ಹೊಸ ನವೀಕರಣಗಳೊಂದಿಗೆ ಬರುತ್ತಿದೆ ಹ್ಯುಂಡೈ ಅಲ್ಕಾಜರ್ ಎಸ್‍ಯುವಿ
ಜನಪ್ರಿಯ ಕಾರು ತಯಾರಕ ಕಂಪನಿಯಾದ ಹ್ಯುಂಡೈ ತನ್ನ ನವೀಕರಿಸಿದ ಅಲ್ಕಾಜರ್ ಎಸ್‍ಯುವಿಯನ್ನು ಭಾರತೀಯ ಮಾರುಕಟ್ಟೆಯಲ್ಲಿ ಮಾರಾಟ ಮಾಡುತ್ತಿದೆ. ಕಳೆದ ಬಾರಿ ನವೀಕರಣಗಳೊಂದಿಗೆ ಹ್ಯುಂಡೈ ಅಲ್ಕಾಜರ್ (Hyundai Alcazar) ಎಸ್‍ಯುವಿಯು ಪವರ್‌ಫುಲ್ ಟರ್ಬೊ ಪೆಟ್ರೋಲ್ ಎಂಜಿನ್‌ನೊಂದಿಗೆ ಮಾರುಕಟ್ಟೆಗೆ ಲಗ್ಗೆಯಿಟ್ಟಿತು. ಇದೀಗ ಈ ಎಸ್‍ಯುವಿಯು ಮತ್ತೊಂದು ಹೊಸ ನವೀಕತಣಕ್ಕೆ ಸಜ್ಜಾಗುತ್ತಿದೆ.
ಹ್ಯುಂಡೈ ಕ್ರೆಟಾವನ್ನು ನವೀಕರಿಸಿದ ತಿಂಗಳೊಳಗೆ ಅಲ್ಕಾಜರ್ ಫೇಸ್‌ಲಿಫ್ಟ್ ಅನ್ನು ಬಿಡುಗಡೆಗೊಳಿಸಲು ಸಜ್ಜಾಗಿದೆ. ರಿಫ್ರೆಶ್ ಮಾಡಲಾದ ಅಲ್ಕಾಜರ್ ಮೇ ಅಥವಾ ಜೂನ್ ವೇಳೆಗೆ ಮಾರಾಟವಾಗಲಿದೆ. ಈ ಹ್ಯುಂಡೈ ಅಲ್ಕಾಜರ್ ಮಾದರಿಯು ಮೂರು-ಸಾಲು ಕ್ರೆಟಾ ಆಗಿದ್ದರೂ, ಇದು ಹೆಚ್ಚು ಪ್ರೀಮಿಯಂ ನೋಟ ಮತ್ತು ಭಾವನೆಯೊಂದಿಗೆ ತನ್ನದೇ ಆದ ವಿಶಿಷ್ಟ ಗುರುತನ್ನು ಪಡೆಯುತ್ತದೆ. ಅಲ್ಕಾಜರ್ ಫೇಸ್‌ಲಿಫ್ಟ್‌ನಲ್ಲಿನ ಸ್ಟೈಲಿಂಗ್ ನವೀಕರಣಗಳು ನವೀಕರಿಸಿದ ಕ್ರೆಟಾದ ಸಾಲಿನಲ್ಲಿರುತ್ತವೆ.

