7 ಜನ ಹೋಗಬಹುದು.. 14.99 ಲಕ್ಷ.. ಹ್ಯುಂಡೈ ಅಲ್ಕಾಜರ್ ಫ್ಯಾಮಿಲಿ ಕಾರು ನಿನ್ನೆಯಷ್ಟೇ ಬಿಡುಗಡೆ.. ಮೈಲೇಜ್ ಬಹಿರಂಗ!
ದಕ್ಷಿಣ ಕೊರಿಯಾ ಮೂಲದ ಹ್ಯುಂಡೈ ಮೋಟಾರ್ (Hyundai Motor) ಜನಪ್ರಿಯ ವಾಹನ ತಯಾರಕ ಕಂಪನಿಯಾಗಿ ಗುರುತಿಸಿಕೊಂಡಿದೆ. ಭಾರತದ ಮಾರುಕಟ್ಟೆಯಲ್ಲಿ ತನ್ನದೆಯಾದ ಛಾಪನ್ನು ಮೂಡಿಸಿದೆ. ಹಲವು ವರ್ಷಗಳಿಂದ ಆಕರ್ಷಕ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಪಡೆದುಕೊಂಡಿರುವ ವಿವಿಧ ಕಾರುಗಳನ್ನು ಮಾರಾಟ ಮಾಡುತ್ತಿದ್ದು, ಖರೀದಿದಾರರು ಇಷ್ಟಪಟ್ಟು ತೆಗೆದುಕೊಳ್ಳುತ್ತಿದ್ದಾರೆ. ಸೋಮವಾರ 2024ರ ನವೀಕರಿಸಿದ ಅಲ್ಕಾಜರ್ (Facelift Alcazar) ಎಸ್‌ಯುವಿಯನ್ನು ಬಿಡುಗಡೆ ಮಾಡಿತ್ತು. ಈ ಕಾರು ಕೈಗೆಟುಕುವ ಬೆಲೆಯಲ್ಲಿ ದೊರೆಯಲಿದ್ದು, ಮೈಲೇಜ್ ಕೂಡ ಬಹಿರಂಗಗೊಂಡಿದೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.
ನೂತನ ಹ್ಯುಂಡೈ ಅಲ್ಕಾಜರ್ ಎಸ್‌ಯುವಿ ಅತ್ಯಂತ ಕೈಗೆಟುಕುವ ಬೆಲೆಯಲ್ಲಿ ದೊರೆಯುತ್ತದೆ. ರೂ.14.99 ಲಕ್ಷದಿಂದ ರೂ.21.40 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. ಪ್ಲಾಟಿನಂ, ಸಿಗ್ನೇಚರ್, ಪ್ರೆಸ್ಟೀಜ್ ಹಾಗೂ ಎಕ್ಸಿಕ್ಯೂಟಿವ್ ಎಂಬ ರೂಪಾಂತರಗಳನ್ನು (ವೇರಿಯೆಂಟ್) ಒಳಗೊಂಡಿದೆ. ಅಟ್ಲಾಸ್ ವೈಟ್, ಅಬಿಸ್ ಬ್ಲ್ಯಾಕ್ ಪರ್ಲ್, ರೇಂಜರ್ ಖಾಕಿ, ಫಿಯರಿ ರೆಡ್, ಸ್ಟಾರಿ ನೈಟ್, ಟೈಟಾನ್ ಗ್ರೇ ಮ್ಯಾಟ್ ಸೇರಿದಂತೆ 9 ಬಣ್ಣಗಳೊಂದಿಗೂ ದೊರೆಯುತ್ತದೆ.

ನವೀಕರಿಸಿದ ಹ್ಯುಂಡೈ ಅಲ್ಕಾಜರ್ (Facelift Hyundai Alcazar) ಎಸ್‌ಯುವಿ, ಶಕ್ತಿಯುತವಾಗಿರುವ 2 ಪವರ್‌ಟ್ರೇನ್‌ನೊಂದಿಗೂ ಲಭ್ಯವಿದೆ. ಇದರ 1.5-ಲೀಟರ್ ಜಿಡಿಟಿ ಟರ್ಬೊ ಪೆಟ್ರೋಲ್ ಎಂಜಿನ್ 158 ಬಿಹೆಚ್‍ಪಿ ಗರಿಷ್ಠ ಶಕ್ತಿ (ಪವರ್) ಮತ್ತು 253 ಎನ್ಎಂ ಪೀಕ್ ಟಾರ್ಕ್ ಹೊರಹಾಕುವ ಸಾಮರ್ಥ್ಯವನ್ನು ಒಳಗೊಂಡಿದೆ. ಮತ್ತೊಂದು 1.5-ಲೀಟರ್ ಡೀಸೆಲ್ ಎಂಜಿನ್ 113 ಬಿಹೆಚ್‍ಪಿ ಗರಿಷ್ಠ ಶಕ್ತಿ (ಪವರ್) ಹಾಗೂ 250 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುತ್ತದೆ.
ನೂತನ ಕಾರು ರೂಪಾಂತರಗಳಿಗೆ ಅನುಗುಣವಾಗಿ 6-ಸ್ಪೀಡ್ ಮ್ಯಾನುವಲ್, 6-ಸ್ಪೀಡ್ ಆಟೋಮೆಟಿಕ್ ಮತ್ತು 7-ಸ್ಪೀಡ್ ಡಿಸಿಟಿ (ಡುಯಲ್ ಕ್ಲಚ್ ಟ್ರಾಸ್ಮಿಷನ್) ಗೇರ್‌ಬಾಕ್ಸ್‌ನ್ನು ಪಡೆದಿದೆ. ಅಲ್ಕಾಜರ್ ಎಸ್‌ಯುವಿಯ ಪೆಟ್ರೋಲ್ (Petrol) ಚಾಲಿತ ಮಾದರಿಗಳು 17.5 ರಿಂದ 18 ಕೆಎಂಪಿಎಲ್ ಮತ್ತು ಡೀಸೆಲ್ (Diesel) ಚಾಲಿತ ಮಾದರಿಗಳು 18.1 ರಿಂದ 20.4 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತವೆ.

