Maruti Dzire: ಹೊಸ ಮಾರುತಿ ಡಿಜೈರ್ ಬುಕಿಂಗ್ ಪ್ರಾರಂಭ: ಸನ್‌ರೂಫ್, 6 ಏರ್‌ಬ್ಯಾಗ್, 33 ಕಿ.ಮೀ ಮೈಲೇಜ್!
ಹೊಸ ತಲೆಮಾರಿನ ಮಾರುತಿ ಸುಜುಕಿ ಡಿಜೈರ್ ಬುಕಿಂಗ್ ಇಂದಿನಿಂದ (ನವೆಂಬರ್ 4, 2024) ಪ್ರಾರಂಭವಾಗಿದೆ. ನಿಮ್ಮ ವಿಶ್ವಾಸಾರ್ಹ ಡೀಲರ್ ಅಥವಾ ಆನ್‌ಲೈನ್‌ನಲ್ಲಿ ಹೊಸ ಡಿಜೈರ್ ಅನ್ನು ಬುಕಿಂಗ್ ಮಾಡಿಕೊಳ್ಳಬಹುದು. ಹೊಸ ಮಾರುತಿ ಡಿಜೈರ್ ಅನ್ನು ಕೇವಲ 11,000 ರೂ.ಗಳ ಟೋಕನ್ ಮೊತ್ತಕ್ಕೆ ಬುಕ್ ಮಾಡಬಹುದು. ಕಂಪನಿಯು ಈ ಬಹುನಿರೀಕ್ಷಿತ ಕಾರನ್ನು ನವೆಂಬರ್ 11, 2024 ರಂದು ಅಧಿಕೃತವಾಗಿ ಅನಾವರಣಗೊಳಿಸಲಿದೆ. ಹೊಸ ಮಾರುತಿ ಡಿಜೈರ್ ಸನ್‌ರೂಫ್ ಸೇರಿದಂತೆ ಸೆಗ್ಮೆಂಟಿನ ಮೊದಲ ವೈಶಿಷ್ಟ್ಯಗಳನ್ನು ಪಡೆದುಕೊಂಡಿದೆ. ಇದರ ಪವರ್ ಟ್ರೇನ್ ವಿವರಗಳ ಬಗ್ಗೆ ಇನ್ನಷ್ಟು ಮಾಹಿತಿಯನ್ನು ಈ ಕೆಳಗೆ ನೋಡೋಣ.
ಎಂಜಿನ್: ಈಗಾಗಲೇ ಬಿಡುಗಡೆಯಾಗಿರುವ ಹೊಸ ತಲೆಮಾರಿನ ಸ್ವಿಫ್ಟ್‌ನಲ್ಲಿ ನೀಡಲಾದ ಅದೇ ಎಂಜಿನ್ ಅನ್ನು ಹೊಸ ತಲೆಮಾರಿನ ಡಿಜೈರ್‌ನಲ್ಲೂ ನೀಡಲಾಗಿದೆ. ಡಿಜೈರ್ ಕಾರು 1.2 - ಲೀಟರ್ ಝಡ್ - ಸೀರಿಸ್ 3 - ಸಿಲಿಂಡರ್ ಎಂಜಿನ್ ಅನ್ನು ಪಡೆದಿದೆ. ಇದು 5700 ಆರ್‌ಪಿಎಂನಲ್ಲಿ 81 ಪಿಎಸ್ ಪವರ್ ಮತ್ತು 4300 ಆರ್‌ಪಿಎಂನಲ್ಲಿ 112 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.

ಹೊಸ ತಲೆಮಾರಿನ ಡಿಜೈರ್ ಎಂಜಿನ್‌ನೊಂದಿಗೆ 5 - ಸ್ಪೀಡ್ ಮ್ಯಾನುವಲ್ ಮತ್ತು 5 - ಸ್ಪೀಡ್ ಆಟೋಮೇಟಿಕ್ ಗೇರ್‌ಬಾಕ್ಸ್ ಆಯ್ಕೆಯನ್ನು ನೀಡಲಾಗುವುದು. ಬಿಡುಗಡೆಯಾದ ಕೂಡಲೇ, ಸಿಎನ್‌ಜಿ ಆಯ್ಕೆಯನ್ನು ಸಹ ಪರಿಚಯಿಸುವ ನಿರೀಕ್ಷೆಗಳಿವೆ. ಈಗಾಗಲೇ ಬಿಡುಗಡೆಯಾಗಿರುವ ಸ್ವಿಫ್ಟ್ ಕಾರು ಪೆಟ್ರೋಲ್ ಹಾಗೂ ಸಿಎನ್‌ಜಿ ಆಯ್ಕೆಯಲ್ಲಿ ಉತ್ತಮ ಬೇಡಿಕೆಯೊಂದಿಗೆ ಮುನ್ನುಗ್ಗುತ್ತಿದ್ದು, ಡಿಜೈರ್ ಕೂಡ ಭಾರೀ ಬೇಡಿಕೆ ಪಡೆದುಕೊಳ್ಳುವ ನಿರೀಕ್ಷೆಯಿದೆ.
ವೈಶಿಷ್ಟ್ಯಗಳು: ಹೊಸ ಮಾರುತಿ ಸುಜುಕಿ ಡಿಜೈರ್ ಎಲೆಕ್ಟ್ರಿಕ್ ಸನ್‌ರೂಫ್ ಮತ್ತು 360 ಡಿಗ್ರಿ ಪಾರ್ಕಿಂಗ್ ಕ್ಯಾಮೆರಾದಂತಹ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಇವೆರಡೂ ಸೆಗ್ಮೆಂಟಿನಲ್ಲಿ ಯಾರೂ ನೀಡದ ಮೊದಲ ವೈಶಿಷ್ಟ್ಯಗಳಾಗಿವೆ. ಟಾಟಾ ಟಿಗೋರ್ ಅನ್ನು ಡೀಲರ್-ಅಳವಡಿಸಿದ ಅಕ್ಸೆಸೊರಿಗಳ ಭಾಗವಾಗಿ ಸನ್‌ರೂಫ್ ನೀಡಲಾಯಿತು, ಆದರೆ ಇದು ಸ್ಟ್ಯಾಂಡರ್ಡ್ ಪ್ಯಾಕೇಜ್ ಅಲ್ಲ ಎಂಬುದನ್ನು ಗಮನಿಸಬೇಕಾಗಿದೆ.

ಇದಲ್ಲದೆ, ಹೊಸ ಡಿಜೈರ್ ಆಟೋಮ್ಯಾಟಿಕ್ ಕ್ಲೈಮೆಂಟ್ ಕಂಟ್ರೋಲ್, ಪುಶ್ - ಬಟನ್ ಸ್ಟಾರ್ಟ್ / ಸ್ಟಾಪ್‌ನೊಂದಿಗೆ ಕೀಲೆಸ್ ಎಂಟ್ರಿ, ವೈರ್‌ಲೆಸ್ ಆಂಡ್ರಾಯ್ಡ್ ಆಟೋ ಮತ್ತು ಆಪಲ್ ಕಾರ್ಪ್ಲೇ ಮತ್ತು ಹಿಂಭಾಗದ ಎಸಿ ವೆಂಟ್‌ಗಳೊಂದಿಗೆ 9.0-ಇಂಚಿನ ಟಚ್ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್‌ನಂತಹ ವೈಶಿಷ್ಟ್ಯಗಳನ್ನು ಸಹ ಒಳಗೊಂಡಿದೆ.
ಹೆಚ್ಚಿನ ನಿರೀಕ್ಷೆಗಳು: ಹೊಸ ಡಿಜೈರ್ ರೂ.6.70 (ಎಕ್ಸ್ ಶೋರೂಂ) ಲಕ್ಷ ಆರಂಭಿಕ ಬೆಲೆಯಲ್ಲಿ ಬಿಡುಗಡೆಯಾಗುವ ನಿರೀಕ್ಷೆಯಿದೆ. ಪೆಟ್ರೋಲ್‌ನಲ್ಲಿ 25 ಕಿ.ಮೀ ಮೈಲೇಜ್ ಹಾಗೂ ಸಿಎನ್‌ಜಿನಲ್ಲಿ ಬರೋಬ್ಬರಿ 33 ಕಿ.ಮೀ ಮೈಲೇಜ್ ನೀಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಈಗಾಗಲೇ ಹೊಸ ತಲೆಮಾರಿನ ಸ್ವಿಫ್ಟ್ ಕಾರು, ಕಂಪನಿ ಹೇಳಿಕೊಂಡಂತೆ ಇದೇ ಅಂಕಿಅಂಶಗಳ ಮೈಲೇಜ್ ನೀಡುತ್ತಿದೆ.

ಸುರಕ್ಷತೆ: ಸುರಕ್ಷತೆಗೆ ಸಂಬಂಧಿಸಿದಂತೆ ಹೊಸ ತಲೆಮಾರಿನ ಮಾರುತಿ ಡಿಜೈರ್, ಆರು ಏರ್ ಬ್ಯಾಗ್‌ಗಳು, ಹಿಲ್-ಹೋಲ್ಡ್ ಅಸಿಸ್ಟ್, ಆಂಟಿ-ಲಾಕ್ ಬ್ರೇಕಿಂಗ್ ಸಿಸ್ಟಮ್ (ಎಬಿಎಸ್), ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ (ಇಎಸ್ ಪಿ), ರಿವರ್ಸ್ ಪಾರ್ಕಿಂಗ್ ಕ್ಯಾಮೆರಾ ಮತ್ತು ಎಲೆಕ್ಟ್ರಾನಿಕ್ ಬ್ರೇಕ್ ಫೋರ್ಸ್ ಡಿಸ್ಟ್ರಿಬ್ಯೂಷನ್ (ಇಬಿಡಿ) ಎರಡನ್ನೂ ಒಳಗೊಂಡಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications