5-ಸೀಟರ್, 500 Km ರೇಂಜ್..! ಶೀಘ್ರ ಈ ಜನಪ್ರಿಯ ಕಾರು ಎಲೆಕ್ಟ್ರಿಕ್ ರೂಪದಲ್ಲಿ.. ಇಂಟೀರಿಯರ್ ಫೀಚರ್‌ಗಳು ಬಹಿರಂಗ!

ದಕ್ಷಿಣ ಕೊರಿಯಾ ಮೂಲದ ಹ್ಯುಂಡೈ (Hyundai) ಜನಪ್ರಿಯ ಕಾರು ತಯಾರಕ ಕಂಪನಿಯಾಗಿ ಗುರುತಿಸಿಕೊಂಡಿದೆ. ದೇಶೀಯ ಕಂಪನಿಗಳಾದ ಟಾಟಾ ಮೋಟಾರ್ಸ್ ಹಾಗೂ ಮಹೀಂದ್ರಾಗೆ ಪ್ರಬಲ ಸ್ಪರ್ಧೆಯೊಡ್ಡುತ್ತಿದ್ದು, ಆಕರ್ಷಕ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಪಡೆದುಕೊಂಡಿರುವ ವಿವಿಧ ಕಾರುಗಳನ್ನು ಮಾರಾಟ ಮಾಡುತ್ತಿದೆ. ಸದ್ದಿಲ್ಲದೇ, ಗರಿಷ್ಠ ಸಂಖ್ಯೆಯಲ್ಲಿ ಮಾರಾಟವಾಗುವ 'ಕ್ರೆಟಾ' ಎಸ್‌ಯುವಿಯನ್ನು ಎಲೆಕ್ಟ್ರಿಕ್ ರೂಪದಲ್ಲಿ ಮಾರಾಟಕ್ಕೆ ತರಲು ಸಿದ್ದತೆಯಲ್ಲಿ ತೊಡಗಿದೆ. ಈಗಾಗಲೇ, ಮುಂಬರಲಿರುವ ಕ್ರೆಟಾ ಇವಿ ಕೆಲವು ಬಾರಿ ಪ್ರಾಯೋಗಿಕ ಸಂಚಾರವನ್ನು ನಡೆಸುವಾಗಲೂ ಕಂಡುಬಂದಿದೆ.

ಇದೀಗ, ಹ್ಯುಂಡೈ ಕ್ರೆಟಾ ಇವಿ (ಎಲೆಕ್ಟ್ರಿಕ್ ಕಾರು) ಒಳಭಾಗ ಹೇಗಿರಲಿದೆ ಎಂಬುದರ ಕುರಿತಂತೆ ಒಂದಷ್ಟು ಫೋಟೋಗಳು ಆನ್‌ಲೈನ್‌ನಲ್ಲಿ ಸೋರಿಕೆಯಾಗಿವೆ. ಈ ಫೋಟೋಗಳಲ್ಲಿ ನೂತನ ಎಲೆಕ್ಟ್ರಿಕ್ ಕಾರಿನ ಒಳಾಂಗಣ (ಇಂಟೀರಿಯರ್) ಪೆಟ್ರೋಲ್/ಡೀಸೆಲ್ ಚಾಲಿತ ಕ್ರೆಟಾ ಕಾರಿಗೆ ಹೋಲಿಕೆಯಾಗುತ್ತದೆ. ಹೊಸದಾದ ಸ್ಟೀರಿಂಗ್ ವೀಲ್, ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಸ್ವಿಚ್ ಗೇರ್, ಯುನಿಟ್, ಸ್ಟೀರಿಂಗ್ ಕಾಲಂನಲ್ಲಿ ಡ್ರೈವ್ ಮೋಡ್ ಸೆಲೆಕ್ಟರ್ ವೈಶಿಷ್ಟ್ಯಗಳನ್ನು (ಫೀಚರ್) ಹೊಂದಿರುವುದನ್ನು ನೋಡಬಹುದು.

New Hyundai Creta Ev Interior Spied Expected Price And Features Details

ಈ ಕಾರು ಹೊರಭಾಗದಲ್ಲಿ (ಔಟ್-ಸೈಡ್) ಅತ್ಯಾಧುನಿಕ ವಿನ್ಯಾಸವನ್ನು (ಡಿಸೈನ್) ಒಳಗೊಂಡಿರುವ ನಿರೀಕ್ಷೆಯಿದೆ. ಆಕರ್ಷಕವಾದ ಗ್ರಿಲ್, ಬದಲಾವಣೆಗೊಂಡ ಬಂಪರ್, ಚಾರ್ಜಿಂಗ್ ಪೋರ್ಟ್‌ ಮತ್ತು ಅಲಾಯ್ ವೀಲ್‌ಗಳನ್ನು ಪಡೆದುಕೊಂಡಿರಲಿದೆ ಎಂದು ಹೇಳಲಾಗಿದೆ. 50 ಅಥವಾ 60 ಕೆಡಬ್ಲ್ಯೂಹೆಚ್ (ಕಿಲೋ ವ್ಯಾಟ್) ಬ್ಯಾಟರಿ ಪ್ಯಾಕ್ ಆಯ್ಕೆಯಲ್ಲಿ ಖರೀದಿಗೆ ಲಭ್ಯವಾಗಲಿದ್ದು, ಸಂಪೂರ್ಣ ಚಾರ್ಜ್‌ನಲ್ಲಿ 500 ಕಿಲೋಮೀಟರ್‌ವರೆಗೆ ರೇಂಜ್ (ಮೈಲೇಜ್) ನೀಡಬಹುದು ಎಂದು ಅಂದಾಜಿಸಲಾಗಿದೆ.