ಈ ಅಲ್ಕಾಜರ್ ಎಸ್‌ಯುವಿ ಅತ್ಯಾಧುನಿಕವಾದ ವಿನ್ಯಾಸವನ್ನು ಒಳಗೊಂಡಿದೆ. ಹೊರಭಾಗದಲ್ಲಿ ನವೀನವಾಗಿರುವ ಗ್ರಿಲ್, ಹೆಡ್‌ಲ್ಯಾಂಪ್‌ಗಳು, ಹೆಚ್-ಆಕಾರಕ್ಕೆ ಹೋಲಿಕೆಯಾಗುವ ಎಲ್‌ಇಡಿ ಡಿಆರ್‌ಎಲ್‌ಗಳು, 18-ಇಂಚಿನ ಡೈಮಂಡ್ ಕಟ್ ಅಲಾಯ್ ವೀಲ್‌ಗಳು ಹಾಗೂ ಎಲ್ಇಡಿ ಟೈಲ್‌ಲ್ಯಾಂಪ್‌ಗಳನ್ನು ಹೊಂದಿದೆ. ಒಳಭಾಗದ ಕ್ಯಾಬಿನ್ ವಿನ್ಯಾಸವು ಸಾಕಷ್ಟು ಉತ್ತಮವಾಗಿದೆ.
ಹೊಸ ಕಾರು 4,560 ಎಂಎಂ ಉದ್ದ, 1,800 ಎಂಎಂ ಅಗಲ ಹಾಗೂ 1,710 ಎಂಎಂ ಎತ್ತರವಿದ್ದು, 2,760 ಎಂಎಂ ವೀಲ್‌ಬೇಸ್‌ನ್ನು ಪಡೆದಿದೆ. ನಾರ್ಮಲ್, ಇಕೋ & ಸ್ಪೋರ್ಟ್ ಎಂಬ 3 ಡ್ರೈವಿಂಗ್ ಮೋಡ್‌ಗಳನ್ನು ಹೊಂದಿದೆ. ಸ್ನೋ, ಮಡ್, ಮತ್ತು ಸ್ಯಾಂಡ್ ಹೆಸರಿನ 3 ಟ್ರಾಕ್ಷನ್ ಮೋಡ್‌ಗಳನ್ನು ಒಳಗೊಂಡಿದೆ. ಸ್ಟಾರ್ಟ್/ಸ್ಟಾಪ್ ಸಿಸ್ಟಮ್‌ಗಳನ್ನು ಪಡೆದಿದೆ. 6/7 ಆಸನ ಆಯ್ಕೆ ವ್ಯವಸ್ಥೆಯಲ್ಲಿಯೂ ಲಭ್ಯವಿದೆ.

ಈ ಹ್ಯುಂಡೈ ಅಲ್ಕಾಜರ್ ಎಸ್‌ಯುವಿ ಯುವ ಗ್ರಾಹಕರನ್ನು ಆಕರ್ಷಿಸುವ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಇನ್ಫೋಟೈನ್‌ಮೆಂಟ್ ಸಿಸ್ಟಮ್ & ಇನ್ಸ್ಟ್ರುಮೆಂಟ್ ಕ್ಲಸ್ಟರ್‌ಗಾಗಿ 10.25-ಇಂಚಿನ ಡಿಸ್ಪ್ಲೇಗಳು, ಪನೊರೊಮಿಕ್ ಸನ್‌ರೂಫ್, ಡುಯಲ್-ಝೋನ್ ಕ್ಲೇಮೇಟ್ ಕಂಟ್ರೋಲ್, 360-ಡಿಗ್ರಿ ಕ್ಯಾಮೆರಾ, 6 ಏರ್‌ಬ್ಯಾಗ್ ಮತ್ತು ಲೆವೆಲ್-2 ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಅನ್ನು ಪಡೆದಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications