ಪವರಫುಲ್ ಸ್ಕಾರ್ಪಿಯೋ ಎನ್ ಎಸ್‍ಯುವಿ ಗ್ರಾಹಕರಿಗೆ ಶಾಕ್ ನೀಡಿದ ಮಹೀಂದ್ರಾ!
ಜನಪ್ರಿಯ ಸ್ವದೇಶಿ ವಾಹನ ತಯಾರಕ ಕಂಪನಿಯಾದ ಮಹೀಂದ್ರಾ ಕಂಪನಿಯು ತನ್ನ ಆಯ್ದ ಕಾರುಗಳ ಬೆಲೆಗಳನ್ನು ಪರಿಷ್ಕರಿಸಿದೆ. ಈ ಪಟ್ಟಿಗೆ ಕಂಪನಿಯ ಸೂಪರ್ ಹಿಟ್ ಮಾಡೆಲ್ ಮಹೀಂದ್ರಾ ಸ್ಕಾರ್ಪಿಯೋ ಎನ್ ಕೂಡ ಸೇರ್ಪಡೆಯಾಗಿದೆ. ಈ ಮಹೀಂದ್ರಾ ಸ್ಕಾರ್ಪಿಯೊ ಎನ್ ಎಸ್‍ಯುವಿಯ ಯಾವೆಲ್ಲಾ ರೂಪಾಂತರಗಳ ಬೆಲೆಗಳು ಹೆಚ್ಚಾಗಿವೆ ಎಂಬ ಮಾಹಿತಿಗಳು ಇಲ್ಲಿದೆ.
ಮಹೀಂದ್ರಾ ಸ್ಕಾರ್ಪಿಯೊ ಎನ್ ಎಸ್‍ಯುವಿಯ Z2 ಮತ್ತು Z4 ರೂಪಾಂತರಗಳು ಮತ್ತು Z6 ಡೀಸೆಲ್ ರೂಪಾಂತರದ ಬೆಲೆಯನ್ನು ರೂ.25,000 ವರೆಗೆ ಹೆಚ್ಚಿಸಿದೆ. ಇನ್ನು ಸ್ಕಾರ್ಪಿಯೊ ಎನ್ ಎಸ್‍ಯುವಿಯ Z8 2WD ರೂಪಾಂತರದ ಬೆಲೆಯನ್ನು ರೂ.10,000 ವರೆಗೆ ಹೆಚ್ಚಿಸಿದೆ. ಬೆಲೆ ಏರಿಕೆಯ ಬಳಿಕ, ಮಹೀಂದ್ರಾ ಸ್ಕಾರ್ಪಿಯೋ ಎನ್ ಎಸ್‍ಯುವಿಯ ಬೆಲೆಯು ಎಕ್ಸ್ ಶೋರೂಂ ಪ್ರಕಾರ ರೂ.13.85 ಲಕ್ಷದಿಂದ ರೂ.24.54 ಲಕ್ಷವಾಗಿದೆ.

ಕಂಪನಿ ಮಾರಾಟಗೊಳಿಸುವ ಸ್ಕಾರ್ಪಿಯೋ ಕಾರು ದಶಕಗಳಿಂದ ಖ್ಯಾತಿ ಪಡೆದಿದ್ದು, ಪ್ರತ್ಯೇಕ ಅಭಿಮಾನಿ ಬಳಗವನ್ನು ಹೊಂದಿದೆ. ಸದ್ಯ ನ್ಯೂ ಜನರೇಷನ್ ಸ್ಕಾರ್ಪಿಯೋ ಎನ್ ಕೂಡ ಗ್ರಾಹಕರ ಗಮನ ಸೆಳೆದಿದೆ. ಮಹೀಂದ್ರಾ ಸ್ಕಾರ್ಪಿಯೋ ಎನ್ (Mahindra Scorpio N) ಎಸ್‌ಯುವಿ ವಿನ್ಯಾಸದ ದೃಷ್ಟಿಯಿಂದ ಅತ್ಯುತ್ತಮವಾಗಿದ್ದು, 6, 7 ಆಸನ ಆಯ್ಕೆ ವ್ಯವಸ್ಥೆಯಲ್ಲಿ ದೊರೆಯುತ್ತದೆ.
ಜೊತೆಗೆ ಝಡ್2, ಝಡ್4, ಝಡ್6, ಝಡ್8, ಝಡ್8 ಮತ್ತು ಝಡ್8ಎಲ್ ರೂಪಾಂತರಗಳಲ್ಲಿ ಲಭ್ಯವಿದೆ. ಈ ಸ್ಕಾರ್ಪಿಯೋ ಎನ್ ಎಸ್‍ಯುವಿಯು ಡೀಪ್ ಫಾರೆಸ್ಟ್, ಎವರೆಸ್ಟ್ ವೈಟ್, ನಾಪೋಲಿ ಬ್ಲ್ಯಾಕ್ ಸೇರಿದಂತೆ ಹಲವು ಆಕರ್ಷಕ ಬಣ್ಣಗಳ ಆಯ್ಕೆಯಲ್ಲಿ ಲಭ್ಯವಿದೆ. ಈ ಸ್ಕಾರ್ಪಿಯೋ ಎನ್ 2 ಪವರ್‌ಟ್ರೇನ್ ಆಯ್ಕೆಗಳಲ್ಲಿ ಸಿಗುತ್ತದೆ.

