ತಾಂತ್ರಿಕ ದೋಷ: ಈ ಜನಪ್ರಿಯ ಎಲೆಕ್ಟ್ರಿಕ್ ಕಾರು ಹಿಂಪಡೆಯುತ್ತಿರುವ ಹ್ಯುಂಡೈ
ಟಾಟಾ ಮೋಟಾರ್ಸ್ ಎಲೆಕ್ಟ್ರಿಕ್ ವಾಹನಗಳ ಕ್ಷೇತ್ರದಲ್ಲಿ ಮೊದಲ ಸ್ಥಾನದಲ್ಲಿದೆ, ಆದರೆ ಮಹೀಂದ್ರಾ ಸಹ ಹೊಸ ಎಲೆಕ್ಟ್ರಿಕ್ ಕಾರುಗಳನ್ನು ಬಿಡುಗಡೆಗೊಳಿಸಿ ಪಾರುಪತ್ಯ ಸಾಧಿಸಲು ಸಜ್ಜಾಗುತ್ತಿದೆ. ಈ ನಡುವೆ ಜನಪ್ರಿಯ ಕಾರು ತಯಾರಕ ಕಂಪನಿಯಾದ ಹುಂಡೈ ಮೋಟಾರ್ ಇಂಡಿಯಾ ಲಿಮಿಟೆಡ್ (HMIL ಭಾರತೀಯ ಮಾರುಕಟ್ಟೆಯಲ್ಲಿ ಎಲೆಕ್ಟ್ರಿಕ್ ಕಾರುಗಳಿಗೆ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡುತ್ತಿದೆ. ಹ್ಯುಂಡೈ Ioniq 5 (Hyundai Ioniq 5) ಕೊರಿಯನ್ ಕಾರು ತಯಾರಕರಿಂದ ಭಾರತದಲ್ಲಿ ಬಿಡುಗಡೆಯಾದ ಎರಡನೇ ಎಲೆಕ್ಟ್ರಿಕ್ ಕಾರು ಆಗಿದೆ. ಇದು ಪ್ರೀಮಿಯಂ ಎಲೆಕ್ಟ್ರಿಕ್ ಕಾರು. ಈ ಹ್ಯುಂಡೈ Ioniq 5 ಎಲೆಕ್ಟ್ರಿಕ್ ಕಾರಿಗೆ ಉತ್ತಮ ಬೇಡಿಕೆಯೊಂದಿಗೆ ಮಾರಾಟವಾಗುತ್ತಿದೆ.
ಈ ಮಧ್ಯೆ, ಕಂಪನಿಯು ಭಾರತದಲ್ಲಿ ಮಾರಾಟವಾದ Ionic 5 EV ಯಲ್ಲಿ ಸಣ್ಣ ದೋಷಗಳನ್ನು ಕಂಡುಹಿಡಿದಿದೆ. ಇದರ ಭಾಗವಾಗಿ, ದಕ್ಷಿಣ ಕೊರಿಯಾದ ಬ್ರ್ಯಾಂಡ್ ಪ್ರಮುಖ ಮಾದರಿಯ ಅಧಿಕೃತ ಹಿಂಪಡೆಯುವಿಕೆಯನ್ನು ಘೋಷಿಸಿದೆ. ಎಲೆಕ್ಟ್ರಿಕ್‌ನ ಇಂಟಿಗ್ರೇಟೆಡ್ ಚಾರ್ಜಿಂಗ್ ಕಂಟ್ರೋಲ್ ಯೂನಿಟ್‌ನಲ್ಲಿ (ICCU) ಸಂಭವನೀಯ ಸಮಸ್ಯೆಗಳಿಂದಾಗಿ Ionic 5 ಅನ್ನು ಭಾರತದಲ್ಲಿ ಹಿಂಪಡೆಯಲಾಗಿದೆ.