ನೂತನ ಹ್ಯುಂಡೈ ಕ್ರೆಟಾ ಇವಿ (Hyundai Creta EV), ಮುಂದಿನ ವರ್ಷದ (2025) ಆರಂಭದಲ್ಲಿ ಮಾರಾಟಕ್ಕೆ ಬರುವ ನಿರೀಕ್ಷೆಯಿದ್ದು, ರೂ.20 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿರಲಿದೆ ಎಂದು ಹೇಳಲಾಗಿದೆ. ಈ ಕಾರಿಗೆ ಟಾಟಾ ನೆಕ್ಸಾನ್ ಇವಿ, ಮಹೀಂದ್ರಾ ಎಕ್ಸ್‌ಯುವಿ400 ಪ್ರಬಲ ಪ್ರತಿಸ್ಪರ್ಧಿಯಾಗಬಹುದು ಎನ್ನಲಾಗಿದೆ.

New Hyundai Creta Ev Interior Spied Expected Price And Features Details

ಸದ್ಯ, ದೇಶೀಯ ಮಾರುಕಟ್ಟೆಯಲ್ಲಿ ಖರೀದಿಗೆ ದೊರೆಯುವ ಇಂಧನ (ಪೆಟ್ರೋಲ್/ಡೀಸೆಲ್) ಚಾಲಿತ ಹ್ಯುಂಡೈ ಕ್ರೆಟಾ, ರೂ.11 ಲಕ್ಷದಿಂದ ರೂ.20.30 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. ಇ, ಎಕ್ಸ್, ಎಸ್, ಎಸ್ (ಒ) ಸೇರಿದಂತೆ ಹಲವು ರೂಪಾಂತರಗಳನ್ನು (ವೇರಿಯೆಂಟ್) ಪಡೆದಿದೆ. ಜೊತೆಗೆ ಆಕರ್ಷಕವಾದ ಬಣ್ಣಗಳೊಂದಿಗೂ ಸಿಗುತ್ತದೆ.

ಈ ಕಾರು, 1.5-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್, 1.5-ಲೀಟರ್ ಟರ್ಬೊ ಪೆಟ್ರೋಲ್ ಹಾಗೂ 1.5-ಲೀಟರ್ ಡೀಸೆಲ್ ಎಂಜಿನ್‌‌ನ್ನು ಪಡೆದಿದೆ. ರೂಪಾಂತರ ಅನ್ವಯ 6-ಸ್ಪೀಡ್ ಮ್ಯಾನುವಲ್, 6-ಸ್ಪೀಡ್ ಆಟೋಮೆಟಿಕ್, ಸಿವಿಟಿ, 7-ಸ್ಪೀಡ್ ಡಿಸಿಟಿ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 17.4 ರಿಂದ 21.8 ಕೆಎಂಪಿಎಲ್‌ವರೆಗೂ ಮೈಲೇಜ್ ಕೊಡುತ್ತದೆ.

New Hyundai Creta Ev Interior Spied Expected Price And Features Details

ನೂತನ ಹ್ಯುಂಡೈ ಕ್ರೆಟಾದಲ್ಲಿ 5 ಮಂದಿ ಆರಾಮದಾಯಕವಾಗಿ ಕುಳಿತುಕೊಂಡು ಪ್ರಯಾಣಿಸಬಹುದು. 10.25-ಇಂಚಿನ ಡುಯಲ್ ಡಿಸ್‌ಪ್ಲೇ, ಡುಯಲ್ ಝೋನ್ ಎಸಿ, 8-ಸ್ಪೀಕರ್ ಬೋಸ್ ಸೌಂಡ್ ಸಿಸ್ಟಮ್, ಸನ್‌ರೂಫ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಯ ಸಲುವಾಗಿ 6 ಏರ್‌ಬ್ಯಾಗ್‌ ಮತ್ತು ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಅನ್ನು ಒಳಗೊಂಡಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Source: Rushlane

More from DriveSpark

Article Published On: Monday, September 30, 2024, 20:45 [IST]
English summary
New hyundai creta ev interior spied expected price and features details
Read more on hyundai india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+