ಗರಿಷ್ಠ ಸುರಕ್ಷತೆ, ಭರ್ಜರಿ ಪರ್ಫಾಮೆನ್ಸ್‌ನೊಂದಿಗೆ ಬರುತ್ತಿದೆ ಹೊಸ ಹ್ಯುಂಡೈ ಕ್ರೆಟಾ ಎನ್ ಲೈನ್
ಜನಪ್ರಿಯ ವಾಹನ ತಯಾರಕ ಕಂಪನಿಯಾದ ಹ್ಯುಂಡೈ ತನ್ನ ಹೊಸ ಹ್ಯುಂಡೈ ಕ್ರೆಟಾ ಎನ್ ಲೈನ್ (Hyundai CRETA N Line) ಎಸ್‍ಯುವಿಯನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲು ಸಜ್ಜಾಗುತ್ತಿದೆ. ಈ ಹೊಸ ಹ್ಯುಂಡೈ ಕ್ರೆಟಾ ಎನ್ ಲೈನ್ ಎಸ್‍ಯುವಿಯು 2024ರ ಮಾರ್ಚ್ 11 ರಂದು ಬಿಡುಗಡೆಯಾಗಲಿದೆ.
ಹ್ಯುಂಡೈ ಕಂಪನಿಯು ಈಗಾಗಲೇ ಭಾರತದಲ್ಲಿ ಹೊಸ ಕ್ರೆಟಾ ಎನ್ ಲೈನ್ ಎಸ್‍ಯುವಿ ಖರೀದಿಗಾಗಿ ಬುಕಿಂಗ್ ಅನ್ನು ಪ್ರಾರಂಭಿಸಿದೆ. ಈ ಹೊಸ ಎಸ್‍ಯುವಿಯನ್ನು ಖರೀದಿಸಲು ಬಯಸುವ ಗ್ರಾಹಕರು ಟೋಕನ್ ಮೊತ್ತ ರೂ.25,000 ಪಾವತಿಸಿ ಬುಕ್ ಮಾಡಬಹುದು. ಈಗ ಮುಂಬರುವ ಹ್ಯುಂಡೈ ಕ್ರೆಟಾ ಎನ್ ಲೈನ್ ಎಸ್‍ಯುವಿಯು N8 ಮತ್ತು N10 ಎಂಬ ಎರಡು ವಿಭಿನ್ನ ರೂಪಾಂತರಗಳಲ್ಲಿ ಲಭ್ಯವಿರುತ್ತದೆ.

ಈ ಹೊಸ ಹ್ಯುಂಡೈ ಕ್ರೆಟಾ ಎನ್ ಲೈನ್ ಎಸ್‍ಯುವಿ ಬಹು ಬಣ್ಣದ ಆಯ್ಕೆಗಳನ್ನು ಸಹ ನೀಡುತ್ತದೆ. ಈ ಹೊಸ ಎಸ್‍ಯುವಿಯು ಮೊನೊಟೋನ್ (ಅಬಿಸ್ ಬ್ಲ್ಯಾಕ್ ಪರ್ಲ್, ಅಟ್ಲಾಸ್ ವೈಟ್ ಮತ್ತು ಟೈಟಾನ್ ಗ್ರೇ ಮ್ಯಾಟ್) ಮತ್ತು 3 ಡ್ಯುಯಲ್-ಟೋನ್ ಶೇಡ್‌ಗಳಲ್ಲಿ (ಅಟ್ಲಾಸ್ ವೈಟ್, ಶ್ಯಾಡೋ ಗ್ರೇ ಮತ್ತು ಥಂಡರ್ ಬ್ಲೂ) ನೀಡಲಾಗುವುದು. ಡ್ಯುಯಲ್-ಟೋನ್ ಮಾದರಿಗಳು ಬ್ಲ್ಯಾಕ್ ರೂಫ್ ನೊಂದಿಗೆ ಬರುತ್ತದೆ.
ಈ ಹೊಸ ಕ್ರೆಟಾ ಎನ್ ಲೈನ್ ಎಸ್‍ಯುವಿಯ ವಿನ್ಯಾಸದ ಬಗ್ಗೆ ಹೇಳುವುದಾದರೆ, ಇದು ಸ್ಟ್ಯಾಂಡರ್ಡ್ ಮಾದರಿಗಿಂತ ಹೆಚ್ಚು ಅಗ್ರೇಸಿವ್ ಮತ್ತು ಸ್ಪೋರ್ಟಿಯಾಗಿ ಕಾಣುವಂತೆ ಮಾಡುತ್ತದೆ. ಗಮನಿಸಬಹುದಾದ ವಿನ್ಯಾಸ ಬದಲಾವಣೆಗಳು ಹೊಸ ಮುಂಭಾಗ ಮತ್ತು ಹಿಂಭಾಗದ ಬಂಪರ್‌ಗಳ ಜೊತೆಗೆ ಹೊರಭಾಗದಲ್ಲಿ ಕೆಂಪು ಬಣ್ಣದ ಸ್ಪ್ಲಾಶ್‌ಗಳು, ಸ್ಪೋರ್ಟಿ ಡ್ಯುಯಲ್ ಎಕ್ಸಾಸ್ಟ್ ಟಿಪ್ಸ್ ಮತ್ತು ಹೆಚ್ಚಿನದನ್ನು ಒಳಗೊಂಡಿವೆ.

ಈ ಹೊಸ ಬಹುನಿರೀಕ್ಷಿತ ಕ್ರೆಟಾ ಎನ್ ಲೈನ್ ಎಸ್‍ಯುವಿ ಸ್ಪೋರ್ಟಿ ಥೀಮ್ ಅನ್ನು ಹೊಂದಿದೆ ಮತ್ತು ಕ್ಯಾಬಿನ್‌ನಾದ್ಯಂತ ರೆಡ್ ಅಸ್ಸೆಂಟ್ ಸ್ಪ್ಲಾಶ್‌ಗಳೊಂದಿಗೆ ಸಾಗಿಸಲಾಗುತ್ತದೆ. ಈ ಮಾದರಿಯು ಕನಿಷ್ಠ ಒಂದು ಡಜನ್ "N" ಲೋಗೋಗಳನ್ನು ಹೊಂದಿದೆ ಎಂದು ನಾವು ನಿರೀಕ್ಷಿಸುತ್ತೇವೆ. ಇನ್ನು ಸ್ಟ್ಯಾಂಡರ್ಡ್ ಮಾದರಿಯಲ್ಲಿರುವ ಹಲವು ಅತ್ಯಾಧುನಿಕ ಫೀಚರ್ಸ್ ಇದರಲ್ಲಿಯೂ ನೀಡಬಹುದು.
ಈ ಹೊಸ ಹೊಸ ಕ್ರೆಟಾ ಎನ್ ಲೈನ್ ಎಸ್‍ಯುವಿಯಲ್ಲಿ 1.5-ಲೀಟರ್, 4-ಸಿಲಿಂಡರ್, ಟರ್ಬೋಚಾರ್ಜ್ಡ್ ಪೆಟ್ರೋಲ್ ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್158 bhp ಮತ್ತು 253 Nm ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಈ ಎಂಜಿನ್ ಅನ್ನು 6-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಅಥವಾ 7-ಸ್ಪೀಡ್ DCT ಯುನಿಟ್ ನಡುವೆ ಆಯ್ಕೆ ಮಾಡಬಹುದು.

ಈ ಹೊಸ ಎಸ್‍ಯುವಿಯಲ್ಲಿ 42 ಸ್ಟ್ಯಾಂಡರ್ಡ್ ಮತ್ತು 70 ಕ್ಕೂ ಹೆಚ್ಚು ಸುಧಾರಿತ ಸುರಕ್ಷತಾ ವೈಶಿಷ್ಟ್ಯಗಳೊಂದಿಗೆ ನೀಡಲಾಗುವುದು. ಆರು ಏರ್‌ಬ್ಯಾಗ್‌ಗಳು, ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್, ಆಟೋ ಹೋಲ್ಡ್ ಫಂಕ್ಷನ್‌ನೊಂದಿಗೆ ಎಲೆಕ್ಟ್ರಾನಿಕ್ ಪಾರ್ಕಿಂಗ್ ಬ್ರೇಕ್, ಹಿಲ್ ಅಸಿಸ್ಟ್ ಕಂಟ್ರೋಲ್ ಮತ್ತು EBD ಜೊತೆಗೆ ABS ನಂತಹ ವೈಶಿಷ್ಟ್ಯಗಳು ಶ್ರೇಣಿಯಾದ್ಯಂತ ಸ್ಟ್ಯಾಂಡರ್ಡ್ ಆಗಿ ನೀಡಲಾಗುತ್ತದೆ.
ಇದರೊಂದಿಗೆ ಈ ಎಸ್‍ಯುವಿಯಲ್ಲಿ 360-ಡಿಗ್ರಿ ಸರೌಂಡ್ ಕ್ಯಾಮೆರಾ, ಬ್ಲೈಂಡ್ ಸ್ಪಾಟ್ ಮಾನಿಟರ್, ಸ್ವಯಂಚಾಲಿತ ಹೆಡ್‌ಲ್ಯಾಂಪ್‌ಗಳು, ಆಟೋಮ್ಯಾಟಿಕ್ ವೈಪರ್‌ಗಳು, ಮುಂಭಾಗ ಮತ್ತು ಹಿಂಭಾಗದ ಪಾರ್ಕಿಂಗ್ ಸೆನ್ಸರ್ ಮತ್ತು ಲೆವೆಲ್ 2 ADAS ಸೂಟ್‌ನಂತಹ ವೈಶಿಷ್ಟ್ಯಗಳನ್ನು ಸಹ ಪಡೆಯುತ್ತದೆ. ಈ ಹೊಸ ಪರ್ಫಾಮೆನ್ಸ್ ಎಸ್‍ಯುವಿಯು ಭಾರತದಲ್ಲಿ ಸಂಚಲನವನ್ನು ಸೃಷ್ಟಿಸಲು ಸಜ್ಜಾಗಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications