ಬುಕ್ಕಿಂಗ್‌ನಲ್ಲಿ ಸುನಾಮಿ ಎಬ್ಬಿಸಿದ ಕಿಯಾದ ಹೊಸ ಮದಗಜ: ಟೊಯೊಟಾ ಇನ್ನೋವಾಗೆ ಎದೆನಡುಕ!
ಕಳೆದ ವರ್ಷ ನವೆಂಬರ್‌ನಿಂದ ಅಂತರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಮಾರಾಟವಾದ ನಾಲ್ಕನೇ ತಲೆಮಾರಿನ ಕಾರ್ನಿವಲ್‌ನ ಫೇಸ್‌ಲಿಫ್ಟ್ ಮಾಡೆಲ್ ಕೆಲವು ದಿನಗಳ ಹಿಂದೆ ಭಾರತಕ್ಕೆ ಆಗಮಿಸಿದೆ. ಸಂಪೂರ್ಣವಾಗಿ ನಾಕ್ಡ್ ಡೌನ್ (CKD) ಯುನಿಟ್ ಆಗಿ ಆಮದು ಮಾಡಿಕೊಳ್ಳಲಾಗಿರುವುದರಿಂದ ಹೊಸ ಕಿಯಾ ಕಾರ್ನಿವಲ್ ((Kia Carnival) ಅದರ ಹಿಂದಿನದಕ್ಕಿಂತ ಹೆಚ್ಚಿನ ಬೆಲೆಯನ್ನು ಹೊಂದಿದೆ. ಹೊಸ ನಾಲ್ಕನೇ ತಲೆಮಾರಿನ ಕಿಯಾ ಕಾರ್ನಿವಲ್ ಅನ್ನು ಲಿಮೋಸಿನ್ ಮತ್ತು ಲಿಮೋಸಿನ್ ಪ್ಲಸ್ ಎಂಬ ಎರಡು ರೂಪಾಂತರಗಳಲ್ಲಿ ನೀಡಲಾಗುತ್ತದೆ. ಇತ್ತೀಚಿನ ವರದಿಗಳ ಪ್ರಕಾರ, ಹೆಚ್ಚಿನ ಬೆಲೆಗಳು ಕಾರ್ನಿವಲ್‌ನ ಮಾರಾಟದ ಮೇಲೆ ಪರಿಣಾಮ ಬೀರಿಲ್ಲ
ಬಿಡುಗಡೆಯಾದ 20 ದಿನಗಳಲ್ಲಿ ಕಿಯಾ ಕಾರ್ನಿವಲ್ ಎಂಪಿವಿಗೆ 3000 ಬುಕಿಂಗ್‌ಗಳನ್ನು ಗಳಿಸಿದೆ. ಮಾರುಕಟ್ಟೆ ಮೂಲಗಳ ಪ್ರಕಾರ, ಹೊಸ ಕಾರ್ನಿವಲ್‌ಗಾಗಿ ಕಾಯುವ ಅವಧಿಯು ಸುಮಾರು ಒಂದು ವರ್ಷವನ್ನು ತಲುಪಿದೆ. ಅಂದರೆ ಒಂದು ವರ್ಷದ ಸಂಪೂರ್ಣ ಯುನಿಟ್ ಗಳು ಮಾರಾಟವಾಗಿವೆ. ನೂತನ ಕಿಯಾ ಕಾರ್ನಿವಲ್ ಫ್ಯಾಮಿಲಿ ಎಂಪಿವಿ ರೂ.63.90 ಲಕ್ಷ (ಎಕ್ಸ್ ಶೋರೂಂ) ಬೆಲೆಗೆ ಖರೀದಿಗೆ ಲಭ್ಯವಿದೆ.

