11 ಲಕ್ಷ ರೂ. ಆರಂಭಿಕ ಬೆಲೆಗೆ ಬಿಡುಗಡೆಯಾದ ಹೊಸ ಹ್ಯುಂಡೈ ಕ್ರೆಟಾ ಫೇಸ್‌ಲಿಫ್ಟ್‌ ವಿಶೇಷತೆಗಳು!

ಹ್ಯುಂಡೈ ತನ್ನ ಎರಡನೇ ತಲೆಮಾರಿನ ಕ್ರೆಟಾವನ್ನು ರೂ. 11 ಲಕ್ಷದ ಆರಂಭಿಕ ಬೆಲೆಯಲ್ಲಿ ಬಿಡುಗಡೆ ಮಾಡಿದೆ. ಹೊಸ SUV ಏಳು ವಿಭಿನ್ನ ಟ್ರಿಮ್‌ಗಳಲ್ಲಿ ಬರಲಿದ್ದು, ಇದರ ಮೂಲ E ವೇರಿಯೆಂಟ್‌ಗೆ 10,99,900 ಮತ್ತು SX(O) ಟಾಪ್-ಎಂಡ್ ಮಾದರಿಗೆ ರೂ. 17,23,800 (ಎಲ್ಲಾ ಬೆಲೆಗಳು, ಎಕ್ಸ್ ಶೋರೂಂ) ಬೆಲೆಯಿದೆ.

ಇಂಟೀರಿಯರ್: 2024 ಕ್ರೆಟಾದ ಒಳಭಾಗವು ಸಮಗ್ರವಾದ ಮರುವಿನ್ಯಾಸಕ್ಕೆ ಒಳಗಾಗಿದೆ, ಡ್ಯುಯಲ್ ಇಂಟಿಗ್ರೇಟೆಡ್ 10.25-ಇಂಚಿನ ಡಿಸ್ಪ್ಲೇಗಳನ್ನು ಒಳಗೊಂಡಿದೆ, ಒಂದು ಇನ್ಫೋಟೈನ್ಮೆಂಟ್ ಸಿಸ್ಟಮ್‌ಗಾಗಿ ಮತ್ತು ಇನ್ನೊಂದು ಇನ್ಸ್ಟ್ರುಮೆಂಟ್ ಕ್ಲಸ್ಟರ್‌ಗಾಗಿ ನೀಡಲಾಗಿದೆ. ಪ್ರಯಾಣಿಕರ ಬದಿಯ ಡ್ಯಾಶ್‌ಬೋರ್ಡ್‌ನ ಮೇಲಿನ ಈಗ ಪಿಯಾನೋ ಬ್ಲಾಕ್ ಪ್ಯಾನಲ್ ನೀಡಲಾಗಿದೆ.

new-hyundai-creta-facelift-features-price-engine-details

ಹೊಸ 10.25-ಇಂಚಿನ ಡಿಜಿಟಲ್ ಡ್ರೈವರ್ ಡಿಸ್‌ಪ್ಲೇಯ ಹೊರತಾಗಿ, ಕ್ರೆಟಾ ಫೇಸ್‌ಲಿಫ್ಟ್ ಅನ್ನು ಪರಿಷ್ಕೃತ ಕ್ಲೈಮೆಟ್ ಕಂಟ್ರೋಲ್ ಪ್ಯಾನಲ್, 360-ಡಿಗ್ರಿ ಕ್ಯಾಮೆರಾ ಮತ್ತು ಸುಧಾರಿತ ಚಾಲಕ ಸಹಾಯ ವ್ಯವಸ್ಥೆಗಳೊಂದಿಗೆ (ADAS) ಡ್ಯುಯಲ್-ಜೋನ್ AC ಯೊಂದಿಗೆ ಒದಗಿಸಲಾಗಿದೆ. ಪನಾರಮಿಕ್ ಸನ್‌ರೂಫ್, ವೈರ್‌ಲೆಸ್ ಫೋನ್ ಚಾರ್ಜಿಂಗ್, ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳು ಮತ್ತು 8-ಸ್ಪೀಕರ್ ಬಾಸ್ ಸೌಂಡ್ ಸಿಸ್ಟಮ್ ಅನ್ನು ನೀಡಲಾಗಿದೆ.

