ಇದೇ ನೋಡಿ ಸರಿಯಾದ ಫೈಟ್: ಕಿಯಾ ಹೊಸ ಕಾರಿಗೆ ಕಿಯಾ ಕಾರೇ ಪ್ರತಿಸ್ಪರ್ಧಿ!
ಕಿಯಾ ಕಂಪನಿಯು ಕೊನೆಗೂ ತನ್ನ ಬಹುನಿರೀಕ್ಷಿತ ಸೈರಸ್ ಎಸ್‌ಯುವಿಯನ್ನು ಭಾರತದಲ್ಲಿ ಅನಾವರಣಗೊಳಿಸಿದೆ. ಇದರ ಬುಕಿಂಗ್ ಜನವರಿ 2025 ರಲ್ಲಿ ಪ್ರಾರಂಭವಾಗಲಿದ್ದು, ಫೆಬ್ರವರಿಯಿಂದ ವಿತರಣೆಗಳು ಪ್ರಾರಂಭವಾಗುತ್ತವೆ. ಈ ಹೊಸ ಕಾರಿನ ವೈಶಿಷ್ಟ್ಯಗಳು, ವಿನ್ಯಾಸ ಮತ್ತು ಸುರಕ್ಷತೆಯ ವಿಷಯದಲ್ಲಿ ನಾವು ಅದನ್ನು ಸೊನೆಟ್‌ಗೆ ಹೋಲಿಕೆ ಮಾಡಿದ್ದೇವೆ. ಇವೆರಡು ಕಾರುಗಳು ವಿನ್ಯಾಸದಿಂದ ವೈಶಿಷ್ಟ್ಯಗಳವರೆಗೆ ಒಂದೇ ರೀತಿಯಾಗಿರುವ ಕಾರಣ ಈ ಹೋಲಿಕೆ ಮಾಡಲಾಗುತ್ತಿದೆ. ಸೊನೆಟ್ ಈಗಾಗಲೇ ಸಾಕಷ್ಟು ಜನಪ್ರಿಯವಾಗಿದೆ. ಆದರೂ ಸೈರಸ್ ಯಾವ ಮಟ್ಟಿಗೆ ಗ್ರಾಹಕರನ್ನು ಆಕರ್ಷಿಸಲಿದೆ ಬನ್ನಿ ತಿಳಿಯೋಣ.
ಹೊಸ ಕಿಯಾ ಸೈರಸ್ ಎಸ್‌ಯುವಿ 1.0-ಲೀಟರ್ 3-ಸಿಲಿಂಡರ್ ಟರ್ಬೊ ಪೆಟ್ರೋಲ್ ಮತ್ತು 1.5-ಲೀಟರ್ 4-ಸಿಲಿಂಡರ್ ಟರ್ಬೊ ಡೀಸೆಲ್ ಎಂಜಿನ್ ನೊಂದಿಗೆ ಬರುತ್ತದೆ. ಪೆಟ್ರೋಲ್ ಟ್ರಿಮ್‌ನಲ್ಲಿ 6-ಸ್ಪೀಡ್ ಮ್ಯಾನುವಲ್ ಅಥವಾ 7-ಸ್ಪೀಡ್ ಡಿಸಿಟಿ ಆಟೋಮ್ಯಾಟಿಕ್ ಗೇರ್ ಬಾಕ್ಸ್ ಆಗಿದ್ದರೆ, ಡೀಸೆಲ್ ಎಂಜಿನ್ 6-ಸ್ಪೀಡ್ ಮ್ಯಾನುವಲ್ ಅಥವಾ 6-ಸ್ಪೀಡ್ ಆಟೋಮ್ಯಾಟಿಕ್ ಗೇರ್ ಬಾಕ್ಸ್ ನೊಂದಿಗೆ ಬರುತ್ತದೆ.

ಮತ್ತೊಂದೆಡೆ ಕಿಯಾ ಸೋನೆಟ್ 1.2-ಲೀಟರ್ 4-ಸಿಲಿಂಡರ್ ಪೆಟ್ರೋಲ್ 5-ಸ್ಪೀಡ್ ಮ್ಯಾನುವಲ್, 1-ಲೀಟರ್ 3-ಸಿಲಿಂಡರ್ ಟರ್ಬೋಚಾರ್ಜ್ಡ್ ಪೆಟ್ರೋಲ್ - 6-ಸ್ಪೀಡ್ ಮ್ಯಾನುವಲ್ (ಐಎಂಟಿ) ಅಥವಾ 7-ಸ್ಪೀಡ್ ಡ್ಯುಯಲ್-ಕ್ಲಚ್ ಆಟೋಮ್ಯಾಟಿಕ್, 1.5-ಲೀಟರ್ 4-ಸಿಲಿಂಡರ್ ಟರ್ಬೋಚಾರ್ಜ್ಡ್ ಡೀಸೆಲ್ - 6-ಸ್ಪೀಡ್ ಮ್ಯಾನುವಲ್, 6-ಸ್ಪೀಡ್ ಐಎಂಟಿ ಅಥವಾ 6-ಸ್ಪೀಡ್ ಆಟೋಮ್ಯಾಟಿಕ್ ಗೇರ್ ಆಯ್ಕೆಯಲ್ಲಿ ಸಿಗುತ್ತದೆ.