ಅಧಿಕೃತ ಮಾಹಿತಿಯ ಪ್ರಕಾರ, ಈ ಸಮಸ್ಯೆಯು ಜುಲೈ 21, 2022 ಮತ್ತು ಏಪ್ರಿಲ್ 30, 2024 ರ ನಡುವೆ ತಯಾರಿಸಲಾದ ಘಟಕಗಳ ಮೇಲೆ ಪರಿಣಾಮ ಬೀರುತ್ತದೆ. ಎಸ್‌ಯುವಿಯ ಸುಮಾರು 1,744 ಯುನಿಟ್‌ಗಳು ಮರುಪಡೆಯುವಿಕೆಗೆ ಒಳಪಟ್ಟಿವೆ. ದೋಷವು 12V ಬ್ಯಾಟರಿಯನ್ನು ಡಿಸ್ಚಾರ್ಜ್ ಮಾಡುವ ICCU ಗೆ ಸಂಬಂಧಿಸಿದೆ. ICCU ಇತರ ಸಾಧನಗಳನ್ನು ಚಾರ್ಜ್ ಮಾಡಲು ಸಹಾಯ ಮಾಡುವ ವೆಹಿಕಲ್-ಟು-ಲೋಡ್ (V2L) ಕಾರ್ಯವನ್ನು ನಿರ್ವಹಿಸುತ್ತದೆ ಮತ್ತು ನಿಯಂತ್ರಿಸುವುದರಿಂದ ಇವೆಲ್ಲವನ್ನೂ ನಿಷ್ಕ್ರಿಯಗೊಳಿಸಲಾಗಿದೆ. ಪ
ತ್ತೆಯಾದ ದೋಷವು ಇನ್ಫೋಟೈನ್‌ಮೆಂಟ್ ಸಿಸ್ಟಮ್ ಮತ್ತು ಹವಾಮಾನ ನಿಯಂತ್ರಣದಂತಹ ಅಗತ್ಯ ಎಲೆಕ್ಟ್ರಾನಿಕ್ ವೈಶಿಷ್ಟ್ಯಗಳನ್ನು ಸಹ ನಿಷ್ಕ್ರಿಯಗೊಳಿಸುತ್ತದೆ. ಆದಾಗ್ಯೂ, ಮರುಪಡೆಯಲಾದ ಮಾದರಿಗಳು ದೋಷಯುಕ್ತವೆಂದು ಕಂಡುಬಂದರೆ, ಕಂಪನಿಯು ಅವುಗಳನ್ನು ಉಚಿತವಾಗಿ ಬದಲಾಯಿಸುತ್ತದೆ. Ioniq 5 ಅನ್ನು ಬಳಸುವ ಗ್ರಾಹಕರು ತಮ್ಮ ವಾಹನವು ಹಿಂಪಡೆಯುವಿಕೆಯ ಭಾಗವಾಗಿದೆಯೇ ಎಂದು ಪರಿಶೀಲಿಸಲು ತಮ್ಮ ಹತ್ತಿರದ ಡೀಲರ್‌ಶಿಪ್ ಅನ್ನು ಸಂಪರ್ಕಿಸಬಹುದು.

ಈ ಹ್ಯುಂಡೈ Ioniq 5 ಎಲೆಕ್ಟ್ರಿಕ್ ಎಸ್‍ಯುವಿ ಹ್ಯುಂಡೈ ಮೋಟಾರ್ ಗ್ರೂಪ್‌ನ ಎಲೆಕ್ಟ್ರಿಕ್-ಗ್ಲೋಬಲ್ ಮಾಡ್ಯುಲರ್ ಪ್ಲಾಟ್‌ಫಾರ್ಮ್ (E-GMP) ಅನ್ನು ಆಧರಿಸಿದೆ. ಇದು ಕಿಯಾ EV6 ಎಲೆಕ್ಟ್ರಿಕ್ ಕಾರಿಗೂ ಸಹ ಆಧಾರವಾಗಿದೆ. ಇದು ಹ್ಯುಂಡೈ ಎಲೆಕ್ಟ್ರಿಕ್ ಮಾದರಿಯು ಆಗಿದ್ದು, ಹೊರಭಾಗದಲ್ಲಿ ಭವಿಷ್ಯದ ವಿನ್ಯಾಸವನ್ನು ಹೊಂದಿದೆ. ಇದು ಪಿಕ್ಸಲೇಟೆಡ್ LED ಟೈಲ್-ಲೈಟ್‌ಗಳು, ಫ್ಲಶ್-ಫಿಟ್ಟಿಂಗ್ ಡೋರ್ ಹ್ಯಾಂಡಲ್‌ಗಳು ಮತ್ತು ಡ್ಯುಯಲ್-ಟೋನ್ ಅಲಾಯ್ ವ್ಹೀಲ್ ಗಳೊಂದಿಗೆ ಡ್ಯುಯಲ್ LED ಹೆಡ್‌ಲ್ಯಾಂಪ್‌ಗಳನ್ನು ಒಳಗೊಂಡಿದೆ.
ಈ ಹೊಸ ಎಲೆಕ್ಟ್ರಿಕ್ ಕಾರಿನಲ್ಲಿ ಡ್ಯುಯಲ್ ಫ್ಲೋಟಿಂಗ್ ಸ್ಕ್ರೀನ್ ಮತ್ತು 2-ಸ್ಪೋಕ್ ಸ್ಟೀರಿಂಗ್ ವೀಲ್‌ನೊಂದಿಗೆ ಆಕರ್ಷಕ ಒಳಾಂಗಣದೊಂದಿಗೆ ಬರುತ್ತದೆ. ಈ ಕಾರಿನಲ್ಲಿ 12.3-ಇಂಚಿನ ಇನ್ಫೋಟೈನ್‌ಮೆಂಟ್ ಸಿಸ್ಟಂ ಅನ್ನು ನೀಡಲಾಗಿದೆ. ಈ ಹ್ಯುಂಡೈ ಕಾರಿನಲ್ಲಿ ಡ್ರೈವರ್ ಡಿಸ್‌ಪ್ಲೇಗಳು, 360 ಡಿಗ್ರಿ ಕ್ಯಾಮೆರಾ, ಪನೋರಮಿಕ್ ಸನ್‌ರೂಫ್, V2L ಮತ್ತು ಇತರವುಗಳೊಂದಿಗೆ ಸುಸಜ್ಜಿತವಾಗಿರುತ್ತದೆ.

ಹ್ಯುಂಡೈ Ioniq 5 ಎಲೆಕ್ಟ್ರಿಕ್ ಎಸ್‍ಯುವಿ 4,635 ಎಂಎಂ ಉದ್ದ, 1,890 ಎಂಎಂ ಅಗಲ ಮತ್ತು 1,625 ಎಂಎಂ ಎತ್ತರವಿದೆವನ್ನು ಹೊಂದಿದೆ. ಇನ್ನು ಈ ಎಲೆಕ್ಟ್ರಿಕ್ ಎಸ್‍ಯುವಿ 3,000mm ವೀಲ್‌ಬೇಸ್ ಅನ್ನು ಹೊಂದಿದೆ. ಈ ಹ್ಯುಂಡೈ ಐಯಾನಿಕ್ 5 ಎಲೆಕ್ಟ್ರಿಕ್ ಕಾರಿನಲ್ಲಿ ಅಡಾಪ್ಟಿವ್ ಕ್ರೂಸ್ ಕಂಟ್ರೋಲ್, ಆಟೋಮ್ಯಾಟಿಕ್ ಎಮರ್ಜನ್ಸಿ ಬ್ರೇಕಿಂಗ ಅನ್ನು ಹೊಂದಿದೆ.
ಇದರೊಂದಿಗೆ ಲೇನ್ ಕೀಪ್ ಮತ್ತು ಡಿಪಾರ್ಚರ್ ಏಡ್ ಮತ್ತು ಬ್ಲೈಂಡ್ ಸ್ಪಾಟ್ ಮಾನಿಟರಿಂಗ್ ಸಿಸ್ಟಮ್‌ನಂತಹ ಫೀಚರ್ಸ್ ಗಳೊಂದಿಗೆ ADAS (ಅಡ್ವಾನ್ಸ್ಡ್ ಡ್ರೈವರ ಅಸಿಸ್ಟ್ ಸಿಸ್ಟಂ) ನೊಂದಿಗೆ ಬರುತ್ತದೆ. ಈ ಹೊಸ ಹ್ಯುಂಡೈ ಐಯಾನಿಕ್ 5 ಎಲೆಕ್ಟ್ರಿಕ್ ಕಾರಿನಲ್ಲಿ 72.6kWh ಬ್ಯಾಟರಿ ಪ್ಯಾಕ್ ಅನ್ನು ನೀಡಲಾಗಿದೆ. ಚಾರ್ಜಿಂಗ್ ವಿಷಯದಲ್ಲಿ, ಈ ಹ್ಯುಂಡೈ Ioniq 5 ಎಲೆಕ್ಟ್ರಿಕ್ ಕ್ರಾಸ್ಒವರ್ 350kW DC ಫಾಸ್ಟ್ ಚಾರ್ಜರ್ ಬಳಸಿ ಚಾರ್ಜ್ ಮಾಡುವ ಸಾಮರ್ಥ್ಯವನ್ನು ಹೊಂದಿದೆ.


Click it and Unblock the Notifications