ಹೊಸ ಮಹೀಂದ್ರಾ ಥಾರ್ ರಾಕ್ಸ್ ಕಾರಿನ ಸಂಪೂರ್ಣ ಬೆಲೆ ವಿವರ.. ನಿನ್ನೆಯಷ್ಟೇ ಬಿಡುಗಡೆ, ಕಾಯುವಿಕೆ ಮುಗಿಯಿತು!
ಭಾರತದ ಜನಪ್ರಿಯ ವಾಹನ ತಯಾರಕ ಸಂಸ್ಥೆಯಾಗಿ ಮಹೀಂದ್ರಾ (Mahindra) ಗುರುತಿಸಿಕೊಂಡಿದೆ. ದೇಶೀಯ ಮಾರುಕಟ್ಟೆಯಲ್ಲಿ 5-ಡೋರ್‌ನ ಮಾರುತಿ ಸುಜುಕಿ ಜಿಮ್ನಿ ಹಾಗೂ ಫೋರ್ಸ್ ಗೂರ್ಖಾಗೆ ತೀವ್ರ ಸ್ಪರ್ಧೆಯೊಡ್ಡಲು ಥಾರ್ ರಾಕ್ಸ್ (Thar Roxx) ಎಸ್‌ಯುವಿಯನ್ನು 5-ಡೋರ್ ಆಯ್ಕೆಯಲ್ಲಿ ಬುಧವಾರ ರಾತ್ರಿ ಬಿಡುಗಡೆಗೊಳಿಸಿತ್ತು. ಈ ಕಾರು ಸ್ಪರ್ಧಾತ್ಮಕ ಬೆಲೆಯಲ್ಲಿ ಖರೀದಿಗೆ ಲಭ್ಯವಿದೆ. ಬನ್ನಿ.. ಯಾವ ರೂಪಾಂತರ (ವೇರಿಯೆಂಟ್) ಎಷ್ಟು ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ.. ಏನೇನು ವಿಶೇಷತೆಗಳನ್ನು ಒಳಗೊಂಡಿದೆ ಎಂಬುದರ ಕುರಿತಂತೆ ಸಂಪೂರ್ಣವಾದ ವಿವರ ತಿಳಿಯೋಣ.
ನೂತನ ಮಹೀಂದ್ರಾ ಥಾರ್ ರಾಕ್ಸ್ 5-ಡೋರ್ ಎಸ್‌ಯುವಿ ರೂಪಾಂತರಗಳಾದ ಎಂಎಕ್ಸ್1 ಪೆಟ್ರೋಲ್ ಎಂಟಿ ಆರ್‌ಡಬ್ಲ್ಯೂಡಿ ರೂ.12.99 ಲಕ್ಷ, ಎಂಎಕ್ಸ್1 ಡೀಸೆಲ್ ಎಂಟಿ ಆರ್‌ಡಬ್ಲ್ಯೂಡಿ ರೂ.13.99 ಲಕ್ಷ, ಎಂಎಕ್ಸ್3 ಪೆಟ್ರೋಲ್ ಎಟಿ ಆರ್‌ಡಬ್ಲ್ಯೂಡಿ ರೂ.14.99 ಲಕ್ಷ, ಎಂಎಕ್ಸ್3 ಡೀಸೆಲ್ ಎಂಟಿ ಆರ್‌ಡಬ್ಲ್ಯೂಡಿ 15.99 ಲಕ್ಷ, ಎಎಕ್ಸ್3ಎಲ್ ಡೀಸೆಲ್ ಎಂಟಿ ಆರ್‌ಡಬ್ಲ್ಯೂಡಿ ರೂ.16.99 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ.

ಎಂಎಕ್ಸ್5 ಡೀಸೆಲ್ ಎಂಟಿ ಆರ್‌ಡಬ್ಲ್ಯೂಡಿ ರೂ.16.99 ಲಕ್ಷ, ಎಎಕ್ಸ್5ಎಲ್ ಡೀಸೆಲ್ ಎಟಿ ಆರ್‌ಡಬ್ಲ್ಯೂಡಿ ರೂ.18.99 ಲಕ್ಷ ಹಾಗೂ ಎಎಕ್ಸ್7ಎಲ್ ಡೀಸೆಲ್ ಎಂಟಿ ಆರ್‌ಡಬ್ಲ್ಯೂಡಿ ರೂ.18.99 ಲಕ್ಷ ಎಕ್ಸ್ ಶೋರೂಂ ದರವನ್ನು ಪಡೆದಿದೆ. ಅಕ್ಟೋಬರ್ 3ರಿಂದ ಈ ಕಾರಿನ ಬುಕ್ಕಿಂಗ್ ಶುರುವಾಗಲಿದ್ದು, ನವೆಂಬರ್‌ನಲ್ಲಿ ವಿತರಣೆ ಆರಂಭವಾಗಲಿದೆ ಎಂದು ವರದಿಯಾಗಿದೆ.
ಹೊಚ್ಚ ಹೊಸ ಮಹೀಂದ್ರಾ ಥಾರ್ ರಾಕ್ಸ್ 5-ಡೋರ್ ಎಸ್‌ಯುವಿ ಆಕರ್ಷಕವಾದ ವಿನ್ಯಾಸವನ್ನು ಹೊಂದಿದೆ. ನವೀನ ಶೈಲಿಯ ಎಲ್ಇಡಿ ಪ್ರೊಜೆಕ್ಟರ್ ಹೆಡ್‌ಲೈಟ್‌ಗಳು, ಸಿ-ಆಕಾರಕ್ಕೆ ಹೋಲುವ ಎಲ್‌ಇಡಿ ಡಿಆರ್‌ಎಲ್‌ಗಳು, ಸರ್ಕ್ಯೂಲರ್ ಫಾಗ್ ಲೈಟ್‌ಗಳು, ಅತ್ಯುತ್ತಮ ಬಂಪರ್, ವಿನೂತನವಾಗಿರುವ ಗ್ರಿಲ್‌ನ್ನು ಒಳಗೊಂಡಿದೆ. ಇದರೊಟ್ಟಿಗೆ ಡುಯಲ್-ಟೋನ್ ಅಲಾಯ್ ವೀಲ್‌ಗಳು, ಟೈಲ್‌ಗೇಟ್-ಮೌಂಟೆಡ್ ಸ್ಪೇರ್ ವೀಲ್ ಮತ್ತು ಎಲ್ಇಡಿ ಟೈಲ್‌ಲೈಟ್‌ಗಳನ್ನು ಪಡೆದಿದೆ.

ಈ ಥಾರ್ ರಾಕ್ಸ್ ಎರಡು ಶಕ್ತಿಯುತ ಪವರ್‌ಟ್ರೇನ್ ಆಯ್ಕೆಯಲ್ಲಿ ಸಿಗುತ್ತದೆ. 2.0-ಲೀಟರ್ 4-ಸಿಲಿಂಡರ್ ಎಂಸ್ಟಾಲಿಯನ್ ಟರ್ಬೊ ಪೆಟ್ರೋಲ್ ಎಂಜಿನ್ ಮತ್ತು 2-ಲೀಟರ್ 4-ಸಿಲಿಂಡರ್ ಎಂಹಾಕ್ ಡೀಸೆಲ್ ಎಂಜಿನ್ ಒಳಗೊಂಡಿದೆ. ರೂಪಾಂತರಗಳಿಗೆ ಅನುಗುಣವಾಗಿ 6-ಸ್ಪೀಡ್ ಮ್ಯಾನುವಲ್ ಅಥವಾ 6-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಹೊಂದಿದೆ.
ನೂತನ ಥಾರ್ ರಾಕ್ಸ್ ಎಸ್‌ಯುವಿ ಟ್ಯಾಂಗೋ ರೆಡ್, ಎವರೆಸ್ಟ್ ವೈಟ್, ಫಾರೆಸ್ಟ್ ಗ್ರೀನ್, ನೆಬುಲಾ ಬ್ಲ್ಯೂ ಸೇರಿದಂತೆ 7 ಆಕರ್ಷಕ ಬಣ್ಣಗಳೊಂದಿಗೂ ದೊರೆಯುತ್ತದೆ. ಇದು 3-ಡೋರ್ 'ಥಾರ್'ಗೆ ಹೋಲಿಕೆ ಮಾಡಿದರೆ ಸ್ವಲ್ಪ ಉದ್ದವಾಗಿದ್ದು, 5 ಮಂದಿ ಆರಾಮದಾಯಕವಾಗಿ ಪ್ರಯಾಣಿಸಬಹುದು. ಬೂಟ್ ಸ್ಪೇಸ್ ಕೂಡ ದೊಡ್ಡದಾಗಿದ್ದು, ಹೆಚ್ಚಿನ ಲಗೇಜ್ ಸಾಗಿಸಬಹುದು.

ಈ ಮಹೀಂದ್ರಾ ಥಾರ್ ರಾಕ್ಸ್ ಎಸ್‌ಯುವಿ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. 10.25-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ ಕನೆಕ್ಟಿವಿಟಿ, ಆಪಲ್ ಕಾರ್ ಪ್ಲೇ, ಫುಲ್ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ವೆಂಟಿಲೇಟೆಡ್ ಫ್ರಂಟ್ ಸೀಟ್, ಪನೋರಮಿಕ್ ಸನ್‌ರೂಫ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್ ಹಾಗೂ ರೇರ್ ಎಸಿ ವೆಂಟ್‌ಗಳನ್ನು ಒಳಗೊಂಡಿದೆ.
ಹೊಸ ಮಹೀಂದ್ರಾ ಥಾರ್ ರಾಕ್ಸ್ 5-ಡೋರ್ ಎಸ್‌ಯುವಿ ಸುರಕ್ಷತೆಗೂ ಹೆಸರುವಾಸಿಯಾಗಿದೆ. ಅದಕ್ಕಾಗಿ 6 ಏರ್‌ಬ್ಯಾಗ್, ಲೆವೆಲ್-2 ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್), ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಮತ್ತು 4 ಡಿಸ್ಕ್ ಬ್ರೇಕ್‌ಗಳನ್ನು ತನ್ನದಾಗಿಸಿಕೊಂಡಿದೆ.
ನಿಮ್ಮ ಗಮನಕ್ಕೆ..
ಎಂಟಿ: ಮ್ಯಾನುವಲ್ ಟ್ರಾಸ್ಮಿಷನ್ ಅಥವಾ ಮ್ಯಾನುವಲ್ ಗೇರ್‌ಬಾಕ್ಸ್.
ಎಟಿ: ಆಟೋಮೆಟಿಕ್ ಟ್ರಾಸ್ಮಿಷನ್ ಅಥವಾ ಆಟೋಮೆಟಿಕ್ ಗೇರ್‌ಬಾಕ್ಸ್.
ಆರ್‌ಡಬ್ಲ್ಯೂಡಿ: ರೇರ್ ವೀಲ್ ಡ್ರೈವ್ (ಹಿಂಬದಿ ಚಕ್ರ ಚಾಲನೆ) ತಂತ್ರಜ್ಞಾನದ ವಾಹನ ಎಂದು ಎಂದು ಅರ್ಥೈಸಿಕೊಳ್ಳಬೇಕು.


Click it and Unblock the Notifications