Hyundai Creta EV: ಹ್ಯುಂಡೈ ಕ್ರೆಟಾ ಎಲೆಕ್ಟ್ರಿಕ್ ಕಾರು ಶೀಘ್ರ ಉತ್ಪಾದನೆ.. 500 ಕಿ.ಮೀ ಓಡಬಲ್ಲದು, ವಿಶೇಷತೆಗಳೇನು?

ಭಾರತದಲ್ಲಿ ಪ್ರಮುಖ ವಾಹನ ತಯಾರಕ ಕಂಪನಿಯಾಗಿ ಹ್ಯುಂಡೈ (Hyundai) ಗುರುತಿಸಿಕೊಂಡಿದೆ. ಕೆಲವೇ ತಿಂಗಳ ಹಿಂದೆ ಬಿಡುಗಡೆಗೊಳಿಸಿದ್ದ ಹೊಸ 'ಕ್ರೆಟಾ ಫೇಸ್‌ಲಿಫ್ಟ್' ಎಸ್‌ಯುವಿಯನ್ನು ದೊಡ್ಡ ಸಂಖ್ಯೆಯಲ್ಲಿ ಗ್ರಾಹಕರು ಇಷ್ಟಪಟ್ಟು ಖರೀದಿಸುತ್ತಿದ್ದಾರೆ. ದೇಶೀಯ ಮಾರುಕಟ್ಟೆಯಲ್ಲಿ ಇದೇ ಕಾರನ್ನು ಎಲೆಕ್ಟ್ರಿಕ್ ರೂಪದಲ್ಲಿ ಪರಿಚಯಿಸಲು ಕಂಪನಿಯು ಭರದಿಂದ ಸಿದ್ಧತೆಯನ್ನು ನಡೆಸುತ್ತಿದೆ ಎಂದು ವರದಿಯಾಗಿದೆ.

ನೂತನ ಹ್ಯುಂಡೈ ಕ್ರೆಟಾ ಇವಿ ಉತ್ಪಾದನೆಯು ಡಿಸೆಂಬರ್‌ನಲ್ಲಿ ಆರಂಭವಾಗಬಹುದು ಎಂದು ಮೂಲಗಳಿಂದ ತಿಳಿದುಬಂದಿದೆ. ಈ ಎಲೆಕ್ಟ್ರಿಕ್ ಕಾರು 'ಕ್ರೆಟಾ ಫೇಸ್‌ಲಿಫ್ಟ್' ವಿನ್ಯಾಸವನ್ನು ಆಧರಿಸಿರಲಿದ್ದು, ಇತ್ತೀಚೆಗೆ ಪರೀಕ್ಷಾರ್ಥ ಸಂಚಾರ ನಡೆಸುವಾಗಲೂ ಕಂಡುಬಂದಿದೆ. ಇದು ಹೊರಭಾಗದಲ್ಲಿ ಆಕರ್ಷಕ ಗ್ರಿಲ್, ಬದಲಾವಣೆಗೊಂಡ ಬಂಪರ್ ಹಾಗೂ ಚಾರ್ಜಿಂಗ್ ಪೋರ್ಟ್‌ನ್ನು ಹೊಂದಿರಲಿದೆ. ಜೊತೆಗೆ ಅಲಾಯ್ ವೀಲ್ಸ್ ಕೂಡ ಒಳಗೊಂಡಿರಲಿದೆ ಎನ್ನಲಾಗಿದೆ.

New Hyundai Creta Electric Car Production Begin In December 2024 500 Km Mailage Expected

ಈ ಹೊಸ ಹ್ಯುಂಡೈ ಕ್ರೆಟಾ ಇವಿ (Hyundai Creta EV), ಇನ್ಫೋಟೈನ್‌ಮೆಂಟ್ ಸಿಸ್ಟಮ್‌ & ಇನ್ಸ್ಟ್ರುಮೆಂಟ್ ಕ್ಲಸ್ಟರ್‌ಗಾಗಿ ಡುಯಲ್ ಡಿಸ್ಪ್ಲೇ, ಹೊಸದಾದ ಸ್ಟೀರಿಂಗ್ ವೀಲ್, ಸ್ಟೀರಿಂಗ್ ಕಾಲಮ್-ಮೌಂಟೆಡ್ ಡ್ರೈವ್ ಸೆಲೆಕ್ಟರ್, ಎಸಿ ವೆಂಟ್ಸ್, ಪನೋರಮಿಕ್ ಸನ್‌ರೂಫ್, ಡುಯಲ್-ಜೋನ್ ಕ್ಲೈಮೇಟ್ ಕಂಟ್ರೋಲ್ ವೈಶಿಷ್ಟ್ಯಗಳನ್ನು ಪಡೆದಿರಲಿದೆ. ಸುರಕ್ಷತೆಗಾಗಿ 6 ಏರ್‌ಬ್ಯಾಗ್‌, ADAS (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ರೇರ್ ಪಾರ್ಕಿಂಗ್ ಸೇನಾರ್ಸ್ ಒಳಗೊಂಡಿರುವ ಸಾಧ್ಯತೆಯಿದೆ.

