ಬುಕ್ಕಿಂಗ್‌ನಲ್ಲಿ ಸುನಾಮಿ: ಮಧ್ಯಮ ವರ್ಗದ ಮೆಚ್ಚಿನ ಸ್ವಿಫ್ಟ್ ಕಾರಿಗಾಗಿ ಕ್ಯೂ ನಿಂತ ಜನ!

ಮಾರುತಿ ಸುಜುಕಿ ಸ್ವಿಫ್ಟ್ ದೀರ್ಘಕಾಲದಿಂದಲೇ ದೇಶದಲ್ಲಿ ಹೆಚ್ಚು ಮಾರಾಟವಾಗುವ ಕಾರುಗಳಲ್ಲಿ ಇದು ಕೂಡ ಒಂದಾಗಿದೆ. ಭಾರತದಲ್ಲಿ ಎಷ್ಟೇ ಅತ್ಯಾಧುನಿಕ ಕಾರುಗಳು ಮಾರುಕಟ್ಟೆಗೆ ಬಂದರೂ ಈ ಮಾರುತಿ ಸ್ವಿಫ್ಟ್ ಕಾರಿಗೆ ದೊಡ್ಡ ಅಭಿಮಾನಿಗಳ ಬಳಗವಿದೆ. ಈ ಬಹುಜನಪ್ರಿಯ ಮಾರುತಿ ಸುಜುಕಿ ಸ್ವಿಫ್ಟ್ (Maruti Suzuki Swift ) ಕಾರು ಭಾರತೀಯ ಮಾರುಕಟ್ಟೆಯಲ್ಲಿ ಮೊದಲ ಬಾರಿಗೆ 2005ರಲ್ಲಿ ಬಿಡುಗಡೆಯಾಗಿತ್ತು. ಮಾರುತಿ ಸುಜುಕಿ ಸ್ವಿಫ್ಟ್ (Maruti Suzuki Swift) ಭಾರತೀಯ ಮಾರುಕಟ್ಟೆಯಲ್ಲಿ ಹಲವು ವರ್ಷಗಳಿಂದ ಜನಪ್ರಿಯ ಮತ್ತು ಅತಿ ಹೆಚ್ಚು ಮಾರಾಟವಾಗುವ ಕಾರುಗಳಲ್ಲಿ ಒಂದಾಗಿದೆ.

ಇದೀಗ ದೇಶದ ಅತಿದೊಡ್ಡ ಕಾರು ತಯಾರಕ ಕಂಪನಿಯಾದ ಮಾರುತಿ ಸುಜುಕಿ ಭಾರತದಲ್ಲಿ ಹೊಸ ತಲೆಮಾರಿನ ಸ್ವಿಫ್ಟ್ ಹ್ಯಾಚ್‌ಬ್ಯಾಕ್ ಅನ್ನು ಮೇ 9 ರಂದು ಬಿಡುಗಡೆ ಮಾಡಿತು. ಈ ಕಾರು ತಯಾರಕರು ಒಂದು ತಿಂಗಳೊಳಗೆ 40,000 ಬುಕಿಂಗ್‌ಗಳನ್ನು ಸ್ವೀಕರಿಸಿದ್ದಾರೆ. ಮುಂಗಡ ಕಾಯ್ದಿರಿಸಿದವರಿಗೆ ಆದ್ಯತೆ ನೀಡಿ, ವಿತರಣೆಗಳು ಈಗಾಗಲೇ ಪ್ರಾರಂಭವಾಗಿವೆ. 2018ರ ಮೇ ತಿಂಗಳಿನಲ್ಲಿ ಸ್ವಿಫ್ಟ್ ಮಾದರಿಯ 19,393 ಯುನಿಟ್‌ಗಳನ್ನು ಮಾರಾಟ ಮಾಡಲಾಗಿತ್ತು.

Maruti Suzuki Swift

ಇದು ಕಂಪನಿಗೆ ಆ ತಿಂಗಳು ಅತಿ ಹೆಚ್ಚು ಮಾರಾಟವಾದ ಕಾರನ್ನು ಮಾಡಿದೆ. ಹೊಸ ಸ್ವಿಫ್ಟ್ ಕಾರಿಗೆ ಭರ್ಜರಿ ಬೇಡಿಕೆಯನ್ನು ಹೊಂದಿದ್ದರು ನಿರೀಕ್ಷೆಗಳನ್ನು ಮೀರಿಸಿ ಭರ್ಜರಿ ಬುಕ್ಕಿಂಗ್ ಅನ್ನು ಪಡೆದುಕೊಂಡಿದೆ. ಮುಂದಿನ ತಿಂಗಳ ಆರಂಭದಲ್ಲಿ ನಿರೀಕ್ಷಿತ ಹ್ಯಾಚ್‌ಬ್ಯಾಕ್‌ನ CNG ರೂಪಾಂತರದ ಮುಂಬರುವ ಬಿಡುಗಡೆಯೊಂದಿಗೆ ಬುಕಿಂಗ್‌ನಲ್ಲಿ ಮತ್ತಷ್ಟು ಹೆಚ್ಚಳವನ್ನು ಕಂಪನಿ ನಿರೀಕ್ಷಿಸುತ್ತದೆ.

ಈ ಮಾರುತಿ ಸ್ವಿಫ್ಟ್ ಕಾರು LXi, VXi, VXi (O), ZXi, ಮತ್ತು ZXi+ ಎಂಬ ರೂಪಾಂತರಗಳಲ್ಲಿ ಲಭ್ಯವಿದೆ. ಈ ಹೊಸ ಸ್ವಿಫ್ಟ್ ಕಾರಿನ ಬೆಲೆಯು ರೂ.6.49 ಲಕ್ಷದಿಂಡ ರೂ.9.64 ಲಕ್ಷವಾಗಿದೆ. ಈ ಎಲ್ಲಾ ಬೆಲೆಗಳು ಎಕ್ಸ್ ಶೋರೂಂ ಪ್ರಕಾರವಾಗಿದೆ. ಹಿಂದಿನ ಸ್ವಿಫ್ಟ್ ಕಾರಿನ ಬೆಲೆಗೆ ಹೋಲಿಸಿದರೆ ಅಂದಾಜು 25,000 ರೂ. ದುಬಾರಿಯಾಗಿದೆ. ಈ ಹೊಸ ಸ್ವಿಫ್ಟ್ ಕಾರಿನ ವಿನ್ಯಾಸ, ಒಳಭಾಗ ಮತ್ತು ತಾಂತ್ರಿಕ ವಿಷಯದಲ್ಲಿ ಗಮನಾರ್ಹ ಬದಲಾವಣೆಗಳೊಂದಿಗೆ ಬಂದಿದೆ.

Maruti Suzuki Swift

ಹೊಸ ತಲೆಮಾರಿನ ಮಾರುತಿ ಸ್ವಿಫ್ಟ್ ಕಾರಿನಲ್ಲಿ ಹೊಸ Z-ಸೀರಿಸ್ 1.2 ಲೀಟರ್ ಪೆಟ್ರೋಲ್ ಎಂಜಿನ್ ಅನ್ನು ನೀಡಿದೆ. ಈ ಎಂಜಿನ್ 80.46 bhp ಪವರ್ ಮತ್ತು 111.7 Nm ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಈ ಎಂಜಿನ್ ಅನ್ನು 5-ಸ್ಪೀಡ್ ಮ್ಯಾನ್ಯುವಲ್ ಟ್ರಾನ್ಸ್‌ಮಿಷನ್ ಅಥವಾ 5-ಸ್ಪೀಡ್ AMT ಯುನಿಟ್ (AGS) ಅನ್ನು ಜೋಡಿಸಲಾಗಿದೆ.