ಸುರಕ್ಷತೆಯ ವಿಷಯದಲ್ಲಿ ಈಗ ಆರು ಏರ್‌ಬ್ಯಾಗ್‌ಗಳು, ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್ (TPMS), ISOFIX ಚೈಲ್ಡ್ ಸೀಟ್ ಆಂಕರೇಜ್‌ಗಳು ಮತ್ತು ಎಲೆಕ್ಟ್ರಾನಿಕ್ ಸ್ಟೆಬಿಲಿಟಿಯನ್ನು ಒಳಗೊಂಡಿದೆ. ಹಿಂದಿನ ಸೀಟ್ 2 - ಸ್ಟೆಪ್ ರಿಕ್ಲೈನ್ ಫಂಕ್ಷನ್ ಮತ್ತು ದುಬಾರಿ ಪ್ಯಾಕೇಜ್ ಜೊತೆಗೆ, ಹೊಸ ಹುಂಡೈ CRETA ಒಳಭಾಗವು ಸೌಕರ್ಯ ಮತ್ತು ಅನುಕೂಲಕ್ಕಾಗಿ ಕ್ಯಾಬಿನ್‌ನಲ್ಲಿ ಸಾಕಷ್ಟು ಸ್ಥಳಾವಕಾಶವನ್ನು ನೀಡಲಾಗಿದೆ.

new-hyundai-creta-facelift-features-price-engine-details

ಡಿಸೈನ್: ಫೇಸ್‌ಲಿಫ್ಟ್‌ ಭಾಗಾವಾಗಿ 2024 ಹ್ಯುಂಡೈ ಕ್ರೆಟಾ ಹೆಚ್ಚು ಒರಟಾದ ನೋಟವನ್ನು ಪಡೆದುಕೊಂಡಿದೆ. ನವೀಕರಣಗಳಲ್ಲಿ ಮರುವಿನ್ಯಾಸಗೊಳಿಸಲಾದ ಗ್ರಿಲ್‌ನೊಂದಿಗೆ ಪರಿಷ್ಕೃತ ಮುಂಭಾಗದ ತುದಿ, ಉದ್ದನೆಯ ಎಲ್ಇಡಿ DRL ಸ್ಟ್ರಿಪ್ ಮತ್ತು ಎಲ್ಇಡಿ ಹೆಡ್‌ಲೈಟ್‌ಗಳ ಹೊಸ ಸೆಟಪ್ ಸೇರಿದೆ. ಕೆಳಗಿನ ವಿಭಾಗವು ಈಗ ಹೆಚ್ಚು ದೃಢವಾದ ಸಿಲ್ವರ್ ಸ್ಕಿಡ್ ಪ್ಲೇಟ್ ಅನ್ನು ಸಹ ಹೊಂದಿದೆ.

SUV ಯ ಪ್ರೊಫೈಲ್ ಬಹುತೇಕ ಒಂದೇ ಆಗಿದ್ದರೂ, ಬದಲಾವಣೆಯ ಭಾಗವಾಗಿ ಹೊಸ ಅಲಾಯ್ ವೀಲ್‌ಗಳನ್ನು ನೀಡಲಾಗಿದೆ. ಹಿಂಭಾಗದಲ್ಲಿ ಕ್ರೆಟಾದ ಮುಂಭಾಗದಂತೆ ತಲೆಕೆಳಗಾದ ಎಲ್-ಆಕಾರದ ವಿನ್ಯಾಸವನ್ನು ಪ್ರತಿಬಿಂಬಿಸುವ ಕನೆಕ್ಟೆಡ್ LED ಟೈಲ್ ಲ್ಯಾಂಪ್‌ಗಳನ್ನು ನೀಡಲಾಗಿದೆ. ಬಂಪರ್ ಅನ್ನು ಸಹ ಟ್ವೀಕ್ ಮಾಡಲಾಗಿದ್ದು, ಈಗ ದಪ್ಪವಾದ ಸಿಲ್ವರ್ ಸ್ಕಿಡ್ ಪ್ಲೇಟ್ ಅನ್ನು ಒಳಗೊಂಡಿದೆ.

new-hyundai-creta-facelift-features-price-engine-details

ಎಂಜಿಂನ್: ಹೊಸ 1.5 ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್‌ ಜೊತೆಗೆ 1.5 ಲೀಟರ್ ನ್ಯಾಚುರಲ್ಲಿ ಆಸ್ಪಿರೇಟೆಡ್ ಪೆಟ್ರೋಲ್ ಎಂಜಿನ್ ಮತ್ತು 1.5 ಲೀಟರ್ ಟರ್ಬೊ ಡೀಸೆಲ್ ಎಂಜಿನ್ ಅನ್ನು ಸಹ ಹೊಂದಿದೆ. ಇದರಲ್ಲಿ 6-speed MT, CVT ಹಾಗೂ 7-speed DCT ಮತ್ತು 6-speed MT, 6-speed AT ಆಯ್ಕೆಯನ್ನು ನೀಡಲಾಗಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Wednesday, January 17, 2024, 8:30 [IST]
English summary
New hyundai creta facelift features price engine details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+