ನೂತನ ಹ್ಯುಂಡೈ ಕ್ರೆಟಾ ಇವಿ ದೊಡ್ಡದಾದ ಬ್ಯಾಟರಿ ಪ್ಯಾಕ್ ಹೊಂದಿರಲಿದ್ದು, ಬಹುತೇಕ 50 ಕೆಡಬ್ಲ್ಯೂಹೆಚ್ ಅಥವಾ 60 ಕೆಡಬ್ಲ್ಯೂಹೆಚ್ ಆಯ್ಕೆಯಲ್ಲಿ ಖರೀದಿಗೆ ದೊರೆಯಬಹುದು ಎನ್ನಲಾಗಿದೆ. ಭರ್ತಿ ಚಾರ್ಜ್ ನಲ್ಲಿ ಸುಮಾರು 500 ಕಿಲೋಮೀಟರ್ ರೇಂಜ್ (ಮೈಲೇಜ್) ನೀಡಬಹುದು ಎಂದು ಅಂದಾಜಿಸಲಾಗಿದೆ. ಈ ಕಾರಿಗೆ ಟಾಟಾ ನೆಕ್ಸಾನ್ ಇವಿ, ಮಹೀಂದ್ರಾ ಎಕ್ಸ್‌ಯುವಿ400 ಪ್ರಬಲ ಪ್ರತಿಸ್ಪರ್ಧಿಯಾಗಬಹುದು ಎಂದು ಹೇಳಲಾಗಿದೆ.

New Hyundai Creta Electric Car Production Begin In December 2024 500 Km Mailage Expected

ಸದ್ಯ, ದೇಶೀಯ ಮಾರುಕಟ್ಟೆಯಲ್ಲಿ ಖರೀದಿಗೆ ದೊರೆಯುವ ಇಂಧನ ಚಾಲಿತ ಹ್ಯುಂಡೈ ಕ್ರೆಟಾ ಫೇಸ್‌ಲಿಫ್ಟ್ ಎಸ್‌ಯುವಿ, ರೂ.11 ಲಕ್ಷದಿಂದ ರೂ.20.15 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. ಇ, ಎಕ್ಸ್, ಎಸ್, ಎಸ್ (ಒ) ಸೇರಿದಂತೆ ವಿವಿಧ ರೂಪಾಂತರ ಹಾಗೂ ಫಿಯರಿ ರೆಡ್, ರೇಂಜರ್ ಖಾಕಿ, ಅಬಿಸ್ ಬ್ಲ್ಯಾಕ್, ಅಟ್ಲಾಸ್ ವೈಟ್ ಒಳಗೊಂಡಂತೆ ಆಕರ್ಷಕ ಬಣ್ಣಗಳೊಂದಿಗೂ ಸಿಗುತ್ತದೆ. ಈ ಕಾರಿನಲ್ಲಿ 5 ಮಂದಿ ಪ್ರಯಾಣಿಸಬಹುದು.

ಈ ಹ್ಯುಂಡೈ ಕ್ರೆಟಾ ಫೇಸ್‌ಲಿಫ್ಟ್ ಕಾರು 1.5-ಲೀಟರ್ ನ್ಯಾಚುರಲ್ ಆಸ್ಪಿರೇಟೆಡ್ ಪೆಟ್ರೋಲ್, 1.5-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ ಮತ್ತು 1.5-ಲೀಟರ್ ಡೀಸೆಲ್ ಎಂಜಿನ್ ಆಯ್ಕೆಯನ್ನು ಹೊಂದಿದೆ. ರೂಪಾಂತರಗಳ ಅನ್ವಯ 6-ಸ್ಪೀಡ್ ಮ್ಯಾನುವಲ್, 6-ಸ್ಪೀಡ್ ಆಟೋಮೆಟಿಕ್, ಸಿವಿಟಿ, 7-ಸ್ಪೀಡ್ ಡಿಸಿಟಿ ಗೇರ್ ಬಾಕ್ಸ್ ಅನ್ನು ಪಡೆದಿದೆ. ಪೆಟ್ರೋಲ್ ರೂಪಾಂತರಗಳು 17.4 ರಿಂದ 18.4 ಕೆಎಂಪಿಎಲ್ ಹಾಗೂ ಡೀಸೆಲ್ ಮಾದರಿಗಳು 19.1 ರಿಂದ 21.8 ಮೈಲೇಜ್ ನೀಡುತ್ತವೆ.

ಹ್ಯುಂಡೈ ಕ್ರೆಟಾ ಫೇಸ್‌ಲಿಫ್ಟ್ ಎಸ್‌ಯುವಿ 10.25-ಇಂಚಿನ ಡುಯಲ್ ಡಿಸ್ಪ್ಲೇ (ಇನ್ಫೋಟೈನ್‌ಮೆಂಟ್ ಸಿಸ್ಟಮ್‌ & ಇನ್ಸ್ಟ್ರುಮೆಂಟ್ ಕ್ಲಸ್ಟರ್) ಡುಯಲ್ ಝೋನ್ ಎಸಿ, 8-ಸ್ಪೀಕರ್ ಬೋಸ್ ಸೌಂಡ್ ಸಿಸ್ಟಮ್, ಸನ್‌ರೂಫ್, ವೈರ್‌ಲೆಸ್ ಫೋನ್ ಚಾರ್ಜಿಂಗ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಯ ದೃಷ್ಟಿಯಿಂದ 6 ಏರ್‌ಬ್ಯಾಗ್‌, ESC (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), TPMS (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಅನ್ನು ಪಡೆದಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ತಂಡ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ಒದಗಿಸುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ ಗಳನ್ನು ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Friday, April 26, 2024, 14:13 [IST]
English summary
New hyundai creta electric car production begin december 2024 500 mileage expected
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+