ಇದರಲ್ಲಿ 2.0 - ಲೀಟರ್ ಟರ್ಬೋ ಪೆಟ್ರೋಲ್ ಎಂಜಿನ್ ಅನ್ನು ಹೊಂದಿದ್ದು, ಈ ಎಂಜಿನ್ 200 ಬಿಹೆಚ್‌ಪಿ ಪವರ್ ಹಾಗೂ 380 ಎನ್ಎಂ ಪೀಕ್ ಟಾರ್ಕ್ ಹೊರಹಾಕುವ ಸಾಮರ್ಥ್ಯವನ್ನು ಪಡೆದಿದೆ. ಈ ಎಂಜಿನ್ ನೊಂದಿಗೆ 6 - ಸ್ಪೀಡ್ ಮ್ಯಾನುವಲ್/ 6 - ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್ ಅನ್ನು ನೀಡಲಾಗಿದೆ.
ಮತ್ತೊಂದು, 2.2 - ಲೀಟರ್ ಡೀಸೆಲ್ ಎಂಜಿನ್ ಆಗಿದೆ. ಈ ಎಂಜಿನ್ ಗೇರ್‌ಬಾಕ್ಸ್‌ಗೆ ಅನುಗುಣವಾಗಿ 132 ಬಿಹೆಚ್‌ಪಿ ಪವರ್, 300 ಎನ್ಎಂ ಪೀಕ್ ಟಾರ್ಕ್ ಅಥವಾ 175 ಬಿಹೆಚ್‌ಪಿ ಪವರ್ ಮತ್ತು 400 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. 2WD (ಟೂ ವೀಲ್ ಡ್ರೈವ್), 4WD (ಫೋರ್ ವೀಲ್ ಡ್ರೈವ್) ತಂತ್ರಜ್ಞಾನವನ್ನು ಪಡೆದಿದೆ.

ಇನ್ನು ಮಹೀಂದ್ರಾ ಸ್ಕಾರ್ಪಿಯೋ ಎನ್ ಬೆಲೆಗೆ ತಕ್ಕಂತೆ ಅತ್ಯಾಧುನಿಕ ವೈಶಿಷ್ಟ್ಯಗಳನ್ನು ಒಳಗೊಂಡಿದೆ. 8 - ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡುಯಲ್ ಝೋನ್ ಕ್ಲೈಮೇಟ್ ಕಂಟ್ರೋಲ್, ಕ್ರೂಸ್ ಕಂಟ್ರೋಲ್, ಫ್ರಂಟ್, ರೇರ್ ಕ್ಯಾಮೆರಾ, ವೈರ್‌ಲೆಸ್ ಫೋನ್ ಚಾರ್ಜಿಂಗ್, 6 - ವೇ ಪವರ್ ಡ್ರೈವರ್ ಸೀಟ್, ಸಿಂಗಲ್-ಪೇನ್ ಸನ್‌ರೂಫ್ ಮತ್ತು ಸೆಮಿ-ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಅನ್ನು ಹೊಂದಿದೆ.
ಸುರಕ್ಷತೆಯ ದೃಷ್ಟಿಯಿಂದ ಸಹ ಸ್ಕಾರ್ಪಿಯೋ ಎನ್ ಉತ್ತಮವಾಗಿದ್ದು, ಗ್ಲೋಬಲ್ ಎನ್‌ಸಿಎಪಿಯಿಂದ ವಯಸ್ಕರ ರಕ್ಷಣೆ ವಿಭಾಗದಲ್ಲಿ 5 ಸ್ಟಾರ್ ರೇಟಿಂಗ್ ಗಳಿಸಿದೆ. 6 - ಏರ್‌ಬ್ಯಾಗ್, EBD (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ABS (ಆಂಟಿಲಾಕ್ ಬ್ರೇಕ್ ಸಿಸ್ಟಮ್), ಹಿಲ್-ಅಸಿಸ್ಟ್ ಕಂಟ್ರೋಲ್, TPMS (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ESC (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್)ನಂತಹ ವೈಶಿಷ್ಟ್ಯಗಳನ್ನು ಹೊಂದಿವೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications