Kia Syros: 5-ಸೀಟರ್.. ಲಕ್ಷುರಿ ಫೀಚರ್ಸ್, ಹೊಸ ಕಿಯಾ ಸೈರಸ್ ಎಸ್‌ಯುವಿ ಅನಾವರಣ!

ಕಿಯಾ ಮೋಟಾರ್ಸ್ (Kia Motors), ಜನಪ್ರಿಯ ವಾಹನ ತಯಾರಕ ಕಂಪನಿಯಾಗಿದೆ. ಕಾರು ತೆಗೆದುಕೊಳ್ಳಬೇಕು ಎಂಬ ಮಧ್ಯಮ ವರ್ಗದ ಜನರ ಕನಸನ್ನು ನನಸು ಮಾಡಲು ಹೊಚ್ಚ ಹೊಸ 'ಸೈರಸ್' ಎಸ್‌ಯುವಿಯನ್ನು ಅನಾವರಣಗೊಳಿಸಿದೆ. ಈ ಕಾರು ನೀರಿಕ್ಷೆಗೂ ಮೀರಿದ ಆಕರ್ಷಕ ವೈಶಿಷ್ಟ್ಯಗಳನ್ನು ಒಳಗೊಂಡಿದ್ದು, ಶೀಘ್ರದಲ್ಲಿಯೇ ಅತಿಕಡಿಮೆ ಬೆಲೆಗೆ ಮಾರಾಟಕ್ಕೆ ಬರುವ ನಿರೀಕ್ಷೆಯಿದೆ. ಬನ್ನಿ ಈ ನೂತನ ಎಸ್‌ಯುವಿ ವಿಶೇಷತೆ ಕುರಿತಂತೆ ಸಂಪೂರ್ಣವಾದ ವಿವರಗಳನ್ನು ತಿಳಿಯೋಣ.

ನೂತನ ಕಿಯಾ ಸೈರಸ್ (Kia Syros) ಎಸ್‌ಯುವಿ ಹೆಚ್‌ಟಿಕೆ, ಹೆಚ್‌ಟಿಕೆ (ಒ), ಹೆಚ್‌ಟಿಕೆ ಪ್ಲಸ್, ಹೆಚ್‌ಟಿಎಕ್ಸ್, ಹೆಚ್‌ಟಿಎಕ್ಸ್ ಪ್ಲಸ್ ಹಾಗೂ ಹೆಚ್‌ಟಿಎಕ್ಸ್ ಪ್ಲಸ್ (ಒ) ಎಂಬ ಆಕರ್ಷಕ ರೂಪಾಂತರಗಳ (ವೇರಿಯೆಂತ್) ಆಯ್ಕೆಯನ್ನು ಹೊಂದಿದೆ. ಈ ಕಾರಿನ ಬುಕ್ಕಿಂಗ್ ಜನವರಿ 3, 2025ರಿಂದ ಶುರುವಾಗಲಿದೆ. ಫೆಬ್ರವರಿಯಿಂದ ಡೆಲಿವರಿ ಆರಂಭವಾಗಲಿದೆ.

New Kia Syros Suv Unveiled In India Design Powertrain And Features Details

ಸದ್ಯಕ್ಕೆ ಹೊಚ್ಚ ಹೊಸ ಕಿಯಾ ಸೈರಸ್ ಎಸ್‌ಯುವಿ ಬೆಲೆಯನ್ನು ಘೋಷಣೆ ಮಾಡಲಾಗಿಲ್ಲ. ಅದರ ಬಗ್ಗೆ ಮುಂಬರುವ ದಿನಗಳಲ್ಲಿ ಕಂಪನಿಯು ಮಾಹಿತಿ ನೀಡಲಿದೆ. ಈ ಕಾರು ಕೈಗೆಟುಕುವ ಬೆಲೆಗೆ ಗ್ರಾಹಕರಿಗೆ ಲಭ್ಯವಾಗುವ ಸಾಧ್ಯತೆಯಿದೆ. ಸುಮಾರು ರೂ.9 ಲಕ್ಷ ಎಕ್ಷ ಶೋರೂಂ ಬೆಲೆಯನ್ನು ಪಡೆದಿರಬಹುದು ಎಂದು ಅಂದಾಜಿಸಲಾಗಿದೆ.

ಕಿಯಾ ಸೈರಸ್ ಎಸ್‌ಯುವಿ ಹೊರಭಾಗದಲ್ಲಿ ಅತ್ಯಾಧುನಿಕವಾದ ವಿನ್ಯಾಸ ಹೊಂದಿದೆ. 3-ಪಾಡ್ ಎಲ್ಇಡಿ ಹೆಡ್‌ಲೈಟ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, 'ಎಲ್' ಆಕಾರಕ್ಕೆ ಹೋಲಿಕೆಯಾಗುವ ಎಲ್ಇಡಿ ಟೈಲ್ ಲೈಟ್‌ಗಳು, ಫ್ಲಾಟ್ ಟೈಲ್‌ಗೇಟ್, 17-ಇಂಚಿನ ಅಲಾಯ್ ವೀಲ್‌ಗಳು, ಫ್ಲಶ್-ಟೈಪ್ ಡೋರ್ ಹ್ಯಾಂಡಲ್‌ಗಳು ಮತ್ತು ಪನೊರೊಮಿಕ್ ಸನ್‌ರೂಫ್‌ನ್ನು ಪಡೆದಿದೆ.

New Kia Syros Suv Unveiled In India Design Powertrain And Features Details

ಈ ಕಾರು ಎರಡು ಪವರ್‌ಟ್ರೇನ್‌ನೊಂದಿಗೆ ಲಭ್ಯವಿದೆ. ಇದರ 1-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್, 120 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 172 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 6-ಸ್ಪೀಡ್ ಎಂಟಿ ಮತ್ತು 7-ಸ್ಪೀಡ್ ಡಿಸಿಟಿ ಗೇರ್‌ಬಾಕ್ಸ್‌ ಆಯ್ಕೆಯನ್ನು ಹೊಂದಿದೆ.

ಮತ್ತೊಂದು 1.5-ಲೀಟರ್ ಡೀಸೆಲ್ ಎಂಜಿನ್, 116 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 250 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುವ ಸಾಮರ್ಥ್ಯ ಪಡೆದಿದೆ. 6-ಸ್ಪೀಡ್ ಎಂಟಿ ಹಾಗೂ 6-ಸ್ಪೀಡ್ ಎಟಿ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. ಆದರೆ, ಮೈಲೇಜ್ ಕುರಿತಂತೆ ಯಾವುದೇ ವಿವರಗಳನ್ನು ಕಂಪನಿಯು ಬಹಿರಂಗಪಡಿಸಿಲ್ಲ.

New Kia Syros Suv Unveiled In India Design Powertrain And Features Details

ನೂತನ ಕಿಯಾ ಸೈರಸ್ ಎಸ್‌ಯುವಿಯಲ್ಲಿ 5-ಆಸನಗಳನ್ನು ಪಡೆದಿದೆ. ಇನ್ಫೋಟೈನ್‌ಮೆಂಟ್‌ ಸಿಸ್ಟಮ್ & ಡ್ರೈವರ್ಸ್ ಡಿಸ್‌ಪ್ಲೇಗಾಗಿ 12.3-ಇಂಚಿನ ಡುಯಲ್ ಸ್ಕ್ರೀನ್‌ ಸೆಟಪ್, ಡುಯಲ್-ಜೋನ್ ಎಸಿ, 4-ವೇ ಪವರ್ಡ್ ಡ್ರೈವರ್ ಸೀಟ್, ಆಂಬಿಯೆಂಟ್ ಲೈಟಿಂಗ್, ವೆಂಟಿಲೇಟೆಡ್ ಫ್ರಂಟ್ & ರೇರ್ ಸೀಟ್‌ಗಳು, ವೈರ್‌ಲೆಸ್ ಫೋನ್ ಚಾರ್ಜರ್, ಅಪ್/ ಡೌನ್ ಪವರ್ ವಿಂಡೋಗಳು ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ಈ ಕಾರು ಪ್ರಯಾಣಿಕರಿಗೆ ಗರಿಷ್ಠ ರಕ್ಷಣೆ ಒದಗಿಸುತ್ತವೆ. ಸುರಕ್ಷತೆಯ ದೃಷ್ಟಿಯಿಂದ 6-ಏರ್‌ಬ್ಯಾಗ್‌ಗಳು, ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಲೆವೆಲ್ - 2 ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಪಡೆದಿದೆ. ಹೊಸ ಸೈರಸ್ ಎಸ್‌ಯುವಿಗೆ ಹ್ಯುಂಡೈ ಕ್ರೆಟಾ ಮತ್ತು ಮಾರುತಿ ಸುಜುಕಿ ಗ್ರ್ಯಾಂಡ್ ವಿಟಾರಾ ಕಾರುಗಳು ನೇರ ಪ್ರತಿಸ್ಪರ್ಧಿಯಾಗಿವೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳನ್ನು ಫಾಲೋ ಮಾಡಿ. ನಿಮಗೆ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

More from DriveSpark

Article Published On: Thursday, December 19, 2024, 13:32 [IST]
English summary
New kia syros suv unveiled in india design powertrain and features details
Read more on kia motors india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+