ಫೀಚರ್ಸ್ ವಿಷಯದಲ್ಲಿ ಹೊಸ ಕಿಯಾ ಸೈರಸ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ & ಡ್ರೈವರ್ಸ್ ಡಿಸ್‌ಪ್ಲೇಗಾಗಿ 12.3-ಇಂಚಿನ ಡುಯಲ್ ಸ್ಕ್ರೀನ್ ಸೆಟಪ್, ಡುಯಲ್-ಜೋನ್ ಎಸಿ, 4-ವೇ ಪವರ್ಡ್ ಡ್ರೈವರ್ ಸೀಟ್, ಆಂಬಿಯೆಂಟ್ ಲೈಟಿಂಗ್, ವೆಂಟಿಲೇಟೆಡ್ ಫ್ರಂಟ್ & ರೇರ್ ಸೀಟ್‌ಗಳು, ವೈರ್‌ಲೆಸ್ ಫೋನ್ ಚಾರ್ಜರ್, ಅಪ್/ ಡೌನ್ ಪವರ್ ವಿಂಡೋಗಳು ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ಮತ್ತೊಂದೆಡೆ ಕಿಯಾ ಸೋನೆಟ್‌ನಲ್ಲಿ 10.25-ಇಂಚಿನ ಇನ್ಫೋಟೈನ್ ಮೆಂಟ್ ಸಿಸ್ಟಮ್, 10.25-ಇಂಚಿನ ಸಂಪೂರ್ಣ ಡಿಜಿಟಲ್ ಡ್ರೈವರ್ ಡಿಸ್ ಪ್ಲೇ, 7-ಸ್ಪೀಕರ್ ಬೋಸ್ ಸೌಂಡ್ ಸಿಸ್ಟಮ್, ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳು, ಕನೆಕ್ಟೆಡ್ ಕಾರ್ ಟೆಕ್, ಸನ್ ರೂಫ್, ಕ್ರೂಸ್ ಕಂಟ್ರೋಲ್ ಮತ್ತು ಪುಶ್-ಬಟನ್ ಸ್ಟಾರ್ಟ್ / ಸ್ಟಾಪ್ ನೊಂದಿಗೆ ಕೀಲೆಸ್ ಎಂಟ್ರಿಯಂತಹ ವೈಶಿಷ್ಟ್ಯಗಳನ್ನು ಪಡೆದಿದೆ.
ಸುರಕ್ಷೆತೆಗಾಗಿ ಹೊಸ ಸೈರಸ್ ಎಸ್‌ಯುವಿಯಲ್ಲಿ 6-ಏರ್‌ಬ್ಯಾಗ್‌ಗಳು, ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಲೆವೆಲ್ - 2 ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಪಡೆದಿದೆ. ಹೊಸ ಸೈರಸ್ ಎಸ್‌ಯುವಿಗೆ ಹ್ಯುಂಡೈ ಕ್ರೆಟಾ ಮತ್ತು ಮಾರುತಿ ಸುಜುಕಿ ಗ್ರ್ಯಾಂಡ್ ವಿಟಾರಾ ಕಾರುಗಳು ನೇರ ಪ್ರತಿಸ್ಪರ್ಧಿಯಾಗಿವೆ.

ಸುರಕ್ಷತೆಗೆ ಸಂಬಂಧಿಸಿದಂತೆ, ಇದು ಆರು ಏರ್ ಬ್ಯಾಗ್‌ಗಳು, 360-ಡಿಗ್ರಿ ಕ್ಯಾಮೆರಾ, ಇಬಿಡಿಯೊಂದಿಗೆ ಎಬಿಎಸ್, ಮುಂಭಾಗ ಮತ್ತು ಹಿಂಭಾಗದ ಪಾರ್ಕಿಂಗ್ ಸೆನ್ಸಾರ್‌ಗಳು, ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್, ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್ ಮತ್ತು ಲೆವೆಲ್ 1 ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್ (ಎಡಿಎಎಸ್) ಅನ್ನು ಪಡೆದಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications








