ಆಕರ್ಷಕ ಬೆಲೆಯ ಹ್ಯುಂಡೈ ಗ್ರ್ಯಾಂಡ್ ಐ10 ನಿಯೋಸ್ ಕಾರ್ಪೊರೇಟ್ ರೂಪಾಂತರ ವಿಶೇಷತೆಗಳೇನು?

ಹ್ಯುಂಡೈ ಮೋಟಾರ್ ಇಂಡಿಯಾ ಲಿಮಿಟೆಡ್ ಕಂಪನಿಯು ತನ್ನ ಗ್ರ್ಯಾಂಡ್ ಐ10 ನಿಯೋಸ್ ಹೊಸ ರೂಪಾಂತರವನ್ನು ದೇಶೀಯ ಮಾರುಕಟ್ಟೆಯಲ್ಲಿ ಗುರುವಾರ ಬಿಡುಗಡೆಗೊಳಿಸಿತು. ಇದಕ್ಕೆ ಕಾರ್ಪೊರೇಟ್ (Corporate) ಎಂದು ನಾಮಕರಣ ಮಾಡಿದೆ. ಇದರ ಮ್ಯಾನುವಲ್ ಗೇರ್‌ಬಾಕ್ಸ್‌ ಹೊಂದಿರುವ ಆವೃತ್ತಿಯು ರೂ.6.93 ಲಕ್ಷ ಹಾಗೂ ಆಟೋಮೆಟಿಕ್ ಗೇರ್‌ಬಾಕ್ಸ್‌ನ ಮಾದರಿಯು ರೂ.7.58 ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ.

ಹೊಸ ಆವೃತ್ತಿಯು ನವೀನ ಅಮೆಜಾನ್ ಗ್ರೇ ಬಣ್ಣದೊಂದಿಗೆ ಲಭ್ಯವಿದ್ದು, ಟೈಲ್‌ಗೇಟ್‌ನಲ್ಲಿ 'ಕಾರ್ಪೊರೇಟ್' ಲೋಗೋವನ್ನು ಹೊಂದಿದೆ. ಹೊಸ ಬಣ್ಣವನ್ನು ಹೊರತುಪಡಿಸಿ, ಅಟ್ಲಾಸ್ ವೈಟ್, ಟೈಫೂನ್ ಸಿಲ್ವರ್, ಟೈಟಾನ್ ಗ್ರೇ, ಟೀಲ್ ಬ್ಲೂ, ಫಿಯರಿ ರೆಡ್ ಮತ್ತು ಸ್ಪಾರ್ಕ್ ಗ್ರೀನ್ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ. ನೂತನ ಹ್ಯುಂಡೈ ಗ್ರ್ಯಾಂಡ್ ಐ10 ನಿಯೋಸ್ ಕಾರ್ಪೊರೇಟ್ (Hyundai Grand i10 Nios Corporate ) ರೂಪಾಂತರದಲ್ಲಿಯೂ 5 ಮಂದಿ ಆರಾಮದಾಯಕವಾಗಿ ಕುಳಿತುಕೊಂಡು ಪ್ರಯಾಣಿಸಬಹುದು.

Hyundai Grand i10 Nios Corporate

ವಿನ್ಯಾಸ: ಹೊಸ ಹ್ಯುಂಡೈ ಗ್ರ್ಯಾಂಡ್ ಐ10 ನಿಯೋಸ್ ( (Hyundai Grand i10 Nios) ಕಾರ್ಪೊರೇಟ್ ಮಾದರಿಯು ವಿನ್ಯಾಸದ ದೃಷ್ಟಿಯಿಂದಲೂ ಅತ್ಯುತ್ತಮವಾಗಿದೆ. ಮುಂಭಾಗ (ಫ್ರಂಟ್)ದಲ್ಲಿರುವ ಗ್ರಿಲ್ ಪಿಯಾನೋ ಬ್ಲ್ಯಾಕ್ ಬಣ್ಣದ ಆಯ್ಕೆಯನ್ನು ಹೊಂದಿದೆ. ಮಿರರ್ & ಹ್ಯಾಂಡಲ್ಸ್ ಕಾರಿನ ಬಾಡಿ ಬಣ್ಣವನ್ನು ಪಡೆದಿವೆ. ಜೊತೆಗೆ ಈ ಕಾರು ಆಕರ್ಷಕ ಎಲ್ಇಡಿ ಡೇಟೈಮ್ ರನ್ನಿಂಗ್ ಲ್ಯಾಂಪ್‌, ಎಲ್ಇಡಿ ಟೈಲ್ ಲ್ಯಾಂಪ್‌ನ್ನು ಒಳಗೊಂಡಿದ್ದು, 15-ಇಂಚಿನ ಡುಯಲ್-ಟೋನ್ ಸ್ಟೀಲ್ ವೀಲ್ಸ್ ಅನ್ನು ತನ್ನದಾಗಿಸಿಕೊಂಡಿದೆ.

ಈ ಹೊಸ ಕಾರು ಒಳಭಾಗವು ಅತ್ಯಾಧುನಿಕವಾದ ವಿನ್ಯಾಸವನ್ನು ಹೊಂದಿದೆ. ಡುಯಲ್ ಟೋನ್ ಗ್ರೇ ಥೀಮ್ ನೊಟ್ಟಿಗೆ ಹೈಟ್ ಅಡ್ಜಸ್ಟ್ಏಬಲ್ ಡ್ರೈವರ್ ಸೀಟ್, ಫುಟ್‌ವೆಲ್ ಲೈಟಿಂಗ್, ಫ್ರಂಟ್ ರೂಮ್ ಲ್ಯಾಂಪ್, ಫ್ರಂಟ್ ಪ್ಯಾಸೆಂಜರ್ ಸೀಟ್ ಬ್ಯಾಕ್ ಪಾಕೆಟ್, ಮಲ್ಟಿ ಇನ್ಫಾರ್ಮಶನ್ ಸ್ಕ್ರೀನ್ ಹಾಗೂ ಚಾಲಕನ ಅನುಕೂಲಕ್ಕಾಗಿ ಸ್ಟೀರಿಂಗ್ ವೀಲ್ ಮೌಂಟೆಡ್ ಕಂಟ್ರೋಲ್ ಅನ್ನು ಒಳಗೊಂಡಿದೆ.

Hyundai Grand i10 Nios Corporate

ಫೀಚರ್ಸ್: ಈ ಹೊಸ ಹ್ಯುಂಡೈ ಗ್ರ್ಯಾಂಡ್ ಐ10 ನಿಯೋಸ್ ಕಾರ್ಪೊರೇಟ್ ರೂಪಾಂತರ ಸಾಕಷ್ಟು ಅತ್ಯಾಧುನಿಕ ವೈಶಿಷ್ಟ್ಯಗಳನ್ನು ಪಡೆದಿದೆ. 17.14 ಸೆಂ.ಮೀ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಯುಎಸ್‌ಬಿ & ಬ್ಲೂಟೂತ್ ಕನೆಕ್ಟಿವಿಟಿಯೊಂದಿಗೆ 4 ಸ್ಪೀಕರ್‌, ಆಟೋ ಅಪ್-ಡೌನ್ ಡ್ರೈವರ್ ವಿಂಡೋ, ರೇರ್ ಎಸಿ ವೆಂಟ್ಸ್, ಫಾಸ್ಟ್ ಯುಎಸ್‌ಬಿ ಟೈಪ್ ಸಿ ಚಾರ್ಜರ್, ಪ್ಯಾಸೆಂಜರ್ ವ್ಯಾನಿಟಿ ಮಿರರ್, ರೇರ್ ಪವರ್ ಔಟ್‌ಲೆಟ್ ಸೇರಿದಂತೆ ವಿವಿಧ ಫೀಚರ್ಸ್ ಗಳನ್ನು ಹೊಂದಿವೆ.

ಸುರಕ್ಷತಾ ಫೀಚರ್ಸ್: ಈ ಕಾರು ಸುರಕ್ಷತೆಯ ವಿಚಾರದಲ್ಲಿ ಸಾಕಷ್ಟು ಅತ್ಯಾಧುನಿಕವಾಗಿದೆ. 6 ಏರ್‌ಬ್ಯಾಗ್‌, ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), EBD (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಸೀಟ್ ಬೆಲ್ಟ್ ರಿಮೈಂಡರ್ಸ್, ಡೇ & ನೈಟ್ ಐಆರ್‌ವಿಎಂ, TPMS (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಸೆಂಟ್ರಲ್ ಲಾಕಿಂಗ್, ಇಂಪ್ಯಾಕ್ಟ್ ಸೆನ್ಸಿಂಗ್ ಡೋರ್ ಅನ್‌ಲಾಕ್ ಅನ್ನು ಹೊಂದಿದೆ.

Hyundai Grand i10 Nios Corporate

ಎಂಜಿನ್: ಈ ಹ್ಯುಂಡೈ ಕಾರು 1.2-ಲೀಟರ್ ನ್ಯಾಚುರಲ್ ಆಸ್ಪಿರೇಟೆಡ್ ಪೆಟ್ರೋಲ್ ಎಂಜಿನ್ ಆಯ್ಕೆಯಲ್ಲಿ ಹೊಂದಿದ್ದು, 82 ಪಿಎಸ್ ಗರಿಷ್ಠ ಪವರ್ ಮತ್ತು 112 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಒಳಗೊಂಡಿದೆ. 5-ಸ್ವೀಡ್ ಮ್ಯಾನುವಲ್ ಮತ್ತು 4-ಸ್ವೀಡ್ ಆಟೋಮೆಟಿಕ್ ಗೇರ್ ಬಾಕ್ಸ್ ಅನ್ನು ಪಡೆದಿದೆ. ಇದು 16 ಕಿ.ಮೀ.ಗಿಂತ ಗಿಂತ ಹೆಚ್ಚಿನ ಮೈಲೇಜ್ ಕೊಡುತ್ತದೆ ಎಂದು ಅಂದಾಜಿಸಲಾಗಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Saturday, April 13, 2024, 10:01 [IST]
English summary
New hyundai grand i10 nios corporate variant top things details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+