ಸ್ವಿಫ್ಟ್ ಕಾರಿನ ಮ್ಯಾನುವಲ್ ರೂಪಾಂತರವು 24.80km ನಷ್ಟು ಮೈಲೇಜ್ ನೀಡಿದರೆ, AGS ರೂಪಾಂತರವು 25.75 ಕಿ.ಮೀ ಮೈಲೇಜ್ ಅನ್ನು ನೀಡುತ್ತದೆ. ಈ ಕಾರಿನ ಬುಕ್ಕಿಂಗ್ ಗಾಇ ರೂ.11 ಸಾವಿರ ಮುಂಗಡ ಹಣವನ್ನು ಪಾವತಿಸುವ ಮೂಲಕ ಕಾಯ್ದಿರಿಸಬಹುದು. ನೂತನ ಸ್ವಿಫ್ಟ್ ಭರಪೂರ ವೈಶಿಷ್ಟ್ಯಗಳೊಂದಿಗೆ ಕೈಗೆಟುಕುವ ದರದಲ್ಲಿ ಸಿಗುವುದರಿಂದ ಹಲವರ ಕುಟುಂಬದ ಆಯ್ಕೆಯ ವಾಹನವಾಗುವುದರಲ್ಲಿ ಎರಡು ಮಾತಿಲ್ಲ.

Maruti Suzuki Swift

ಈ ಹೊಸ ಮಾರುತಿ ಸ್ವಿಫ್ಟ್ ಅನ್ನು ಸಿಜ್ಲಿಂಗ್ ರೆಡ್, ಲುಸ್ಟರ್ ಬ್ಲೂ, ನಾವೆಲ್ ಆರೆಂಜ್, ಮ್ಯಾಗ್ಮಾ ಗ್ರೇ, ಸ್ಪ್ಲೆಂಡಿಡ್ ಸಿಲ್ವರ್ ಮತ್ತು ಪರ್ಲ್ ಆರ್ಕ್ಟಿಕ್ ವೈಟ್ ಎಂಬ ಆರು ಮೊನೊಟೋನ್ ಪೇಂಟ್ ಸ್ಕೀಮ್‌ಗಳಲ್ಲಿ ಲಬ್ಯವಿದೆ. ಇನ್ನು ಮಿಡ್ನೈಟ್ ಬ್ಲ್ಯಾಕ್ ರೂಫ್ನೊಂದಿಗೆ ಸಿಜ್ಲಿಂಗ್ ರೆಡ್, ಮಿಡ್ನೈಟ್ ಬ್ಲ್ಯಾಕ್ ರೂಫ್ನೊಂದಿಗೆ ಲುಸ್ಟರ್ ಬ್ಲೂ ಮತ್ತು ಮಿಡ್ನೈಟ್ ಬ್ಲ್ಯಾಕ್ ರೂಫ್ನೊಂದಿಗೆ ಪರ್ಲ್ ಆರ್ಕ್ಟಿಕ್ ವೈಟ್ ಎಂಬ ಮೂರು ಡ್ಯುಯಲ್-ಟೋನ್ ಬಣ್ಣ ಆಯ್ಕೆಗಳನ್ನು ಹೊಂದಿವೆ.

ಈ ಮಾರುತಿ ಸುಜುಕಿ ಸ್ವಿಫ್ಟ್ ಕಾರಿನಲ್ಲಿ 9 - ಇಂಚಿನ ಇನ್ಫೋಟೈನ್‌ಮೆಂಟ್ ಸ್ಕ್ರೀನ್‌, ಆಂಡ್ರಾಯ್ಡ್ ಆಟೋ, ಆಪಲ್ ಕಾರ್ ಪ್ಲೇ, ಆಟೋ ಕ್ಲೇಮೇಟ್ ಕಂಟ್ರೋಲ್, ಸೆಮಿ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ವೈರ್‌ಲೆಸ್ ಚಾರ್ಜರ್, ಅರ್ಕಾಮಿಸ್ ಟ್ಯೂನ್ಡ್ ಸೌಂಡ್ ಸಿಸ್ಟಮ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಜೊತೆಗೆ ಸುರಕ್ಷತೆಗಾಗಿ 6 ಏರ್‌ಬ್ಯಾಗ್‌,ಅನ್ನು ಪಡೆದಿದೆ.

Article Published On: Monday, June 3, 2024, 15:26 [IST]
English summary
New gen maruti suzuki swift gets over 40000 bookings since launch details
Read more on maruti suzuki india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+