ಹೊಸ ಕಿಯಾ ಕಾರ್ನಿವಲ್ ಗ್ಲೇಸಿಯರ್ ವೈಟ್ ಪರ್ಲ್ ಮತ್ತು ಫ್ಯೂಷನ್ ಬ್ಲ್ಯಾಕ್ ಎಂಬ ಎರಡು ಬಣ್ಣದ ಆಯ್ಕೆಗಳಲ್ಲಿ ಬರುತ್ತದೆ. ಕಾರ್ನೀವಲ್ 5,155 ಮಿಮೀ ಉದ್ದ, 1,995 ಎಂಎಂ ಅಗಲ ಮತ್ತು 1,775 ಎಂಎಂ ಎತ್ತರವನ್ನು ಹೊಂದಿದ್ದು, ಇದು ವೀಲ್‌ಬೇಸ್ 3,090 ಎಂಎಂ ಅನ್ನು ಹೊಂದಿದೆ. ಹೊಸ ಜನರೇಷನ್ ಕಿಯಾ ಕಾರ್ನಿವಲ್ ದೊಡ್ಡ ಮತ್ತು ಅಗ್ರೇಸಿವ್ ವಿನ್ಯಾಸವನ್ನು ನೀಡಿದೆ.
ಕಿಯಾ ಕಾರ್ನಿವಲ್ ಎಂಪಿವಿಯು ಹೊರಭಾಗದಲ್ಲಿನೋಡುಗರ ಕಣ್ಣು ಕುಕ್ಕುವಂತಹ ವಿನ್ಯಾಸವನ್ನು ಹೊಂದಿದೆ. ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ ಆಕಾರಕ್ಕೆ ಹೋಲಿಕೆಯಾಗುವ ಎಲ್‌ಇಡಿ ಡಿಆರ್‌ಎಲ್‌ಗಳು ಮತ್ತು ಅಲಾಯ್ ವೀಲ್‌ಗಳನ್ನು ಪಡೆದಿದೆ. ಈ ಹೊಸ ಕಿಯಾ ಕಾರ್ನಿವಲ್ ಎಂಪಿವಿ 2.2-ಲೀಟರ್ ಡೀಸೆಲ್ ಎಂಜಿನ್‌ನ್ನು ಹೊಂದಿದೆ. ಈ ಎಂಜಿನ್ 197 ಬಿಹೆಚ್‌ಪಿ ಪವರ್ ಮತ್ತು 440 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ.

ಈ ಎಂಜಿನ್ ಅನ್ನು 8-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. ಕಿಯಾ ಕಾರ್ನಿವಲ್ ಎಂಪಿವಿಗೆ ಇಕೋ, ನಾರ್ಮಲ್, ಸ್ಪೋರ್ಟ್ಸ್ ಹಾಗೂ ಸ್ಮಾರ್ಟ್ ಎಂಬ ಡ್ರೈವಿಂಗ್ ಮೋಡ್‌ಗಳನ್ನು ಪಡೆದಿದೆ. ಕಿಯಾ ಕಾರ್ನಿವಲ್ ಕಾರು, ಯುವ ಗ್ರಾಹಕರನ್ನು ಸೆಳೆಯುವಂತಹ ಭರ್ಜರಿ ವೈಶಿಷ್ಟ್ಯಗಳನ್ನು ಹೊಂದಿದೆ. ಇದರೊಂದಿಗೆ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ & ಡಿಜಿಟಲ್ ಡ್ರೈವರ್ಸ್ ಡಿಸ್‌ಪ್ಲೇಗಾಗಿ ಡುಯಲ್ ಸ್ಕ್ರೀನ್, ಆಂಡ್ರಾಯ್ಡ್ ಆಟೋ ಮತ್ತು ಆಪಲ್ ಕಾರ್‌ಪ್ಲೇ ಅನ್ನು ಹೊಂದಿದೆ.
ಇದರೊಂದಿಗೆ 3-ಜೋನ್ ಕ್ಲೇಮೇಟ್ ಕಂಟ್ರೋಲ್, ಡುಯಲ್ ಸಿಂಗಲ್-ಪೇನ್ ಸನ್‌ರೂಫ್, 12-ಸ್ಪೀಕರ್ ಬೋಸ್ ಸೌಂಡ್ ಸಿಸ್ಟಮ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. 7-ಆಸನ (2+2+3) ವ್ಯವಸ್ಥೆಯನ್ನು ಹೊಂದಿದೆ. ಈ ನೂತನ ಎಂಪಿವಿ, ಪ್ರಯಾಣಿಕರಿಗೆ ಗರಿಷ್ಠ ಮಟ್ಟದಲ್ಲಿ ಸುರಕ್ಷತೆ ಒದಗಿಸುತ್ತದೆ. ಈ ಕಾರಿನಲ್ಲಿ 8-ಏರ್‌ಬ್ಯಾಗ್, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್) ಮತ್ತು ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್) ಅನ್ನು ಹೊಂದಿದೆ.

ಇದರೊಂದಿಗೆ ಲೆವೆಲ್-2 ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಹಾಗೂ 360-ಡಿಗ್ರಿ ಕ್ಯಾಮೆರಾಯಂತಹ ವಿವಿಧ ರಕ್ಷಣಾತ್ಮಕ ವೈಶಿಷ್ಟ್ಯಗಳನ್ನು ಪಡೆದಿದೆ. ಈ ಹೊಸ ಕಿಯಾ ಕಾರ್ನಿವಲ್ ಎಂಪಿವಿಗೆ ಟೊಯೊಟಾ ಇನ್ನೋವಾ ಹೈಕ್ರಾಸ್ (Toyota Innova Hycross), ನಿಸ್ಸಾನ್ ಎಕ್ಸ್-ಟ್ರಯಲ್ (Nissan X-Trail) ಮತ್ತು ಮಾರುತಿ ಸುಜುಕಿ ಇನ್ವಿಕ್ಟೋ (Maruti Suzuki Invicto) ಕಾರುಗಳಂತಹ ದೊಡ್ಡ ಎದುರಾಳಿಯಾಗಿವೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications








