Honda: ಹೋಂಡಾ ಅಮೇಜ್ ವಿಡಿಯೋ ರಿವ್ಯೂ.. ನೀವೇ ನೋಡಿ

ಹೋಂಡಾ ಕಾರ್ಸ್ ಇಂಡಿಯಾ (Honda Cars India), ಜನಪ್ರಿಯ ಕಾರು ತಯಾರಕ ಕಂಪನಿಯಾಗಿದೆ. ದೇಶೀಯ ಮಾರುಕಟ್ಟೆಯಲ್ಲಿ ಮಾರುತಿ ಸುಜುಕಿ ಡಿಜೈರ್‌ ಕಾರಿಗೆ ದೊಡ್ಡ ಎದುರಾಳಿಯಾಗಿ ಡಿ.4ರಂದು ಹೊಚ್ಚ ಹೊಸ 'ಅಮೇಜ್‌' ಸೆಡಾನ್‌ನ್ನು ಮಾರಾಟಕ್ಕೆ ತಂದಿತ್ತು. ಇದು ಆಕರ್ಷಕ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಪಡೆದಿದೆ. ಇತ್ತೀಚೆಗೆ ನಮ್ಮ ತಂಡಕ್ಕೆ ಈ ನೂತನ ಸೆಡಾನ್‌ನ್ನು ಟೆಸ್ಟ್ ಡ್ರೈವ್ ನಡೆಸಲು ಅವಕಾಶ ಲಭ್ಯವಾಯಿತು. ನಿಮಗಾಗಿ ಈ ಕಾರಿನ ರಿವ್ಯೂ ವಿಡಿಯೋ..

ಹೋಂಡಾ ಅಮೇಜ್ (Honda Amaze) ಸೆಡಾನ್ ಹೊರಭಾಗದಲ್ಲಿ ಆಕರ್ಷಕ ವಿನ್ಯಾಸವನ್ನು ಒಳಗೊಂಡಿದೆ. ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಫಾಗ್ ಲೈಟ್‌ಗಳು, ಎಲ್ಇಡಿ ಟೈಲ್‌ ಲೈಟ್‌ಗಳು ಹಾಗೂ 15-ಇಂಚಿನ ಡುಯಲ್ ಟೋನ್ ಅಲಾಯ್ ವೀಲ್‌ಗಳನ್ನು ಪಡೆದಿದೆ. 2,470 ಎಂಎಂ ಉದ್ದದ ವೀಲ್‌ಬೇಸ್‌ನ್ನು ಹೊಂದಿದೆ.

ಈ ಕಾರು, 1.2-ಲೀಟರ್ 4-ಸಿಲಿಂಡರ್ ಐ-ವಿಟಿಇಸಿ ಎಂಜಿನ್ ಪಡೆದಿದೆ. 5-ಸ್ಪೀಡ್ ಮ್ಯಾನುವಲ್ ಮತ್ತು ಸಿವಿಟಿ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 18.65 ರಿಂದ 19.46 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಈ ಕಾರಿನಲ್ಲಿ 5 ಮಂದಿ ಓಡಾಟ ನಡೆಸಬಹುದು. ಅಬ್ಸಿಡಿಯನ್ ಬ್ಲೂ ಪರ್ಲ್, ಮೆಟಿರೊಯ್ಡ್ ಗ್ರೇ ಮೆಟಾಲಿಕ್ ಮತ್ತು ರೇಡಿಯಂಟ್ ರೆಡ್ ಮೆಟಾಲಿಕ್ ಸೇರಿದಂತೆ ವಿವಿಧ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ.

ನೂತನ ಹೋಂಡಾ ಅಮೇಜ್ ಸೆಡಾನ್ ಹಲವು ಆಕರ್ಷಕ ವೈಶಿಷ್ಟ್ಯಗಳನ್ನು ಹೊಂದಿದೆ. 8-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಸೆಮಿ - ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ವೈರ್‌ಲೆಸ್ ಫೋನ್ ಚಾರ್ಜರ್, 3-ಸ್ಪೋಕ್ ಸ್ಟೀರಿಂಗ್ ವೀಲ್ ಮತ್ತು 2-ಕಪ್‌ ಹೋಲ್ಡರ್‌ಗಳನ್ನು ಒಳಗೊಂಡಿದೆ.

New Honda Amaze Sedan Video Review

ಹೊಸ ಹೋಂಡಾ ಅಮೇಜ್ ಕಾರು ಪ್ರಯಾಣಿಕರಿಗೆ ಹೆಚ್ಚಿನ ರಕ್ಷಣೆ ಒದಗಿಸುತ್ತದೆ. ಸುರಕ್ಷತೆಯ ದೃಷ್ಟಿಯಿಂದ 6-ಏರ್‌ಬ್ಯಾಗ್‌ಗಳು, ಎಡಿಎಸ್ಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಮತ್ತು 3-ಪಾಯಿಂಟ್ ಸೀಟ್‌ಬೆಲ್ಟ್‌ಗಳನ್ನು ಹೊಂದಿದೆ. ಹಾಗೆಯೇ ಈ ಕಾರು ರೂ.8 ಲಕ್ಷದಿಂದ ರೂ.10.90 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿಯೂ ಖರೀದಿಗೆ ದೊರೆಯುತ್ತದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

More from DriveSpark

Article Published On: Monday, December 16, 2024, 11:33 [IST]
English summary
New honda amaze sedan video review
Read more on honda india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+