನ್ನು ತೆಗೆದುಕೊಳ್ಳಲು ಆಲೋಚಿಸಿದ್ದೀರಾ.. ಹಾಗಾದರೆ, ಮಾರುತಿ ಸುಜುಕಿ ಆಲ್ಟೊ ಕೆ10, ರೆನಾಲ್ಟ್ ಕ್ವಿಡ್ ಹಾಗೂ ಮಾರುತಿ ಸುಜುಕಿ ಎಸ್-ಪ್ರೆಸ್ಸೊ ಹ್ಯಾಚ್‌ಬ್ಯಾಕ್‌ಗಳು ಉತ್ತಮ ಆಯ್ಕೆಯಾಗಲಿವೆ. ಇಲ್ಲಿ ನೂತನ ಕಾರುಗಳ ಬೆಲೆ ಹಾಗೂ ವಿಶೇಷತೆ ಕುರಿತಂತೆ ಸಂಕ್ಷಿಪ್ತವಾಗಿ ತಿಳಿಸಿಕೊಟ್ಟಿದ್ದೇವೆ.

ಮೊದಲಿಗೆ ಮಾರುತಿ ಸುಜುಕಿ ಆಲ್ಟೊ ಕೆ10 (Maruti Suzuki Alto K10) ಹ್ಯಾಚ್‌ಬ್ಯಾಕ್ ಬಗ್ಗೆ ಮಾತನಾಡೋಣ. ಈ ಕಾರು ರೂ.3.99 ಲಕ್ಷದಿಂದ ರೂ.5.96 ಲಕ್ಷ ಎಕ್ಸ್ ಶೋರೂಂ ದರದಲ್ಲಿ ಖರೀದಿಗೆ ಸಿಗುತ್ತದೆ. 1-ಲೀಟರ್ ಪೆಟ್ರೋಲ್ ಮತ್ತು ಸಿಎನ್‌ಜಿ ಎಂಜಿನ್‌ ಆಯ್ಕೆಯನ್ನು ಹೊಂದಿದೆ. 5-ಸ್ಪೀಡ್ ಮ್ಯಾನುವಲ್ ಅಥವಾ 5-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದ್ದು, 24.39 ರಿಂದ 33.85 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ.

New Cars Under Rs 5 Lakhs Maruti Suzuki Alto K10 Renault KWID Maruti Suzuki S-Presso Huge Mileage

ಈ ಆಲ್ಟೊ ಕೆ10 ಕಾರಿನಲ್ಲಿ 4 ರಿಂದ 5 ಮಂದಿ ಓಡಾಟ ನಡೆಸಬಹುದು. 214 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಹೊಂದಿದೆ. 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಇನ್‌ಸ್ಟ್ರುಮೆಂಟ್ ಕ್ಲಸ್ಟರ್ ಆಪಲ್ ಕಾರ್ ಪ್ಲೇ, ಆಂಡ್ರಾಯ್ಡ್ ಆಟೋ, ಕೀಲೆಸ್ ಎಂಟ್ರಿ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಯ ದೃಷ್ಟಿಯಿಂದ ಡುಯಲ್ ಫ್ರಂಟ್ ಏರ್‌ಬ್ಯಾಗ್ ಮತ್ತು ರಿವರ್ಸಿಂಗ್ ಕ್ಯಾಮೆರಾವನ್ನು ಪಡೆದಿದೆ.

ರೆನಾಲ್ಟ್ ಕ್ವಿಡ್ (Renault KWID) ಕೂಡ ಜನಪ್ರಿಯ ಹ್ಯಾಚ್‌ಬ್ಯಾಕ್ ಆಗಿದೆ. ಇದು ರೂ.4.70 ಲಕ್ಷದಿಂದ ರೂ.6.45 ಲಕ್ಷ (ಎಕ್ಸ್ ಶೋರೂಂ) ಬೆಲೆಯನ್ನು ಪಡೆದಿದೆ. 1-ಲೀಟರ್ ಪೆಟ್ರೋಲ್ ಮತ್ತು 5-ಸ್ಪೀಡ್ ಮ್ಯಾನುವಲ್/ 5-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ ಆಯ್ಕೆಯನ್ನು ಹೊಂದಿದೆ. 21.46 ರಿಂದ 22.3 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ.

New Cars Under Rs 5 Lakhs Maruti Suzuki Alto K10 Renault KWID Maruti Suzuki S-Presso Huge Mileage

ನೂತನ ರೆನಾಲ್ಟ್ ಕ್ವಿಡ್ ಕಾರಿನಲ್ಲಿ 5 ಜನರು ಸಂಚರಿಸಬಹುದು. 8-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್ ಪ್ಲೇ, ಕೀ ಲೆಸ್ ಎಂಟ್ರಿ ಒಳಗೊಂಡಂತೆ ಹತ್ತಾರು ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಗಾಗಿ ಡುಯಲ್ ಫ್ರಂಟ್ ಏರ್‌ಬ್ಯಾಗ್‌, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್) ಮತ್ತು ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್) ಅನ್ನು ಹೊಂದಿದೆ.

ಮಾರುತಿ ಸುಜುಕಿ ಎಸ್-ಪ್ರೆಸ್ಸೊ (Maruti Suzuki S-Presso) ಹ್ಯಾಚ್‌ಬ್ಯಾಕ್ ಬಗ್ಗೆ ಹೇಳುವುದಾದರೆ, ಈ ಕಾರು 4.26 ಲಕ್ಷದಿಂದ ರೂ.6.11 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. 1-ಲೀಟರ್ ಪೆಟ್ರೋಲ್ ಮತ್ತು ಸಿಎನ್‌ಜಿ ಎಂಜಿನ್ ಆಯ್ಕೆಯನ್ನು ಪಡೆದಿದ್ದು, 5-ಸ್ಪೀಡ್ ಮ್ಯಾನುವಲ್/ 5-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ.

New Cars Under Rs 5 Lakhs Maruti Suzuki Alto K10 Renault KWID Maruti Suzuki S-Presso Huge Mileage

ಈ ಮಾರುತಿ ಸುಜುಕಿ ಎಸ್-ಪ್ರೆಸ್ಸೊ 24.12 ರಿಂದ 32.73 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಇದರಲ್ಲಿಯೂ 5 ಮಂದಿ ಆರಾಮದಾಯಕವಾಗಿ ಪ್ರಯಾಣಿಸಬಹುದು. 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್ ಪ್ಲೇ ಹಾಗೂ ಸೆಮಿ-ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಪ್ರಯಾಣಿಕರಿಗೆ ಗರಿಷ್ಠ ರಕ್ಷಣೆ ಒದಗಿಸಲು ಡುಯಲ್ ಫ್ರಂಟ್ ಏರ್‌ಬ್ಯಾಗ್‌ನ್ನು ಪಡೆದಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Saturday, September 21, 2024, 12:00 [IST]
English summary
New cars under rs 5 lakhs maruti suzuki alto k10 renault kwid maruti suzuki s presso huge mileage
Read more on auto news india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+