ಅಲ್ಕಾಜರ್ ಫೇಸ್‌ಲಿಫ್ಟ್‌ನ ಮುಂಭಾಗದ ಬಂಪರ್ ಮತ್ತು ಗ್ರಿಲ್, ಹೆಡ್‌ಲ್ಯಾಂಪ್ ಮತ್ತು ಡೇಟೈಮ್ ರನ್ನಿಂಗ್ ಲ್ಯಾಂಪ್, ಅಲಾಯ್ ವ್ಹೀಲ್ ಗಳು ಮತ್ತು ಹಿಂಭಾಗದ ಟೈಲ್-ಲೈಟ್ ವಿನ್ಯಾಸವು ವಿಶಿಷ್ಟವಾಗಿದೆ ಎಂದು ನಿರೀಕ್ಷಿಸಲಾಗಿದೆ. ಹ್ಯುಂಡೈ ಅಲ್ಕಾಜರ್ ಫೇಸ್‌ಲಿಫ್ಟ್ ಫಿಚರ್ಸ್ (Hyundai Alcazar Facelift) ಬಗ್ಗೆ ಹೇಳುವುದಾದರೆ, 10.25 ಇಂಚಿನ ಡಿಸ್ ಪ್ಲೇ, ADAS ಸೂಟ್, ಡ್ಯುಯಲ್-ಝೋನ್ ಕ್ಲೈಮೇಟ್ ಕಂಟ್ರೋಲ್ ಮತ್ತು ಪನರೊನಿಕ್ ಸನ್‌ರೂಫ್ ಹೊಂದಿದೆ.
ಇದರೊಂದಿಗೆ ಕ್ರೆಟಾದಿಂದ ಹೊರತೆಗೆಯಲಾದ ಕ್ಯಾಬಿನ್ ಸ್ಪೇಸ್ ಮತ್ತು ಸೀಟುಗಳು ಸಹ ಬದಲಾಗದೆ ಉಳಿಯುತ್ತವೆ. ಈ ಹೊಸ ನವೀಕರಿಸಿದ ಎಸ್‍ಯುವಿಯಲ್ಲಿ ಎಂಜಿನ್ ನಲ್ಲಿ ಯಾವುದೇ ಬದಲಾವಣೆಗಳನ್ನು ಹೊಂದಿರುವ ಸಾಧ್ಯತೆಗಳಿದೆ. ಈ ಹ್ಯುಂಡೈ ಅಲ್ಕಾಜರ್ ಎಸ್‍ಯುವಿ ಹೊಸ 1.5-ಲೀಟರ್ 4-ಸಿಲಿಂಡರ್ ಟರ್ಬೋಚಾರ್ಜ್ಡ್ ಪೆಟ್ರೋಲ್ ಎಂಜಿನ್ ಅನ್ನು ನೀಡಿದೆ. ಈ ಎಸ್‍ಯುವಿಯಿಂದ ಹಳೆಯ 2.0-ಲೀಟರ್ ನ್ಯಾಚುರಲ್-ಆಸ್ಪೈರರ್ಡ್ ಪೆಟ್ರೋಲ್ ಎಂಜಿನ್ ಅನ್ನು ತೆಗೆದು ಹಾಕಿದೆ.

ಹ್ಯುಂಡೈ ಅಲ್ಕಾಜರ್ ಎಸ್‍ಯುವಿಯು ವಿಪ್ರೆಸ್ಟೀಜ್ ಮತ್ತು ಪ್ಲಾಂಟಿನಮ್ 7-ಸೀಟರ್ ರೂಪಾಂತರಗಳನ್ನು 6-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನೊಂದಿಗೆ ಮಾತ್ರ ನೀಡಲಾಗಿದೆ. ಈ ಎಸ್‍ಯುವಿಯ ಟಾಪ್-ಸ್ಪೆಕ್ ಪ್ಲಾಟಿನಂ (O) ಮತ್ತು ಸಿಗ್ನೇಚರ್ (O) ಆರು-ಆಸನಗಳ ಲೇಔಟ್‌ಗಳು ಮತ್ತು 7-ಸ್ಪೀಡ್ ಡ್ಯುಯಲ್-ಕ್ಲಚ್ ಗೇರ್‌ಬಾಕ್ಸ್‌ನೊಂದಿಗೆ ಬರುತ್ತವೆ. ಹೊಸ 1.5-ಲೀಟರ್ ಟರ್ಬೊ-ಪೆಟ್ರೋಲ್ ಎಂಜಿನ್ 158 bhp ಮತ್ತು 253 Nm ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ.
ಈ 1.5 ಲೀಟರ್ ಪೆಟ್ರೋಲ್ ಎಂಜಿನ್ RDE (ರಿಯಲ್ ಡ್ರೈವಿಂಗ್ ಎಮಿಷನ್) ಕಂಪ್ಲೈಂಟ್ ಮತ್ತು E20 (ಎಥೆನಾಲ್) ಇಂಧನವನ್ನು ಸಹ ಬೆಂಬಲಿಸುತ್ತದೆ. ಈ ಎಂಜಿನ್ ಆಯ್ಕೆಗಳಲ್ಲಿ 6-ಮ್ಯಾನುವಲ್ ಗೇರ್ ಬಾಕ್ಸ್ ಮತ್ತು ಹೊಸ 7-ಸ್ಪೀಡ್ ಡ್ಯುಯಲ್-ಕ್ಲಚ್ ಟ್ರಾನ್ಸ್‌ಮಿಷನ್ ಅಥವಾ DCT ಸೇರಿವೆ. ಈ ಹೊಸ ಎಂಜಿನ್ ಇಂಟಿಗ್ರೇಟೆಡ್ ಸ್ಟಾರ್ಟ್-ಸ್ಟಾಪ್ ಟೆಕ್ ಅನ್ನು ಸಹ ಪಡೆಯುತ್ತದೆ. DCT ಆವೃತ್ತಿಯು 18 ಕಿ.ಮೀ ಮೈಲೇಜ್ ಅನ್ನು ನೀಡುತ್ತದೆ.
ಇದರ ಮ್ಯಾನುವಲ್ ಆವೃತ್ತಿಯು 17.5 ಕಿ,ಮೀ ಮೈಲೇಜ್ ಅನ್ನು ನೀಡುತ್ತದೆ. ಇನ್ನು 1.5-ಲೀಟರ್ ಡೀಸೆಲ್ ಎಂಜಿನ್ ಅನ್ನು ಕೂಡ ನೀಡಿದೆ. ಈ ಎಂಜಿನ್ 115 bhp ಮತ್ತು 250 Nm ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಈ ಎಂಜಿನ್ ಅನ್ನು 6-ಸ್ಪೀಡ್ ಮ್ಯಾನ್ಯುವಲ್ ಮತ್ತು 6-ಸ್ಪೀಡ್ ಟಾರ್ಕ್ ಕರ್ನ್ವಾಟರ್ ಗೇರ್ ಬಾಕ್ಸ್ ಅನ್ನು ಜೋಡಿಸಲಾಗಿದೆ.
ಇದರಲ್ಲಿ ಸ್ಟ್ಯಾಂಡರ್ಡ್ ಆಗಿ ಸೈಡ್ ಮತ್ತು ಕರ್ಟನ್ ಏರ್‌ಬ್ಯಾಗ್‌ಗಳನ್ನು ಒಳಗೊಂಡಂತೆ ಆರು ಏರ್‌ಬ್ಯಾಗ್‌ಗಳನ್ನು ಪಡೆಯುತ್ತದೆ. ಇನ್ನು ಈ ಅಲ್ಕಾಜರ್ ಎಸ್‍ಯುವಿ ಮಾದರಿಯು 6 ಏರ್‌ಬ್ಯಾಗ್‌ಗಳು, ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್ (ESC), ವೆಹಿಕಲ್ ಸ್ಟೆಬಿಲಿಟಿ ಮ್ಯಾನೇಜ್‌ಮೆಂಟ್ (VSM), ಹಿಲ್ ಸ್ಟಾರ್ಟ್ ಅಸಿಸ್ಟ್ ಕಂಟ್ರೋಲ್ (HAC) ಮತ್ತು ಎಲ್ಲಾ ವ್ಹೀಲ್ ಗಳಿಗೆ ಡಿಸ್ಕ್ ಬ್ರೇಕ್‌ಗಳನ್ನು ನೀಡಲಾಗಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications